ಕಿನ್ನಿಗೋಳಿ ಭೀಕರ ರಸ್ತೆ ಅಪಘಾತ: ಓರ್ವನ ದುರ್ಮರಣ!
– ಆ.14ಕ್ಕೆ ಪುತ್ತಿಲ ಪರಿವಾರದಿಂದ ಬೃಹತ್ ಕಾಲ್ನಡಿಗೆ
– ತೆಂಗಿನ ಮರದಿಂದ ಬಿದ್ದು ಮಹಿಳೆ ಸಾವು
– ಯುವತಿಯರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್: ಓರ್ವ ಅರೆಸ್ಟ್
NAMMUR EXPRESS NEWS
ಕಿನ್ನಿಗೋಳಿ: ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ನಡೆದು ಒಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಿನ್ನಿಗೋಳಿಯಲ್ಲಿ ನಡೆದಿದೆ. ಕಿನ್ನಿಗೋಳಿಯ ಮೂರು ಕಾವೇರಿ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಬಳಿ ಟಿಪ್ಪರ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೊಬ್ಬರು ಗಂಭೀರ ಸ್ವರೂಪದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಆ.14ಕ್ಕೆ ಪುತ್ತಿಲ ಪರಿವಾರದಿಂದ ಬೃಹತ್ ಕಾಲ್ನಡಿಗೆ
ಸೌಜನ್ಯ ನ್ಯಾಯಕ್ಕಾಗಿ ಅಗ್ರಹಿಸಿ ಆ. 14ರ ಸೋಮವಾರದಂದು ಬೆಳಿಗ್ಗೆ 9.30 ಕ್ಕೆ ದರ್ಬೆ ವೃತ್ತದಿಂದ ಕಾಲ್ನಡಿಗೆ ಜಾಥ ಪುತ್ತೂರು ಬಸ್ ನಿಲ್ದಾಣದವರೆಗೆ ತೆರಳಿ ಅಲ್ಲಿ ರಸ್ತೆ ತಡೆ ಮತ್ತು ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ.ಮನವಿ- ಪುತ್ತೂರು ಪೇಟೆಯ ವರ್ತಕರು ಸಹೋದರಿ ಸೌಜನ್ಯಳ ಸಾವಿಗೆ ನ್ಯಾಯಕ್ಕಾಗಿ ತಮ್ಮ ಅಂಗಡಿಮುಂಗಟ್ಟುಗಳನ್ನು ಅಂದು ಬೆಳಿಗ್ಗೆ 10 ಗಂಟೆಯಿಂದ 11 ಗಂಟೆಯವರೆಗೆ ಸ್ವಯಂಪ್ರೇರಿತ ಬಂದ್ ಮಾಡುವಂತೆ ಪುತ್ತಿಲ ಪರಿವಾರ ವತಿಯಿಂದ ಪುತ್ತೂರಿನ ಸಮಸ್ತ ವ್ಯಾಪಾರಸ್ಥರಲ್ಲಿ ಮನವಿ ಮಾಡಿದ್ದಾರೆ. ಆ.8 ರ ಪೂರ್ವಭಾವಿ ಸಭೆಯಲ್ಲಿ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರಸನ್ನ ಕುಮಾರ್ ಮಾರ್ತಾ, ನಗರ ಅಧ್ಯಕ್ಷರಾದ ಅನಿಲ್ ತೆಂಕಿಲ, ಪ್ರಧಾನ ಕಾರ್ಯದರ್ಶಿ ಉಮೇಶ್ ವೀರಮಂಗಲ, ಪ್ರಮುಖರಾದ ಸುನೀಲ್ ಬೋರ್ಕರ್, ರವಿ ಕುಮಾರ್ ಕೆದಂಬಾಡಿ ಮಠ, ಪ್ರವೀಣ್ ಶೆಟ್ಟಿ ತಿಂಗಳಾಡಿ, ಕೃಷ್ಣಪ್ರಸಾದ್ ಶೆಟ್ಟಿ, ಚಂದ್ರಹಾಸ್ ಈಶ್ವರಮಂಗಲ, ಪ್ರೇಮ್ ರಾಜ್ ಆರ್ಲಪದವು ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.
ಯುವತಿಯರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್: ಓರ್ವ ಅರೆಸ್ಟ್
ಕಾಲೇಜು ಯುವತಿಯರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ, ಅವುಗಳನ್ನು ಇನ್ಸ್ಟಾಗ್ರಾಮ್ ಮೂಲಕ ಹರಿಬಿಟ್ಟ ಪ್ರಕರಣದಲ್ಲಿ ಹುಬ್ಬಳ್ಳಿಯ ಸಮರ್ಥ ಕಾಲೇಜಿನಲ್ಲಿ ಓರ್ವ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ
ಹುಬ್ಬಳ್ಳಿಯ ವಿದ್ಯಾನಗರದಲ್ಲಿರುವ ಸಮರ್ಥ ಶಿಕ್ಷಣ ಸಂಸ್ಥೆಯ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಕಾಲೇಜಿನಲ್ಲಿ ನಾಲ್ಕು ಜನ ವಿದ್ಯಾರ್ಥಿನಿಯ ಫೋಟೋಗಳನ್ನು ಅಶ್ಲೀಲವಾಗಿ ಮಾರ್ಪ್ ಮಾಡಿ ಇನ್ಸ್ಟಾಗ್ರಾಮ್ ಖಾತೆಯೆ ಮೂಲಕ ಅಪ್ಲೋಡ್ ಮಾಡಲಾಗಿತ್ತು. ಈ ಬಗ್ಗೆ ನಾಲ್ವರು ವಿದ್ಯಾರ್ಥಿನಿಯರು ಹುಬ್ಬಳ್ಳಿಯ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಯುವತಿಯರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ, ಅಪ್ಲೋಡ್ ಮಾಡುತ್ತಿದ್ದ ಕಿರಾತಕನನ್ನ ಬಂಧಿಸಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ ಕಮಿಷನರ್ ಸಂತೋಷ ಬಾಬು ಮಾಹಿತಿ ನೀಡಿದ್ದಾರೆ.
ತೆಂಗಿನ ಮರದಿಂದ ಬಿದ್ದು ಮಹಿಳೆ ಸಾವು
ಪುತ್ತೂರು ತಾಲೂಲಕು ಸವಣೂರು ಸಮೀಪದ ಪುಣ್ಚಪ್ಪಾಡಿ ಗ್ರಾಮದಲ್ಲಿ ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದಿದ್ದ ಸುಚಿತ್ರ( 30) ಎಂಬಾಕೆ ತೆಂಗಿನ ಮರದಿಂದ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಸ್ಥಳೀಯ ಪ್ರಮೋದ್ ಬೊಳ್ಳಾಜೆಯವರ ಪತ್ನಿಯಾಗಿದ್ದ ಸುಚಿತ್ರ ರವರು ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದಿದ್ದರು. ಸುಚಿತ್ರ ರವರ ಈ ಕಾಯಕಕ್ಕೆ ಮೆಚ್ಚುಗೆ ವ್ಯಕ್ತ ಪಡಿಸಿ ಹಲವಾರು ಸಂಘ-ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿತ್ತು.ಮೃತರು ಪತಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ
ಇದನ್ನೂ ಓದಿ : ಜಲಪಾತ ಸಿನಿಮಾಕ್ಕೆ ವಿಜಯಪ್ರಕಾಶ್ ಎಂಟ್ರಿ!
HOW TO APPLY : NEET-UG COUNSELLING 2023