ಆರಗ ವಿರುದ್ಧ ಅಟ್ರಾಸಿಟಿಯ ದೂರು!
– ಜ್ಞಾನೇಂದ್ರ ಶಾಸಕ ಸ್ಥಾನಕ್ಕೆ ರಾಜೀನಾಮೆಗೆ ಪಟ್ಟು
– ಖರ್ಗೆ ವಿರುದ್ಧ ಬಣ್ಣದ ಬಗ್ಗೆ ಹೇಳಿಕೆ: ತೀರ್ಥಹಳ್ಳಿ, ಬೆಂಗಳೂರಲ್ಲಿ ಕೇಸ್!
NAMMUR EXPRESS NEWS
ಶಿವಮೊಗ್ಗ: ಕಸ್ತೂರಿರಂಗನ್ ವರದಿ ಜಾರಿ ವಿರುದ್ಧ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಟೀಕಿಸುವ ಭರದಲ್ಲಿ ಕಾಂಗ್ರೆಸ್ ಸಚಿವ ಮತ್ತು ರಾಷ್ಟ್ರೀಯ ಅಧ್ಯಕ್ಷರ ಮೈಬಣ್ಣ ಮತ್ತು ಹೇರ್ ಸ್ಟೈಲ್ ನ ಟೀಕಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಅಲ್ಲದೆ ಈ ಪ್ರಕರಣ ಈಗ ರಾಜ್ಯದಲ್ಲಿ ಭಾರೀ ಸುದ್ದಿ ಆಗುತ್ತಿದೆ. ತೀರ್ಥಹಳ್ಳಿ ಶಾಸಕ, ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಇದೀಗ ಬೆಂಗಳೂರು, ತೀರ್ಥಹಳ್ಳಿಯಲ್ಲಿ ದೂರು ದಾಖಲಾಗಿದೆ.
ಏನಿದು ಘಟನೆ?:
ಕಸ್ತೂರಿ ರಂಗನ್ ವರದಿ ಜಾರಿಗೊಳಿಸುವುದರ ವಿರುದ್ಧ ಬಿಜೆಪಿ ತೀರ್ಥಹಳ್ಳಿ ತಾಲೂಕು ಘಟಕ ಬುಧವಾರ ಪ್ರತಿಭಟನೆ ನಡೆಸಿತ್ತು.ಈ ಪ್ರತಿಭಟನೆಯಲ್ಲಿ ಕಸ್ತೂರಿರಂಗನ್ ವರದಿ ಜಾರಿಗೊಳಿಸುವುದನ್ನ ವಿರೋಧಿಸುವ ಭರದಲ್ಲಿ ಈಶ್ವರ ಖಂಡ್ರೆ ಮತ್ತು ಎಐಸಿಸಿಯ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ್ ಅವರ ಮೈಬಣ್ಣ ಮತ್ತು ಹೇರ್ ಸ್ಟೈಲ್ ನ್ನ ಟೀಕಿಸಿರುವುದು ಹಾಗೂ ಉತ್ತರ ಕರ್ನಾಟಕದ ಜನರು ಕಪ್ಪಾಗಿರುತ್ತಾರೆ ಎಂದು ಹೇಳಿರುವುದು ವಿವಾವದಕ್ಕೆ ಎಡೆ ಮಾಡಿಕೊಟ್ಟಿದೆ.
ಎರಡು ದೂರು ದಾಖಲು!:
ಬೆಂಗಳೂರಿನ ಹೈಗೌಂಡ್ ಠಾಣೆಯಲ್ಲಿ ಅರಗ ಜ್ಞಾನೇಂದ್ರ ವಿರುದ್ಧ ದೂರು ದಾಖಲಾಗಿದೆ. ತೀರ್ಥಹಳ್ಳಿಯಲ್ಲಿ ತೀರ್ಥಹಳ್ಳಿಯ ಬ್ಲಾಕ್ ಕಾಂಗ್ರೆಸ್ ವಕ್ತಾರ ಮತ್ತು ದಲಿತ ಮುಖಂಡ ಪಡುವಳ್ಳಿ ಹರ್ಷೇಂದ್ರ ಕುಮಾರ್ ಸ್ಥಳೀಯ ಠಾಣೆಗೆ ತೆರಳಿ ದೂರು ನೀಡಿದ್ದಾರೆ.
ಬೃಹತ್ ಹೋರಾಟಕ್ಕೆ ಸಿದ್ಧತೆ
ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಮಾತಮಾಡಿರುವುದು ಕಾಂಗ್ರೆಸ್ ದಲಿತ ನಾಯಕರಿಗೆ ಮತ್ತು ಕಾರ್ಯಕರ್ತರನ್ನು ಇದೀಗ ಕೆರಳಿಸಿದೆ. ತೀರ್ಥಹಳ್ಳಿಯಲ್ಲಿ ಈ ಕುರಿತು ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ತೀರ್ಥಹಳ್ಳಿಯಲ್ಲಿ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಶಾಸಕ ಸ್ಥಾನಕ್ಕೆ ರಾಜೀನಾಮೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಲು ಸಿದ್ಧತೆ ನಡೆದಿದೆ.
ಇದನ್ನೂ ಓದಿ : ಖರ್ಗೆ ಮೈಬಣ್ಣದ ವಿವಾದ: ಜ್ಞಾನೇಂದ್ರ ಕ್ಷಮೆಗೆ ಕಾಂಗ್ರೆಸ್ ಪಟ್ಟು!
HOW TO APPLY : NEET-UG COUNSELLING 2023