ಸೌಜನ್ಯ ಪ್ರಕರಣ: ಮರು ತನಿಖೆಗೆ ಭಾರೀ ಹೋರಾಟ!
– ಸುಳ್ಯದಲ್ಲಿ ಬೃಹತ್ ಪ್ರತಿಭಟನೆ: ಬಿಗಿ ಪೊಲೀಸ್ ಬಂದೋಬಸ್ತ್
– ಸೌಜನ್ಯ ಪರ ಹೋರಾಟಕ್ಕೆ ಅರುಣ್ ಪುತ್ತಿಲ ಎಂಟ್ರಿ!
– ಅಂಕೋಲಾದಲ್ಲಿ ದೋಣಿ ಮಗುಚಿ ಇಬ್ಬರಿಗೆ ಗಾಯ
– ಉಡುಪಿಗೆ ಆಗಮಿಸಿದ ಸಿಐಡಿ ತಂಡ!
NAMMUR EXPRESS NEWS
ಸುಳ್ಯ: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ತನಿಖೆ ನಡೆಸಿ ನೈಜ ಆರೋಪಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿ ಪ್ರಬಲ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ದಿ.ಸೌಜನ್ಯಳ ತಾಯಿ ಕುಸುಮಾವತಿ ನೇತೃತ್ವದಲ್ಲಿ ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ನಿಂತಿಕಲ್ಲಿನಿಂದ ವಾಹನ ಜಾಥಾದ ಮೂಲಕ ಪ್ರತಿಭಟನೆ ಆರಂಭಗೊಂಡಿದೆ. ಸುಳ್ಯದ ಪ್ರೆಸ್ ಕ್ಲಬ್ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಸೌಜನ್ಯ ಹೋರಾಟ ಸಮಿತಿಯ ವಸಂತ್ ಮಾತನಾಡಿ, ಸೌಜನ್ಯಳ ಹತ್ಯೆ ನಡೆದು 11 ವರ್ಷವಾಗಿದೆ. ನಿರಪರಾಧಿಯನ್ನು ಅಪರಾಧಿ ಮಾಡಿ ಶಿಕ್ಷೆ ವಿಧಿಸಲಾಗಿದೆ.
ನ್ಯಾಯದ ಕಣ್ಣಿಗೆ ಮಣ್ಣೆರಚುವ ಕೆಲಸ ಆಗಿದೆ. ಈ ಕೂಡಲೇ ಸೌಜನ್ಯ ಹತ್ಯೆ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ವಹಿಸಿ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸುವ ಕಾರ್ಯ ಮಾಡಬೇಕಿದೆ ಎಂದು ಒತ್ತಾಯಿಸಿದ್ದರು
ಮಹೇಶ್ ಶೆಟ್ಟಿ ತಿಮರೋಡಿ, ಸೌಜನ್ಯ ತಾಯಿ ಕುಸುಮಾವತಿ ಸೇರಿಸಿಕೊಂಡು ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ನಿಂತಿಕಲ್ಲಿನಿಂದ ವಾಹನ ಜಾಥಾ ಮೂಲಕ ಸುಮಾರು 500ಕ್ಕೂ ಹೆಚ್ಚು ಬೈಕ್, ಕಾರು ವಾಹನಗಳಲ್ಲಿ ಜಾಥಾ ಮೂಲಕ ಪ್ರತಿಭಟನೆ ಪ್ರಾರಂಭಗೊಂಡಿದೆ. ಸುಳ್ಯ ಪೇಟೆಯಲ್ಲಿ ಸುಮಾರು ಮೂರು ಸಾವಿರಕ್ಕೂ ಹೆಚ್ಚು ಮಂದಿ ನ್ಯಾಯಪರ ಹೋರಾಟಗಾರರು ಸಂಘಟಿತರಾಗಲಿದ್ದಾರೆ ಎಂದು ಅಂದಾಜಿಸಲಾಗಿದೆ.
ಸೌಜನ್ಯ ಪರ ಧ್ವನಿ ಎತ್ತಲಿರುವ ಪುತ್ತಿಲ ಪರಿವಾರ!
ಸೌಜನ್ಯ ಕೊಲೆ ಪ್ರಕರಣದಲ್ಲಿ ಇದೀಗ ಪುತ್ತಿಲ ಪಾರಿವಾರ ಎಂಟ್ರಿ ಆಗಿದೆ. ‘ನಮ್ಮ ನಡೆ ನ್ಯಾಯದ ಕಡೆ ಆಗಸ್ಟ್ 14 ರಂದು ಪುತ್ತೂರಿನಲ್ಲಿ ಪ್ರತಿಭಟನೆ ಪ್ರತಿಭಟನೆ ಮಾಡಲಿದ್ದಾರೆ. ಸೌಜನ್ಯ ಪರವಾಗಿ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಲು ತೀರ್ಮಾನಿಸಿದ ಪುತ್ತಿಲ ಪರಿವಾರ ದೊಡ್ಡ ಮಟ್ಟದ ಹೋರಾಟಕ್ಕಿಳಿಯಲಿದೆ.
ದೋಣಿ ಮುಗುಚಿ ಮೀನುಗಾರರಿಗೆ ಗಾಯ
ಅಂಕೋಲಾ: ಮೀನುಗಾರಿಕೆಗೆ ತೆರಳಿದ್ದಾಗ ಸಮುದ್ರದಲ್ಲಿ ದೋಣಿ ಮುಗುಚಿ ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿ ಇಬ್ಬರೂ ಮೀನುಗಾರರು ಗಾಯಗೊಂಡ ಘಟನೆ ಸೋಮವಾರ ನಸುಕಿನಲ್ಲಿ 4 ಗಂಟೆಗೆ ಮೀನುಗಾರಿಕೆಗೆ ತೆರಳಿದ್ದರು. ಆಳ ಸಮುದ್ರ ಮೀನುಗಾರಿಕೆಯಲ್ಲಿ ತೊಡಗಿದಾಗ ದುರ್ಘಟನೆ ಸಂಭವಿಸಿದೆ. ಸಮುದ್ರಕ್ಕೆ ಹಾಕಿದ ಬಲೆಯನ್ನು ಮೇಲೆತ್ತಿ ದೋಣಿಯಲ್ಲಿ ತುಂಬಿಸುವಾಗ ಅಲೆಗಳ ರಭಸಕ್ಕೆ ದೋಣಿ ಮಗುಚಿಬಿದ್ದಿದೆ. ಈ ಘಟನೆಯಿಂದ ದೋಣಿಯು ಸಂಪೂರ್ಣವಾಗಿ ಹಾನಿಗೊಂಡಿದೆ. ದೋಣಿಯಲ್ಲಿನ 80,000 ಮೌಲ್ಯದ ಬಲೆ, 1.50 ಲಕ್ಷ ಮೌಲ್ಯದ ಇಂಜಿನ್ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿದೆ. ಒಟ್ಟಾರೆ ಮೂರು ಲಕ್ಷಕ್ಕೂ ಅಧಿಕ ಮೌಲ್ಯದ ಹಾನಿ ಅಂದಾಜಿಸಲಾಗಿದೆ.
ಕಾಲುಜಾರಿ ಬಾವಿಗೆ ಬಿದ್ದ ವ್ಯಕ್ತಿ ಸಾವು!
ಕುಮಟಾ ತಾಲೂಕಿನ ಮುರೂರಿನ ಮಡಕಿಬೈಲ್’ನಲ್ಲಿನ ನಿವಾಸಿ ನಾಗರಾಜ್ ಗಾವಡಿ ಎಂಬಾತ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ರೈತಾಪಿ ಕೆಲಸ ಹಾಗೂ ಕರೆಂಟ್ ರಿಪೇರಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಈತ ಮೂರೂರಿನ ನೆಲಬಾವಿಯಲ್ಲಿ ಕಾಲು ತೊಳೆಯಲು ಹೋದಾಗ ಜಾರಿ ಬಿದ್ದು ಸಾವನಪ್ಪಿದ್ದಾನೆಂದು ತಿಳಿದುಬಂದಿದೆ. ನಂತರ ಘಟನಾಸ್ಥಳಕ್ಕೆ ಕುಮಟಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕುಮಟಾ ಪೊಲೀಸ್ ಠಾಣೆಯಲ್ಲಿ ಈ ಕುರಿತಾಗಿ ಪ್ರಕರಣ ದಾಖಲಾಗಿದೆ.
ಉಡುಪಿಗೆ ಆಗಮಿಸಿದ ಸಿಐಡಿ ತಂಡ!
ಉಡುಪಿ ಖಾಸಗಿ ಅರೆವೈದ್ಯಕೀಯ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಮಂಗಳವಾರ ಸಿಐಡಿ ಡಿವ್ಯೆಎಸ್ಪಿ ಅಂಜುಮಾಲಾ ನಾಯಕ್ ನೇತ್ರತ್ವದ ತಂಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಭೇಟಿ ನೀಡಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ, ತನಿಖಾಧಿಯಾಗಿದ್ದ ಬೆಳ್ಳಿಯಪ್ಪ ಸಹಿತ ಮಲ್ಪೆ ಠಾಣೆಯ ಪೊಲೀಸರು ಘಟನೆ ಹಾಗು ತನಿಖೆಯ ವರದಿಗಳನ್ನು ಸಿಐಡಿಗೆ ಹಸ್ತಾಂತರಿಸಿದರು. ಇನ್ನು ಮುಂದೆ ಅಂಜುಮಾಲಿ ನಾಯಕ್ ಈ ಪ್ರಕರಣದ ತನಿಖಾಧಿಕಾರಿಯಾಗಿರಲಿದ್ದಾರೆ. ಉಡುಪಿಯ ಖಾಸಗಿ ಅರೆವೈದ್ಯಕೀಯ ಕಾಲೇಜಿನ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ಮಾಡಲಾಗಿದೆ ಎಂಬ ಆರೋಪ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡಿತ್ತು. ಶೌಚಾಲಯದಲ್ಲಿ ವಿಡಿಯೋ ಮಾಡಲಾಗಿದೆ ಎನ್ನಲಾದ ಪ್ರಕರಣ ಅತ್ಯಂತ ಸೂಕ್ಷ್ಮವಾದದ್ದು ಈ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿರುವುದು ಸೂಕ್ತವಾಗಿದೆ ಜೊತೆಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ವಿಟ್ಲ: ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್!
ಮರಳು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಪೆರುವಾಯಿ ಗ್ರಾಮದ ಕಿನಿಯರಪಾಲು ನಿವಾಸಿ ಸುಧೀರ್ ಕುಮಾರ್ (34)ಎಂದು ಗುರುತಿಸಲಾಗಿದೆ. ಇನ್ನು ಆರೋಪಿಯ ವಿರುದ್ಧ ಮರಳು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಂಟ್ ಹೊರಡಿಸಲಾಗಿತ್ತು. ಆದರೆ ಆತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ವಿಟ್ಲ ಪೊಲೀಸ್ ಇನ್ ಸ್ಪೆಕ್ಟರ್ ನಾಗರಾಜ್ ಅವರ ಸೂಚನೆ ಮೇರೆಗೆ, ಎಸ್ಸೆಗಳಾದ ಕಾರ್ತಿಕ್ ಮತ್ತು ವಿದ್ಯಾ ಕೆ, ಸಿಬ್ಬಂದಿ ಅಡ್ಯನಡ್ಕ ಎಂಬಲ್ಲಿ ಸುಧೀರ್ ಕುಮಾರ್ ನನ್ನು ಬಂಧಿಸಿದ್ದಾರೆ.
ಇದನ್ನೂ ಓದಿ : ಅಡಿಕೆ ಮಾರುಕಟ್ಟೆ: ಎಷ್ಟಿದೆ ದರ?
HOW TO APPLY : NEET-UG COUNSELLING 2023