ಬಸ್ ನಡುವೆ ಭೀಕರ ಅಪಘಾತ!
* ಓರ್ವ ಮಹಿಳೆ ಸಾವು, ಇಪ್ಪತ್ತು ಮಂದಿಗೆ ಗಾಯ
– ಸುಳ್ಯದ ಅರಂತೋಡಿನ ಉದಯನಗರದ ಬಳಿ ಘಟನೆ
ನಮ್ಮೂರ್ ಎಕ್ಸ್ ಪ್ರೆಸ್ ನ್ಯೂಸ್
ಸುಳ್ಯ: ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸುಳ್ಯ ತಾಲ್ಲೂಕಿನ ಅರಂತೋಡಿನ ಉದಯನಗರದ ಬಳಿಯ ತಿರುವಿನಲ್ಲಿ ಮಂಗಳೂರಿನಿಂದ ಮಡಿಕೇರಿಗೆ ಹಾಗೂ ಮೈಸೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಎರಡು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಗಳ ನಡುವೆ ಶುಕ್ರವಾರ ಸಂಜೆಯ ವೇಳೆಗೆ ಅಪಘಾತ ಸಂಭವಿಸಿದ್ದು, ಓರ್ವ ಮಹಿಳೆ ಮೃತಪಟ್ಟಿದ್ದು, ಇಪ್ಪತ್ತು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಮಡಿಕೇರಿಯ ಕುಶಾಲನಗರದ ಗುಡ್ಡೆಹೊಸೂರು ನಿವಾಸಿ ಭಾರತಿ ಮೃತಪಟ್ಟ ಮಹಿಳೆ. ಗಾಯಗೊಂಡ ಪ್ರಯಾಣಿಕರನ್ನು ಸುಳ್ಯದ ಖಾಸಗಿ ಆಸ್ಪತ್ರೆಗು ಹಾಗೂ ತೀವ್ರ ಗಾಯಗೊಂಡ ಇಬ್ಬರು ಪ್ರಯಾಣಿಕರನ್ನು ಮಂಗಳೂರಿನ ಆಸ್ಪತ್ರೆಗು ದಾಖಲಿಸಲಾಗಿದೆ. ಸುಳ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿ, ಪ್ರಕರಣವನ್ನು ದಾಖಲಿಸಿಕೊಂಡಿದ್ದು ಮಳೆಯ ಪರಿಣಾಮವಾಗಿ ಚಾಲಕನಿಗೆ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.