ಎನ್. ಆರ್. ಪುರ: ಬಸ್ಸಿನ ಮೇಲೆ ಬಿದ್ದ ಮರ: ಪಾರಾದ ಪ್ರಯಾಣಿಕರು!
– ಕೊಟ್ಟಿಗೆಹಾರ: ಕಾಡಾನೆ ದಾಳಿಯಿಂದ ಬಚಾವ್!
– ಶಿವಮೊಗ್ಗದಲ್ಲಿ ಬಸ್ಸು, ಕಾರು ಡಿಕ್ಕಿ: ಓರ್ವನಿಗೆ ಗಾಯ
NAMMUR EXPRESS NEWS
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಸರಕಾರಿ ಬಸ್ಸು ರಸ್ತೆ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಮೇಲೆ ಮರ ಬಿದ್ದ ಘಟನೆ ಎನ್.ಆರ್.ಪುರ ತಾಲೂಕಿನ ಸೀಕೆ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ. ಎನ್.ಆರ್.ಪುರದಿಂದ ಬೆಳಗ್ಗೆ 6 ಗಂಟೆಗೆ ಹೊರಟಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮರಕ್ಕೆ ಗುದ್ದಿದೆ. ಪರಿಣಾಮ ಮರ ಬಸ್ಸಿನ ಮೇಲೆ ಬಿದ್ದು ಕೆಲವು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಬಸ್ಸಿನಲ್ಲಿ ಸುಮಾರು 28 ಜನ ಪ್ರಯಾಣಿಕರಿದ್ದರು ಇದರಲ್ಲಿ 10-12 ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿ ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಎನ್.ಆರ್.ಪುರ ಹಾಗೂ ಬಾಳೆಹೊನ್ನೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕೊಟ್ಟಿಗೆಹಾರ: ಕಾಡಾನೆ ದಾಳಿಯಿಂದ ಬಚಾವ್!
ಮೂಡಿಗೆರೆಯ ಮೇಗೂರಿನ ಅತ್ತಿಗುಣಿ ಬಳಿ ಕಾಡಾನೆ ಕಾಡಿಗಟ್ಟುವ ಕಾರ್ಯಾಚರಣೆ ವೇಳೆ ಕಾಡಾನೆ ಅಟ್ಟಿಸಿಕೊಂಡು ಬಂದಿದ್ದು ಅರಣ್ಯ ಅಧಿಕಾರಿಗಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಮಲೆಮನೆ ಮೇಗೂರು ಆಲೇಕಾನ್ ಗ್ರಾಮದಲ್ಲಿ ಕಾಡಾನೆ ಹಾವಳಿ ಹೆಚ್ಚಾದ ಹಿನ್ನಲೆಯಲ್ಲಿ ಆನೆ ಕಾರ್ಯ ಪಡೆಯ ಉಪವಲಯ ಅರಣ್ಯಾಧಿಕಾರಿ ಸುಹಾಸ್, ಕಿರಣ್ ಕುಮಾರ್, ದೀಕ್ಷಿತ್, ಕಾರ್ತಿಕ್, ಅಶ್ವಿನ್, ಕರ್ಣ, ಗಸ್ತು ಅಧಿಕಾರಿ ಪರಮೇಶ್ ಗ್ರಾಮಸ್ಥರೊಂದಿಗೆ ಸೋಮವಾರ ಕಾಡಾನೆ ಕಾಡಿಗಟ್ಟುವ ಕಾರ್ಯಾಚರಣೆ ನಡೆಸುವ ವೇಳೆ ಮೇಗೂರಿನ ಅತ್ತಗುಣಿ ಸಮೀಪ ಕಾಡಾನೆ ಅಟ್ಟಿಸಿಕೊಂಡು ಬಂದಿದ್ದು ಅರಣ್ಯ ಅಧಿಕಾರಿಗಳು ಕೂದಲೆಳೆಯಲ್ಲಿ ಪಾರಾಗಿದ್ದಾರೆ.
ಶಿವಮೊಗ್ಗದಲ್ಲಿ ಬಸ್ಸು, ಕಾರು ಡಿಕ್ಕಿ: ಓರ್ವನಿಗೆ ಗಾಯ
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರು ಚಾಲಕ ಗಾಯಗೊಂಡ ಘಟನೆ ಸವಳಂಗ ರಸ್ತೆಯ ಮೇಲಿನ ಕುಂಚೇನಹಳ್ಳಿ ಬಳಿ ಘಟನೆ ಸಂಭವಿಸಿದೆ. ಅಭಿಷೇಕ್ ಎಂಬುವವರು ಶಿವಮೊಗ್ಗದಿಂದ ಸೊರಬ ತಾಲೂಕು ಉದ್ರಿ ಗ್ರಾಮಕ್ಕೆ ತೆರಳುತ್ತಿದ್ದಾಗ ಅಪಘಾತವಾಗಿದೆ. ಎದುರಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದು ಕಾರಿನ ಮುಂಭಾಗ ಜಖಂ ಆಗಿದೆ. ಅಭಿಷೇಕ್ ಮೈಕೈಗೆ ನೋವಾಗಿದೆ. ಮೇಲಿನ ಕುಂಚೇನಹಳ್ಳಿ ಗ್ರಾಮಸ್ಥರು, ಸ್ನೇಹಿತನ ನೆರವಿನೊಂದಿಗೆ ಅಭಿಷೇಕ್ ಶಿವಮೊಗ್ಗಕ್ಕೆ ತಲುಪಿದ್ದು, ಮರುದಿನ ಮೆಗ್ಗಾನ್ ಆಸ್ಪತ್ರೆ ದಾಖಲಾಗಿದ್ದರು. ಖಾಸಗಿ ಬಸ್ ಚಾಲಕನ ಅಜಾಗರೂಕತೆಯ ಚಾಲನೆಯೆ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಅಡಿಕೆ ಮಾರುಕಟ್ಟೆ: ಎಷ್ಟಿದೆ ದರ?
HOW TO APPLY : NEET-UG COUNSELLING 2023