ರಾಜ್ಯದ ರೈತರಿಗೆ ಬಿಗ್ ಶಾಕ್..!
– ಖಾತೆ’ಗೆ ಬಂದ ಬರಪರಿಹಾರ ಹಣ ಸಾಲಕ್ಕೆ ಜಮಾ!
NAMMUR EXPRESS NEWS
ಬೆಂಗಳೂರು: ಬರದಿಂದ ತತ್ತರಿಸಿರುವ ರೈತರಿಗೆ ಇದೀಗ ಬ್ಯಾಂಕುಗಳು ಶಾಕ್ ನೀಡಿದ್ದು, ಬರ ಪರಿಹಾರದ ಹಣವನ್ನು ಸಾಲಕ್ಕೆ ಜಮಾ ಮಾಡಿಕೊಳ್ಳುತ್ತಿವೆ. ರಾಜ್ಯ ಸರ್ಕಾರ ಬರ ಪರಿಹಾರ ಹಣವನ್ನು ರೈತರ ಖಾತೆಗೆ ಜಮೆ ಮಾಡಿದರೆ, ಆ ಹಣ ಇದೀಗ ಬ್ಯಾಂಕ್ ಸಾಲಕ್ಕೆ ಹೊಂದಿಸಿಕೊಳ್ಳಲಾಗುತ್ತಿದೆ. ಇದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ರೈತರಿಗೆ ಸರ್ಕಾರ ಬರ ಪರಿಹಾರ ಜಮೆ ಮಾಡಿದೆ. ಆದರೆ ಕೆಲ ಬ್ಯಾಂಕ್ಗಳು ರೈತರ ಬೆಳೆಸಾಲಕ್ಕೆ ಹೊಂದಿಸಿಕೊಳ್ಳುತ್ತಿದ್ದಾರೆ. ಇದು ರೈತರಿಗೆ ತಿಳಿಯುತ್ತಿದ್ದಂತೆ ಬ್ಯಾಂಕಿಗೆ ತೆರಳಿದರೆ ಬೆಳೆ ಸಾಲಕ್ಕೆ ಹೊಂದಿಸಿಕೊಳ್ಳಲಾಗಿದೆ ಎಂದು ಬ್ಯಾಂಕ್ ಅಧಿಕಾರಿಗಳು ಹೇಳುತ್ತಿದ್ದಾರೆ.
ಕೇಂದ್ರ ಸರ್ಕಾರ ಬರದಿಂದ ಸಂಕಷ್ಟದಲ್ಲಿರುವ ರೈತರಿಗಾಗಿ ಪರಿಹಾರ ಬಿಡುಗಡೆ ಮಾಡಿದೆ. ಪ್ರತಿ ಹೆಕ್ಟೇರ್ ಮಳೆಯಾಶ್ರಿತ ಒಣ ಬೇಸಾಯಕ್ಕೆ 8,500 ರೂ., ನೀರಾವರಿಗೆ 17,000 ರೂ., ಬಹುವಾರ್ಷಿಕ/ ತೋಟಗಾರಿಕೆ ಬೆಳೆಗೆ 22,500 ರೂ.ವರೆಗೆ ಪರಿಹಾರವನ್ನು ಸರ್ಕಾರ ನಿಗದಿಪಡಿಸಲಾಗಿದೆ. ಬೆಳೆ ಪರಿಹಾರದ ಹಣವನ್ನು ಯಾವುದೇ ಕಾರಣಕ್ಕೂ ಹೊಂದಾಣಿಕೆ ಮಾಡಿಕೊಳ್ಳು ವಂತಿಲ್ಲ. ಒಂದು ವೇಳೆ ಮಾಡಿಕೊಂಡರೆ ಬ್ಯಾಂಕ್ ಅಧಿಕಾರಿಗಳೇ ಹೊಣೆಗಾರರು ಎಂದು ಎಚ್ಚರಿಕೆ ನೀಡಲಾಗಿದೆ.