– ಕರಾವಳಿಯಲ್ಲಿ ಮಳೆ, ಗಾಳಿ ಅಲರ್ಟ್!
– ಮಂಗಳೂರು ರೈಲು ನಿಲ್ದಾಣದಲ್ಲಿ ಗಾಂಜಾ ಬ್ಯಾಗ್ ಪತ್ತೆ!
– ಕುಂದಾಪುರ ಅಪಘಾತ: ಮಹಿಳೆಗೆ ಗಾಯ
– ಬಂಟ್ವಾಳ: ಬಸ್, ಬೈಕ್ ಡಿಕ್ಕಿ: ಸವಾರನಿಗೆ ಗಾಯ
NAMMUR EXPRESS KARAVALI : ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಆಗಸ್ಟ್ 17ರವರೆಗೂ ಮಳೆಯಾಗಲಿದೆ ಮಂಡ್ಯ ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಆಗಸ್ಟ್ 17ರವರೆಗೂ ಮಳೆಯಾಗಲಿದೆ. ಎಂದು ಭಾರತೀಯ ಹವಾಮಾನ ಇಲಾಖೆ ವರದಿ ನೀಡಿದೆ. ಕರಾವಳಿಯ ಕೆಲವು ಕಡೆಗಳಲ್ಲಿ ಬಹಳಷ್ಟು ಮಳೆಯಾಗುವ ಸಾಧ್ಯತೆ ಇದೆ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ-ಗುಡುಗು ಸಹಿತ ಮಲೆಯಾಗುವ ಸಾಧ್ಯತೆ ಇದೆ.
ಮಂಗಳೂರು ರೈಲು ನಿಲ್ದಾಣದಲ್ಲಿ ಗಾಂಜಾ ಬ್ಯಾಗ್ ಪತ್ತೆ!
ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಅನಾಮಧೇಯ ಬ್ಯಾಗ್ ದೊರೆತಿದ್ದು, ಗಾಂಜಾವನ್ನು ರೈಲ್ವೇ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೈಲು ನಿಲ್ದಾಣದ ಎರಡನೇ ಫ್ಲಾಟ್ ಫಾರಂನಲ್ಲಿ ಗುರುವಾರ ಕಾರವಾರ-ಯಶವಂತಪುರ (ನಂ.16516) ಎಕ್ಸ್ಪ್ರೆಸ್ ರೈಲಿನಲ್ಲಿ 3,16,650 ರೂ,ಮೌಲ್ಯದ 6.333 ಕೆ.ಜಿ. ತೂಕದ ಒಣ ಗಾಂಜಾ ಪತ್ತೆಯಾಗಿತ್ತು. ರೈಲಿನ ನಿಯಮಿತ ತಪಾಸಣೆ ವೇಳೆ ಪತ್ತೆಯಾದ ಅನಾಮಧೇಯ ಬ್ಯಾಗ್ನಲ್ಲಿ ಗಾಂಜಾ ಕಂಡು ಬಂದಿದೆ. ಮಂಗಳೂರು ಪೂರ್ವ ಅಬಕಾರಿ ವಿಭಾಗದಲ್ಲಿ ಎಸ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಕುಂದಾಪುರ ಅಪಘಾತ: ಮಹಿಳೆಗೆ ಗಾಯ
ಚಾಲಕನ ನಿರ್ಲಕ್ಷತನದ ಚಾಲನೆಯಿಂದ ಗೂಡ್ಸ್ ವಾಹನದ ಹಿಂಬದಿಯಲ್ಲಿ ನಿಂತುಕೊಂಡಿದ್ದ ಗುಲಾಬಿ ಅವರು ಏಕಾಏಕಿ ವಾಹನದಿಂದ ಹೊರಗೆ ಎಸೆಯಲ್ಪಟ್ಟು, ರಸ್ತೆಗೆ ಬಿದ್ದು, ಗಾಯಗೊಂಡ ಘಟನೆ ಕುಂಭಾಶಿ ಗ್ರಾಮದ ಕೊರವಡಿಯಲ್ಲಿ ಆ. 10ರಂದು ಬೆಳಗ್ಗೆ ಸಂಭವಿಸಿದೆ. ಗಾಯಗೊಂಡ ಗುಲಾಬಿ ಅವರನ್ನು ಉಡುಪಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗೂಡ್ಸ್ ಚಾಲಕ ಶ. ಚಂದ್ರಹಾಸ ವಿರುದ್ಧ ಕುಂದಾಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ: ಬಸ್, ಬೈಕ್ ಡಿಕ್ಕಿ: ಸವಾರನಿಗೆ ಗಾಯ
ಬಂಟ್ವಾಳ: ಕೆ.ಎಸ್.ಅರ್.ಟಿ.ಸಿ.ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ಬೈಪಾಸ್ ಜಂಕ್ಷನ್ ಎಂಬಲ್ಲಿ ನಡೆದಿದೆ. ರಾಯಿ ನಿವಾಸಿ ಫ್ರಾನ್ಸಿಸ್ ಲೊಬೋ ಗಾಯಗೊಂಡ ವ್ಯಕ್ತಿ, ಫ್ರಾನ್ಸಿಸ್ ಲೋಬೋ ಅವರು ಬಂಟ್ವಾಳ ಪೇಟೆಯ ಕಡೆಯಿಂದ ಮೂಡಬಿದಿರೆಯ ಕಡೆ ಹೋಗುವ ವೇಳೆ ನಾಲ್ಕು ಮಾರ್ಗ ಕೂಡುವ ಬೈಪಾಸ್ ಜಂಕ್ಷನ್ ನಲ್ಲಿ ಅಪಘಾತ ನಡೆದಿದೆ. ಬೈಕ್ ಸವಾರ ಬಂಟ್ವಾಳದಿಂದ ಹೈವೆಯ ಮೂಲಕ ಮೂಡಬಿದಿರೆ ರಸ್ತೆಗೆ ಏಕಾಏಕಿ ನುಗ್ಗಿಸಿದ ಪರಿಣಾಮವಾಗಿ ಬಸ್ ಚಾಲಕನಿಗೆ ಬೈಕ್ ಬರುವುದು ಗೊತ್ತಾಗದೇ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಸರಕಾರಿ ಬಸ್ ಚಾಲಕ ಅಪಘಾತ ತಪ್ಪಿಸಲು ಬ್ರೇಕ್ ಹಾಕಿ ಸಾಕಷ್ಟು ಪ್ರಯತ್ನ ಪಟ್ಟ ಬಗ್ಗೆ ಅಲ್ಲಿನ ಸ್ಥಳೀಯರು ತಿಳಿಸಿದ್ದಾರೆ. ಅಪಘಾತ ನಡೆದ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ : ಭೂತಾನ್ ಅಡಿಕೆ ಬಂದ್ರೂ ತೊಂದರೆ ಇಲ್ಲ- ಆರಗ ಜ್ಞಾನೇಂದ್ರ
HOW TO APPLY : NEET-UG COUNSELLING 2023