Author: NammurEXP

ಉಡುಪಿ: ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಒತ್ತಡವನ್ನು ನಿವಾರಿಸುವ ಸಲುವಾಗಿ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಮನವಿಯ ಮೇರೆಗೆ ನೈರುತ್ಯ ರೈಲ್ವೆಯು ರೈಲು ಸಂಖ್ಯೆ 06591/06592 ಯಶವಂತಪುರ – ಮಡಗಾಂವ್ ಎಕ್ಸ್‌ಪ್ರೆಸ್ ವಿಶೇಷ ರೈಲನ್ನು ಪಡೀಲ್ ಮಾರ್ಗವಾಗಿ ಓಡಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಈ ರೈಲು ದಿನಾಂಕ 11.09.2026ರ ಶುಕ್ರವಾರ ರಾತ್ರಿ ಯಶವಂತಪುರ ನಿಲ್ದಾಣದಿಂದ 23.55 ಗಂಟೆಗೆ ಹೊರಡಲಿದ್ದು, ಮಾರನೇ ದಿನ ಮಧ್ಯಾಹ್ನ ಉಡುಪಿ ನಿಲ್ದಾಣಕ್ಕೆ 13.10 ಗಂಟೆಗೆ ಆಗಮಿಸಿ 13.12ಕ್ಕೆ ಹೊರಡುತ್ತದೆ. ನಂತರ ಕುಂದಾಪುರ ನಿಲ್ದಾಣಕ್ಕೆ 13.40 ಗಂಟೆಗೆ ಆಗಮಿಸಿ 13.42ಕ್ಕೆ ಹೊರಡುವ ಈ ರೈಲು, ಕಾರವಾರ ನಿಲ್ದಾಣಕ್ಕೆ ಸಂಜೆ 16.50 ಗಂಟೆಗೆ ಆಗಮಿಸಿ 16.52ಕ್ಕೆ ಹೊರಡುತ್ತದೆ. ಮಾರ್ಗ ಮಧ್ಯದಲ್ಲಿ ಈ ರೈಲು ಪಡೀಲ್ ನಿಲ್ದಾಣದ ಮೂಲಕ ಹಾದುಹೋಗಲಿದ್ದು, ಅಂತಿಮವಾಗಿ ಮಡಗಾಂವ್ ನಿಲ್ದಾಣವನ್ನು 12.09.2026ರ ಶನಿವಾರ ಸಂಜೆ 18.10 ಗಂಟೆಗೆ ತಲುಪಲಿದೆ. ಹಬ್ಬ ಮುಗಿಸಿದ ನಂತರ ಈ ರೈಲು ದಿನಾಂಕ 14.09.2026ರ ಸೋಮವಾರ ಬೆಳಿಗ್ಗೆ ಮಡಗಾಂವ್‌ನಿಂದ 11.00…

Read More

ಶಿವಮೊಗ್ಗ/ ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಹೆಚ್ಚುತ್ತಿರುವ ಮಾನವ–ಹಾವು ಸಂಘರ್ಷವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಅರಣ್ಯ ಇಲಾಖೆಯಿಂದಲೇ 24/7 ಉಚಿತ ಉರಗ ರಕ್ಷಣಾ ವ್ಯವಸ್ಥೆ ಜಾರಿಗೆ ತರಬೇಕು ಹಾಗೂ ಹಾವು ರಕ್ಷಣೆಯ ಹೆಸರಿನಲ್ಲಿ ಸಾರ್ವಜನಿಕರಿಂದ ದುಬಾರಿ ಶುಲ್ಕ ವಸೂಲಿ ಮಾಡುವುದನ್ನು ತಡೆಯಬೇಕು ಎಂದು ತೀರ್ಥಹಳ್ಳಿ ತಾಲ್ಲೂಕಿನ ಹೊದಲ ಗ್ರಾಮದ ಅಕ್ಷಯ್ ಕೆ.ಎಂ. ಅವರು ಅರಣ್ಯ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ. ಪಶ್ಚಿಮ ಘಟ್ಟಗಳ ಅಂಚಿನಲ್ಲಿರುವ ತೀರ್ಥಹಳ್ಳಿ ಸೇರಿದಂತೆ ಮಲೆನಾಡಿನ ಗ್ರಾಮೀಣ ಪ್ರದೇಶಗಳಲ್ಲಿ ಮಳೆಗಾಲ ಹಾಗೂ ಭೌಗೋಳಿಕ ಪರಿಸ್ಥಿತಿಗಳ ಕಾರಣದಿಂದ ವಿಷಪೂರಿತ ಹಾವುಗಳು ಮನೆ, ಅಡುಗೆಮನೆ ಹಾಗೂ ದನದ ಕೊಟ್ಟಿಗೆಗಳಿಗೆ ಪ್ರವೇಶಿಸುವ ಘಟನೆಗಳು ಹೆಚ್ಚಾಗುತ್ತಿವೆ. ಹಂಚಿನ ಮನೆ, ಮಣ್ಣಿನ ಗೋಡೆ ಹಾಗೂ ತೆರೆದ ಕಿಟಕಿಗಳಿರುವ ಬಡ ಕುಟುಂಬಗಳು ಇಂತಹ ಸಂದರ್ಭಗಳಲ್ಲಿ ತೀವ್ರ ಆತಂಕ ಎದುರಿಸುತ್ತಿವೆ ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ. ಅರಣ್ಯ ಇಲಾಖೆಯಲ್ಲಿ ಹಾವು ರಕ್ಷಣೆಗೆ ತರಬೇತಿ ಪಡೆದ ಅನುಭವಿ ಸಿಬ್ಬಂದಿಗಳ ಕೊರತೆಯಿಂದಾಗಿ ಹೊರಗಿನ ರಕ್ಷಕರು ಅಥವಾ ಖಾಸಗಿ ವ್ಯಕ್ತಿಗಳನ್ನು ಅವಲಂಬಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ…

Read More

ನವ ದೆಹಲಿ: ದೇಶದ ಹೆಮ್ಮೆಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ರಾಜಕೀಯ ಕ್ಷೇತ್ರಕ್ಕೆ ಪ್ರವೇಶ ಪಡೆದು 25 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ, ಸೆಪ್ಟೆಂಬರ್ ನಿಂದ ಅಕ್ಟೋಬರ್ ವರೆಗೆ ತಿಂಗಳಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ‘ಸೇವಾ ಸಂಕಲ್ಪ’ ಎನ್ನುವ ಶೀರ್ಷಿಕೆ ಅಡಿಯಲ್ಲಿ ದೇಶವ್ಯಾಪಿಯಾಗಿ ನಡೆಸಲು ಬಿಜೆಪಿ ಪಕ್ಷವು ನಿರ್ಧರಿಸಿದೆ. ಸೆಪ್ಟೆಂಬರ್ 17ರ ಗುರುವಾರದಂದು ನರೇಂದ್ರ ಮೋದಿ ಅವರ ಜನ್ಮದಿನದಂದು ಚಾಲನೆ ದೊರೆಯಲಿದ್ದು, ಅಕ್ಟೋಬರ್ 7ರವರೆಗೆ ನಿರಂತರವಾಗಿ ಕಾರ್ಯಕ್ರಮಗಳು ನಡೆಯಲಿವೆ ಎನ್ನುವ ಮಾಹಿತಿ ಮೂಲಗಳಿಂದ ಲಭಿಸಿದೆ. ಅಕ್ಟೋಬರ್ 7 ನರೇಂದ್ರ ಮೋದಿ ಅವರು ಗುಜರಾತಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ 25 ವರ್ಷಗಳಾಗುತ್ತವೆ. ಅಂದರೆ 2001ರ ಅಕ್ಟೋಬರ್ 7ರಂದು ಅವರು ಗುಜರಾತ್ ರಾಜ್ಯದ ಮುಖ್ಯಮಂತ್ರಿಗಳಾಗಿ ಅಧಿಕಾರವನ್ನು ಸ್ವೀಕರಿಸಿದ್ದರು. ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನವೀನ್ ಅವರು ಸುದ್ಧಿಗಾರರೊಂದಿಗೆ ಮಾತನಾಡಿದ್ದು “ಸೆಪ್ಟೆಂಬರ್ 17ರ ಗುರುವಾರದಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಇದರ ಅಡಿಯಲ್ಲಿ ಸರ್ಕಾರದ ಯೋಜನೆಗಳ ಫಲಾನುಭವಿಗಳು ಮೋದಿ ಅವರ 25…

Read More

ಶಿವಮೊಗ್ಗ/ ಚಿಕ್ಕಮಗಳೂರು: ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಎಚ್.ಸಿ.ಯೋಗೇಶ್ ನೇಮಕವಾಗಿದ್ದು, ಕಾಫಿನಾಡು ಚಿಕ್ಕಮಗಳೂರು ಜಿಲ್ಲಾ ಅಧ್ಯಕ್ಷರಾಗಿ ಎಚ್.ಪಿ.ಮಂಜೇಗೌಡ ಆಯ್ಕೆ ಆಗಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್ ಅವರು ರಾಜ್ಯದ ಎಲ್ಲಾ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರ ಪಟ್ಟಿಯನ್ನು ಪ್ರಕಟಿಸಿದ್ದು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಜಿಲ್ಲಾ ಅಧ್ಯಕ್ಷರ ಆಯ್ಕೆ ನಡೆದಿದೆ. ಶಿವಮೊಗ್ಗ ಜಿಲ್ಲೆಗೆ ಯುವ ನಾಯಕತ್ವ: ಯೋಗೀಶ್ ಆಯ್ಕೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಎಚ್.ಸಿ.ಯೋಗೇಶ್ ಅವರು ನೇಮಕಗೊಂಡಿದ್ದಾರೆ. ಇವರು 2023ರ ವಿಧಾನಸಭಾ ಚುನಾವಣೆಯ ಅಭ್ಯರ್ಥಿಯಾಗಿದ್ದು, ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾಗಿ ಕೂಡ ಕಾರ್ಯನಿರ್ವಹಿಸಿದ್ದರು. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಎಂದೆಂದಿಗಿಂತಲೂ ಈ ಬಾರಿ ತೀವ್ರ ಪೈಪೋಟಿ ಏರ್ಪಟ್ಟಿದ್ದು ಮಾಜಿ ಶಿಕ್ಷಣ ಸಚಿವರಾದ ಕಿಮ್ಮನೆ ರತ್ನಾಕರ್, ಮಾಜಿ ಸಂಸದರಾದ ಆಯನೂರು ಮಂಜುನಾಥ್, ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ಎಸ್.ಸುಂದರೇಶ್, ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಎನ್.ರಮೇಶ್, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆಯಾದ ವೇದಾ ವಿಜಯ್ ಕುಮಾರ್, ಮಹಾನಗರ…

Read More

ಬೆಂಗಳೂರು: ಹಲವಾರು ವರ್ಷಗಳಿಂದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ಸರ್ಕಾರದಿಂದ ಉಚಿತವಾಗಿ ವಿತರಿಸುವ ನಿಯಮ ಜಾರಿಯಲ್ಲಿತ್ತು. ಇನ್ನು ಮುಂದೆ ಇವುಗಳ ಜೊತೆಗೆ ಪದವಿ ಪೂರ್ವ ಶಿಕ್ಷಣದ ವಿದ್ಯಾರ್ಥಿಗಳಿಗೂ ಪಠ್ಯಪುಸ್ತಕಗಳನ್ನು ಉಚಿತವಾಗಿ ಸರಬರಾಜು ಮಾಡಬೇಕೆನ್ನುವ ಕುರಿತು ರಾಜ್ಯ ಸರ್ಕಾರವು ನಿರ್ಧಾರವನ್ನು ಕೈಗೊಂಡಿದೆ. ರಾಜ್ಯದ ಇತಿಹಾಸದಲ್ಲೇ ಇದು ಮೊದಲ ಪ್ರಯತ್ನವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸುದ್ಧಿಗಾರರೊಂದಿಗೆ ಮಾತನಾಡಿದ ರಾಜ್ಯದ ಶಿಕ್ಷಣ ಸಚಿವರಾದ ಮಧುಬಂಗಾರಪ್ಪ ಅವರು “ಶಾಲೆಗಳಿಗೆ ಮಕ್ಕಳ ದಾಖಲಾತಿ ಹೆಚ್ಚಳವಾಗಿದ್ದರಿಂದ ಪಠ್ಯಪುಸ್ತಕ ಪೂರೈಕೆಯಲ್ಲಿ ಅಲ್ಪಪ್ರಮಾಣದ ವ್ಯತ್ಯಯ ಉಂಟಾಗಿದೆ. ಅತಿ ಶೀಘ್ರದಲ್ಲೇ ಈ ಸಮಸ್ಯೆ ಪರಿಹಾರವಾಗಲಿದೆ. ಮಕ್ಕಳಿಗೆ ಉತ್ತಮ ಗುಣಮಟ್ಟದ ಶೂ-ಸಾಕ್ಸ್ ಗಳನ್ನು ಒದಗಿಸಲು ಟೆಂಡರ್ ಪ್ರಕ್ರಿಯೆಯನ್ನು ಕೈಗೊಳ್ಳಲಾಗಿದೆ. ಹಾಗೇ ಈ ವರ್ಷದಿಂದಲೇ ಉಚಿತ ನೋಟ್ ಬುಕ್ ವಿತರಿಸಲಾಗುತ್ತಿದ್ದು, ಗ್ರಾಮೀಣ ಮಕ್ಕಳಿಗೆ ನಗರ ಜೀವನವನ್ನು ಪರಿಚಯಿಸುವ ಸಲುವಾಗಿ ವಿನೂತನ ಕಾರ್ಯಕ್ರಮವನ್ನು ಸಹ ಆಯೋಜಿಸಲಾಗಿದೆ. ಅದನ್ನೂ ಕೂಡ ಶೀಘ್ರದಲ್ಲೇ ಅನುಷ್ಠಾನಗೊಳಿಸಲಾಗುವುದು ಮತ್ತು ಕರ್ನಾಟಕ ಪಬ್ಲಿಕ್ ಶಾಲೆಗಳ ರಾಜ್ಯಮಟ್ಟದ ಉದ್ಘಾಟನೆಯ ಕಾರ್ಯಕ್ರಮವನ್ನು ಶಿವಮೊಗ್ಗದಲ್ಲೇ ನಡೆಸಲಾಗುವುದು” ಎಂದು ತಿಳಿಸಿದರು.…

Read More

ಸೆಪ್ಟೆಂಬರ್ 14ರ ಸೋಮವಾರದಿಂದ ಪ್ರಾರಂಭಗೊಳ್ಳಲಿರುವ ಗಣೇಶೋತ್ಸವದ ಪ್ರಯುಕ್ತ ಎಲ್ಲೆಡೆ ಭಾರೀ ಸಿದ್ಧತೆ ನಡೆದಿದೆ. ಸಂಘ ಸಂಸ್ಥೆಗಳು ಗಣೇಶನ ಕೂರಿಸಲು ಎಲ್ಲಾ ಸಿದ್ಧತೆ ಆಗಿದ್ದು ತಾಲೂಕು ಆಡಳಿತ, ಪೊಲೀಸ್ ಇಲಾಖೆ ಈ ಬಗ್ಗೆ ಅನೇಕ ನಿಯಮಗಳನ್ನು ಬಿಗಿ ಗೊಳಿಸಿದೆ. ಗಣೇಶೋತ್ಸವ ಯಾವ ರೀತಿ ನಡೆಯಬೇಕು, ಡಿಜೆ ಬಳಕೆ, ಗಣಪತಿ ವಿಸರ್ಜನಾ ಮೆರವಣಿಗೆ, ಗಣೇಶೋತ್ಸವದ ಅನುಮತಿಗೆ ಸಂಬಂಧಿಸಿದಂತೆ ಹಲವಾರು ವಿಚಾರಗಳ ಕುರಿತು ಈಗಾಗಲೇ ಪೊಲೀಸ್ ಇಲಾಖೆ ಆಯೋಜಕರನ್ನು ಕರೆಸಿ ಸಭೆ ನಡೆಸಿದೆ. ಪ್ರತಿಯೊಬ್ಬ ಗಣಪತಿ ಮಂಡಳಿಯ ಅಧ್ಯಕ್ಷರು ಮತ್ತು ಸದಸ್ಯರು ಹೇಗೆ ಆಚರಣೆ ಮಾಡಬೇಕು ಎಂದು ನಿಯಮ ಹೊರಡಿಸಲಾಗಿದೆ. ಪ್ರತಿ ತಾಲ್ಲೂಕು ಕಛೇರಿಯಲ್ಲಿ ಏಕಗವಾಕ್ಷಿಯ ಸೇವೆಯನ್ನು ತೆರೆದಿದ್ದು, ಗಣೇಶೋತ್ಸವಕ್ಕೆ ಸಂಬಂಧಿಸಿದಂತೆ ಅನುಮತಿಯನ್ನು ಪಡೆಯಬಹುದಾಗಿದೆ. ಗಣೇಶೋತ್ಸವಕ್ಕೆ ಕಟ್ಟುನಿಟ್ಟಿನ ನಿಯಮ ಏನೇನು? ಗಣೇಶೋತ್ಸವ ಆಚರಣೆ ವೇಳೆ ಗಣೇಶ ಕೂರಿಸಲು ವಿವಿಧ ಇಲಾಖೆಗಳ ಅನುಮತಿ ಪಡೆಯಲು ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲೇ ‘ಏಕಗವಾಕ್ಷಿ ವ್ಯವಸ್ಥೆ’ ಮಾಡಲಾಗಿದೆ. ಪಿಒಪಿ ಗಣಪತಿ ಬಳಕೆಗೆ ಸಂಪೂರ್ಣ ನಿಷೇಧ ಹೇರಲಾಗಿದ್ದು, ಪರಿಸರಸ್ನೇಹಿ ಮೂರ್ತಿಗಳನ್ನಷ್ಟೇ ಬಳಸಬೇಕು. ರಾತ್ರಿ…

Read More

ಉಡುಪಿ/ದಕ್ಷಿಣ ಕನ್ನಡ: ರಾಜ್ಯದ ಎಲ್ಲಾ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರ ಪಟ್ಟಿ ಇದೀಗ ಪ್ರಕಟಗೊಂಡಿದ್ದು ಉಡುಪಿ ಜಿಲ್ಲೆಯ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಕಿಶನ್ ಕುಮಾರ್ ಹೆಗ್ಡೆ ಕೊಳ್ಕೆಬೈಲ್ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅವರು ನೇಮಕಗೊಂಡಿದ್ದಾರೆ. ಉಡುಪಿ ಜಿಲ್ಲೆಯ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ 20ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದರು ಎನ್ನಲಾಗಿದೆ. ಅಲ್ಲದೆ ಉಡುಪಿ 5 ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಶಾಸಕರಿದ್ದು, 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಸಂಘಟನೆಯನ್ನು ಬಲಿಷ್ಠಗೊಳಿಸಬೇಕಿದೆ. ಇದರ ಜೊತೆಗೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಪಕ್ಷ ಕಳೆದುಕೊಂಡಿರುವಂತಹ ಅಧಿಕಾರವನ್ನು ಮರಳಿ ಪಡೆದುಕೊಳ್ಳುವ ಸವಾಲು ಅಧ್ಯಕ್ಷ ಸ್ಥಾನದೊಂದಿಗೆ ಹೆಗಲೇರಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಯುವ ನಾಯಕತ್ವ! ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ 40ಕ್ಕೂ ಹೆಚ್ಚು ಆಕಾಂಕ್ಷೆಗಳು ಅರ್ಜಿಯನ್ನು ಸಲ್ಲಿಸಿದ್ದು, ಜೂನ್ 29ರಿಂದ ಆಗಸ್ಟ್ 12ರವರೆಗೆ…

Read More

ತೀರ್ಥಹಳ್ಳಿ: ರೈತರು, ಕೃಷಿ ಕಾರ್ಮಿಕರ ಬದುಕನ್ನೇ ದುರ್ಬರಗೊಳಿಸುವ ಕಸ್ತೂರಿ ರಂಗನ್ ವರದಿ  ಜಾರಿಯನ್ನು ವಿರೋಧಿಸಿ ಸಹಕಾರ ನಾಯಕರು ಆದ ಡಾ. ಮಂಜುನಾಥ ಗೌಡ ನೇತೃತ್ವದಲ್ಲಿ ತೀರ್ಥಹಳ್ಳಿಯಲ್ಲಿ ಬೃಹತ್ ಪಾದಯಾತ್ರೆ ನಡೆದಿದೆ. ತೀರ್ಥಹಳ್ಳಿಯಲ್ಲಿ ಪಕ್ಷಾತೀತವಾಗಿ ಈ ಹೋರಾಟ ಹಮ್ಮಿಕೊಂಡಿದ್ದು ಪಶ್ಚಿಮ ಘಟ್ಟ ರೈತ ಸಹಕಾರ ವೇದಿಕೆ ತೀರ್ಥಹಳ್ಳಿ ಪಟ್ಟಣದ ಸಮೀಪದ ಉಂಟೂರು ಕಟ್ಟೆ ಕೈಮರದಿಂದ ಪ್ರಾರಂಭಗೊಂಡು ತಾಲೂಕು ಕಚೇರಿಯ ಆವರಣದಲ್ಲಿ ಬೃಹತ್ ಪ್ರತಿಭಟನೆ ಸಭೆ ನಡೆಸಲಾಗುತ್ತಿದೆ. ಉಂಟೂರುಕಟ್ಟೆ ಕೈಮರದಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಸಹಕಾರಿ‌ ವೇದಿಕೆಯಿಂದ ಎಂಎಡಿಬಿ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ನೇತೃತ್ವದಲ್ಲಿ ಪಾದಯಾತ್ರೆ ಆರಂಭಗೊಂಡಿದೆ. ಶಾಸಕ ಬೇಳೂರು ಗೋಪಾಲಕೃಷ್ಣ, ಶಿಮುಲ್ ಅಧ್ಯಕ್ಷ ವಿದ್ಯಾಧರ, ವಿಜಯದೇವ್ ಸೇರಿ ನೂರಾರು ನಾಯಕರು, ಮುಖಂಡರು ಪಾಲ್ಗೊಂಡಿದ್ದಾರೆ. ತೀರ್ಥಹಳ್ಳಿ ತಾಲ್ಲೂಕಿನ 146 ಗ್ರಾಮಗಳು, ಸಾಗರದ 126 ಗ್ರಾಮಗಳು, ಹೊಸನಗರದ 125 ಗ್ರಾಮಗಳು, ಶಿವಮೊಗ್ಗದ 64 ಗ್ರಾಮಗಳು, ಶಿಕಾರಿಪುರದ 12 ಗ್ರಾಮಗಳು ಭಾದಿತ ಗ್ರಾಮಗಳಾಗಿದ್ದು, ರೈತರ ಬದುಕಿನ ಮೇಲೆ ಪರಿಣಾಮ ಬೀರುವ ಜನವಿರೋಧಿ ಅಧಿಸೂಚನೆಯನ್ನು ಕೈ ಬಿಡಲು ಭಾರೀ…

Read More

ಬೆಂಗಳೂರು: ಸಾರಿಗೆ ನಿಗಮಗಳ ಬಸ್ ಪ್ರಯಾಣದ ದರವನ್ನು ಜನಸಾಮಾನ್ಯರಿಗೆ ತೊಂದರೆಯಾಗದ ರೀತಿಯಲ್ಲಿ ಹೆಚ್ಚಳಗೊಳಿಸುವ ಕುರಿತು ಇಲಾಖೆಯು ತೀರ್ಮಾನಿಸಿದೆ. ಇದಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಸಾರಿಗೆ ಸಚಿವರಾದ ಭೈರತಿ ಸುರೇಶ್ ಅವರು “ಎಂಟು ತಿಂಗಳಲ್ಲಿ ಕೇಂದ್ರ ಸರ್ಕಾರ ತೈಲೋತ್ಪನ್ನ ದರಗಳನ್ನು ಹಲವು ಬಾರಿ ಹೆಚ್ಚಿಸಿದೆ. ಆದರೂ ಕೂಡ ನಾವು ಬಸ್ ಪ್ರಯಾಣದ ದರವನ್ನು ಹೆಚ್ಚಳ ಮಾಡಿಲ್ಲ. ಪರಿಣಾಮವಾಗಿ ನಮ್ಮ ನಾಲ್ಕೂ ಸಾರಿಗೆ ನಿಗಮಗಳಿಗೆ ಸಾವಿರಾರು ಕೋಟಿ ರೂಪಾಯಿಗಳಷ್ಟು ನಷ್ಟ ಉಂಟಾಗಿದೆ. ನಿವೃತ್ತ ಹಿರಿಯ ಐಎಎಸ್ ಅಧಿಕಾರಿಯಾದ ಅತುಲ್ ತಿವಾರಿ ಅವರ ನೇತೃತ್ವದ ಸಮಿತಿಯು ಪ್ರಯಾಣ ದರದ ಪರಿಷ್ಕರಣೆಗೆ ಸಂಬಂಧಿಸಿದಂತೆ ಅಧ್ಯಯನವನ್ನು ನಡೆಸುತ್ತಿದ್ದು, ಅತಿ ಶೀಘ್ರದಲ್ಲೇ ಅಧ್ಯಯನದ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದೆ. ಬರದ ಪರಿಸ್ಥಿತಿಯಲ್ಲಿ ಜನಸಾಮಾನ್ಯರಿಗೆ ಹೆಚ್ಚಿನ ಹೊರೆಯಾಗದ ರೀತಿಯಲ್ಲಿ ಸ್ವಲ್ಪ ಪ್ರಮಾಣದಲ್ಲಿ ಪ್ರಯಾಣ ದರವನ್ನು ಪರಿಷ್ಕರಣೆ ಮಾಡಲಾಗುವುದು. ಇದರಿಂದ ಆಗುವ ಹೊರೆಯನ್ನು ಸರಿದೂಗಿಸಲು ಸರ್ಕಾರದಿಂದಲೂ ಕೂಡ ನೆರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆಯನ್ನು ನೀಡಿದ್ದಾರೆ” ಎಂದು ತಿಳಿಸಿದ್ದಾರೆ. ಸಾಲ ಮನ್ನಾಕ್ಕೆ ನೆರವು ಕೇಳಿ ಕೇಂದ್ರಕ್ಕೆ…

Read More

ಚಿಕ್ಕಮಗಳೂರು: ಟ್ರೇಡಿಂಗ್ ನಲ್ಲಿ ಹಣವನ್ನು ಹೂಡಿಕೆ ಮಾಡಿದರೆ ಭಾರಿ ಲಾಭ ನೀಡುವುದಾಗಿ ನಂಬಿಸಿ ಇಂಜಿನಿಯರಿಂಗ್ ವಿದ್ಯಾರ್ಥಿಯಿಂದ ಲಕ್ಷಾಂತರ ರೂಪಾಯಿ ಲಪಟಾಯಿಸಿರುವ ಘಟನೆ ನಡೆದಿದೆ.‌ ವಿದ್ಯಾರ್ಥಿನಿಗೆ ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ವಂಚಕರು ಮೊದಲಿಗೆ 750 ರೂಪಾಯಿ ಹೂಡಿಕೆ ಮಾಡಿದರೆ ಕೇವಲ 15 ನಿಮಿಷದಲ್ಲಿ 14.449 ರೂಪಾಯಿಗಳಷ್ಟು ಲಾಭವನ್ನು ನೀಡುವುದಾಗಿ ನಂಬಿಸಿದ್ದಾರೆ. ಬಳಿಕ ಕ್ಯೂಆರ್ ಕೋಡ್ ಸೇರಿದಂತೆ ವಿವಿಧ ಶುಲ್ಕಗಳ ನೆಪವೊಡ್ಡಿ ತಮ್ಮ ಬ್ಯಾಂಕ್ ಖಾತೆಗಳಿಗೆ ಆಗಸ್ಟ್ 27ರಿಂದ 31ರವರೆಗೆ ಹಂತಹಂತವಾಗಿ ಸುಮಾರು 4.77 ಲಕ್ಷ ರೂಪಾಯಿಗಳಷ್ಟು ಹಣವನ್ನು ವರ್ಗಾಯಿಸಿಕೊಂಡಿದ್ದಾರೆ ಎನ್ನಲಾಗಿದೆ. ಇಷ್ಟಾದರೂ ಸುಮ್ಮನಿರದ ವಂಚಕರು ಮತ್ತಷ್ಟು ಹಣದ ಬೇಡಿಕೆ ಇಟ್ಟಾಗ ವಿದ್ಯಾರ್ಥಿನಿಯು ಅನುಮಾನಗೊಂಡು ಕುಟುಂಬದವರಿಗೆ ವಿಚಾರ ತಿಳಿಸಿದ್ದಾರೆ. ನಂತರ ಸೈಬರ್ ಸಹಾಯವಾಣಿ 1930ಕ್ಕೆ ಕರೆ ಮಾಡಿ ದೂರು ನೀಡಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ. ಘಟನೆಗೆ ಸಂಬಂಧಿಸಿದಂತೆ ಐಟಿ ಕಾಯ್ದೆ ಮತ್ತು ಬಿಎನ್ಎಸ್ ಅಡಿಯಲ್ಲಿ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. •ಸಾಗರ: ಬೃಹತ್ ಗಾಂಜಾ ಗಿಡ ಪತ್ತೆ ಸಾಗರ: ಇತ್ತೀಚಿನ ದಿನಗಳಲ್ಲಿ ಸಾಗರದ…

Read More