ನಟ ಉಪೇಂದ್ರ ವಿರುದ್ಧ ಜಾತಿ ನಿಂದನೆ ಕೇಸ್!
– ಬೆಂಗಳೂರಿನಲ್ಲಿ ದೂರು ದಾಖಲು: ಏನಿದು ಕೇಸ್
– ಘಟನೆ ಬಳಿಕ ಸಾಮಾಜಿಕ ಜಾಲತಾಣದಿಂದ ಡಿಲೀಟ್
NAMMUR EXPRESS NEWS
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ವಿರುದ್ಧ ಬೆಂಗಳೂರು ಪೊಲೀಸರು ಜಾತಿ ನಿಂದನೆ ಆರೋಪದಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ನಟ ಉಪೇಂದ್ರ ಅವರು ನೀಡಿದ್ದ ಹೇಳಿಕೆಯೊಂದು ಸಾಮಾಜಿಕ ಜಾಲಾತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗಿತ್ತು. ನಿರ್ದಿಷ್ಟ ಸಮಾಜದ ಬಗ್ಗೆ ಅವಹೇಳನಕಾರಿ ಮಾತನಾಡಿದ್ದರು ಎಂದು ಉಲ್ಲೇಖಿಸಿ ದೂರು ನೀಡಲಾಗಿತ್ತು. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಿಂದ ದೂರು ಸ್ವೀಕರಿಸಿದ ಪೊಲೀಸರು, ಉಪೇಂದ್ರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಇತ್ತೀಚಿಗೆ ನಡೆದ ಕಾರ್ಯಕ್ರಮವೊಂದರಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಲ್ಲದೇ, ಅವಹೇಳನ ಶಬ್ದ ಬಳಕೆ ಮಾಡಿದ್ದಾರೆ ಎಂದು ಉಪೇಂದ್ರ ವಿರುದ್ಧ ಮದೂಸೂಧನ್ ಕೆ.ಎಸ್ ಎಂಬುವವರು ದೂರು ಸಲ್ಲಿಸಿದ್ದಾರೆ. ನಟನಾ ಪೋಸ್ಟ್ ಮತ್ತು ಹೇಳಿಕೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನಲೆ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಕೇಸ್ ದಾಖಲಾಗಿದೆ. ತನ್ನ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದಂತೆ ಉಪೇಂದ್ರ ತಾವು ಹಾಕಿದ್ದ ವಿಡಿಯೋವನ್ನು ಫೇಸ್ ಬುಕ್ ಮತ್ತು ಸಾಮಾಜಿಕ ಜಾಲತಾಣದಿಂದ ಡಿಲೀಟ್ ಮಾಡಿದ್ದಾರೆ. ಬಳಿಕ ಕ್ಷಮೆ ಕೂಡ ಕೇಳಿದ್ದಾರೆ.
ಇದನ್ನೂ ಓದಿ : ಭೂತಾನ್ ಅಡಿಕೆ ಬಂದ್ರೂ ತೊಂದರೆ ಇಲ್ಲ- ಆರಗ ಜ್ಞಾನೇಂದ್ರ
HOW TO APPLY : NEET-UG COUNSELLING 2023