-ಪೊಲೀಸರು ತಡೆದ ಕಡೆ ರಸ್ತೆ ಬಂದ್
-ಕಾಂಗ್ರೆಸ್ ಕಾರ್ಯಕರ್ತರಿಗೆ ಡಿ.ಕೆ.ಶಿ ಕರೆ
ಬೆಂಗಳೂರು: ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಕಾಂಗ್ರೆಸ್ ರಾಜಭವನ ಚಲೋ ಪ್ರತಿಭಟನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಮಾತನಾಡಿರುವ ಅವರು, ‘ರಾಜ್ಯ ಸರ್ಕಾರ ಪೊಲೀಸ್ ಜನರ ಪ್ರತಿಭಟನೆ ಹಕ್ಕನ್ನು ಕಸಿಯುವ ಪ್ರಯತ್ನ ಮಾಡುತ್ತಿದೆ’ ಎಂದುಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ಮತ್ತು ಜನ ವಿರೋಧಿ ಕಾಯ್ದೆಗಳ ವಿರುದ್ಧದ ‘ರಾಜಭವನ ಚಲೋ’ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸುತ್ತಿರುವ ರೈತರು ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ಮಂಗಳವಾರ ರಾತ್ರಿಯಿಂದಲೇ ಪೊಲೀಸರು ಮಾರ್ಗ ಮಧ್ಯದಲ್ಲೇ ತಡೆಯುತ್ತಿದ್ದಾರೆ.