ಪ್ರವಾಸದ ನೆಪದಲ್ಲಿ ಅಪ್ರಾಪ್ತಳ ರೇಪ್!
– ಸಾಗರದ ಯುವತಿ ಮೇಲೆ ಇಬ್ಬರ ಅತ್ಯಾಚಾರ: ಕೇಸ್
– ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ವರ್ಗಾವಣೆ
NAMMUR EXPRESS NEWS
ಶಿವಮೊಗ್ಗ: ಪ್ರವಾಸಕ್ಕೆಂದು ಅಪ್ರಾಪ್ತ ಬಾಲಕಿಯನ್ನು ಕರೆದುಕೊಂಡು ಹೋಗಿ ಇಬ್ಬರು ಯುವಕರು ಅತ್ಯಾಚಾರ ಮಾಡಿದ ಘಟನೆ ನಡೆದಿದೆ. ಈ ಬಗ್ಗೆ ಸಾಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಗರ ತಾಲೂಕಿನ ಶಾಬಾಜ್ (26) ಅಜಯ್ (32) ಎಂಬ ಇಬ್ಬರು ಈ ಕೃತ್ಯ ವೆಸಗಿದ್ದಾರೆ ಎಂದು ಅವರ ಮೇಲೆ ಪೋಕ್ಸ್,ಅಟ್ರಾಸಿಟಿ ಕಾಯ್ದೆಯಡಿ ಕೇಸ್ ದಾಖಲಾಗಿದೆ. ಪರಿಶಿಷ್ಟ ಕುಟುಂಬಕ್ಕೆ ಸೇರಿದ ಬಾಲಕಿಗೆ ಪರಿಚಿತ ಇರುವ ಈ ದುಷ್ಟರು ಆಕೆಯನ್ನು ಪ್ರವಾಸದ ನೆಪದಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ.
ಶಾಲೆಗೆ ಹೋಗುವ ಈ ಹುಡುಗಿಯನ್ನು ಸಹೋದರರ ಭಾವನೆಯಿಂದ ಆತ್ಮೀಯತೆ ಬೆಳೆಸಿಕೊಂಡು ಯುವತಿಯ ಸಂಪರ್ಕದಲ್ಲಿದ್ದ ಇವರು ಆಗಸ್ಟ್ 19ರಂದು ಪ್ರವಾಸದ ನೆಪದಲ್ಲಿ ಶಿವಮೊಗ್ಗಕ್ಕೆ ಕರೆದುಕೊಂಡು ಬಂದಿದ್ದರು. ಶನಿವಾರ ಶಿವಮೊಗ್ಗದಲ್ಲಿ ಸುತ್ತಾಡಿಸಿದ ಬಳಿಕ ಆಕೆಯನ್ನು ಜನ ನಿಬಿಡವಾದ ಜಾಗಕ್ಕೆ ಕರೆದುಕೊಂಡು ಹೋಗಿ ಆಕೆಗೆ ಪ್ರಜ್ಞೆ ತಪ್ಪಿಸುವ ಪಾನೀಯ ನೀಡಿ ಅತ್ಯಾಚಾರ ಮಾಡಿದ್ದಾರೆ ಎನ್ನಲಾಗಿದೆ. ಬಳಿಕ ಆಕೆಯನ್ನು ಸಾಗರಕ್ಕೆ ಮರಳಿ ತಂದು ಬಿಟ್ಟಿದ್ದಾರೆ ಆದರೆ, ಯಾವ ಕಾರಣಕ್ಕು ವಿಷಯವನ್ನು ಮನೆಯಲ್ಲಿ ತಿಳಿಸಬಾರದು, ತಿಳಿಸಿದರೆ ನಿನಗೇ ತೊಂದರೆ ಎಂದು ಹೆದರಿಸಿದ್ದಾರೆ. ಆದರೆ ಮನೆಯಲ್ಲಿ ಯುವತಿಯ ಸ್ಥಿತಿ ನೋಡಿ ವಿಚಾರಿಸಿದಾಗ ನಡೆದ ಘಟನೆ ವಿವರಿಸಿದ್ದಾಳೆ
ಪೋಷಕರು ಕೂಡಲೇ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ವರ್ಗಾವಣೆ
ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಮುಂದಿನ ಆದೇಶದವರೆಗೆ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಮಾತೆ ವಿಕ್ರಮ್, ಐಪಿಎಸ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ, ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.