ಎಸ್ಸಿ,ಎಸ್ಟಿ ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ ವಂಚನೆ
– ಗ್ಯಾರಂಟಿ ಯೋಜನೆಯ ಹೆಸರಲ್ಲಿ 11 ಸಾವಿರ ಕೋಟಿ ರೂ ವರ್ಗಾವಣೆ
– ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ
NAMMUR EXPRESS NEWS
ಸಿಂದಗಿ(ವಿಜಯಪುರ): ಗ್ಯಾರಂಟಿ ಯೋಜನೆ ಹೆಸರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಶಾಸನ ಬದ್ದವಾಗಿ ಮೀಸಲಿಟ್ಟ ಅನುದಾನದಲ್ಲಿ 11 ಸಾವಿರ ಕೋಟಿ ರೂಪಾಯಿ ಹಣವನ್ನು ವರ್ಗಾವಣೆ ಮಾಡಿ ದಲಿತ ಸಮುದಾಯಕ್ಕೆ ನೇರವಾಗಿ ರಾಜ್ಯ ಸರ್ಕಾರ ವಂಚನೆ ಮಾಡಿದೆ ಎಂದು ಮಾಜಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದರು. ಸಿಂದಗಿ ಪಟ್ಟಣದ ರಾಜ ರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ನಡೆದ ಭಾರತೀಯ ಜನತಾ ಪಕ್ಷದ ಮೋರ್ಚಾಗಳ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಭಯೋತ್ಪಾದನೆ ತಾಂಡವ ಆಡುತ್ತಿದೆ. ರಾಜ್ಯದಲ್ಲಿ ಪಾಕಿಸ್ತಾನ ಧ್ವಜ ಹಾರಾಡುತ್ತಿವೆ. ಕುಕ್ಕರ್ ನಲ್ಲಿ ಬಾಂಬ್ ಇಟ್ಟು ತಿರುಗಾಡುತ್ತಾರೆ. ಇಂತಹವರನ್ನು ನಮ್ಮ ಸಹೋದರರು ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಹೇಳುತ್ತಾರೆ ಎಂದು ಹೇಳಿದರು.
ಇದನ್ನೂ ಓದಿ : ರೈತರಿಗೆ ಖುಷ್: ಕಾಳು ಮೆಣಸು ದರ ಏರಿಕೆ!
HOW TO APPLY : NEET-UG COUNSELLING 2023