Categories
ಕೃಷಿ

ಅನ್ನದಾತನಿಗೆ ಮಣಿದ ಸರ್ಕಾರ..!

  • 3 ಕೃಷಿ ಮಸೂದೆ ವಾಪಾಸ್: ರೈತರ ಹೋರಾಟ ಪಾಸ್
  • ದೇಶದೆಲ್ಲೆಡೆ ರೈತರ ಹರ್ಷ: ಚುನಾವಣೆ ಮಾಸ್ಟರ್ ಪ್ಲಾನ್

NAMMUR EXPRESS NEWS
ನವ ದೆಹಲಿ: ಸರ್ಕಾರ ಘೋಷಿಸಿದ್ದ ಮೂರು ಕೃಷಿ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವುದಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಈ ಮೂಲಕ ರೈತರ ಹೋರಾಟಕ್ಕೆ ಜಯ ಸಿಕ್ಕಿದೆ. ಆದರೆ ಈ ಘೋಷಣೆ ಲೋಕಸಭಾ ಅಧಿವೇಶನದಲ್ಲಿ ಪಾಸ್ ಆಗಬೇಕಿದೆ.
ದೇಶದಲ್ಲಿ ಮುಂಬರುವ ದಿನಗಳಲ್ಲಿ ಬರುವ ಚುನಾವಣೆ ಹಿನ್ನೆಲೆ ಈ ನಿರ್ಧಾರ ಆಗಿದೆಯಾ ಎಂಬ ಚರ್ಚೆ ಶುರುವಾಗಿದೆ.
ಏನಿದು ಘೋಷಣೆ ಏನು?: ರೈತರ ಆರ್ಥಿಕ, ಸಾಮಾಜಿಕ ಸ್ಥಿತಿ ಸುಧಾರಿಸಲು ಪ್ರಯತ್ನ ಮಾಡಲಾಗುತ್ತಿದ್ದು, 3 ಕಾಯ್ದೆ ಜಾರಿಗೆ ತಂದಿದ್ದೆವು. ಸಣ್ಣ ರೈತರ ಒಳಿತಿಗಾಗಿಯೇ ಕೃಷಿ ಕಾಯ್ದೆ ಜಾರಿಗೆ ತಂದಿದ್ದೆವು. ಈ 3 ಕಾನೂನುಗಳು ಸಂಪೂರ್ಣವಾಗಿ ರೈತರ ಪರವಾಗಿದ್ದವು. ರೈತರ ಹಿತ ದೃಷ್ಟಿಯಲ್ಲಿಟ್ಟುಕೊಂಡೇ ಕಾಯ್ದೆ ಜಾರಿ ಮಾಡಲಾಗಿತ್ತು. ಯೋಜನೆ ಬಗ್ಗೆ ರೈತರಿಗೆ ತಿಳಿಸುವಲ್ಲಿ ಸಾಕಷ್ಟು ಯತ್ನಿಸಿದ್ದೇವೆ. ಆದರೆ ಕೆಲವು ರೈತರು ಕಾಯ್ದೆಯನ್ನು ಅವರ ಸಲಹೆ ಒಪ್ಪಿಕೊಂಡಿದ್ದರೂ ವಿರೋಧಿಸುತ್ತಿದ್ದಾರೆ. ರೈತರ ನಿರಂತರ ಹೋರಾಟದ ಹಿನ್ನೆಲೆಯಲ್ಲಿ ಇದೀಗ ಸರ್ಕಾರ ಮೂರು ಕೃಷಿ ಕಾಯ್ದೆ ವಾಪಸ್ ಪಡೆಯಲು ನಿರ್ಧರಿಸಲಾಗಿದೆ ಎಂದು ಪ್ರಧಾನಿ ಘೋಷಿಸಿದ್ದಾರೆ.

ರೈತರಿಗಾಗಿ.. ದೇಶಕ್ಕಾಗಿ ನಾನು..!
‘‘ನಾನೇನು ಮಾಡಿದ್ದೇನೋ, ಅದೆಲ್ಲವೂ ರೈತರಿಗಾಗಿ. ನಾನು ಮಾಡುತ್ತಿರುವ ಕೆಲಸಗಳು ದೇಶಕ್ಕಾಗಿ. ಇಂದು ಎಲ್ಲರಿಗೂ ನಾನು, ಇನ್ನೂ ದೇಶಕ್ಕಾಗಿ ಮತ್ತಷ್ಟು ಹೆಚ್ಚು ಶ್ರಮವಹಿಸಿ ದುಡಿಯುತ್ತೇನೆ ಎಂದು ಭರವಸೆ ನೀಡುತ್ತೇನೆ. ಇದರಿಂದಾಗಿ ನಿಮ್ಮ ಮತ್ತು ದೇಶದ ಕನಸು ನನಸಾಗಲು ಸಾಧ್ಯವಾಗುತ್ತದೆ’’

  • ನರೇಂದ್ರ ಮೋದಿ, ಪ್ರಧಾನಿ

ನಮ್ಮ ಸರ್ಕಾರ ರೈತರ ಪರ!
ರೈತರ ಸಮಸ್ಯೆ ಬಗೆಹರಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ದೇಶದಲ್ಲಿ 100ರಲ್ಲಿ 80 ಪ್ರತಿಶತ ರೈತರು ಸಣ್ಣ ಹಿಡುವಳಿ ರೈತರಾಗಿದ್ದು, 10 ಕೋಟಿಗಿಂತ ಹೆಚ್ಚು ಸಣ್ಣ ರೈತರಿದ್ದಾರೆ. ಅವರ ಸಮಸ್ಯೆಗಳನ್ನು ನಾನು ಅರಿತಿದ್ದೇನೆ. ಅದನ್ನು ಬಗೆಹರಿಸಲು ಪ್ರಯತ್ನ ಮಾಡಲಾಗುತ್ತಿದ್ದು, ಬೀಜ, ವಿಮೆ, ಮಾರುಕಟ್ಟೆ, ಉಳಿತಾಯಕ್ಕೆ ಯೋಜನೆಗಳಿಗಾಗಿ ರೈತರಿಗೆ ಫಸಲ್ ಬಿಮಾ, ಪೆನ್ಷನ್‌ ಯೋಜನೆ ಜಾರಿಗೆ ತಂದಿದ್ದೇವೆ. ಕೃಷಿ ಮಾರುಕಟ್ಟೆ ಆಧುನೀಕರಣಕ್ಕೆ ಕೋಟ್ಯಂತರ ರೂ. ಖರ್ಚು ಮಾಡಲಾಗುತ್ತಿದೆ. ರೈತರು ಈಗ ಎಲ್ಲಿ ಬೇಕಾದರೂ ತಮ್ಮ ಬೆಳೆ ಮಾರಬಹುದು. ಕೃಷಿ ಬಜೆಟ್‌ ಮೊದಲಿಗಿಂತ 5 ಪಟ್ಟು ಹೆಚ್ಚಿಸಿದ್ದೇವೆ. ರೈತರಿಗೆ 22 ಕೋಟಿ ಸಾಯಿಲ್ ಹೆಲ್ತ್ ಕಾರ್ಡ್‌ ನೀಡಿದ್ದೇವೆ ಎಂದು ಪ್ರಧಾನಿ ಹೇಳಿದ್ದಾರೆ.

ರೈತರ ಹರ್ಷ.. ಹೋರಾಟ ನಿಲ್ಲಿಸಲ್ಲ
ಲೋಕಸಭೆಯಲ್ಲಿ 3 ಮಸೂದೆ ವಾಪಾಸ್ ತೆಗೆದುಕೊಂಡ ಬಳಿಕ ಹೋರಾಟ ನಿಲ್ಲಿಸುತ್ತೇವೆ ಎಂದು ಹೋರಾಟದ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.