ಉಡುಪಿ, : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಸತಿ ನಿಲಯಗಳಿಗೆ 5 ರಿಂದ ತರಗತಿಯಿಂದ 10 ನೇ ತರಗತಿಯವರೆಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ,2ಬಿ,3ಎ,3ಬಿ,ಪ.ಜಾ ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನ. https://shp.karnataka.gov.in/ ಅಲ್ಲಿ ಸಲ್ಲಿಸಬಹುದಾಗಿದೆ. ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.
Author: mediacreative
ಬೀದರ್: ತಮ್ಮ ಊರಿನ ಬಸ್ ಕಾದು ಕಾದು ಸುಸ್ತಾದ ವ್ಯಕ್ತಿಯೊಬ್ಬ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಸಾರಿಗೆ ಸಂಸ್ಥೆಯ ಬಸ್ ಅನ್ನು ತೆಗೆದುಕೊಂಡು ನಿಲ್ದಾಣದಿಂದ ಹೊರಗಿರುವ ಡಿವೈಡರ್ ಮೇಲೆ ಹತ್ತಿಸಿದ ಘಟನೆ ಬೀದರ್ ಜಿಲ್ಲೆ ಔರಾದ ಎಂಬಲ್ಲಿ ಜೂ.5 ನಡೆದಿದೆ. ಯಶಪ್ಪ ಸೂರ್ಯವಂಶಿ ಎನ್ನುವ ವ್ಯಕ್ತಿ ಬೆಳಿಗ್ಗೆಯಿಂದ ನಿಲ್ದಾಣದಲ್ಲಿ ಕುಳಿತರೂ ತನ್ನೊರಿಗೆ ಹೋಗಲು ಬಸ್ ಇರಲಿಲ್ಲ, ಹೀಗಾಗಿ ಬಸ್ ತೆಗೆದುಕೊಂಡು ಹೋಗುತ್ತಿದ್ದೇನೆ ಎಂದರು. ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸಿ ಚಾಲಕ ಹಾಗೂ ನಿರ್ವಾಹಕರು ನಿಲ್ದಾಣದಲ್ಲಿ ಎಂಟ್ರಿ ಮಾಡಿಕೊಂಡು ಹೋಗಿ ಬರುವ ಸಮಯದಲ್ಲಿ ಈ ಘಟನೆ ನಡೆದಿದೆ. ಯಶಪ್ಪ ಸೂರ್ಯವಂಶಿ ಎನ್ನುವ ವ್ಯಕ್ತಿ ಓಡಿ ಹೋಗುವಾಗ ಸಾರ್ವಜನಿಕರ ಸಹಾಯದಿಂದ ಎಎಸ್ಐ ಸುನೀಲ ಕುಮಾರ ಆತನನ್ನು ಹಿಡಿದು ತನ್ನ ಕಾರಿನಲ್ಲಿ ಔರಾದ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.ಯಶಪ್ಪ ಸೂರ್ಯವಂಶಿ ಇಟಂಗಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದು, ಸೋಮವಾರ ಗ್ರಾಮಕ್ಕೆ ತೆರಳಲು ಔರಾಗೆ ಬಂದಿದ್ದ ಸಂದರ್ಭ ಕುಡಿದ ಮತ್ತಿನಲ್ಲಿ ಈ ಘಟನೆ ನಡೆದಿದೆ ಎನ್ನುವುದು ಗ್ರಾಮಸ್ಥರ ಮಾತು. ಕುಡಿದ…
ಬೆಂಗಳೂರು: ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯನ್ನು ಅಧಿಕೃತವಾಗಿ ಜಾರಿಗೊಳಿಸಿದೆ. ಈ ಯೋಜನೆಯಲ್ಲಿ ಪ್ರತಿ ಮನೆಯ ಯಜಮಾನಿಗೆ 2000 ರೂ. ಮಾಸಿಕ ಹಾಕಲಾಗುತ್ತದೆ. ಈಗಾಗಲೇ ಮನೆಯ ಯಜಮಾನಿ ಈ ಯೋಜನೆ ಲಾಭ ಪಡೆಯಲು ಸಿದ್ಧತೆ ನಡೆಸಿದ್ದಾರೆ. ಹಾಗಾದ್ರೆ ಈ ಯೋಜನೆ ಲಾಭ ಪಡೆಯಲು ಬೇಕಾಗುವ ದಾಖಲೆಗಳೇನು ಇಲ್ಲಿದೆ ಮಾಹಿತಿ. 1.ಆಧಾರ ಕಾರ್ಡ್ 2. ರೇಷನ್ ಕಾರ್ಡ್ 3.ಬ್ಯಾಂಕ್ ಪಾಸ್ ಬುಕ್ 4. ಪಾಸ್ ಪೋರ್ಟ್ ಸೈಜ್ 1ಫೋಟೊ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹೇಗೆ?… ಯಾರಿಗೆ ಸಿಗುತ್ತೆ ಹಣ? ಜೂನ್ 15ರಿಂದ ಜೂಲೈ 15ವರೆಗೆ ಅರ್ಜಿ ಸಲ್ಲಿಸಬೇಕು. ಅಗಸ್ಟ್ 15ರ ನಂತರ ಪ್ರತಿ ಗೃಹ ಯಜಮಾನತಿ ಅಕೌಂಟಿಗೆ 2000/- ಪ್ರತಿ ತಿಂಗಳು ಜಮೆ ಆಗಲಿದೆ. ವಿಧವಾ ವೇತನ ವೃದ್ಯಾಪ್ಯ ವೇತನ, ಅಂಗವಿಕಲರ ವೇತನ ಪಡೆದುಕೊಳ್ಳುತ್ತಿರುವ ಮಹಿಳೆಯರಿಗೂ 2000/- ಯೋಜನೆ ಬರಲಿದೆ.
ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡುವ ‘ಶಕ್ತಿ’ ಯೋಜನೆಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಸರ್ಕಾರ ಸೋಮವಾರ ಹೊರಡಿಸಿದೆ. ಅದರಂತೆ, ಮಹಿಳೆಯರು ಉಚಿತವಾಗಿ ಪ್ರಯಾಣಿಸಬೇಕಿದ್ದರೆ ‘ಶಕ್ತಿ ಸ್ಮಾರ್ಟ್‌ಕಾರ್ಡ್’ ಹೊಂದುವುದು ಕಡ್ಡಾಯವಾಗಿರಲಿದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಪಡೆದು, ಶಕ್ತಿ ಸ್ಮಾರ್ಟ್ ಕಾರ್ಡ್‌ಗಳನ್ನು ಪಡೆಯಬಹುದು. ಕಾರ್ಡ್‌ಗಳನ್ನು ವಿತರಿಸುವ ಪ್ರಕ್ರಿಯೆಯನ್ನು ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸತಕ್ಕದ್ದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಸ್ಮಾರ್ಟ್‌ಕಾರ್ಡ್ ದೊರೆಯುವವರೆಗೆ ಉಚಿತ ಪ್ರಯಾಣ ಹೇಗೆ?: ಶಕ್ತಿ ಸ್ಮಾರ್ಟ್‌ಕಾರ್ಡ್ ಅನ್ನು ವಿತರಿಸುವವರೆಗೆ ಭಾರತ ಸರ್ಕಾರ/ ಕರ್ನಾಟಕ ಸರ್ಕಾರದ ಇಲಾಖೆ / ಸರ್ಕಾರಿ ಸ್ವಾಮ್ಯದ ಕಛೇರಿಗಳಿಂದ ವಿತರಿಸಿರುವ ಭಾವಚಿತ್ರ ಹಾಗೂ ವಾಸದ ವಿಳಾಸವಿರುವ ಗುರುತಿನ ಚೀಟಿಗಳನ್ನು ಉಚಿತ ಟಿಕೆಟ್ ವಿತರಿಸುವ ಸ೦ದರ್ಭದಲ್ಲಿ ಪರಿಗಣಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಾಲ್ಕು ಸಂಸ್ಥೆಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದ್ದು, ಕೆಲವೊಂದು ಷರತ್ತುಗಳೊಂದಿಗೆ ಸೌಲಭ್ಯ ಒದಗಿಸಲು ಆದೇಶಿಸಲಾಗಿದೆ. ರಾಜ್ಯದ ನಾಲ್ಕು ನಿಗಮಗಳಾದ ಕರ್ನಾಟಕ…
ಬೆಂಗಳೂರು: ವಿದ್ಯುತ್ ಬಿಲ್ ಇನ್ನು ಭಾರ ಆಗಲಿದೆ. ಪ್ರತಿ ಯೂನಿಟ್ ವಿದ್ಯುತ್ ದರದಲ್ಲಿ 70 ಪೈಸೆಯಷ್ಟು ಹೆಚ್ಚಳ ಮಾಡುವ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (ಕೆಇಆರ್‌ಸಿ) ಆದೇಶ ಈ ತಿಂಗಳಿನಿಂದಲೇ ಜಾರಿಯಾಗಿದೆ. ಏಪ್ರಿಲ್ ತಿಂಗಳ ಹಿಂಬಾಕಿ ಹಾಗೂ ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚ ಹೊಂದಾಣಿಕೆಯ ಹಿಂಬಾಕಿಯೂ ಸೇರಿ ಈ ತಿಂಗಳ ವಿದ್ಯುತ್ ಬಿಲ್‌ನಲ್ಲಿ ಗ್ರಾಹಕರಿಗೆ ಭಾರಿ ಹೊರೆ ಬೀಳಲಿದೆ. ವಿದ್ಯುತ್ ಸರಬರಾಜು ಕಂಪನಿಗಳ (ಎಸ್ಕಾಂ) ವರಮಾನದ ಕೊರತೆ ಸರಿದೂಗಿಸಲು ಪ್ರತಿ ಯೂನಿಟ್ ವಿದ್ಯುತ್ ದರವನ್ನು 70 ಪೈಸೆಯಷ್ಟು ಹೆಚ್ಚಳ ಮಾಡಲು ಒಪ್ಪಿಗೆ ನೀಡಿ ಕೆಇಆರ್‌ಸಿ ಮೇ 12ರಂದು ಆದೇಶ ಹೊರಡಿಸಿತ್ತು. ಆಯೋಗದ ನಿರ್ದೇಶನದಂತೆ ದರ ಹೆಚ್ಚಳವನ್ನು ಜೂನ್‌ನಿಂದ ಅನುಷ್ಠಾನಕ್ಕೆ ತರಲಾಗಿದೆ. ಬೆಸ್ಕಾಂ ಮಾತ್ರ ಈ ತಿಂಗಳುಭಾಗಶಃ ದರ ಹೆಚ್ಚಳ ಮಾಡಿದ್ದರೆ, ಉಳಿದ ಎಲ್ಲ ಎಸ್ಕಾಂಗಳು ಪ್ರತಿ ಯೂನಿಟ್‌ಗೆ 70 ಪೈಸೆ ಹೆಚ್ಚಳ ಮಾಡಿವೆ. ವಿದ್ಯುತ್ ದರ ಹೆಚ್ಚಳ ಏಪ್ರಿಲ್ 1ರಿಂದಲೇ ಪೂರ್ವಾನ್ವಯವಾಗಲಿದೆ. ಗ್ರಾಹಕರು ಏಪ್ರಿಲ್ ತಿಂಗಳಿನಲ್ಲಿ ಬಳಸಿರುವ ವಿದ್ಯುತ್‌ಗೆ ಪ್ರತಿ…