ಸ್ಪಂದನಾ ಅಂತಿಮ ದರ್ಶನ: ಇಂದೇ ಅಂತ್ಯಕ್ರಿಯೆ!
– ಮಲ್ಲೇಶ್ವರಂ ಮನೆಯಲ್ಲಿ ಸಾರ್ವಜನಿಕ ದರ್ಶನ
– ಮಧ್ಯಾಹ್ನ 2ರ ಬಳಿಕ ಅಂತ್ಯಕ್ರಿಯೆಗೆ ಸಿದ್ಧತೆ
NAMMUR EXPRESS NEWS
ಬೆಂಗಳೂರು: ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಪಾರ್ಥಿವ ಶರೀರವನ್ನು ಭಾರತಕ್ಕೆ ತರಲಾಗಿದೆ. ಮಲ್ಲೇಶ್ವರಂನಲ್ಲಿರುವ ಸ್ಪಂದನಾ ತಂದೆ ಬಿ.ಕೆ.ಶಿವರಾಂ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದ್ದು, ಸಿನಿಮಾ ರಂಗದ ಗಣ್ಯರು ಆಗಮಿಸಿ ಸ್ಪಂದನಾ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಮಧ್ಯಾಹ್ನದ ನಂತರ ಈಡಿನ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ. ಈಗಾಗಲೇ ಚಿತ್ರರಂಗದ ಪ್ರಮುಖರು ಆಗಮಿಸಿ ಅಂತಿಮ ದರ್ಶನ ಪಡೆದಿದ್ದಾರೆ.
ಮಂಗಳವಾರ ಬೆಂಗಳೂರಿಗೆ ಪಾರ್ಥಿವ ಶರೀರ
ಥಾಯ್ಲೆಂಡ್ ಪ್ರವಾಸಕ್ಕೆ ತೆರಳಿದ್ದ ವೇಳೆಯಲ್ಲಿ ಸ್ಪಂದನಾ ಅವರಿಗೆ ಹೃದಯಾಘಾತವಾಗಿತ್ತು. ಎರಡು ದಿನಗಳ ಬಳಿಕ ಎಲ್ಲಾ ಕಾನೂನು ತೊಡಕುಗಳನ್ನು ಪೂರೈಸಿ ಪಾರ್ಥಿವ ಶರೀರವನ್ನು ಭಾರತಕ್ಕೆ ತರಲಾಗಿದೆ. ಮಂಗಳವಾರ ರಾತ್ರಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸ್ಪಂದನಾ ಪಾರ್ಥಿವ ಶರೀರವನ್ನು ಅಂಬುಲೆನ್ಸ್ ಮೂಲಕ ಮಲ್ಲೇಶ್ವರಂನಲ್ಲಿರುವ ಬಿ.ಕೆ.ಶಿವರಾಂ ಅವರ ಮನೆಗೆ ತರಲಾಗಿದೆ. ಸಿನಿಮಾ ರಂಗದ ಗಣ್ಯರು, ಪೊಲೀಸ್ ಅಧಿಕಾರಿಗಳು ಆಗಮಿಸಿ ಸ್ಪಂದನಾ ಅವರ ಅಂತಿಮ ದರ್ಶನವನ್ನು ಪಡೆದುಕೊಂಡಿದ್ದಾರೆ. ಬುಧವಾರ ಮಧ್ಯಾಹ್ನ 2 ಗಂಟೆಯ ವರೆಗೆ ಅಂತಿಮ ದರ್ಶನಕ್ಕೆ ಅವಕಾಶವನ್ನು ಕಲ್ಪಿಸಲಾಗಿದ್ದು, ಮಧ್ಯಾಹ್ನದ ನಂತರ ಹರಿಶ್ಚಂದ್ರ ಘಾಟ್ನಲ್ಲಿ ಈಡಿಗ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಸಲು ಸಿದ್ದತೆ ಮಾಡಿಕೊಳ್ಳಲಾಗಿದೆ.
ಪತ್ನಿ ಪಕ್ಕದಲ್ಲೇ ಕುಳಿತು ಕಣ್ಣೀರು..!
ನಟ ವಿಜಯ್ ರಾಘವೇಂದ್ರ ಪತ್ನಿಯ ಪಾರ್ಥವ ಶರೀರದ ಪಕ್ಕದಲ್ಲಿಯೇ ನಿಂತು ಕಣ್ಣೀರು ಸುರಿಸುತ್ತಿದ್ದಾರೆ. ನಟ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ನಟಿ ಸುಧಾರಾಣಿ, ಗಾಯಕ ವಿಜಯಪ್ರಕಾಶ್ ಸೇರಿದಂತೆ ಸಿನಿಮಾ ರಂಗದ ಗಣ್ಯಾತಿ ಗಣ್ಯರು ಆಗಮಿಸಿ ಕಂಬನಿ ಮಿಡಿದಿದ್ದಾರೆ. ಅಲ್ಲದೆ ಇಡೀ ರಾಜ್ಯದ ಜನ ಸಂತಾಪ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಅಡಿಕೆ ಮಾರುಕಟ್ಟೆ: ಎಷ್ಟಿದೆ ದರ?
HOW TO APPLY : NEET-UG COUNSELLING 2023