ಬ್ಯಾಂಕ್ ದಿಗ್ಗಜ ಜಯರಾಂ ಭಟ್ ಇನ್ನಿಲ್ಲ!
– ಮಂಗಳೂರು ವಿಮಾನ ನಿಲ್ದಾಣದಲ್ಲೇ ಕುಸಿದು ಆಸ್ಪತ್ರೆಯಲ್ಲಿ ವಿಧಿವಶ
– ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಬ್ಬರು ಬಲಿ!
NAMMUR EXPRESS NEWS
ಕಾರ್ಕಳ: ರಾಜ್ಯದ ಬ್ಯಾಂಕಿಂಗ್ ಕ್ಷೇತ್ರದ ದಿಗ್ಗಜರಲ್ಲಿ ಒಬ್ಬರಾದ ಕರ್ಣಾಟಕ ಬ್ಯಾಂಕ್ ನಿವೃತ್ತ ವ್ಯವಸ್ಥಾಪಕ ನಿರ್ದೇಶಕ ಪೊಳಲಿ ಜಯರಾಂ ಭಟ್ (71) ಅವರು ಆ. 9 ರಂದು ನಿಧನ ಹೊಂದಿದ್ದಾರೆ. ಆ.9ರಂದು ಮಧ್ಯಾಹ್ನ ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೃದಯಾಘಾತದಿಂದ ಕುಸಿದಿದ್ದರು. ಅವರನ್ನು ಚಿಕಿತ್ಸೆಗಾಗಿ ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನ ಹೊಂದಿದ್ದಾರೆ. ಅವರು ಮುಂಬಯಿನಲ್ಲಿ ಯುನಿವರ್ಸಲ್ ಸೋಂಪೋ ವಿಮಾ ಕಂಪನಿಯ ಮಂಡಳಿ ಸಭೆಯಲ್ಲಿ ಭಾಗವಹಿಸಿ, ಊರಿಗೆ ಮರಳುತ್ತಿದ್ದರು ಎಂದು ತಿಳಿದು ಬಂದಿದೆ. ಮೃತರು ಪತ್ನಿ ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಜಯರಾಂ ಭಟ್ ಅವರು ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲ್ಲೂಕು ಪೊಳಲಿಯ ಅವರು, ಮೈಸೂರು ವಿಶ್ವವಿದ್ಯಾಲಯದಲ್ಲಿ ಎಂ.ಎಸ್ಸಿ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ಬ್ಯಾಂಕ್ ಗಳಿಸಿದ್ದರು. 1973ರಲ್ಲಿ ಪ್ರೊಬೇಷನರಿ ಅಧಿಕಾರಿಯಾಗಿ ಕರ್ಣಾಟಕ ಬ್ಯಾಂಕ್ ಸೇರಿದ್ದ ಅವರು, 1975ರಲ್ಲಿ ಶಾಖಾ ವ್ಯವಸ್ಥಾಪಕರಾಗಿ, ನಂತರ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ 2005ರಲ್ಲಿ ಪ್ರಧಾನ ವ್ಯವಸ್ಥಾಪಕರಾಗಿ ನೇಮಕಗೊಂಡಿದ್ದರು. 2009ರಲ್ಲಿ ಅವರಿಗೆ ಕರ್ಣಾಟಕ ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ಹುದ್ದೆ ಒಲಿಯಿತು. 2017ರಲ್ಲಿ ಬ್ಯಾಂಕ್ನ ಅಧ್ಯಕ್ಷರಾದ ಅವಧಿಯಲ್ಲಿ ಇ-ಲಾಬಿ, ಮೊಬೈಲ್ ಬ್ಯಾಂಕಿಂಗ್, ಪಿಒಎಸ್ ಅನ್ಲೈನ್ ಟ್ರೇಡಿಂಗ್ ಅಕೌಂಟ್, ಟ್ರಾವೆಲ್ ಕಾರ್ಡ್, ಇನ್ನೂ ಅನೇಕ ಯೋಜನೆಗಳನ್ನು ಪರಿಚಯಿಸಿ, ಗ್ರಾಹಕರ ಮೆಚ್ಚುಗೆ ಗಳಿಸಿದರು.
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಐದು ದಶಕಗಳ ಅನುಭವ ಹೊಂದಿದ್ದ ಅವರಿಗೆ 20ಕ್ಕೂ ಹೆಚ್ಚು ಪ್ರಶಸ್ತಿಗಳು ಲಭಿಸಿದ್ದವು.
ಆ.10 ರಂದು ಬೆಳಿಗ್ಗೆ 8ರಿಂದ 9 ಗಂಟೆಯವರೆಗೆ ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ಮೃತರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.
ಇದನ್ನೂ ಓದಿ : ಜಲಪಾತ ಸಿನಿಮಾಕ್ಕೆ ವಿಜಯಪ್ರಕಾಶ್ ಎಂಟ್ರಿ!
HOW TO APPLY : NEET-UG COUNSELLING 2023