ರಾಹುಲ್ ಗಾಂಧಿಗೆ ತಪ್ಪಿತು ಜೈಲು ಶಿಕ್ಷೆ!?
– ಸುಪ್ರೀಂಕೋರ್ಟ್ ತಡೆ: ಮತ್ತೆ ಕೇಸ್ ಕುತೂಹಲ
– ಮೋದಿ ಉಪ ನಾಮ ಕುರಿತು ಹೇಳಿಕೆ ಪ್ರಕರಣ
NAMMUR EXPRESS NEWS
ನವ ದೆಹಲಿ: ದೇಶದಲ್ಲಿ ಭಾರೀ ಕುತೂಹಲ ಮೂಡಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಈ ಮೂಲಕ ರಾಹುಲ್ ಗಾಂಧಿ ಕೊಂಚ ನಿರಾಳರಾಗಿದ್ದಾರೆ. ಕರ್ನಾಟಕದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಮೋದಿ ಹೆಸರಿನವರೆಲ್ಲ ಮೋಸಗಾರರೇ ಆಗಿರುತ್ತಾರಲ್ಲ ಏಕೆ ಎಂದು ರಾಹುಲ್ ಪ್ರಶ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಗುಜರಾತ್ ಶಾಸಕ ಪೂರ್ಣೇಶ್ ಮೋದಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.
ಈ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ರಾಹುಲ್ ಗಾಂಧಿಯವರಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದು, ಈ ಕಾರಣಕ್ಕಾಗಿ ಅವರು ಸಂಸತ್ ಸದಸ್ಯ ಸ್ಥಾನವನ್ನು ಕಳೆದುಕೊಂಡಿದ್ದರು.ಈ ಪ್ರಕರಣದಲ್ಲಿ ಸೆಷನ್ಸ್ ನ್ಯಾಯಾಲಯ ನೀಡಿದ್ದ ತೀರ್ಪಿಗೆ ತಡೆ ನೀಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿತ್ತು. ನಂತರ ರಾಹುಲ್ ಗಾಂಧಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.
ಮೋದಿ ಉಪ ನಾಮ ಕುರಿತು ಭಾರೀ ಕೋಲಾಹಲ ಸೃಷ್ಟಿ ಮಾಡಿರುವ ಈ ಕೇಸ್ ಈಗ ಟ್ವಿಸ್ಟ್ ಪಡೆದುಕೊಂಡಿದೆ.
ಇದನ್ನೂ ಓದಿ : ಆರಗ ಮೇಲೆ ಸುಮೋಟೋ ಕೇಸ್ ದಾಖಲಿಸಲು ಪಟ್ಟು
HOW TO APPLY : NEET-UG COUNSELLING 2023