ಹೆಲಿ ಕಾಪ್ಟರ್ ಪತನ: 7 ಮಂದಿ ದುರ್ಮರಣ
– ಕೇದಾರನಾಥ ದೇಗುಲಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್
– ಪೈಲೆಟ್ ಸೇರಿ 7 ಮಂದಿ ನಿಧನ: ಏನಿದು ಘಟನೆ?
NAMMUR EXPRESS NEWS
ಡೆಹ್ರಾಡೂನ್: ಉತ್ತರಾಖಂಡದ ಕೇದಾರನಾಥ ದೇವಾಲಯಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಉತ್ತರಾಖಂಡದ ಕೇದಾರನಾಥ ದೇವಾಲಯಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ಪೈಲಟ್ ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಅಪಘಾತದಲ್ಲಿ ಮೃತಪಟ್ಟವರಲ್ಲಿ ಪೈಲಟ್ ಕೂಡ ಸೇರಿದ್ದಾರೆ. ಅಹಮದಾಬಾದ್ ವಿಮಾನ ದುರಂತದ ಬೆನ್ನಲ್ಲೇ ಈ ಘಟನೆ ನಡೆದಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ.
274 ಮಂದಿ ಸಾವಿಗೆ ಕಾರಣ ಆಗಿರುವ ವಿಮಾನ ದುರಂತ ತನಿಖೆ ನಡೆಯುತ್ತಿದೆ. ಈಗ ಈ ಘಟನೆ ಮತ್ತಷ್ಟು ಆತಂಕ ಹೆಚ್ಚಿಸಿದೆ.