ಹೈಲೈಟ್ಸ್ ಆರ್.ಡಿ ಸಂಖ್ಯೆ ತಿದ್ದುಪಡಿಗೆ ಮತ್ತೊಂದು ಅವಕಾಶ. ಜೂನ್ 7ರ ಸಂಜೆ 4 ಗಂಟೆಯಿಂದ ಜೂನ್ 12ರ ಬೆಳಿಗ್ಗೆ 11 ಗಂಟೆಯವರೆಗೆ ಅವಕಾಶ × Dismiss this alert. ಬೆಂಗಳೂರು: ಸಿಇಟಿ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು ಆನ್‌ಲೈನ್ ಅರ್ಜಿಯಲ್ಲಿ ನಮೂದಿಸಿರುವ ಜಾತಿ/ ಆದಾಯ/ಕಲ್ಯಾಣ ಕರ್ನಾಟಕ ಪ್ರಮಾಣ ಪತ್ರಗಳ ಆಡಿ ಸಂಖ್ಯೆಯನ್ನು ಕಂದಾಯ ಇಲಾಖೆಯ ಆರ್ .ಡಿ ಸಂಖ್ಯೆ ಜತೆ ನಮೂದಿಸುವ ಪ್ರಕ್ರಿಯೆ ಈಗ ನಡೆಯುತ್ತಿದೆ. ಆದರೆ, ಸಾವಿರಾರು ಅಭ್ಯರ್ಥಿಗಳ ಈ ಸಂಖ್ಯೆಗಳು ನಾನಾ ಕಾರಣಗಳಿಗಾಗಿ ತಾಳೆಯಾಗದೆ ಇರುವ ಹಿನ್ನೆಲೆಯಲ್ಲಿ ಸೂಕ್ತ ತಿದ್ದುಪಡಿಗೆ ಜೂನ್ 7ರ ಸಂಜೆ 4 ಗಂಟೆಯಿಂದ ಜೂನ್ 12ರ ಬೆಳಿಗ್ಗೆ 11 ಗಂಟೆಯವರೆಗೆ ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ‘ಆರ್‌ಡಿ ಸಂಖ್ಯೆಗಳು ತಿರಸ್ಕೃತ ತಗೊಂಡಿರುವ ಅಭ್ಯರ್ಥಿಗಳ ಹೆಸರುಗಳನ್ನು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಪ್ರಕಟಿಸಲಾಗಿದೆ. ಪರಿಶೀಲನಾ ಪ್ರಕ್ರಿಯೆಯಲ್ಲಿ ಅಭ್ಯರ್ಥಿಗಳ ಹೆಸರು ಅಥವಾ ನಮೂದಿಸಿರುವ ಜಾತಿಯಲ್ಲಿ…
Author: Nammur Express admin
ಕಾರ್ಕಳ: ಸಣ್ಣ ವಿದ್ಯಾರ್ಥಿ ಗಳಿಗೆ ಶಿಕ್ಷಣ ನೀಡಿ ಜೀವನ ರೂಪಿಸುವಲ್ಲಿ ಪೋಷಕರ ಮತ್ತು ಶಿಕ್ಷಕರ ಮಹತ್ವದ ಪಾತ್ರವಿದೆ. ಮಕ್ಕಳನ್ನು ಸಮಾಜದ ಆಸ್ತಿಯನ್ನಾಗಿ ಮಾಡಬೇಕು. ಎಂದು ಪದ್ಮ ಗೋಪಾಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ ಹೇಳಿದರು ಅವರು ಸೋಮವಾರ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯಲ್ಲಿ, ೨೦೨೩-೨೪ ನೇ ಶೈಕ್ಷಣಿಕ ಸಾಲಿನ ಪೋಷಕ ಶಿಕ್ಷಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ನಾವೆಲ್ಲರೂ ಸಾಮರಸ್ಯದಿಂದ ಬದುಕಬೇಕು. ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವಲ್ಲಿ ಪೋಷಕರ ಜವಾಬ್ದಾರಿ ಪ್ರಮುಖವಾದುದು ಎಂದು ತಿಳಿಸಿದರು. ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಿಇಓ ಮತ್ತು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ದಿನೇಶ್ ಎಂ. ಕೊಡವೂರು ಮಾತನಾಡಿ ಪೋಷಕರು ಮಕ್ಕಳ ಪ್ರಗತಿಯನ್ನು ಗಮನಿಸುತ್ತಿರಬೇಕು ವಿದ್ಯಾರ್ಥಿಗಳು ಮೊಬೈಲ್ ಬಳಕೆ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದರಿಂದ ಆಗುವ ದುಷ್ಪರಿಣಾಮಗಳನ್ನು ತಡೆಗಟ್ಟುವುದಕ್ಕೋಸ್ಕರ ಪೋಷಕರು ತಮ್ಮ ಮಕ್ಕಳನ್ನು ಮೊಬೈಲ್ ಬಳಕೆಯಿಂದ ದೂರವಿರಿಸಲು ಸಲಹೆ ನೀಡಿದರು. ವೇದಿಕೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ…
ಉಡುಪಿ:ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ಉಂಟಾಗುವ ಸಂಭವವಿದ್ದು, ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 4 ದಿನಗಳಲ್ಲಿ ಸಮುದ್ರದ ಅಲೆಗಳಲ್ಲಿ ಏರಿಳಿತ ಉಂಟಾಗುವ ಮತ್ತು ಮಳೆಯಾಗುವ ಸಾಧ್ಯತೆಯಿರುತ್ತದೆ. ಈ ಹಿನ್ನೆಲೆಯಲ್ಲಿ ಈ ಹಿನ್ನಲೆಯಲ್ಲಿ ಜಿಲ್ಲಾಡಳಿತ (ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ)ದಿಂದ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳುವಂತೆ ಸಾರ್ವಜನಿಕರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ ಮೀನುಗಾರರು ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಸಾರ್ವಜನಿಕರು/ ಪ್ರವಾಸಿಗರು ಸಮುದ್ರ ನದಿ ತೀರ ಪ್ರದೇಶಗಳಲ್ಲಿ ಇಳಿಯದಂತೆ ಕಟ್ಟೆಚ್ಚರ ವಹಿಸುವಂತೆ ಕೋರಲಾಗಿದೆ ಈ ಸಂದರ್ಭದಲ್ಲಿ ಮಕ್ಕಳು/ಸಾರ್ವಜನಿಕರು ಸಮುದ್ರ ತೀರ, ಅಪಾಯಕಾರಿ ವಿದ್ಯುತ್ಕಂಬ /ಕಟ್ಟಡ /ಮರಗಳ ಹತ್ತಿರ/ಕಳಗೆ ನಿಲ್ಲಬಾರದು ಮತ್ತು ನೆರೆ ಪೀಡಿತ ತಗ್ಗು ಪ್ರದೇಶದಲ್ಲಿ ವಾಸಿಸುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳನ್ನು ತಲುವುವುದು. * ಜಿಲ್ಲಾ/ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತನ್ನು ನಿಭಾಯಿಸಲು ತಯಾರಿ ಮಾಡಿಕೊಳ್ಳುವುದು. ಎಂದು ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ
ಉಡುಪಿ,: ಜೂನ್ 8 ರಂದು ಬೆಳಗ್ಗೆ 9 ರಿಂದ ಸಂಜೆ 5:30 ಗಂಟೆಯವರೆಗೆ 110/33/11 ಕೆ.ವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿoದ ಹೊರಡುವ 11 ಕೆಎಂ ಎಫ್ ಫೀಡರಿನಲ್ಲಿ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿoದ ಈಶ್ವರನಗರ, ಸರಳೆಬೆಟ್ಟು, ಅರ್ಬಿ, ಪ್ರಗತಿನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. 33/11 ಕೆ ವಿ ಕುಂಜಿಬೆಟ್ಟು ವಿದ್ಯುತ್ ಉಪಕೇಂದ್ರದಿoದ ಹೊರಡುವ 11 ಕೆ ವಿ ಉಡುಪಿ-3 ಫೀಡರ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿoದ ಉಡುಪಿ ನಗರ ಪ್ರದೇಶಗಳಾದ ಪಿ.ಪಿ.ಸಿ ಕಾಲೇಜು, ಫೀಶ್ ಮಾರ್ಕೆಟ್ ರೋಡ್,ಕೋರ್ಟ್ ರಸ್ತೆ,ಮಾರುತಿ ವಿಥೀಕಾ,ಪಿ.ಡಬ್ಲೂö್ಯಡಿ ಆಫೀಸ್ ರಸ್ತೆ,ತೆಂಕಪೇಟೆ,ಕೆ.ಎo.ಮಾರ್ಗ,ಕನಕದಾಸ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. 33/11 ಕೆ.ವಿ.ಜಿ.ಐ.ಎಸ್ ಕೋಟ ವಿದ್ಯುತ್ ಉಪಕೇಂದ್ರದಿAದ ಹೊರಡುವ 11 ಕೆ ವಿ ಸಾಲಿಗ್ರಾಮ ಫೀಡರ್‌ನ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿAದ ಸಾಲಿಗ್ರಾಮಪೇಟೆ,ಪಾರಂಪಳ್ಳಿ,ಚೆAಪಿ ಮತ್ತು ಕಾರ್ಕಡ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಜೂನ್ 9 ರಂದು ಬೆಳಗ್ಗೆ 9 ಗಂಟೆಯಿoದ ಸಂಜೆ…
ಹೈಲೈಟ್ಸ್:ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆ 2023.ಪ್ರವೇಶ ಪರೀಕ್ಷೆ ಮೆರಿಟ್ ಪಟ್ಟಿ ಬಿಡುಗಡೆ.ಮೆರಿಟ್ ಪಟ್ಟಿ ಚೆಕ್ ಮಾಡಲು ಲಿಂಕ್ ಇಲ್ಲಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವ್ಯಾಪ್ತಿಯಲ್ಲಿರುವ ವಸತಿ ಶಾಲೆಗಳಲ್ಲಿ 2023-24ನೇ ಶೈಕ್ಷಣಿಕ ಸಾಲಿನ 6 ನೇ ತರಗತಿ ಪ್ರವೇಶಾತಿಗೆ ನಡೆಸಲಾಗುವ ಪ್ರವೇಶ ಪರೀಕ್ಷೆಯ ಮೆರಿಟ್ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ.ಈ ಪ್ರವೇಶ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಮೆರಿಟ್ ಪಟ್ಟಿಯನ್ನು ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ ಚೆಕ್ ಮಾಡಬಹುದಾಗಿದೆ.ರಾಜ್ಯದಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಶ್ರೀಮತಿ ಇಂದಿರಾ ಗಾಂಧಿ, ಡಾ.ಬಿ. ಆರ್. ಅಂಬೇಡ್ಕರ್ , ಮಾಸ್ತಿ ವೆಂಕಟೇಶ ಅಯ್ಯಂಗರ್, ಸಂಗೊಳ್ಳಿ ರಾಯಣ್ಣ, ಕವಿರನ್ನ, ಗಾಂಧಿತತ್ವ, ಶ್ರೀ ನಾರಾಯಣ ಗುರು, ಪ್ರತಿಭಾನ್ವಿತ ಬಾಲಕಿಯರ ವಸತಿ ಶಾಲೆಗಳಿಗೆ 2023-24ನೇ ಸಾಲಿನ 6ನೇ…
ಉಡುಪಿ, ) : ಬ್ರಹ್ಮಾವರ ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಚೇರಿಯ ನೋಟಿಸ್ ಬೋರ್ಡಿನಲ್ಲಿ ಹಾಕಲಾಗಿದ್ದು,ಆಕ್ಷೇಪಣೆ ಇದ್ದಲ್ಲಿ ಜೂನ್ 9 ರ ಸಂಜೆ 5:30 ರೊಳಗಾಗಿ ಶಿಶು ಅಭಿವೃದ್ದಿ ಯೋಜನೆ ಬ್ರಹ್ಮಾವರ ಇವರಿಗೆ ಖುದ್ದಾಗಿ ಸಲ್ಲಿಸಲು ಪ್ರಕಟಣೆ ತಿಳಿಸಿದೆ.