– ಕಲಾವಿದ, ಸಾಫ್ಟ್ ವೇರ್ ಎಂಜಿನಿಯರ್ ಆತ್ಮಹತ್ಯೆ
– ಗಾಂಜಾ ಮಾರಾಟ ಮಾಡುತ್ತಿದ್ದವರು, ಬಂಧನ ಗಾಂಜಾ ಸೇವಿಸಿ ಜನರಿಗೆ ತೊಂದರೆ ಕೊಡುತ್ತಿದ್ದ ಇಬ್ಬರ ಅಂದರ್
– ಆನ್ಲೈನ್ ಮೋಸದ ಜಾಲಕ್ಕೆ ಬಿದ್ದ ವ್ಯಕ್ತಿ
– ಬಾಲಕಿಯ ಅಪಹರಣ – ಆರೋಪಿ ಬಂಧನ
NAMMUR EXPRESS NEWS
ಚಾರ್ಮಾಡಿ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೂಲತಃ ಕಕ್ಕಿಂಜೆ ನಿವಾಸಿಯಾಗಿರುವ, ಪ್ರಸ್ತುತ ಬಂಟ್ವಾಳ ತಾಲೂಕು ಸಜಿಪನಡು ಗ್ರಾಮದ ಲಕ್ಷ್ಮಣಕಟ್ಟೆ ಬಳಿಯ ನೌಫಲ್ ಎಂದು ಗುರುತಿಸಲಾಗಿದೆ. ಆರೋಪಿ ಪೊಲೀಸರನ್ನು ಕಂಡು ಸಂಶಯಾಸ್ಪದವಾಗಿ ವರ್ತಿಸಿದ್ದು ಈ ವೇಳೆ ವಿಚಾರಿಸಲು ಆತನ ಬಳಿ ಬಂದಾಗ ಓಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸ್ ಸಿಬ್ಬಂದಿ ಆತನನ್ನು ಬಂಧಿಸಿದ್ದಾರೆ. ಆತನ ಬಳಿ ಪ್ಲಾಸ್ಟಿಕ್ ಕೈಚೀಲದಲ್ಲಿ 150 ಗ್ರಾಂ ನಷ್ಟು ಗಾಂಜಾದ ಮೊಗ್ಗು, ಎಲೆ ಮತ್ತು ಬೀಜ ಇರುವುದನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಳ್ಳಲಾದ ವಸ್ತುಗಳ ಒಟ್ಟು ಮೌಲ್ಯ ಅಂದಾಜು 4 ಸಾವಿರ ರೂ.ಆಗಿದ್ದು, ಈ ಬಗ್ಗೆ ಎನ್ಡಿಪಿಎಸ್ ಕಾಯ್ದೆಯಡಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವ ಚಿತ್ರಕಲಾವಿದ ಆತ್ಮಹತ್ಯೆ!
ಬಂಟ್ವಾಳ: ಅನಾರೋಗ್ಯ, ನಿರುದ್ಯೋಗದ ಸಮಸ್ಯೆಯಿಂದ ಬೇಸತ್ತ ಯುವ ಚಿತ್ರಕಾರನೊಬ್ಬ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಮಿತ್ತಮಜಲು ಎಂಬಲ್ಲಿ ನಡೆದಿದೆ.
ಚಿತ್ರಕಾರ ಸಾಗರ್ ಆಚಾರ್ಯ (26) ಎಂಬಾತ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಆ.14ರಂದು ಮನೆಯಂಗಳದಲ್ಲಿ ಇರುವ ಸುಮಾರು 30ಅಡಿ ಆಳದ ಬಾವಿಗೆ ಹಾರಿ ಈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಳ್ಳಲು ಸ್ಪಷ್ಟವಾದ ಕಾರಣ ನಿಗೂಢವಾಗಿದೆಯಾದರೂ ಆತನ ಅನಾರೋಗ್ಯದ ಕಾರಣ ಜೀವನದಲ್ಲಿ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಅಂದಾಜಿಸಲಾಗಿದೆ. ಆದರೆ ಈತ ಕಳೆದ ಕೆಲವು ದಿನಗಳಿಂದ ಮಾನಸಿಕವಾಗಿ ನೊಂದಿದ್ದಲ್ಲದೆ, ನೆರೆಹೊರೆಯವರ ಸ್ನೇಹಿತರ ಜೊತೆ ಈತನ ನೋವನ್ನು ಹೇಳಿಕೊಂಡಿದ್ದ ಎಂದು ಹೇಳಲಾಗಿದೆ.
ಗಾಂಜಾ ಸೇವಿಸಿ ಜನರಿಗೆ ಕಿರಿಕಿರಿ:ಇಬ್ಬರ ಬಂಧನ
ಬಂಟ್ವಾಳ: ಗಾಂಜಾ ಸೇವಿಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸಜೀಪ ಮುನ್ನೂರು ಗ್ರಾಮದ ನಂದಾವರ ಕೋಟೆ ನಿವಾಸಿ ಮಹಮ್ಮದ್ ಶಾಕಿಬ್ ಹಾಗೂ ಬಿ.ಮೂಡ ಗ್ರಾಮದ ಶಾಂತಿ ಅಂಗಡಿ ನಿವಾಸಿ ಮಹಮ್ಮದ್ ಆರೀಫ್ ಬಂಧಿತ ಆರೋಪಿಗಳು. ತಾಲೂಕಿನ ಸಜೀಪ ಮುನ್ನೂರು ಗ್ರಾಮದ ನಂದಾವರ ಶಾಲಾ ಬಳಿ ಇಬ್ಬರು ಯುವಕರು ಮಾದಕ ವಸ್ತುವನ್ನು ಸೇವಿಸಿ ನಶೆ ಹೊಂದಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂಬ ಸ್ಥಳೀಯರು ನೀಡಿದ ದೂರಿನಂತೆ ಸ್ಥಳಕ್ಕೆ ಬೇಟಿ ನೀಡಿದ ಬಂಟ್ವಾಳ ನಗರ ಪೋಲೀಸ್ ಠಾಣಾಧಿಕಾರಿ ರಾಮಕೃಷ್ಣ ನೇತ್ರತ್ವದ ಪೋಲೀಸ್ ತಂಡ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡ ವೈದ್ಯಕೀಯ ತಪಾಸಣೆ ನಡೆಸಿದ್ದು ಗಾಂಜಾ ಸೇವನೆ ದೃಢಪಟ್ಟಿದೆ. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಬೀಚ್ ರೆಸಾರ್ಟ್ನಲ್ಲೇ ನೇಣು ಬಿಗಿದು ಆತ್ಮಹತ್ಯೆ
ಬೀಚ್ ರೆಸಾರ್ಟ್ನಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸಾಫ್ಟ್ವೇರ್ ಎಂಜಿನಿಯರ್. ರೆಸಾರ್ಟ್ ಒಂದರಲ್ಲಿ ವಾಸ್ತವ್ಯ ಮಾಡಿದ್ದ ಬೆಂಗಳೂರು ಮೂಲದ ವ್ಯಕ್ತಿ ರೂಂನಲ್ಲಿಯೇ ನೇಣುಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ನಡೆದಿದೆ. ಬೆಂಗಳೂರು ಮೂಲದ ಸಾಫ್ಟ್ವೇರ್ ಎಂಜಿನಿಯರ್ ಆಗಿದ್ದ ರಿಷಿಕೇಶ ರೆಡ್ಡಿ (35) ವರ್ಷದ ವ್ಯಕ್ತಿಗೆ ಶರಣಾದ ಯುವಕ. ಈತ ಗೋಕರ್ಣದ ಓಂ ಬೀಚ್ ರೆಸಾರ್ಟ್ ನಲ್ಲಿ ಮೂರು ದಿನಗಳ ಕಾಲ ರೂ ಬಾಡಿಗೆಗೆ ಪಡೆದುಕೊಂಡಿದ್ದ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಗೋಕರ್ಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ನೇಣಿಗೆ ಶರಣಾದ ವ್ಯಕ್ತಿಯ ಮೃತ ದೇಹವನ್ನ ಗೋಕರ್ಣದ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದ್ದು, ಮೃತನ ಕುಟುಂಬಸ್ಥರು ಬಂದ ಬಳಿಕ ಶವ ಕುಟುಂಬದವರಿಗೆ ಒಪ್ಪಿಸಲಾಗುವುದು. ಈ ಬಗ್ಗೆ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತನ ಆತ್ಮಹತ್ಯೆಗೆ ನಿಖರವಾಗಿರುವ ಕಾರಣ ತಿಳಿದುಬಂದಿಲ್ಲ.
ಆನ್ಲೈನ್ ಜಾಲಕ್ಕೆ ಸಿಲುಕಿ ಹಣ ಕಳೆದುಕೊಂಡ ವ್ಯಕ್ತಿ
ಯಲ್ಲಾಪುರ: ಮೆಸೇಜ್ ಲಿಂಕ್ ಒತ್ತಿ ವ್ಯಕ್ತಿಯೋರ್ವ ಹಣ ಕಳೆದುಕೊಂಡ ಪ್ರಕರಣ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ತಾಲೂಕಿನ ಜಿಗಳಿಹೊಂಡದ ಸಂತೋಷ ಶ್ರೀಪತಿ ಹೆಗಡೆ (39) ಆನ್ಲೈನ್ ವಂಚಕರ ಜಾಲಕ್ಕೆ ಸಿಲುಕಿ ಹಣ ಕಳೆದುಕೊಂಡ ವ್ಯಕ್ತಿಯಾಗಿದ್ದಾನೆ. ಅಪರಿಚಿತ ವ್ಯಕ್ತಿಯಿಂದ ಸಂತೋಷ್ ಗೆ ಮೆಸೆಜ್ ಬಂದಿದ್ದು, ಮೆಸೇಜ್ ನಲ್ಲಿ ಬ್ಯಾಂಕಿನ ಲೋಗೋ ಇದ್ದಿದ್ದರಿಂದ ಅದನ್ನ ಒತ್ತಿದ್ದಾನೆ. ಇನ್ನು ಮೆಸೇಜ್ ಒಪನ್ ಆಗುತ್ತಿದ್ದಂತೆ ಆತನ ಕ್ರೆಡಿಟ್ ಕಾರ್ಡಿನಿಂದ ಎರಡು ಬಾರಿ ಸುಮಾರು 95,557ರೂ ಹಣ ಕಟ್ ಆಗುವ ಮೂಲಕ ವಂಚನೆಗೊಳಗಾಗಿದ್ದಾನೆ. ಇನ್ನು ಹಣ ಕಟ್ ಆಗುತ್ತಿದ್ದಂತೆ ಸಂಶಯಗೊಂಡು ಬ್ಯಾಂಕಿಗೆ ಕರೆಮಾಡಿ ಕ್ರೆಡಿಟ್ ಕಾರ್ಡನ್ನು ಸ್ಥಗಿತಗೊಳಿಸಿದ್ದು, ಈ ಸಂಭಂದ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿದ್ದಾನೆ.
ಕಟಪಾಡಿ: ಬೈಕ್-ಕಾರು ಡಿಕ್ಕಿ ಇಬ್ಬರಿಗೆ ಗಂಭೀರ ಗಾಯ
ಕಾರೊಂದು ಡಿವೈಡರ್ ದಾಟಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದೆ. ಗಾಯಾಳುಗಳ ಮಾಹಿತಿ ತಿಳಿದು ಬಂದಿಲ್ಲ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಸಮಾಜ ಸೇವಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸೇವಕ ಆಸ್ಟಿನ್ ಕಾಪು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಬಾಲಕಿಯ ಅಪಹರಣ – ಆರೋಪಿ ಬಂಧನ
ಮಂಗಳೂರಿನ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಣ ಮಾಡಿದ ಘಟನೆ ನಡೆದಿದ್ದು, ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಬಾಲಕಿಯನ್ನು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ.
ಮಂಗಳೂರು ಹೊರ ವಲಯದ ಕಸ್ಟಾ ಬೆಂಗ್ರೆಯ ಮೊಹಮ್ಮದ್ ಸಫ್ರ್ರಾಝ್ (22) ಬಂಧಿತ ಆರೋಪಿ.
ಆತನ ವಿರುದ್ಧ ಅತ್ಯಾಚಾರ ಆರೋಪ ಮತ್ತು ಪೊಕ್ಕೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಆ. 10 ರಂದು ಅಪಹರಿಸಲಾಗಿದ್ದು, ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನ್ನ ಪುತ್ರಿಯನ್ನು ಆರೋಪಿ ಪುಸಲಾಯಿಸಿ ಕರೆದುಕೊಂಡು ಹೋಗಿರುವುದಾಗಿ ಬಾಲಕಿಯ ತಂದೆ ದೂರು ನೀಡಿದ್ದರು. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಕೆಲವೇ ಗಂಟೆಗಳಲ್ಲಿ ಬಾಲಕಿಯನ್ನು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಮೊಹಮ್ಮದ್ ಸಫ್ರ್ರಾಝ್ ಹಳೆ ಆರೋಪಿಯಾಗಿದ್ದು, ಕಂಕನಾಡಿ ನಗರ ಮತ್ತು ಬೈಂದೂರು ಪೊಲೀಸ್ ಠಾಣೆಗಳಲ್ಲಿ ಆತನ ವಿರುದ್ಧ ಮನೆ ದರೋಡೆ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ : ತೀರ್ಥಹಳ್ಳಿ ರೆಸಾರ್ಟ್ ಅಲ್ಲಿ ಸಿಕ್ತು ವಿದೇಶಿ ಮದ್ಯ, ಪ್ರಾಣಿಗಳ ಕೊಂಬು!
HOW TO APPLY : NEET-UG COUNSELLING 2023