Author: Nammur Express admin

ಕಾರ್ಕಳ‌ : ತಾಲೂಕಿನ ಕೆಲವು ಅಂಗನವಾಡಿ ಕೇಂದ್ರಗಳಲ್ಲಿ ತಾಯಿ ಕಾರ್ಡ್ ಮೂಲಕ ಗರ್ಭಿಣಿ ಮತ್ತು ಬಾಣಂತಿ ಸ್ತ್ರೀಯರಿಗೆ ವಿತರಣೆಯಾಗುವ ಆಹಾರ ಪದಾರ್ಥಗಳ ಗುಣಮಟ್ಟ ಕಳಪೆಯಾಗಿದ್ದು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಪುರಸಭಾ ಸದಸ್ಯ ಶುಭದರಾವ್ ಆಗ್ರಹಿಸಿದ್ದಾರೆ. ಗರ್ಭಿಣಿ ಮತ್ತು ಬಾಣಂತಿ ಸ್ತ್ರೀಯರ ಆರೋಗ್ಯದ ದೃಷ್ಟಿಯಿಂದ ಸರಕಾರವು ಅಕ್ಕಿ , ಬೇಳೆ, ಸಾಂಬಾರು ಹುಡಿ, ಮತ್ತು ‌ಮೊಟ್ಟೆ ಮೊದಲಾದ ಪೋಷಕಾಂಶ ಆಹಾರ ಪದಾರ್ಥಗಳನ್ನು ವಿತರಿಸುತ್ತಿದ್ದು ಈ ಬಾರಿ ವಿತರಣೆಯಾದ ಸಾಬಾಂರು ಹುಡಿಯ ಗುಣಮಟ್ಟ ತೀರ ಕಳಪೆಯಾಗಿದ್ದು ಉಂಡೆಗಳಾಗಿ ಪರಿವರ್ತನೆಯಾಗಿ ಬಳಕೆಗೆ ಅಯೋಗ್ಯವಾಗಿದೆ. ಇಂತಹ ಪದಾರ್ಥಗಳನ್ನು ಸೇವಿಸುವುದರಿಂದ ಸ್ತ್ರೀಯರ ಅರೋಗ್ಯ ಮೇಲೆ ಕೆಟ್ಟ ಪರಿಣಾಮ ಬೀರಿ ಅನಾಹುತವಾಗುವ ಸಾದ್ಯತೆ ಇದೆ ಆಹಾರ ಪದಾರ್ಥಗಳ ವಿತರಣೆಯ ಜವಾಬ್ದಾರಿ ಹೊತ್ತ ಸಂಸ್ಥೆಯ ವಿರುದ್ಧ ಕಠಿಣ ಕ್ರಮವಾಗಬೇಕು ಮತ್ತು ಅವರ ಟೆಂಡರನ್ನು ರದ್ದು ಮಾಡಬೇಕು ಎಂದು ಆಗ್ರಹಿಸುತ್ತೇನೆ. ಈ ಹಿಂದೆಯೂ ಕೊಳೆತ ಮೊಟ್ಟೆ ವಿತರಣೆಯಾಗಿದ್ದು ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಲಿಲ್ಲ, ಈ ಬಗ್ಗೆ ಸೂಕ್ತ ಕ್ರಮ…

Read More

ಕಾರ್ಕಳದ ಕ್ರಿಯೇಟಿವ್ ಕಾಲೇಜು ದ್ವಿತೀಯ ವರ್ಷವೂ ಅತ್ಯುತ್ತಮ ಸಾಧನೆ ಇಂಜಿನಿಯರಿಂಗ್, ಕೃಷಿ ವಿಜ್ಞಾನದಲ್ಲಿ ರಾಜ್ಯಕ್ಕೆ ಹಲವು ರ‍್ಯಾಂಕ್‌ ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ ಅಭಿನಂದನೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೇ 2023 ರಲ್ಲಿ ನಡೆಸಿದ ವಿವಿಧ ವೃತ್ತಿಪರ ಕೋರ್ಸ್‌ಗಳ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಗಳಿಸಿ ರಾಜ್ಯದ ವಿವಿಧ ಪ್ರತಿಷ್ಠಿತ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಅರ್ಹರಾಗಿದ್ದಾರೆ. ಜಾಗೃತಿ ಕೆ.ಪಿ ಕೃಷಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 17ನೇ ರ‍್ಯಾಂಕ್‌, ಪಶು ವೈದ್ಯಕೀಯದಲ್ಲಿ 107ನೇ ರ‍್ಯಾಂಕ್‌, ಬಿ. ಎನ್‌ ವೈ ಎಸ್‌ ನಲ್ಲಿ 53 ನೇ ರ‍್ಯಾಂಕ್‌ ಹಾಗೂ ಇಂಜಿನಿಯರಿಂಗ್‌ ವಿಭಾಗದಲ್ಲಿ 112 ನೇ ರ‍್ಯಾಂಕ್‌ ಪಡೆದಿದ್ದಾರೆ. ಇಂಜಿನಿಯರಿಂಗ್‌ ವಿಭಾಗದಲ್ಲಿ ರಾಜ್ಯಕ್ಕೆ ಅಭಯ್‌ ಎಸ್‌ ಎಸ್‌ 99ನೇ ರ‍್ಯಾಂಕ್‌, ಆದಿತ್ಯ ಹೊಳ್ಳ 201 ನೇ ರ‍್ಯಾಂಕ್‌, ಪ್ರಣವ್‌ ಪಿ ಸಂಜಿ 294 ನೇ ರ‍್ಯಾಂಕ್‌, ಕಾರ್ತಿಕ್‌ ಕೃಷ್ಣಮೂರ್ತಿ ಹೆಗಡೆ 492 ನೇ ರ‍್ಯಾಂಕ್‌, ಉದ್ಭವ್‌…

Read More

ಆರಂಭವಾದ ಮೊದಲ ವರ್ಷದಿಂದಲೂ ಕ್ರಿಯೇಟಿವ್ ನ ಅಮೋಘ ಸಾಧನೆ ಅತೀ ಹೆಚ್ಚು ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣಕ್ಕೆ ಆಯ್ಕೆ ಕಾರ್ಕಳ : ರಾಷ್ಟ್ರೀಯ ಪರೀಕ್ಷಾ ಮಂಡಳಿ ನಡೆಸಿದ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಂಸ್ಥೆ ಪ್ರಾರಂಭವಾದ ದ್ವಿತೀಯ ವರ್ಷದಲ್ಲೇ ಅತ್ಯುತ್ತಮ ಫಲಿತಾಂಶ ಗಳಿಸಿದ್ದಾರೆ. ಆಲ್‌ ಇಂಡಿಯಾ ರ‍್ಯಾಂಕಿಂಗ್‌ನಲ್ಲಿ ಕುಮಾರಿ ಜಾಗೃತಿ ಕೆ ಪಿ 661 ಅಂಕಗಳೊಂದಿಗೆ ಕೆಟೆಗರಿಯಲ್ಲಿ 23 ನೇ ರ‍್ಯಾಂಕ್‌, ಉದ್ಭವ್‌ ಎಂ ಆರ್‌ 625 ಅಂಕಗಳೊಂದಿಗೆ ಕೆಟೆಗರಿಯಲ್ಲಿ 72 ನೇ ರ‍್ಯಾಂಕ್‌ ಗಳಿಸಿದ್ದಾರೆ. ಹಾಗೆಯೇ ಸಂಸ್ಥೆಯ ವಿದ್ಯಾರ್ಥಿಗಳಾದ ತನುಶ್ರೀ ಕೆ ಎನ್‌ 625, ಶ್ರೇಯಸ್‌ ಎಸ್‌ ಚಿಕಾಲೇ 612, ಸಾತ್ವಿಕ್‌ ಎಸ್‌ ಶೆಟ್ಟಿ 609, ಚಂದನ ಹೆಚ್‌ ಎಂ 605, ಸಾಕ್ಷಿತ್‌ ಶೆಟ್ಟಿ 604, ಸ್ವೀಕೃತಿ ಶೆಟ್ಟಿ 596, ಗೌರಿ ಸಿ ಸಂಕೊಲ್‌ 595, ಮನೋಜ ಪಾಲನ್ಕರ್‌ 592,ಪ್ರೀತಮ್ ಎಸ್ ಜಿ 584, ಪ್ರಶಿನ್‌ ಶೆಟ್ಟಿ 578,ಚಮನ್ ಜಿ 576, ಜ್ಞಾನದೀಪ್‌ ಕೆ…

Read More

ಮಹಿಳೆಯರ ಉಚಿತ ಬಸ್‌ ಪ್ರಯಾಣಕ್ಕೆ ಡಿಮ್ಯಾಂಡ್! ರಾಜ್ಯದಾದ್ಯಂತ ಶಕ್ತಿ ಯೋಜನೆ ಶುರು: ಬಸ್ಸುಗಳು ರಶ್ ಪ್ರತಿ ತಾಲೂಕು, ಜಿಲ್ಲೆಯಲ್ಲಿ ಅಧಿಕೃತ ಚಾಲನೆ  ಆಫೀಸ್‌ಗೂ ಫ್ರೀ, ಮಾರ್ಕೆಟ್‌ಗೂ ಫ್ರೀ, ಫ್ಯಾಕ್ಟರಿಗೂ ಫ್ರೀ..! ಮುಖ್ಯಮಂತ್ರಿ ಸಿದ್ದರಾಮಯ್ಯ “ಶಕ್ತಿ” ಯೋಜನೆಗೆ ಚಾಲನೆ ನೀಡುವ ಮೂಲಕ ಮಹಿಳಾ ಸಬಲೀಕರಣದತ್ತ ಹೊಸ ಹೆಜ್ಜೆಗೆ ಮುನ್ನುಡಿ ಬರೆದಿದ್ದಾರೆ.‌ ಜೂನ್ 11ರಂದು ರಾಜ್ಯದಾದ್ಯಂತ ಶಕ್ತಿಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಚಾಲನೆ ನೀಡಿದ್ದಾರೆ. ಸ್ಮಾರ್ಟ್ ಕಾರ್ಡ್‌ಗಳನ್ನು ಐದು ಮಹಿಳೆಯರಿಗೆ ಸಾಂಕೇತಿಕವಾಗಿ ವಿತರಣೆ ಮಾಡಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳ ಪೈಕಿ ಮೊದಲ ಹಂತದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿದ್ದಾರೆ. ಏಕಕಾಲದಲ್ಲಿ ರಾಜ್ಯದಾದ್ಯಂತ ಯೋಜನೆಗೆ ಆಯಾ ಜಿಲ್ಲಾ ಉಸ್ತುವಾರಿ ಸಚಿವರು, ತಾಲೂಕು ಕೇಂದ್ರಗಳಲ್ಲಿ ಶಾಸಕರು ಚಾಲನೆ ನೀಡಿದ್ದಾರೆ. 41.8 ಲಕ್ಷ ಮಹಿಳೆಯರಿಗೆ ಅನುಕೂಲ! ಉಚಿತ ಪ್ರಯಾಣ ಯೋಜನೆಯು ಪ್ರತಿದಿನ 41.8 ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಅನುಕೂಲವಾಗಲಿದೆ. ಬಡ ಮತ್ತು ಕೆಳ ಮಧ್ಯಮ ವರ್ಗದ ದುಡಿಯುವ ಮಹಿಳೆಯರ ದಿನದ ಖರ್ಚಿನ ಹೊರೆಯನ್ನು ಇಳಿಸಿ,…

Read More

ಸರ್ಕಾರ ಅಂತರ್ ರಾಜ್ಯಗಳಿಗೆ ತೆರಳುವ ಬಸ್​​ಗಳಿಗೆ ಉಚಿತ ಪ್ರಯಾಣ ನಿರ್ಬಂಧಿಸಿದ್ದು ಇದೀಗ ಯೋಜನೆ ಲಾಭದಿಂದ ಗಡಿ ಜಿಲ್ಲೆಯ ಮಹಿಳೆಯರು ವಂಚಿತರಾಗುವಂತಾಗಿದೆ. ಶಕ್ತಿ ಯೋಜನೆ ಷರತ್ತು ತಿದ್ದುಪಡಿಗೆ ಆಗ್ರಹ .. ಕಾರವಾರ: ಕಾಂಗ್ರೆಸ್ ನೇತೃತ್ವದ ಸರ್ಕಾರ ಚುನಾವಣೆ ಪೂರ್ವ ಘೋಷಣೆಯಂತೆ ‘ಶಕ್ತಿ ಯೋಜನೆ’ಗೆ ನಿನ್ನೆ (ಭಾನುವಾರ) ಚಾಲನೆ ನೀಡಿದೆ. ರಾಜ್ಯಾದ್ಯಂತ ಮಹಿಳೆಯರಿಗೆ ಸರ್ಕಾರಿ ಬಸ್​​ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ, ಯೋಜನೆಗೆ ಅಳವಡಿಸಿದ ಷರತ್ತು ಇದೀಗ ಗಡಿ ಜಿಲ್ಲೆ ಮಹಿಳೆಯರು ಉಚಿತ ಪ್ರಯಾಣದಿಂದ ವಂಚಿತರಾಗುವಂತಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೆ ಐದು ಗ್ಯಾರಂಟಿಗಳ ಪೈಕಿ ಮೊದಲು ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಚಾಲನೆ ನೀಡಲಾಗಿದೆ. ಈ ಮೂಲಕ ಮಹಿಳೆಯರು ಸರ್ಕಾರಿ ಬಸ್​​ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ. ಆದರೆ, ಸರ್ಕಾರ ಅಂತರ್ ರಾಜ್ಯಗಳಿಗೆ ತೆರಳುವ ಬಸ್​​ಗಳಿಗೆ ಉಚಿತ ಪ್ರಯಾಣ ನಿರ್ಬಂಧಿಸಿದ್ದು, ಇದೀಗ ಯೋಜನೆ ಲಾಭದಿಂದ ಗಡಿ ಜಿಲ್ಲೆಯ ಮಹಿಳೆಯರು ವಂಚಿತರಾಗುವಂತಾಗಿದೆ. ಶಕ್ತಿ ಯೋಜನೆ ಪ್ರಕಾರ ರಾಜ್ಯದ ಸೆಮಿ ಡಿಲಕ್ಸ್ ಮತ್ತು ಡಿಲಕ್ಸ್ ಬಸ್​​ಗಳನ್ನು…

Read More

ಬೆಂಗಳೂರು: ಇಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಳೆದ ತಿಂಗಳು ನಡೆಸಿದ್ದ ಸಿಇಟಿ ಫಲಿತಾಂಶವು ಜೂ.15ರಂದು ಪ್ರಕಟವಾಗಲಿದೆ. ಸಿಇಟಿ ಪರೀಕ್ಷಾ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಪೂರ್ಣಗೊಂಡಿದ್ದು, ಪ್ರಸ್ತುತ ಸಿಇಟಿ ಫಲಿತಾಂಶ ಮತ್ತು ದ್ವಿತೀಯ ಪಿಯುಸಿ ಫಲಿತಾಂಶ ಎರಡನ್ನೂ ಆಧರಿಸಿ ರ‌್ಯಾಂಕ್ ಪಟ್ಟಿ ಸಿದ್ಧಪಡಿಸುವ ಕಾರ್ಯ ನಡೆಯುತ್ತಿದೆ. ಪ್ರಾಧಿಕಾರವು ಪಲಿತಾಂಶವನ್ನು ಜೂ.12 ಅಥವಾ 14ರಂದು ಫಲಿತಾಂಶ ಪ್ರಕಟಿಸಲು ನಿರ್ಧರಿಸಿತ್ತು. ಆದರೆ, ಉನ್ನತ ಶಿಕ್ಷಣ ಸಚಿವರ ಲಭ್ಯತೆ ಮತ್ತು ಕೆಲವು ತಾಂತ್ರಿಕ ಕಾರಣಗಳಿಂದ ಜೂ.15ರಂದು ಪ್ರಕಟಿಸಲು ನಿರ್ಧರಿಸಿದೆ. ಕಳೆದ ಮೇ 20 ರಿಂದ 22ರ ವರೆಗೆ ನಡೆದಿದ್ದ ಸಿಇಟಿ-2023ಕ್ಕೆ 2.39 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು.

Read More

ಗೃಹಲಕ್ಷ್ಮಿ ಯೋಜನೆಯಡಿ, ಪ್ರತಿ ಮನೆಯ ಯಜಮಾನಿಗೆ ಮಾಸಿಕವಾಗಿ 2 ಸಾವಿರ ರೂ.ಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ. ಆದರೆ, ಮನೆಯ ಯಜಮಾನಿ ಯಾರು ಎಂಬುದನ್ನು ಸರ್ಕಾರ ನಿಗದಿಪಡಿಸಿಲ್ಲ. ಹಾಗಾಗಿ, ಮನೆಯವರೇ ಯಜಮಾನಿ ಯಾರೆಂದು ನಿರ್ಧರಿಸಿ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜೂ. 8ರಂದು ಗೃಹ ಲಕ್ಷ್ಮಿ ಯೋಜನೆಯ ಅರ್ಜಿ ನಮೂನೆಯನ್ನು ಬಿಡುಗಡೆ ಮಾಡಲಾಗಿದೆ. ಈ ಅರ್ಜಿಯನ್ನು ನಮೂದಿದಿಸಿ ಸೇವಾ ಸಿಂಧು ಪೋರ್ಟಲ್ ನಲ್ಲಿ ಅಪ್ಲೋಡ್ ಮಾಡಬಹುದು. ಇಲ್ಲವೇ ಬೆಂಗಳೂರು ಒನ್ ಅಥವಾ ಬೆಂಗಳೂರು ಒನ್ ನಂಥ ಕಚೇರಿಗಳಲ್ಲಿ, ನಾಡ ಕಚೇರಿಗಳಲ್ಲಿ ಸಲ್ಲಿಸಬಹುದು. ಮಹಿಳೆಯರ ಭಾರೀ ನಿರೀಕ್ಷೆಯ ಗೃಹ ಲಕ್ಷ್ಮಿ ಯೋಜನೆಯ ಮಾರ್ಗಸೂಚಿಗಳು ಬಿಡುಗಡೆಯಾದ ಬೆನ್ನಲ್ಲೇ ಆ ಯೋಜನೆಗೆ ಸಲ್ಲಿಸಬೇಕಾಗಿರುವ ಅರ್ಜಿಯ ನಮೂನೆಯನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯ ಕುಟುಂಬ ಕಲ್ಯಾಣ ಇಲಾಖೆಯು ಈ ಅರ್ಜಿ ನಮೂನೆಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಮನೆಯ ಯಜಮಾನಿ ಯಾರೆಂದು ಘೋಷಿಸುವ, ಆಧಾರ್ ಕಾರ್ಡ್, ಆಧಾರ್ ಕಾರ್ಡ್ ಜೊತೆಗೆ ಲಿಂಕ್ ಇರುವ ಫೋನ್ ನಂಬರ್, ರೇಷನ್ ಕಾರ್ಡ್,…

Read More

30 ಸಾವಿರ ವಿದ್ಯಾರ್ಥಿಗಳ ಆರ್.ಡಿ. ಸಂಖ್ಯೆ ಹೊಂದಾಣಿಕೆ ಇಲ್ಲ ನೋಂದಣಿ ಮಾಡಿಕೊಂಡಿರುವ ವಿದ್ಯಾರ್ಥಿಗಳು ಜೂ.12ರೊಳಗೆ ಸರಿಪಡಿಸಿಕೊಳ್ಳುವಂತೆ ಕೆಇಎ ಸೂಚನೆ ಆರ್ ಡಿ ಸಂಖ್ಯೆ ಸರಿಪಡಿಸದಿದ್ದರೆ ಮೀಸಲಾಗಿ ಸಿಗಲ್ಲ, ಸಾಮಾನ್ಯ ಕೋಟಾದಲ್ಲಿ ಸೀಟು ಹಂಚಿಕೆ ಬೆಂಗಳೂರು: ಕೆ-ಸಿಇಟಿಗೆ ನೋಂದಣಿ ಮಾಡಿಕೊಂಡಿರುವ 2.6 ಲಕ್ಷ ಅಭ್ಯರ್ಥಿಗಳ ಪೈಕಿ 30 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳ ಅರ್ಜಿಗಳಲ್ಲಿನ ದೋಷಗಳು ಹಾಗೆಯೇ ಉಳಿದುಕೊಂಡಿವೆ. ಸಂಬಂಧಪಟ್ಟ ವಿದ್ಯಾರ್ಥಿಗಳು ಕೂಡಲೇ ಸರಿಪಡಿಸಿಕೊಳ್ಳದಿದ್ದರೆ ಮೀಸಲಾತಿ ಬದಲಿಗೆ ಸಾಮಾನ್ಯ ಕೋಟಾದಡಿ ಸೀಟು ಪಡೆದುಕೊಳ್ಳಬೇಕಾಗುತ್ತದೆ ಎಂದು ಕೆಇಎ ಎಚ್ಚರಿಕೆ ನೀಡಿದೆ. ಸುಮಾರು 80 ಸಾವಿರಕ್ಕೂ ಹೆಚ್ಚು ಮಂದಿ ಆರ್.ಡಿ ಸಂಖ್ಯೆಯನ್ನು ತಪ್ಪಾಗಿ ನಮೂದಿಸಿದ್ದರು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜೂ.7ರಿಂದ 12ರ ವರೆಗೆ ಕೊನೆಯ ಅವಕಾಶ ನೀಡಿದೆ. ಆದರೂ ಇನ್ನೂ 30 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳ ಅರ್ಜಿಗಳಲ್ಲಿನ ದೋಷಗಳು ಹಾಗೆಯೇ ಉಳಿದುಕೊಂಡಿವೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ. ವೃತ್ತಿಪರ ಕೋರ್ಸುಗಳಿಗೆ ಪ್ರವೇಶಾತಿ ಬಯಸಿ ಸಿಇಟಿ ಬರೆದಿರುವ ಅಭ್ಯರ್ಥಿಗಳ ಜಾತಿ/ಆದಾಯ/ಕಲ್ಯಾಣ ಕರ್ನಾಟಕ ಪ್ರಮಾಣ ಪತ್ರಗಳ ಆರ್.…

Read More

ಸ್ನೇಹಿತರ ಹೆಸರಲ್ಲಿ ದುಡ್ಡು ಕೇಳಿ ವಂಚನೆ ಸೈಬರ್ ಕ್ರೈಂ ವಿಫಲ: ಅಮಾಯಕರು ಅಸಹಾಯಕ ಗಣ್ಯರ ಫೇಸ್ಬುಕ್ ಹ್ಯಾಕ್.. ಖಚಿತವಾಗದೆ ಹಣ ಹಾಕಬೇಡಿ! NAMMUR EXPRESS ಫೇಸ್ಬುಕ್ ಅಕೌಂಟ್ ಇದ್ಯಾ.. ಹಾಗಿದ್ರೆ ಹುಷಾರಿಗಿರಿ.. !. ನಿಮ್ಮ ಸ್ನೇಹಿತರ ಹೆಸ್ರಲ್ಲಿ ಅವರ ಅಕೌಂಟ್ ಹ್ಯಾಕ್ ಮಾಡಿ ನಿಮ್ಮ ಚಾಟಿಂಗ್ ಅಲ್ಲಿ ನಿಮ್ಮ ಪರಿಚಯದವರು ಹಣ ಕೇಳಿದ ಹಾಗೆ ಚಾಟ್ ಮಾಡುತ್ತಾರೆ. ಫೋನ್ ಪೆ ಅಥವಾ ಗೂಗಲ್ ಪೆ ಮೂಲಕ ತಕ್ಷಣ ಹಣ ಹಾಕುವಂತೆ ಒತ್ತಾಯ ಮಾಡಿ ಮೆಸೇಜ್ ಮಾಡುತ್ತಾರೆ. ಯಾಮಾರಿ ದುಡ್ಡು ಹಾಕಿದರೆ ಮಾತ್ರ ಗೋವಿಂದ.. ! ಸ್ನೇಹಿತ, ತಮ್ಮ, ಅಮ್ಮ ಅಥವಾ ಯಾರೋ ಹೆಸರೇಳಿ ಅವರು ಆಸ್ಪತ್ರೆಯಲ್ಲಿದ್ದಾರೆ. ತುಂಬಾ ಎಮರ್ಜೆನ್ಸಿ ಆಗಿದೆ. 5000-25000 ರೂ. ಹಣ ತಕ್ಷಣ ಟ್ರಾನ್ಸ್ಫರ್ ಮಾಡಲು ಮೆಸೇಜ್ ಅಲ್ಲೇ ಚಾಟ್ ಮಾಡಲಾಗುತ್ತದೆ. ಅದರಲ್ಲಿ ನಿಮ್ಮ ಪರಿಚಯದವರ ಅಕೌಂಟ್ ಹ್ಯಾಕ್ ಮಾಡಿ ನಿಮ್ಮನ್ನು ಮೋಸ ಮಾಡಲಾಗುತ್ತದೆ. ಯಾರೇ ಫೇಸ್ಬುಕ್ ಅಲ್ಲಿ ಹಣ ಕೇಳಿದರೆ ಹಾಕಬೇಡಿ. ಇನ್ನು ಅಚ್ಚರಿ ಎಂದರೆ ಫೋನ್…

Read More

ಕಾಂಗ್ರೆಸ್:   ನೂತನ ಕಾಂಗ್ರೆಸ್ ಸರ್ಕಾರ ಐದು ಉಚಿತ ಗ್ಯಾರಂಟಿ ಗೊಂದಲ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ನಂಗೂ ಫ್ರಿ, ನಿಂಗೂ ಫ್ರೀ, ಕುಂತಿರುವ ಮಹದೇವಪ್ಪನಿಗೂ ಫ್ರೀ, ಬಾಗಿಲಿಗೆ ಒರಗಿ ನಿಂತಿರುವ ಕಾಕಾ ಪಾಟೀಲ್ ಗೂ ಫುಲ್ ಫ್ರೀ ಎಂದು ಘೋಷಿಸಿ ಅಧಿಕಾರಕ್ಕೇರಿದ ಕಾಂಗ್ರೆಸ್ (Congress )ಇದೀಗ ಒಂದೊಂದೇ ಕಡ್ಡಿ ಇಡುತ್ತಿರುವುದು, ಅದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಇರುವ ಗೊಂದಲವನ್ನು ಒಂದಷ್ಟು ಕಡಿಮೆ ಮಾಡಲು ಇದೀಗ ಕಾಂಗ್ರೆಸ್ ಗೃಹಲಕ್ಷ್ಮಿ ಯೋಜನೆಯ ಷರತ್ತಿನಲ್ಲಿ ಮತ್ತೆ ಬದಲಾವಣೆ ಮಾಡಲಾಗಿದೆ. ನಿನ್ನೆಯ ದಿನ ಮಕ್ಕಳು ತೆರಿಗೆ ಕಟ್ಟಿದರೆ, ತಾಯಿ ಅಥವಾ ಆ ಕುಟುಂಬ ಗೃಹ ಲಕ್ಷ್ಮಿ ಯೋಜನೆ ಫಲಾನುಭವಿಗಳಾಗಲು ಸಾಧ್ಯವಿಲ್ಲ ಎಂದಿತ್ತು ಸರ್ಕಾರ. ಇಂದು ಮತ್ತೆ ವರಸೆ ಬದಲಿಸಲಾಗಿದೆ. ಹಾಗಾಗಿ ಷರತ್ತು ಮರು ಬದಲಿಸಲಾಗಿದೆ. ಹಾಗಾಗಿ ಒಂದು ವೇಳೆ ಮಕ್ಕಳು ತೆರಿಗೆ ಕಟ್ಟುತ್ತಿದ್ದರೂ, ತಾಯಿಗೆ 2,000 ರೂಪಾಯಿ ಸಿಗುತ್ತದೆ. ತಾಯಿ 2,000 ರೂಪಾಯಿ ಪಡೆಯಲು ಅರ್ಹರಾಗಿದ್ದಾರೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಒಂದು…

Read More