– ಶಿವಮೊಗ್ಗ: ಗಾಂಧೀ ಪ್ರತಿಮೆ ಧ್ವಂಸ!
– ಶಿಕಾರಿಪುರ: ಸ್ನೇಹಿತನ ಸಾವು ಸುದ್ದಿ ಕೇಳಿ ಹೃದಯಾಘಾತ
– ಹೊಸನಗರ : ಹೊಳೆಗೆ ಉರುಳಿ ಬಿದ್ದ ಕಂಟೈನರ್ ಲಾರಿ
– ಕಿರಿಕ್ ಕೀರ್ತಿ ದಂಪತಿ ವಿಚ್ಛೇದನ!
– ಕಡೂರು : ಶಾಸಕರ ಆಪ್ತನ ಕಾರಿಗೆ ಇಬ್ಬರು ಬಲಿ!
NAMMUR EXPRESS NEWS
ಸರ್ಕಲ್ನಲ್ಲಿದ್ದ ಗಾಂಧಿ ಪ್ರತಿಮೆಯನ್ನು ದುಷ್ಕರ್ಮಿಗಳು ಕೆಡವಿ ಹಾಕಿದ ಘಟನೆ ಸಂಬಂಧ ಹೊಳೆಹೊನ್ನೂರಿನಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇಲ್ಲಿನ ಮಹಾತ್ಮಗಾಂಧಿ ಸರ್ಕ್ಲ್ನಲ್ಲಿ ಮಹಾತ್ಮ ಗಾಂಧಿಜಿಯವರ ಪ್ರತಿಮೆಯನ್ನು ಸ್ಥಾಪಿಸಲಾಗಿತ್ತು. ಪ್ರತಿಮೆ ಸುತ್ತ ಮಂಟಪವನ್ನು ಸಹ ನಿರ್ಮಿಸಿ, ವಿಶೇಷವಾದ ಗೌರವವನ್ನು ನೀಡಲಾಗುತ್ತಿತ್ತು.
ಭಾನುವಾರ ರಾತ್ರಿ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು, ಗಾಂಧಿಜಿಯವರ ಪ್ರತಿಮೆಯನ್ನು ಕೆಡವಿದ್ದಾರೆ. ಮೂರ್ತಿಯನ್ನು ಧ್ವಂಸಗೊಳಿಸಿದಷ್ಟೆ ಅಲ್ಲದೆ, ಅದನ್ನು ಬೀಳಿಸಿ ಪುಡಿ ಮಾಡಿದ್ಧಾರೆ. ದುಷ್ಕರ್ಮಿಗಳ ಕೃತ್ಯ ಸಿಸಿ ಕ್ಯಾಮರಾವೊಂದರಲ್ಲಿ ಸೆರೆಯಾಗಿದೆ ಎನ್ನಲಾಗಿದೆ. ಇನ್ನೂ ಇವತ್ತು ಬೆಳಗ್ಗೆ ವಿಚಾರ ತಿಳಿಯುತ್ತಲೇ ಪ್ರತಿಮೆ ಬಳಿಯಲ್ಲಿ ನೂರಾರು ಮಂದಿ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಮೆಯನ್ನು ಬೀಳಿಸಿದ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಹೊಳೆಹೊನ್ನೂರು ಠಾಣೆ ಪೊಲೀಸರು ಬಂದಿದ್ದು, ಪರಿಶೀಲನೆ ನಡೆಸ್ತಿದ್ದಾರೆ.
ಸ್ನೇಹಿತನ ಸಾವು ಸುದ್ದಿ ಕೇಳಿ ಹೃದಯಾಘಾತ!
ಶಿರಾಳಕೊಪ್ಪದ ನಡುವೆ ಇರುವ ಕೆಎಸ್ಆರ್ ಟಿಸಿ ಬಸ್ ಡಿಪೋ ಬಳಿ ಎರಡು ಬೈಕ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಓರ್ವನನ್ನ ಮಣಿಪಾಲ್ ಗೆ ದಾಖಲಾಗಿಸಲಾಗಿದೆ. ಈ ಘಟನೆ ಮತ್ತೊಂದು ಹೃದಯ ವಿದ್ರಾವಕ ಘಟನೆಗೆ ದಾರಿಯಾಗಿದೆ. ಅಪಘಾತದಲ್ಲಿ ಗಾಯಗೊಂಡ ಇನ್ನಿಬ್ಬರನ್ನ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವನ್ನಪ್ಪಿದ ಯುವಕನನ್ನ ಆನಂದ್ (30) ಎಂದು ಗುರುತಿಸಲಾಗಿದೆ. ಮಂಡಿ ಚಿಪ್ಪು ಕಳೆದುಕೊಂಡಿರುವ ಯುವನನ್ನ ಮೊಹ್ಮದ್ ಮಲ್ಲಿಕ್ (19) ಎಂದು ಗುರುತಿಸಲಾಗಿದೆ. ತಲೆಗೆ ಮತ್ತು ದವಡೆ ಜ್ವಾ ಭಾಗದಲ್ಲಿ ಹೊಡೆತ ಬಿದ್ದಿರುವ ನವರಾಜ್ ಎಂಬ ಯುವಕ ಮತ್ತು ಜಾವೀದ್ ಎಂಬ 30 ವರ್ಷದ ಯುವಕನನ್ನ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆನಂದ್ ಮತ್ತು ನವರಾಜ್ ಸ್ನೇಹಿತನ ಹುಟ್ಟುಹಬ್ಬದ ಕೇಕ್ ತರಲು ಹೊರಟಿದ್ದ ವೇಳೆ ಶಿಕಾರಿಪುರದಿಂದ ಪುಣೇದಹಳ್ಳಿಗೆ ವಾಪಾಸಾಗುವಾಗ ನಿನ್ನೆ ರಾತ್ರಿ 8-30 ರ ಸಮಯದಲ್ಲಿ ಕೆಎಸ್ ಆರ್ ಟಿಸಿ ಡಿಪೋ ಬಳಿ ಪುಣೇದಹಳ್ಳಿಯಿಂದ ಶಿಕಾರಿಪುರಕ್ಕೆ ಬರುತ್ತಿದ್ದ ಜಾವೇದ್ ಬೈಕ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಆನಂದ ಸ್ಥಳದಲ್ಲಿಯೇ ಸಾವನ್ನಪ್ಪಿದ ವಿಷಯ ತಿಳಿದ ಪುಣೇದಹಳ್ಳಿಯ ಗ್ರಾಮದ ಯುವಕ ಸಾಗರ್ ಎಂಬಾತನಿಗೆ ಹೃದಯಾಘಾತವಾಗಿದೆ.
ಹೊಳೆಗೆ ಉರುಳಿ ಬಿದ್ದ ಕಂಟೈನರ್ ಲಾರಿ
ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್ ಲಾರಿಯೊದು ಹೊಳೆಗೆ ಉರುಳಿ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾಸ್ತಿಕಟ್ಟೆಯಲ್ಲಿ ನಡೆದಿದೆ. ಕುಂದಾಪುರ ಕಡೆಯಿಂದ ಮಾಸ್ತಿಕಟ್ಟೆಗೆ ಬರುತಿದ್ದ ಕಂಟೈನರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹುಲಿಕಲ್ ಗ್ರಾಮದ ಹೊಳೆಗೆ ಉರುಳಿಬಿದ್ದಿದ್ದು ಅದೃಷ್ಟವಶಾತ್ ಚಾಲಕ ಪಾರಾಗಿದ್ದಾನೆ.
ಶಾಸಕ ಶಿವಲಿಂಗೇಗೌಡ ಆಪ್ತನ ಕಾರು, ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು
ಕಾರು, ಬೈಕ್ ನಡುವೆ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಹೇಮಗಿರಿ ಗೇಟ್ ಬಳಿ ನಡೆದಿದೆ. ಅರಸೀಕೆರೆ ಕ್ಷೇತ್ರದ ಕಾಂಗ್ರೆಸ್ಶಾಸಕ ಶಿವಲಿಂಗೇಗೌಡ ಅವರ ಆಪ್ತ ಬಾಣಾವರ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾಗಿದ್ದ ಬಿಳಿ ಚೌಡಯ್ಯ ಎಂಬುವವರಿಗೆ ಸೇರಿದ ಕಾರುಇದಾಗಿದ್ದು, ಡಿಕ್ಕಿಯ ರಭಸಕ್ಕೆ ಬೈಕ್ ಸ್ವಿಫ್ಟ್ ಕಾರಿನಲ್ಲಿ ಸಿಲುಕಿಕೊಂಡಿದೆ. ಘಟನೆ ಬಳಿಕ ಚಾಲಕ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಈ ಕುರಿತು ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕಿರಿಕ್ ಕೀರ್ತಿ ದಂಪತಿ ವಿಚ್ಛೇದನ!
ಕನ್ನಡ ಅವತರಣಿಕೆಯ ಬಿಗ್ ಬಾಸ್ ಶೋನ ಮಾಜಿ ಸ್ಪರ್ಧಿ ಹಾಗೂ ನಿರೂಪಕ ಕಿರಿಕ್ ಕೀರ್ತಿ ಅವರು ತಮ್ಮ ಪತ್ನಿ ಅರ್ಪಿತಾ ಅವರಿಗೆ ವಿಚ್ಛೇದನ ನೀಡಿದ್ದಾರೆ. ಈ ವಿಷಯವನ್ನು ಕೀರ್ತಿ ಅವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದು, ‘ಕಾನೂನಿನ ಪ್ರಕಾರ ಇವತ್ತು ನನ್ನ ಮತ್ತು ಅರ್ಪಿತಾ ಜತೆಗಿನ ಪತಿ-ಪತ್ನಿ ಸಂಬಂಧಕ್ಕೆ ಪೂರ್ಣ ವಿರಾಮ ಸಿಕ್ಕಿದೆ. ಇನ್ನು ಮುಂದೆ ನನ್ನ ವೈಯಕ್ತಿಕ, ವ್ಯಾವಹಾರಿಕ ವಿಚಾರಗಳಿಗೂ ಅವಳಿಗೂ ಯಾವುದೇ ಸಂಬಂಧ ಇರುವುದಿಲ್ಲ. ಕಾರಣ ಇಷ್ಟೇ ಅಧಿಕೃತವಾಗಿ ಇನ್ನು ಮುಂದೆ ಕರಿಮಣಿ ಮಾಲೀಕ ನಾನಲ್ಲ. ಒಂದೊಳ್ಳೆಯ ಬದುಕು ಅವಳಿಗೂ ಸಿಗಲಿ, ಕಹಿನೆನಪುಗಳು ಮರೆತು ಹೊಸಜೀವನಕ್ಕೆ ನಾಂದಿ ಹಾಡಲಿ, ನನಗೂ ನಿಮ್ಮ ಪ್ರೀತಿ ಹಾರೈಕೆ ಮುಂದುವರಿಯಲಿ’ ಎಂದು ಕಿರಿಕ್ ಕೀರ್ತಿ ವಿಚ್ಛೇದನ ಆಗಿರುವುದನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ. 2016ರಲ್ಲಿ ಕನ್ನಡ ಬಿಗ್ಬಾಸ್ ಶೋನಲ್ಲಿ ಕಿರಿಕ್ ಕೀರ್ತಿ ಅವರು ರನ್ನರ್ಅಪ್ ಆಗಿ ಗಮನ ಸೆಳೆದಿದ್ದರು. ಕನ್ನಡದ ಕೆಲ ಚಿತ್ರಗಳಲ್ಲಿ ನಟಿಸಿದ್ದಾರೆ. ಇವರು ಭದ್ರಾವತಿ ತಾಲೂಕು ಶಂಕರಘಟ್ಟ ಮೂಲದವರು.