ಕಾಲೇಜಿನ ತರಗತಿಯಲ್ಲಿ ಹಿಜಾಬ್, ಬುರ್ಖಾ?
– ಚಿಕ್ಕಮಗಳೂರು ಕಾಲೇಜಿನಲ್ಲಿ ವಿವಾದ
– ಉಡುಪಿ ಕಾಲೇಜಿಗೆ ಆಗಮಿಸಿದ ಸಿಐಡಿ ತನಿಖೆ ಶುರು
– ಇಡೀ ಪ್ರಕರಣ ಮರುಸೃಷ್ಟಿ ಮಾಡಿ ತನಿಖೆ
NAMMUR EXPRESS NEWS
ಚಿಕ್ಕಮಗಳೂರು: ಚಿಕ್ಕಮಗಳೂರಿನ ಐ.ಡಿ.ಎಸ್.ಜಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಬುರ್ಖಾ ಹಾಗೂ ಹಿಜಾಬ್ ಧರಿಸಿ ತರಗತಿಯಲ್ಲಿ ಕುಳಿತಿರುವ ಹಾಗೂ ಕಾಲೇಜು ಕಾರಿಡಾರಿನಲ್ಲಿ ಓಡಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಇದೀಗ ಸದ್ಯಕ್ಕೆ ವಿವಾದ ಸೃಷ್ಟಿ ಮಾಡಿದೆ.
ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಸ್ಥಳಕ್ಕೆ ಎಎಸ್ಪಿ ಹಾಗೂ ಡಿವೈಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಹಾಗೂ ಹಲವು ಮಂದಿ ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.
ಉಡುಪಿ ವಿಡಿಯೋ ಪ್ರಕರಣ: ಹೊಸ ತನಿಖೆ ಶುರು
ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದ ವಿಡಿಯೋ ಪ್ರಕರಣದ ಸಂತ್ರಸ್ಥೆ ವಿದ್ಯಾರ್ಥಿನಿಯಿಂದ ಬುಧವಾರ ಸಿಐಡಿ ಪೊಲೀಸರು ಹೇಳಿಕೆಯನ್ನು ಪಡೆದುಕೊಂಡಿದ್ದಾರೆ. ಉಡುಪಿ ಪೊಲೀಸರು ತನಿಖೆ ನಡೆಸುತ್ತಿದ್ದ ಈ ಪ್ರಕರಣವನ್ನು ರಾಜ್ಯ ಸರ್ಕಾರ ಸೋಮವಾರ ಹಠಾತ್ ಸಿಐಡಿಗೆ ಒಪ್ಪಿಸಿದೆ. ಸಿಐಡಿ ತಂಡ ಮಂಗಳವಾರ ಉಡುಪಿಗೆ ಆಗಮಿಸಿ ತನಿಖೆ ಆರಂಭಿಸಿದೆ. ಬುಧವಾರ ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ ಅವರು ಕಾಲೇಜಿಗ ಭೇಟಿ ನೀಡಿ ಘಟನಾ ಸ್ಥಳವನ್ನು ಪರಿಶೀಲಿಸಿದರು. ನಂತರ ಸಂತ್ರಸ್ಥೆಯನ್ನು ಕಾಲೇಜಿಗೆ ಬರ ಮಾಡಿಕೊಂಡು ಆಕೆಯಿಂದ ಹೇಳಿಕೆಯನ್ನೂ ಪಡೆದರು. ಆಳೆತ್ತರದ ಗೊಂಬೆಯನ್ನು ಕಾಲೇಜಿನ ಶೌಚಾಲಯದ ಎದುರು ನಿಲ್ಲಿಸಿ ಘಟನೆಯ ಮರುಸೃಷ್ಟಿ ಮಾಡುವುದರ ಮೂಲಕ ತನಿಖೆಯನ್ನು ನಡೆಸಲಾಯಿತು.
ಸಂತ್ರಸ್ಥೆ ಇನ್ನೂ ತನ್ನ ಮೇಲಾಗಿರುವ ದೌರ್ಜನ್ಯದ ಬಗ್ಗೆ ದೂರು ನೀಡಿಲ್ಲ. ಆದ್ದರಿಂದ ಆಕೆಯ ಹೇಳಿಕೆಯೇ ಈಗ ಸಿಐಡಿಗೆ ಮುಖ್ಯ ಸಾಕ್ಷ್ಯವಾಗಲಿದೆ. ಸಿಐಡಿಯ ಇನ್ನೊಂದು ತಂಡ ಉಡುಪಿ ಪೊಲೀಸರು ಹಸ್ತಾಂತರಿಸಿರುವ ಕಾಲೇಜಿನ ಮತ್ತು ಅಕ್ಕಪಕ್ಕದ ಸಿಸಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿತು.ಎಫ್ ಎಸ್ ಎ ವರದಿ ಬಂದಿಲ್ಲ ಕಾಲೇಜಿನ ಶೌಚಾಲಯದಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಹಿಂದೂ ವಿದ್ಯಾರ್ಥಿಯೊಬ್ಬಳ ಖಾಸಗಿ ವಿಡಿಯೋ ಮಾಡಿದ್ದಾರೆ ಎಂಬ ಈ ಪ್ರಕರಣದಲ್ಲಿ, ಆರೋಪಿಗಳಿಂದ ವಶಪಡಿಸಿಕೊಳ್ಳಲಾದ 3 ಐಫೋನ್ ಗಳನ್ನು ಹೈದರಾಬಾದಿನ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಅದರ ವರದಿ ಇನ್ನೂ ಬಂದಿಲ್ಲ. ಆದ್ದರಿಂದ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಸಾಕ್ಷ್ಯ ವಿಡಿಯೋ ಸಿಗದೇ ಪ್ರಕರಣದ ಬಗ್ಗೆ ಇದುವರೆಗೆ ಯಾವುದೇ ಸ್ಪಷ್ಟತೆ ಸಿಗುತ್ತಿಲ್ಲ.
ಇದನ್ನೂ ಓದಿ : ಭೂತಾನ್ ಅಡಿಕೆ ಬಂದ್ರೂ ತೊಂದರೆ ಇಲ್ಲ- ಆರಗ ಜ್ಞಾನೇಂದ್ರ
HOW TO APPLY : NEET-UG COUNSELLING 2023