– ನಟ ಉಪೇಂದ್ರ ಕೇಸಿಗೆ ತಡೆ ನೀಡಿದ ಹೈಕೋರ್ಟ್
– ಚಿಕ್ಕಮಗಳೂರಲ್ಲಿ ಕಾರು ಬೈಕಿಗೆ ಗುದ್ದಿ 100 ಮೀಟರ್
ಎಳೆದೊಯ್ದು ಪರಾರಿ!
– ಬೈಕ್ ವೀಲಿಂಗ್ ಚಟಕ್ಕೆ ಯುವಕ ಬಲಿ!
– ಹಾಸ್ಟೆಲ್ ಊಟದಲ್ಲಿ ಹಲ್ಲಿ: ವಿದ್ಯಾರ್ಥಿಗಳು ಅಸ್ವಸ್ಥ
– ಭೂಕುಸಿತದಲ್ಲಿ ಸಿಲುಕಿದ ರಾಜ್ಯದ ಐವರು ಮಹಿಳೆಯರು!
NAMMUR EXPRESS NEWS
ರಿಯಲ್ ಸ್ಟಾರ್ ಉಪೇಂದ್ರ ಅವರಿಗೆ ರಿಲೀಫ್ ಸಿಕ್ಕಿದೆ. ಸಾಮಾಜಿಕ ಜಾಲತಾಣದ ಲೈವ್ ನಲ್ಲಿ ಹೇಳಿದ ಹೇಳಿಕೆಗೆ ತೀವ್ರ ಆಕ್ರೋಶ ಕೇಳಿಬಂದಿದ್ದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಸಮುದಾಯವರಿಗೆ ಅವಮಾನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನಟ ಉಪೇಂದ್ರ ಅವರ ವಿರುದ್ಧ ದಾಖಲಾಗಿರುವ 2 ಎಫ್ಐಆರ್ ಗಳಿಗೆ ಕರ್ನಾಟಕ ಹೈಕೋರ್ಟ್ ಸೋಮವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. ಉಪೇಂದ್ರ ಅವರು ಸಾಮಾಜಿಕ ಜಾಲತಾಣದಲ್ಲಿ ನೇರಪ್ರಸಾರದಲ್ಲಿ ಮಾತನಾಡುವಾಗ ದಲಿತ ಸಮುದಾಯವನ್ನು ಹೀಗಳೆಯುವ ನುಡಿಗಟ್ಟು ಬಳಸಿದ್ದರು. ಈ ಹಿನ್ನಲೆ ಬೆಂಗಳೂರಿನ ದಕ್ಷಿಣ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪೊಲೀಸ್ ಠಾಣೆಯಲ್ಲಿ ನಟ ಉಪೇಂದ್ರ ವಿರುದ್ಧ ಪ್ರಕರಣ ದಾಖಲಿಸಿದ್ದರು.
ಚನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆಯ ಪೊಲೀಸರು ಎಸ್ಎ ಮತ್ತು ಎಸ್ಟಿ (ದೌರ್ಜನ್ಯ ನಿಷೇಧ) ಕಾಯಿದೆ ಸೆಕ್ಷನ್ 3(1)(ಆರ್)(ಎಸ್) ಅಡಿ ದಾಖಲಿಸಿದ್ದ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಉಪೇಂದ್ರ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡ ನೇತೃತ್ವದ ಪೀಠವು ಈ ಆದೇಶ ಮಾಡಿದೆ. ಕನ್ನಡ ನುಡಿಗಟ್ಟು ಬಳಕೆ ಮಾಡಿದ್ದಕ್ಕೆ ತಮ್ಮ ವಿರುದ್ಧ ಸುಳ್ಳು, ಕ್ಷುಲ್ಲಕ ಮತ್ತು ಪ್ರಚಾರದ ಉದ್ದೇಶದಿಂದ ಪ್ರಕರಣ ದಾಖಲಿಸಲಾಗಿದೆ. ತಾನು ದಲಿತರು ಅಥವಾ ಎಸ್ಸಿ ಮತ್ತು ಎಸ್ಟಿ ಸಮುದಾಯಕ್ಕೆ ಸೇರಿದ ವ್ಯಕ್ತಿಗಳನ್ನು ಅವಮಾನಿಸಿಲ್ಲ. ದುರುದ್ದೇಶದಿಂದ ಪ್ರಕರಣ ದಾಖಲಿಸಲಾಗಿದೆ. ಈ ನಿಟ್ಟಿನಿಂದ ಪ್ರಕರಣದ ಮುಂದಿನ ಪ್ರಕ್ರಿಯೆಗೆ ತಡೆ ವಿಧಿಸಬೇಕು ಎಂದು ಮಧ್ಯಂತರ ಕೋರಿಕೆ ಸಲ್ಲಿಸಿದ್ದರು.
ಬೈಕ್ ಸವಾರ ರಸ್ತೆಯಲ್ಲಿ ಉಜ್ಜಿಕೊಂಡು ಹೋದರೂ ತಿರುಗಿ ನೋಡದ ಚಾಲಕ!
ಕಾರು ಬೈಕ್ ಗೆ ಡಿಕ್ಕಿಯಾಗಿ ಸುಮಾರು 100 ಮೀಟರ್ ವರೆಗೂ ಬೈಕ್ ನ್ನು ಎಳೆದೊಯ್ದ ಘಟನೆ ಚಿಕ್ಕಮಗಳೂರು ಪಟ್ಟಣದ ರಾಷ್ಟ್ರೀಯ ಹೆದ್ದಾರಿ 173ರಲ್ಲಿ ನಡೆದಿದೆ. ಚಿಕ್ಕಮಗಳೂರು ನಗರದ ಬೈಪಾಸ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಘಟನೆಯ ದೃಶ್ಯ ಕಂಡು ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ. ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಗುದ್ದಿದ ರಭಸಕ್ಕೆ ಬೈಕಿನಲ್ಲಿ ಬೆಂಕಿ ಹತ್ತಿದರೂ ಕಾರು ಚಾಲಕ ಕಾರು ನಿಲ್ಲಿಸುವ ಪ್ರಯತ್ನಕ್ಕೆ ಮುಂದಾಗಿಲ್ಲ, ಬೈಕ್ ಸವಾರ ರಸ್ತೆಯಲ್ಲಿ ಉಜ್ಜಿಕೊಂಡು ಹೋದರೂ ಕಾರು ಚಾಲಕ ತಿರುಗಿಯೂ ನೋಡಿಲ್ಲ.ಹಿಟ್ ಅಂಡ್ ರನ್ ಮಾಡಿರುವ ಕಾರು ಚಾಲಕನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕಾರು ಚಾಲಕನ ಅತಿರೇಕದ ವರ್ತನೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಹಲ್ಲಿ ಬಿದ್ದ ಆಹಾರ ಸೇವಿಸಿ 30 ಮಂದಿ ವಿದ್ಯಾರ್ಥಿನಿಯರು ಅಸ್ವಸ್ಥ
ಹಲ್ಲಿ ಬಿದ್ದಿದ್ದ ಆಹಾರ ಸೇವಿಸಿದ 30 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ತಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ರಕ್ಕಸಗಿ ಗ್ರಾಮದಲ್ಲಿರುವ ಕಸ್ತೂರಬಾ ಗಾಂಧಿ ಬಾಲಕಿಯರ ಹಾಸ್ಟೆಲಿನಲ್ಲಿ ನಡೆದಿದೆ.
ಸೋಮವಾರ ಮಧ್ಯಾಹ್ನ ವಿದ್ಯಾರ್ಥಿನಿಯರು ಶಾಲೆಯಿಂದ ಬಂದ ಮೇಲೆ ಊಟ ಮಾಡಿದ್ದರು. ಬಳಿಕ ಹಲ್ಲಿ ಬಿದ್ದ ವಿಷಯ ಹರಡಿ ಹಲವರು ಆತಂಕಕ್ಕೊಳಗಾದರು. ಅವರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಹಾಸ್ಟೇಲ್ ಗೆ ವೈದ್ಯರನ್ನು ಕರೆಯಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಹೆಚ್ಚಿನವರು ಆತಂಕದ ಕಾರಣದಿಂದಲೇ ಅಸ್ವಸ್ಥ ಆಗಿದ್ದು ಎನ್ನಲಾಗಿದೆ. ಮತ್ತೆ ಕೆಲವರನ್ನು ಅಲ್ಲಿನ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಈಗ ಎಲ್ಲ ಮಕ್ಕಳ ಆರೋಗ್ಯ ಸ್ಥಿತಿ ನಿಯಂತ್ರಣದಲ್ಲಿದೆ.
ಬೈಕ್ ವ್ಹಿಲಿಂಗ್ ಚಟಕ್ಕೆ ಯುವಕ ಬಲಿ!
ಇತ್ತೀಚಿಗೆ ಬೈಕ್ ವೀಲಿಂಗ್, ರೀಲ್ಸ್ ಚಟ ಅನೇಕರ ಜೀವ, ಜೀವನ ಹಾಳು ಮಾಡುತ್ತಿದೆ. ಈಗಾಗಲೇ ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ನಂದಿ ಗಿರಿಧಾಮಕ್ಕೆ ಹೋಗುವ ಮಾರ್ಗದಲ್ಲಿ ಬೈಕ್ ವೀಲಿಂಗ್ ಮಾಡಿ ಇನ್ನೊಂದು ಬೈಕಿಗೆಡಿಕ್ಕಿ ಹೊಡೆದು ಓರ್ವ ಸಾವನ್ನು ಕಂಡಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಭೂಕುಸಿತದಲ್ಲಿ ಸಿಲುಕಿದ ರಾಜ್ಯದ ಐವರು ಮಹಿಳೆಯರು!
ಕರ್ನಾಟಕ ಮೂಲದ ಐವರು ಮಹಿಳೆಯರು ಹಿಮಾಚಲದಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ ಸಿಲುಕಿದ್ದಾರೆ. ಹಿಮಪಾತ ಆಗುತ್ತಿರುವಂತಹ ಹಿನ್ನೆಲೆಯಲ್ಲಿ ಕೇದಾರದಿಂದ 30 ಕಿಲೋಮೀಟರ್ ದೂರದಲ್ಲಿ ಸಿಲುಕಿಕೊಂಡಿದ್ದಾರೆ. ಚಿತ್ರದುರ್ಗದ ಬಿಜೆಪಿ ಮುಖಂಡರಾದ ರತ್ನಮ್ಮ, ಗೀತಾ, ಅಂಬಿಕ ಇನ್ನೂ ಇಬ್ಬರು ಮಹಿಳೆಯರು ಕೇದಾರನಾಥದಿಂದ ಬರಲು ಆಗದಿರುವ ಸ್ಥಿತಿಯಲ್ಲಿದ್ದಾರೆ. ಶೀಘ್ರವಾಗಿ ಕಳುಹಿಸಿಕೊಳ್ಳಲು ಸರ್ಕಾರಕ್ಕೆ ಮನವಿ ಮಾಡಿದ್ದಾರೆ
ಇದನ್ನೂ ಓದಿ : ತೀರ್ಥಹಳ್ಳಿ ರೆಸಾರ್ಟ್ ಅಲ್ಲಿ ಸಿಕ್ತು ವಿದೇಶಿ ಮದ್ಯ, ಪ್ರಾಣಿಗಳ ಕೊಂಬು!
HOW TO APPLY : NEET-UG COUNSELLING 2023