ಉಡುಪಿ ಜಿಲ್ಲೆಯಲ್ಲಿ 2 ದಿನ ಲಕ್ಷ್ಮಿ ಹೆಬ್ಬಾಳ್ಕರ್ ರೌಂಡ್ಸ್!
– ಉಸ್ತುವಾರಿ ಸಚಿವರ ಪ್ರವಾಸ: ಸ್ವಾತಂತ್ರ್ಯ ದಿನದಲ್ಲಿ ಹಾಜರ್
– ಏನೇನು ಕಾರ್ಯಕ್ರಮ… ಎಲ್ಲೆಲ್ಲಿ ಭೇಟಿ?
NAMMUR EXPRESS NEWS
ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಆಗಸ್ಟ್ 14 ಮತ್ತು 15 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು, ಪ್ರವಾಸದ ವಿವರಗಳು ಇಂತಿವೆ.ಆಗಸ್ಟ್ 14 ರಂದು ಮಧ್ಯಾಹ್ನ 12.15 ಕ್ಕೆ ಉಡುಪಿ ತಾಲೂಕು ಪಂಚಾಯತ್ ಆವರಣದಲ್ಲಿ, ಮಹಿಳಾ ಸ್ವ ಸಹಾಯ ಸಂಘಗಳ ಉತ್ಪನ್ನಗಳ ಮಾರಾಟ ಕೇಂದ್ರ ಸಂಜೀವಿನಿ ಸೂಪರ್ ಮಾರ್ಕೆಟ್ ಉದ್ಘಾಟನೆ.1 ಗಂಟೆಗೆ ಜಿಲ್ಲಾ ಪಂಚಾಯತ್ ಸಂಪನ್ಮೂಲ ಕೇಂದ್ರದಲ್ಲಿ, ಉಡುಪಿ ಜಿಲ್ಲಾ ಸರಕಾರಿ ಪದವಿ ಪೂರ್ವ ಕಾಲೇಜುಗಳ ವಿಜ್ಞಾನ ವಿದ್ಯಾರ್ಥಿಗಳಿಗಾಗಿ ಸಿಇಟಿ/ಜೆಇಇ/ನೀಟ್ ಆನ್ ಲೈನ್ ತರಬೇತಿಗೆ ಚಾಲನೆ.2 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರವಾಸೋದ್ಯಮ ಹಾಗೂ ಮೀನುಗಾರಿಕಾ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ. 4 ಗಂಟೆಗೆ ಕಾರ್ಕಳ ತಾಲೂಕು ಮುಡಾರು ಗ್ರಾಮ ಪಂಚಾಯತ್ ಕಟ್ಟಡ ಉದ್ಘಾಟನೆ ನಂತರ ಉಡುಪಿ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಆಗಸ್ಟ್ 15 ರಂದು ಬೆಳಗ್ಗೆ 8.30 ರಿಂದ 11 ರ ವರೆಗೆ ಜಿಲ್ಲಾಡಳಿತ ಉಡುಪಿ ವತಿಯಿಂದ, ಅಜ್ಜರಕಾಡು ಮಹಾತ್ಮ ಗಾಂಧೀ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಸ್ವಾತಂತ್ರೋತ್ಸವ ಸಮಾರಂಭದ ಅಂಗವಾಗಿ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಮಧ್ಯಾಹ್ನ 12.30 ಕ್ಕೆ ಕುಂದಾಪುರ ತಾಲೂಕಿನ ಹಾರ್ದಳ್ಳಿ-ಮಂಡಳ್ಳಿ ಗ್ರಾಮ ಪಂಚಾಯತ್ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಇದನ್ನೂ ಓದಿ : ತೀರ್ಥಹಳ್ಳಿ ರೆಸಾರ್ಟ್ ಅಲ್ಲಿ ಸಿಕ್ತು ವಿದೇಶಿ ಮದ್ಯ, ಪ್ರಾಣಿಗಳ ಕೊಂಬು!
HOW TO APPLY : NEET-UG COUNSELLING 2023