- ಸರ್ಕಾರದಿಂದ ಬಿಡುಗಡೆ: ಆರಗ ಅವರ ಪ್ರಯತ್ನ
NAMMUR EXPRESS NEWS
ಶಿವಮೊಗ್ಗ: ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಅಡಕೆಗೆ ಬಾಧಿಸುತ್ತಿರುವ ಎಲೆ ಚುಕ್ಕಿ ರೋಗ ನಿಯಂತ್ರಣ ಸಂಬಂಧ ರಾಜ್ಯ ಸರ್ಕಾರ ಔಷಧ ಸಿಂಪಡಣಿಗೆಂದು ಹೆಚ್ಚುವರಿಯಾಗಿ 10 ಕೋಟಿ ರೂ. ಅನುದಾನ ಘೋಷಿಸಿದೆ.
ಅಡಕೆ ಕಾರ್ಯಪಡೆ ಅಧ್ಯಕ್ಷ, ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ನೇತೃತ್ವದಲ್ಲಿ ತೀರ್ಥಹಳ್ಳಿಯ ರೈತ ಪ್ರತಿನಿಧಿಗಳ ನಿಯೋಗ ಭೇಟಿ ಮಾಡಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಹೆಚ್ಚುವರಿಯಾಗಿ ಅನುದಾನ ಘೋಷಿಸಿದರು. ಅಲ್ಲದೆ, ಈ ಮೊದಲೇ ಘೋಷಿಸಿದ್ದ 8 ಕೋಟಿ ರೂ. ಅನುದಾನದಲ್ಲಿ 4 ಕೋಟಿ ರೂ. ಬಿಡುಗಡೆ ಮಾಡಿರುವುದಾಗಿ ಹೇಳಿದ್ದಾರೆ.