ವಿದ್ಯುತ್ ಕಡಿತದ ವಿರುದ್ಧ ತೀರ್ಥಹಳ್ಳಿಯಲ್ಲಿ ಪ್ರತಿಭಟನೆ!?
– ಯುವ ಬಿಜೆಪಿಯಿಂದ ಪ್ರತಿಭಟನೆ: ಕುಕ್ಕೆ ಪ್ರಶಾಂತ್
– ರಿಪ್ಪನ್ಪೇಟೆ ಸಮೀಪ ಅಪಘಾತ: ಓರ್ವನಿಗೆ ಗಾಯ
– ಶಿವಮೊಗ್ಗದಲ್ಲಿ ಯುವಕ ನೀರಿಗೆ ಬಿದ್ದು ನಾಪತ್ತೆ
NAMMUR EXPRESS NEWS
ತೀರ್ಥಹಳ್ಳಿ: (Thirthahalli news ) ತೀರ್ಥಹಳ್ಳಿ ತಾಲೂಕಿನಾದ್ಯಂತ ಪ್ರತಿದಿನ ಸಂಜೆಯ ವೇಳೆ ಗಂಟೆಗಳ ಕಾಲ ವಿದ್ಯುತ್ ಕಡಿತ ಗೊಳಿಸಲಾಗುತ್ತಿದ್ದು ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಮಕ್ಕಳಿಗೆ ಓದಲು ಸಹ ಆಗುತ್ತಿಲ್ಲ. ಈ ಸಮಸ್ಯೆ ಹೀಗೆ ಮುಂದುವರಿದರೆ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಕುಕ್ಕೆ ಪ್ರಶಾಂತ್ ( Kukke Prashanth ) ಎಚ್ಚರಿಕೆ ನೀಡಿದ್ದಾರೆ. ನಮ್ಮೂರ್ ಎಕ್ಸ್ ಪ್ರೆಸ್ ಮಾಧ್ಯಮಕ್ಕೆ ಹೇಳಿಕೆ ನೀಡಿದ ಅವರು, ರಾಜ್ಯ ಸರ್ಕಾರದ ಗ್ಯಾರೆಂಟಿಗಳಲ್ಲಿ ಒಂದಾಗಿರುವ ಗೃಹಜ್ಯೋತಿ ಯೋಜನೆ ಜಾರಿ ಬಳಿಕ ಈ ಸಮಸ್ಯೆ ಎದುರಾಗಿದೆ. ಒಂದು ಕಡೆ ಫ್ರೀ ಕೊಟ್ಟು ಇನ್ನೊಂದು ಕಡೆ ವಿದ್ಯುತ್ ತೆಗೆದರೆ ಏನು ಪ್ರಯೋಜನ ಎಂದು ಪ್ರಶ್ನಿಸಿದ್ದಾರೆ.
ಕಳೆದ 15 ದಿನಗಳಿಂದ ತೀರ್ಥಹಳ್ಳಿ ತಾಲೂಕಿನ ವಿವಿಧ ಭಾಗಗಳಲ್ಲಿ ಸಂಜೆಯ ವೇಳೆ ವಿದ್ಯುತ್ ಇರುವುದಿಲ್ಲ. ಮೆಸ್ಕಾಂ ಸಿಬ್ಬಂದಿ ಸರಿಯಾಗಿ ಉತ್ತರ ನೀಡುತ್ತಿಲ್ಲ. ಸರ್ಕಾರ ಉಚಿತ ವಿದ್ಯುತ್ ಎಂದು ಘೋಷಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವುದು ಸರಿಯಲ್ಲ. ಹೀಗೆ ಮುಂದುವರಿದರೆ ತಾಲೂಕು ಯುವ ಬಿಜೆಪಿ ವತಿಯಿಂದ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಕುಕ್ಕೆ ಪ್ರಶಾಂತ್ ಎಚ್ಚರಿಕೆ ನೀಡಿದ್ದಾರೆ.
ಹೊಸನಗರ ತಾಲ್ಲೂಕು ರಿಪ್ಪನ್ಪೇಟೆಯಲ್ಲಿ ಅಪಘಾತ
( Hosanagara news ) ಹೊಸನಗರ ತಾಲ್ಲೂಕು ರಿಪ್ಪನ್ಪೇಟೆ ಸಮೀಪ ಕಾರು ಬೈಕ್ ನಡುವೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ರಿಪ್ಪನ್ಪೇಟೆಯ ಹೊಸನಗರ ರಸ್ತೆಯ ಶರ್ಮಣ್ಯಾವತಿ ನದಿ ಸೇತುವೆ ಬಳಿಯಲ್ಲಿ ಘಟನೆ ಸಂಭವಿಸಿದೆ. ಹೊಸನಗರದ ಕಡೆಗೆ ತೆರಳುತಿದ್ದ ಬೈಕ್ ಹಾಗೂ ಹೊಸನಗರ ಕಡೆಯಿಂದ ರಿಪ್ಪನ್ಪೇಟೆ ಕಡೆಗೆ ಬರುತಿದ್ದ ಕಾರು ಪರಸ್ಪರ ಡಿಕ್ಕಿಯಾಗಿವೆ. ಹೊಸನಗರ ಕೊಡಚಾದ್ರಿ ಕಾಲೇಜಿನ ವಿದ್ಯಾರ್ಥಿ ಘಟನೆಯಲ್ಲಿ ಗಾಯಗೊಂಡಿದ್ದು, ಇನ್ನೊಬ್ಬ ವಿದ್ಯಾರ್ಥಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇಬ್ಬರಿಗೂ ಸ್ಥಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ.
ಪ್ರವಾಸಕ್ಕೆ ಬಂದು ತುಂಗಾ ಡ್ಯಾಮಿಗೆ ಬಿದ್ದ!
( Tunga dam ) ತುಂಗಾ ಡ್ಯಾಂನ ಎದುರು, ಪ್ರವಾಸಕ್ಕೆ ಬಂದಿದ್ದ ಯುವಕನೊಬ್ಬ ನೀರಿಗೆ ಬಿದ್ದು ನಾಪತ್ತೆಯಾಗಿದ್ದಾನೆ. ಈ ಬಗ್ಗೆ ತಡವಾಗಿ ವರದಿಯಾಗಿದ್ದು, ಶುಕ್ರವಾರ ಅಗ್ನಿಶಾಮಕ ಸಿಬ್ಬಂದಿ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಇವತ್ತು ಕೂಡ ಹುಡುಕಾಟ ಮುಂದುವರಿಸುವ ಸಾಧ್ಯತೆ ಇದೆ. ಗಾಜನೂರು ಜಲಾಶಯದ ಚಾನಲ್ ಪಕ್ಕದಲ್ಲಿ ಮಿಳಘಟ್ಟದ ಹರೀಶ್ ಡ್ಯಾಂನ್ನ ಹತ್ತಿರದಿಂದ ನೋಡಲು ಹೋಗಿ ನಾಪತ್ತೆಯಾಗಿದ್ದಾನೆ.
ಇದನ್ನೂ ಓದಿ : ಭೂತಾನ್ ಅಡಿಕೆ ಬಂದ್ರೂ ತೊಂದರೆ ಇಲ್ಲ- ಆರಗ ಜ್ಞಾನೇಂದ್ರ
HOW TO APPLY : NEET-UG COUNSELLING 2023