NAMMUR EXPRESS NEWS
ಶಿವಮೊಗ್ಗ: ಕೃಷಿ ಮತ್ತು ತೋಟಗಾರಿಕಾ ಮೇಳ-2023ನ್ನ ಮಾ.19 ರಿಂದ 20 ರ ವರೆಗೆ ನವುಲೆಯ ಕೃಷಿ ವಿವಿಯಲ್ಲಿ ನಡೆಯಲಾಗಿತ್ತಿದೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಕುಲಪತಿ ಜಗದೀಶ್ ಮಾ.17 ರಂದು ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮದ ಉದ್ಘಾಟನೆಯನ್ನ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ನೆರವೇರಿಸಲಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕ್ ನಾಯ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಣರಷಿ ಸವಿವ ಬಿ.ಸಿ.ಪಾಟೀಲ್ ಹಾಗೂ ಗೌರವಾನ್ವಿತ ಅತಿಥಿಗಳಾಗಿ ಬಿ.ಎಸ್.ಯಡಿಯೂರಪ್ಪ ಆಗಮಿಸಲಿದ್ದಾರೆ ಎಂದರು.
ವಿಶೇಷ ಅತಿಥಿಗಳಾಗಿ ಕೇಂದ್ರ ಸಚಿವೆ ಶೋಭಾ ಕರದ್ಲಾಂಜೆ, ಗೃಹ ಸಚಿವ ಆರಗಜ್ಞಾನೇಂದ್ರ, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಈಶ್ವರಪ್ಪ, ಸಾಗರ ಶಾಸಕ ಹರತಾಳು ಹಾಲಪ್ಪ, ಸೊರಬ ಶಾಸಕ ಕುಮಾರ ಬಂಗಾರಪ್ಪ, ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್, ಎಂಎಲ್ ಸಿ ಆಯನೂರು ಮಂಜುನಾಥ್, ರುದ್ರೇಗೌಡ, ಭಾರತಿ ಶೆಟ್ಟಿ, ಭೋಜೇಗೌಡ, ಡಿ ಎಸ್ ಅರುಣ್ ಮೊದಲಾದವರು ಭಾಗಿಯಾಗಲಿದ್ದಾರೆ ಎಂದರು.
ಮಾ.18 ರಂದು ತಾಂತ್ರಿಕ ಸಮಾವೇಶ ಹಾಗೂ ತಾಂತ್ರಿಕ ಕೈಪಿಡಿಗಳ ಬಿಡುಗಡೆ ಕಾರ್ಯಕ್ರಮ ನಡೆಯಲಿದ್ದು ಈ ಕಾರ್ಯಕ್ರಮವನ್ನ ಸಚಿವ ಡಾ.ಕೆ.ಸಿ.ನಾರಾಯಣ ಗೌಡ, ತೋಟಗಾರಿಕೆ ಇಲಾಖೆ ಸಚಿವ ಮುನಿರತ್ನ, ಸಾರಿಗೆ ಸಚಿವ ಶ್ರೀರಾಮುಲು, ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ, ಚಿತ್ರದುರ್ಗ ಸಂಸದ ಕೆ.ಸಿ.ನಾರಾಯಣ ಸ್ವಾಮಿ ಮೊದಲಾದವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಮಾ.19 ರಂದು ತಾಂತ್ರಿಕ ಸಮಾವೇಶ ಹಾಗೂ ತಾಂತ್ರಿಕ ಕೈಪಿಡಿಗಳ ಬಿಡುಗಡೆ ಕಾರ್ಯಕ್ರಮ ನಡೆಯಲಿದ್ದು, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಾರ್ಮಿಕ ಸಚಿವ ಅರಬೈಲು ಶಿವರಾಮ್ ಹೆಬ್ಬಾರ್ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಳಾಗಿ ಆಗಮಿಸಲಿದ್ದಾರೆ.
ಗದಗ ಜಿಲ್ಲೆ ಕಪ್ಪತ್ತಗುಡ್ಡ ನಂದವೇರಿ ಶಿವಕುಮಾರ ಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಲಿದ್ದು ಮಾ. 19 ರಂದು ಬೆಳಿಗ್ಗೆ 9-30 ಕ್ಕೆ ಜಿಲ್ಲಾ ಮಟ್ಟದ ಶ್ವಾನ ಪ್ರದರ್ಶನ ನಡೆಯಲಿವೆ ಎಂದು ತಿಳಿಸಿದ ಅವರು, ಮಾ.20 ರಂದು ಸಮಾರೋಪ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದ್ದು, ಕರ್ನಾಟಕ ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್, ಇಂಧನ ಸಚಿವ ವಿ ಸುನೀಲ್ ಕುಮಾರ್ ಆಗಮಿಸಲಿದ್ದು ಸಿರಿಗೆರೆ ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ ಎಂದರು. ಅಧ್ಯಕ್ಷತೆಯನ್ನ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕ್ ನಾಯ್ಕ್ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಐ ಎಸ್ ಎನ್ ಪ್ರಸಾದ್, ಮೊದಲಾದವರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದು ಹೇಳಿದರು.
ಡಾ. ಹೇಮಾ ನಾಯ್ಕ ಮೃತ್ಯುಂಜಯ ಸಿ ವಾಲಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಮಾ.17 ರಿಂದ ನಾಲ್ಕುದಿನಗಳ ವರೆಗೆ ನಡೆಯಲಿದೆ ಕೃಷಿ ಮತ್ತು ತೋಟಗಾರಿಕ ಮೇಳ
Related Posts
Add A Comment