ತೀರ್ಥಹಳ್ಳಿ: ರೈತರು, ಕೃಷಿ ಕಾರ್ಮಿಕರ ಬದುಕನ್ನೇ ದುರ್ಬರಗೊಳಿಸುವ ಕಸ್ತೂರಿ ರಂಗನ್ ವರದಿ ಜಾರಿಯನ್ನು ವಿರೋಧಿಸಿ ಪಾದಯಾತ್ರೆ ಮತ್ತು ಬಹಿರಂಗ ಸಭೆಗೆ ಸಿದ್ಧತೆ ಜೋರಾಗಿದೆ. ತೀರ್ಥಹಳ್ಳಿಯಲ್ಲಿ ಪಕ್ಷಾತೀತವಾಗಿ ಈ ಹೋರಾಟ ಹಮ್ಮಿಕೊಂಡಿದ್ದು ಪಶ್ಚಿಮ ಘಟ್ಟ ರೈತ ಸಹಕಾರ ವೇದಿಕೆ ವತಿಯಿಂದ ದಿನಾಂಕ: 05-09-2026, ಶನಿವಾರ ಬೆಳಿಗ್ಗೆ 09 ಗಂಟೆಗೆ ಉಂಟೂರು ಕಟ್ಟೆ ಕೈಮರದಿಂದ ಪ್ರಾರಂಭಗೊಂಡು ತಾಲೂಕು ಕಚೇರಿಯ ಆವರಣದಲ್ಲಿ ಬೃಹತ್ ಪ್ರತಿಭಟನೆ ಸಭೆಯನ್ನು ನಡೆಸಿ ತಾಲೂಕು ದಂಡಾಧಿಕಾರಿಗೆ ಮನವಿ ನೀಡಲಾಗುತ್ತದೆ ಎಂದು ಪಶ್ಚಿಮ ಘಟ್ಟ ರೈತ ಸಹಕಾರ ವೇದಿಕೆ ಅಧ್ಯಕ್ಷರಾದ ಡಾ. ಆರ್. ಎಂ.ಮಂಜುನಾಥ ಗೌಡ ಹೇಳಿದ್ದಾರೆ. ಬಸವಾನಿ ವಿಜಯದೇವ್ ಸಭಾಂಗಣದಲ್ಲಿ ಡಾ.ಆರ್.ಎಂ.ಮಂಜುನಾಥ ಗೌಡ ಮಾತನಾಡಿ, ಎಲ್ಲಾ ಸಹಕಾರಿ ಸಂಸ್ಥೆ ಹಾಗೂ ಸಂಘ ಸಂಸ್ಥೆಗಳನ್ನು ಒಳಗೊಂಡು ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ. ಕರ್ನಾಟಕ ರಾಜ್ಯದ 20,668 ಚದುರ ಕಿ.ಮೀ ಮಲೆನಾಡು ಪ್ರದೇಶದ 1449 ಗ್ರಾಮಗಳನ್ನು ಪರಿಸರ ಸೂಕ್ಷ್ಮವಲಯವೆಂದು ಘೋಷಿಸಲು ಕೇಂದ್ರ ಸರ್ಕಾರ 7ನೇ ಕರಡು ಅಧಿಸೂಚನೆ ಹೊರಡಿಸಿದೆ. ಇದರಲ್ಲಿ ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ, ತೀರ್ಥಹಳ್ಳಿ, ಹೊಸನಗರ,…
Author: NammurEXP
ಪುತ್ತೂರು: ವ್ಯಕ್ತಿಯೊಬ್ಬ ಪೊಲೀಸ್ ಕಥೆ ಹೇಳಿ, ಗಾಂಜಾ ಪತ್ತೆ ಹಚ್ಚಲು ಬಂದಿರುವುದಾಗಿ ನಂಬಿಸಿ ಯುವತಿಯನ್ನು ವಂಚಿಸಿದ ಘಟನೆ, ಭಾನುವಾರದಂದು ಕುಂಬ್ರದ ಜ್ಯೂಸ್ ಆ್ಯಂಡ್ ಚಾಟ್ಸ್ ಅಂಗಡಿಯಲ್ಲಿ ನಡೆದಿದೆ. ಅಂಗಡಿಗೆ ಭೇಟಿ ನೀಡಿದ ಅಪರಿಚಿತ ವ್ಯಕ್ತಿ ಜ್ಯೂಸ್ ಆ್ಯಂಡ್ ಚಾಟ್ಸ್ ಅಂಗಡಿಯಲ್ಲಿದ್ದ ಯುವತಿಯನ್ನು ಉದ್ದೇಶಿಸಿ “ಕುಂಬ್ರಕಟ್ಟೆಯ ಬಳಿ ನಮ್ಮ ಪೊಲೀಸ್ ಜೀಪ್ ನಿಂತಿದೆ. ನಾವಿಲ್ಲಿ ಗಾಂಜಾ ದಂಧೆಕೋರರನ್ನು ಹಿಡಿಯಲು ಬಂದಿದ್ದೇವೆ. ಈ ಕಾರ್ಯಾಚರಣೆಯಲ್ಲಿ ಗಾಂಜಾ ಸಿಕ್ಕರೆ ನಮಗೆ ಭಾರಿ ಹಣ ಮತ್ತು ಆಕರ್ಷಕ ಐಫೋನ್ ಸಿಗುತ್ತದೆ. ನಮಗೆ ಕಾರ್ಯಾಚರಣೆಯಲ್ಲಿ ಸಹಕಾರ ನೀಡಿದರೆ ನಮ್ಮಲ್ಲಿರುವ ಐಫೋನ್ ನಿಮಗೂ ಕೊಡುವುದಾಗಿ ನಂಬಿಸಿದ್ದಾರೆ”. ಬಳಿಕ ಅವರು ಯುವತಿಯ ಊರು ಮನೆಯ ವಿಳಾಸವನ್ನು ಕೇಳಿ, ನಿಮ್ಮ ತಂದೆ ಎಲ್ಲ ನನಗೆ ಚೆನ್ನಾಗಿ ಗೊತ್ತಿದ್ದಾರೆ ಎಂದು ಪರಿಚಯಸ್ಥನಂತೆ ನಟಿಸಿದ್ದಾನೆ. ಈ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಯು ನನಗೆ ತುರ್ತಾಗಿ 3500ರೂಪಾಯಿ ಬೇಕೆಂದು ಯುವತಿಯ ಬಳಿ ಕೇಳಿದ್ದಾನೆ. ಅದಕ್ಕೆ ಯುವತಿಯು ಗೂಗಲ್ ಪೇ ಮಾಡುವುದಾಗಿ ಹೇಳಿದಾಗ ವ್ಯಕ್ತಿಯು ನನಗೆ ನಗದು ಹಣದ ಅವಶ್ಯಕತೆ…
ವೈದ್ಯಕೀಯ ಲೋಕವೇ ಬೆರಗಾಗುವಂತಹ ಘಟನೆಯೊಂದರಲ್ಲಿ ಆಂಧ್ರಪ್ರದೇಶದ 74 ವರ್ಷದ ವೃದ್ಧೆಯೊಬ್ಬರು ಐವಿಎಫ್ (IVF) ತಂತ್ರಜ್ಞಾನದ ನೆರವಿನಿಂದ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಪೂರ್ವ ಗೋದಾವರಿ ಜಿಲ್ಲೆಯ ನೆಲ್ಲಪರ್ತಿಪಡು ಗ್ರಾಮದ ನಿವಾಸಿ ಮಂಗಾಯಮ್ಮ (74) ಹಾಗೂ ಅವರ ಪತಿ ಇ. ರಾಜಾರಾವ್ (82) ಈ ಅಪರೂಪದ ಸಾಧನೆ ಮಾಡಿದ ದಂಪತಿ. 1962ರಲ್ಲಿ ವಿವಾಹವಾಗಿದ್ದ ಈ ದಂಪತಿಗೆ ಮದುವೆಯಾಗಿ 57 ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಸಮಾಜದ ನಿಂದನೆಗಳನ್ನು ಮೆಟ್ಟಿ ನಿಂತು ಕೊನೆಗೂ ತಾಯ್ತನದ ಕನಸು ನನಸು ಮಾಡಿಕೊಂಡಿದ್ದಾರೆ. ಗುಂಟೂರಿನ ಅಹಲ್ಯಾ ನರ್ಸಿಂಗ್ ಹೋಮ್‌ನಲ್ಲಿ ಡಾ. ಉಮಾಶಂಕರ್ ಅವರ ನೇತೃತ್ವದ ವೈದ್ಯರ ತಂಡವು ಇವರಿಗೆ ಐವಿಎಫ್ ಚಿಕಿತ್ಸೆ ನೀಡಿತ್ತು. ವಯಸ್ಸಿನ ಕಾರಣದಿಂದಾಗಿ ಸಿಸೇರಿಯನ್ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಗಿದ್ದು, ತಾಯಿ ಮತ್ತು ಇಬ್ಬರೂ ನವಜಾತ ಶಿಶುಗಳು ಸಂಪೂರ್ಣ ಆರೋಗ್ಯವಾಗಿದ್ದಾರೆ. ಈ ಹಿಂದೆ 2016ರಲ್ಲಿ ಪಂಜಾಬ್‌ನ 72 ವರ್ಷದ ದಲ್ಜಿಂದರ್ ಕೌರ್ ಎಂಬುವವರು ಮಗುವಿಗೆ ಜನ್ಮ ನೀಡಿದ್ದು ದಾಖಲೆಯಾಗಿತ್ತು. ಈಗ 74ನೇ…
ಶಿವಮೊಗ್ಗ: 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಮರಣ ಪತ್ರವನ್ನು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ಭಾನುವಾರದಂದು ಗೋಪಿಶೆಟ್ಟಿಕೊಪ್ಪದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಸೃಷ್ಟಿ ಎಂದು ಗುರುತಿಸಲಾಗಿದೆ. ರಾಘವೇಂದ್ರ ಸ್ವಾಮಿಗಳ ಆರಾಧನೆ ಇದ್ದ ಹಿನ್ನೆಲೆಯಲ್ಲಿ ಸೃಷ್ಟಿಯ ಪೋಷಕರು ರಾಯರ ಮಠಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಸೃಷ್ಟಿ ಮರಣ ಪತ್ರವನ್ನು ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸೃಷ್ಟಿಯ ಪೋಷಕರು ಪೂಜೆಯನ್ನು ಮುಗಿಸಿಕೊಂಡು ಮನೆಗೆ ಹಿಂತಿರುಗಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಪ್ರಾಥಮಿಕ ಮಾಹಿತಿ ಮತ್ತು ಮರಣ ಪತ್ರದ ಆಧಾರದ ಮೇಲೆ ಪೋಷಕರು ಆಕೆಗೆ ಓದು ಓದು ಎಂದು ಒತ್ತಡ ಹಾಕುತ್ತಿದ್ದುದೆ ಸೃಷ್ಟಿಯ ಆತ್ಮಹತ್ಯೆಗೆ ಕಾರಣವಾಗಿದೆ ಎನ್ನುವ ಅಭಿಪ್ರಾಯ ವ್ಯಕ್ತವಾಗಿದ್ದು, ನಿಖರವಾದ ಕಾರಣ ಏನೆಂಬುದು ತನಿಖೆಯ ಬಳಿಕವಷ್ಟೇ ಸ್ಪಷ್ಟವಾಗಬೇಕಿದೆ. ಘಟನೆಗೆ ಸಂಬಂಧಿಸಿದಂತೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡೂರು: ವಾಹನ ಢಿಕ್ಕಿ; ಬೈಕ್ ಸವಾರ ಸಾವು ಕಡೂರು: ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಯುವಕ ಸಾವನ್ನಪ್ಪಿರುವ ಘಟನೆ, ಸೋಮವಾರದಂದು ಸರಸ್ವತಿಪುರ- ಗೋವಿಂದಪುರ…
ಶಿವಮೊಗ್ಗ: ಕಸ್ತೂರಿ ರಂಗನ್ ವರದಿ ಜಾರಿ ನೀತಿಯನ್ನು ವಿರೋಧಿಸಿ ಸಹಕಾರ ನಾಯಕರು ಆದ ಡಾ.ಆರ್ ಎಂ ಮಂಜುನಾಥಗೌಡ ನೇತೃತ್ವದಲ್ಲಿ ಕಾರಣಗಿರಿಯಿಂದ ಹೊಸನಗರದವರೆಗೆ ಪಾದಯಾತ್ರೆಗೆ ಭಾರೀ ಜನ ಸ್ಪಂದನೆ ವ್ಯಕ್ತವಾಗಿದೆ. ಪ್ರತಿಭಟನೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ,ಎಂಎಡಿಬಿ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ, ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ ಸೇರಿದಂತೆ ಹಲವಾರು ನಾಯಕರು ಭಾಗಿಯಾದರು. ಮಲೆನಾಡಿನ ಈ ಜ್ವಲoತ ಸಮಸ್ಯೆ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಸಾವಿರಾರು ಜನ ಭಾಗಿಯಾಗಿದ್ದರು. ಕೇಂದ್ರ ಸರ್ಕಾರವು ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಹೊರಡಿಸಿರುವ ಅಧಿ ಸೂಚನೆಯನ್ನು ಕುರಿತು ವಿರೋಧ ವ್ಯಕ್ತಪಡಿಸಿ ಹೊಸನಗರ ತಾಲ್ಲೂಕು ಪಶ್ಚಿಮ ಘಟ್ಟ ರೈತ ಸಹಕಾರಿ ವೇದಿಕೆ ಈ ಪ್ರತಿಭಟನೆಗೆ ಕರೆ ನೀಡಿತ್ತು. ಪಶ್ಚಿಮ ಘಟ್ಟ ರೈತ ಸಹಕಾರಿ ವೇದಿಕೆ ಶಿವಮೊಗ್ಗದ ಅಧ್ಯಕ್ಷರಾದ ಆರ್.ಎಂ. ಮಂಜುನಾಥಗೌಡ ಮತ್ತು ಸಂಚಾಲಕರಾದ ಬಿ.ಆರ್. ಜಯಂತ್ ಅವರ ನೇತೃತ್ವದಲ್ಲಿ ಮಲೆನಾಡು ಪ್ರದೇಶ ಮತ್ತು ರೈತರ ರಕ್ಷಣೆಯನ್ನು ಒಳಗೊಂಡಂತೆ ಹಲವಾರು ಅಂಶಗಳನ್ನು ಆಧರಿಸಿ ಕಾರಣಗಿರಿ ಶ್ರೀಸಿದ್ಧಿವಿನಾಯಕ ದೇವಸ್ಥಾನದಿಂದ ಪಾದಯಾತ್ರೆ ಮತ್ತು…
ತುಮಕೂರು/ ಶಿವಮೊಗ್ಗ: ಕೀಟ ಬಾಧೆ ಮತ್ತು ವಿಪರೀತ ರೋಗದಿಂದ ಶೇ. 30 ರಿಂದ 40 ರಷ್ಟು ಬೆಳೆ ನಾಶವಾಗಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ತೆಂಗಿನ ಇಳುವರಿ ಕಡಿಮೆ ಕಾರಣ ತೆಂಗಿನಕಾಯಿ ಹಾಗೂ ಕೊಬರಿ ಬೆಲೆ ಏರಿಕೆ ಸಾಧ್ಯತೆ ಇದೆ. ತೆಂಗಿಗೆ ಮಸಿ ರೋಗ, ಕಪ್ಪು ತಲೆ ಹುಳು, ಬಿಳಿ ನೊಣ, ಕೆಂಪು ಮೂತಿ ಹುಳು, ಗೆದ್ದಲು ಕಾಟದಿಂದ ತೆಂಗಿನ ತೋಟಗಳು ಈಗ ನಾಶದ ಭೀತಿಗೆ ತಲುಪಿವೆ. ಸಂಶೋಧನೆ ಪ್ರಕಾರ ತೆಂಗಿನ ಎಣ್ಣೆ ಆರೋಗ್ಯಕ್ಕೆ ಉತ್ತಮವಾಗಿದೆ. ಸರ್ಕಾರ ಶೇ. 90 ರ ಸಹಾಯ ಧನದಡಿ ತೆಂಗಿನ ಎಣ್ಣೆಯನ್ನು ಪಡಿತರದಾರರಿಗೆ ಪೂರೈಸಬೇಕು. ಜತೆಗೆ ಶಾಲೆಗಳಲ್ಲಿ ಬಿಸಿ ಊಟ ತಯಾರಿಕೆಗೆ ತೆಂಗಿನ ಎಣ್ಣೆ ಬಳಸಲು ಕ್ರಮಕೈಗೊಳ್ಳಬೇಕು ರೈತರು ಮನವಿ ಮಾಡಿದ್ದಾರೆ. ಅತಿ ಸಣ್ಣ ರೈತರು ತೆಂಗು ಬೆಳೆದಿದ್ದಾರೆ. ಆದರೆ ಅವರಿಂದ ರಸಗೊಬ್ಬರ, ಕೀಟ ಬಾಧೆ, ರೋಗ ಕಡಿಮೆ ಮಾಡುವ ಔಷಧಿ ಸಿಂಪಡಿಸಲು ಕಷ್ಟಕರವಾಗಿರುತ್ತದೆ. ಸರ್ಕಾರ ತೆಂಗು ಬೆಳೆಗಾರರಿಗೆ ಪೋಷಕಾಂಶ ನೀಡುವುದು, ರೋಗ ನಿಯಂತ್ರಣ ಮಾಡುವ…
ಬೆಂಗಳೂರ: ಗೃಹಲಕ್ಷ್ಮಿ ಯೋಜನೆ ಸೌಲಭ್ಯವು ಫಲಾನುಭವಿಗಳಿಗೆ ಮಾತ್ರ ತಲುಪುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರ ಬಯೋ ಮೆಟ್ರಿಕ್ ಹಾಗೂ ಫೇಸ್ ಅಥೆಂಟಿಕೇಶನ್ ಮೂಲಕ ಸಮಗ್ರ ಮರುಪರಿಶೀಲನೆ ನಡೆಸಲು ಆದೇಶ ಹೊರಡಿಸಿದೆ. ಯೋಜನೆಯಡಿ 2023ರ ಆಗಸ್ಟ್‌ನಿಂದ ಇದುವರೆಗೆ 1.24 ಕೋಟಿ ಫಲಾನುಭವಿಗಳಿಗೆ 32 ಕಂತುಗಳಲ್ಲಿ ಒಟ್ಟು ₹76,951.13 ಕೋಟಿ ಧನಸಹಾಯ ವಿತರಿಸಲಾ ಗಿದೆ. ಆದರೆ ಈ ಅವಧಿಯಲ್ಲಿ ಕೆಲ ಫಲಾನುಭವಿಗಳು ಮೃತಪಟ್ಟಿರುವುದು, ವಲಸೆ ಹೋಗಿರುವುದು ಹಾಗೂ ಫಲಾನುಭವಿಗಳು ಅಥವಾ ಅವರ ಪತಿ ಆದಾಯ ತೆರಿಗೆ ಮತ್ತು ಜಿಎಸ್‌ಟಿ ವ್ಯಾಪ್ತಿಗೆ ಬಂದಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಹಿನ್ನೆಲೆಯಲ್ಲಿ ಅನರ್ಹರನ್ನು ಕೈಬಿಟ್ಟು ಅರ್ಹರಿಗೆ ಮಾತ್ರ ಸೌಲಭ್ಯ ಮುಂದುವರಿಸಲು ಸುಮಾರು ₹20 ಕೋಟಿ ವೆಚ್ಚದಲ್ಲಿ ಮರುಪರಿಶೀಲನಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ತಿಳಿಸಿದ್ದಾರೆ. ಮನೆ ಮನೆ ಸರ್ವೇ: ಮನೆಗೆ ಬರ್ತಾರೆ ಸಿಬ್ಬಂದಿ! ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆ.30ರಿಂದ 1 ತಿಂಗಳ ಅವಧಿಯಲ್ಲಿ ಮನೆಮನೆಗೆ ಭೇಟಿ ನೀಡಿ ಪರಿಶೀಲಿಸಲಾಗುವುದು.…
ಬೆಂಗಳೂರು: ಎಲ್‌ಪಿಜಿ ಸಿಲಿಂಡರ್ ಗೆ ಸಂಬಂಧಿಸಿದ ಇ-ಕೆವೈಸಿ ಪ್ರಕ್ರಿಯೆಗೆ ಆಗಸ್ಟ್ 31ರ ಸೋಮವಾರ ಕೊನೆಯ ದಿನವಾಗಿದ್ದು, ಅವಧಿ ಮುಗಿಯುವುದರ ಒಳಗಾಗಿ ಗ್ರಾಹಕರು ಅದನ್ನು ಪೂರ್ಣಗೊಳಿಸಿಕೊಳ್ಳಬೇಕೆಂದು ಈ ಮೂಲಕ ತಿಳಿಸಲಾಗಿದೆ. ಎಲ್‌ಪಿಗೆ ಸಬ್ಸಿಡಿ ಮುಂದುವರಿಯಬೇಕಾದರೆ ಇ-ಕೆವೈಸಿ ಕಡ್ಡಾಯ. ಒಂದು ವೇಳೆ ಆಗಸ್ಟ್ 31ರ ಒಳಗಾಗಿ ಗ್ರಾಹಕರು ಆಧಾರ್ ಜೋಡಣೆ ಮಾಡದಿದ್ದಲ್ಲಿ ಕೇಂದ್ರ ಸರ್ಕಾರದ ಉಜ್ವಲ ಯೋಜನೆಯಿಂದ ಲಭ್ಯವಾಗುವ ಸಬ್ಸಿಡಿಯಿಂದ ವಂಚಿತರಾಗುತ್ತಾರೆ ಎನ್ನುವ ಎಚ್ಚರಿಕೆಯನ್ನು ತೈಲ ಕಂಪನಿಗಳು ನೀಡಿವೆ. ಈ ಹಿನ್ನೆಲೆಯಲ್ಲಿ ಕಳೆದ ಎರಡು ವಾರಗಳಿಂದ ಗ್ಯಾಸ್ ಏಜೆನ್ಸಿಗಳ ಮುಂದೆ ಜನರು ಸಾಲುಗಟ್ಟಿ ನಿಂತು ಇ-ಕೆವೈಸಿ ಮಾಡಿಸಿಕೊಳ್ಳುತ್ತಿದ್ದಾರೆ ಎನ್ನುವ ಸಂಗತಿ ತಿಳಿದುಬಂದಿದೆ. ಪ್ರಸ್ತುತ 14.2ಕೆಜಿ ಗೃಹಬಳಕೆ ಸಿಲಿಂಡರ್ ಗೆ 945ರೂಪಾಯಿ ಬೆಲೆ ಇದ್ದು, ಇ-ಕೆವೈಸಿ ಮಾಡಿಸಿಕೊಂಡಲ್ಲಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ 300ರೂಪಾಯಿಗಳಷ್ಟು ಸಬ್ಸಿಡಿ ದೊರೆಯಲಿದೆ. ಹೀಗಾಗಿ ಸರ್ಕಾರವು ನೀಡಿರುವ ಗಡುವನ್ನು ಉಪಯೋಗಿಸಿಕೊಂಡು ಗ್ರಾಹಕರು ಇ-ಕೆವೈಸಿ ಅನ್ನು ಪೂರ್ಣಗೊಳಿಸಿಕೊಳ್ಳಬೇಕು, ಗಡುವು ಮುಗಿದ ಬಳಿಕ ಇದಕ್ಕೆ ಮತ್ತೊಮ್ಮೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಗೃಹಲಕ್ಷ್ಮೀ ಫಲಾನುಭವಿಗಳ ಪಟ್ಟಿ ಮತ್ತೊಮ್ಮೆ…
ಹೊಸ ನಗರ: ಕಸ್ತೂರಿ ರಂಗನ್ ವರದಿ ಜಾರಿ ನೀತಿಯನ್ನು ವಿರೋಧಿಸಿ ಸಹಕಾರ ನಾಯಕರು ಆದ ಡಾ.ಆರ್ ಎಂ ಮಂಜುನಾಥಗೌಡ ನೇತೃತ್ವದಲ್ಲಿ ಕಾರಣಗಿರಿಯಿಂದ ಹೊಸನಗರದವರೆಗೆ ಪಾದಯಾತ್ರೆಗೆ ಭಾರೀ ಜನ ಸ್ಪಂದನೆ ವ್ಯಕ್ತವಾಗಿದೆ. ಪ್ರತಿಭಟನೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ,ಎಂಎಡಿಬಿ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ, ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ ಸೇರಿದಂತೆ ಹಲವಾರು ನಾಯಕರು ಭಾಗಿಯಾದರು. ಮಲೆನಾಡಿನ ಈ ಜ್ವಲoತ ಸಮಸ್ಯೆ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಸಾವಿರಾರು ಜನ ಭಾಗಿಯಾಗಿದ್ದರು. ಕೇಂದ್ರ ಸರ್ಕಾರವು ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಹೊರಡಿಸಿರುವ ಅಧಿ ಸೂಚನೆಯನ್ನು ಕುರಿತು ವಿರೋಧ ವ್ಯಕ್ತಪಡಿಸಿ ಹೊಸನಗರ ತಾಲ್ಲೂಕು ಪಶ್ಚಿಮ ಘಟ್ಟ ರೈತ ಸಹಕಾರಿ ವೇದಿಕೆ ಈ ಪ್ರತಿಭಟನೆಗೆ ಕರೆ ನೀಡಿತ್ತು. ಪಶ್ಚಿಮ ಘಟ್ಟ ರೈತ ಸಹಕಾರಿ ವೇದಿಕೆ ಶಿವಮೊಗ್ಗದ ಅಧ್ಯಕ್ಷರಾದ ಆರ್.ಎಂ. ಮಂಜುನಾಥಗೌಡ ಮತ್ತು ಸಂಚಾಲಕರಾದ ಬಿ.ಆರ್. ಜಯಂತ್ ಅವರ ನೇತೃತ್ವದಲ್ಲಿ ಮಲೆನಾಡು ಪ್ರದೇಶ ಮತ್ತು ರೈತರ ರಕ್ಷಣೆಯನ್ನು ಒಳಗೊಂಡಂತೆ ಹಲವಾರು ಅಂಶಗಳನ್ನು ಆಧರಿಸಿ ಕಾರಣಗಿರಿ ಶ್ರೀಸಿದ್ಧಿವಿನಾಯಕ ದೇವಸ್ಥಾನದಿಂದ ಪಾದಯಾತ್ರೆ…
ಕಠ್ಮಂಡು: ನೇಪಾಳ ಟಿಬೇಟ್ ಗಡಿ ಪ್ರದೇಶದಲ್ಲಿ ಭೀಕರ ಪ್ರವಾಹ ಸಂಭವಿಸಿದ್ದು, ಜಗತ್ತಿನ ಹಲವು ದೇಶಗಳಲ್ಲಿ ಆತಂಕವನ್ನು ಸೃಷ್ಟಿಸಿದೆ. ಹಲವು ದೇಶಗಳ ಸಾವಿರಾರು ಪ್ರವಾಸಿಗರು ಇಲ್ಲಿ ಸಿಲುಕಿದ್ದಾರೆ. ಭಾರತ ಸೇರಿ ಕನ್ನಡಿಗರು ಕೂಡ ಅಪಾಯದಲ್ಲಿದ್ದಾರೆ. ಎಲ್ಲಿ ನೋಡಿದರೂ ಹೆಣಗಳ ರಾಶಿ. ಮುಳುಗಿ ಕೆಸರಲ್ಲಿ ಸಿಲುಕಿದ ಊರುಗಳು ಕಾಣುತ್ತಿವೆ. ಪ್ರವಾಹ ಮತ್ತು ಹಿಮಬಂಡೆ ಕುಸಿತದ ಪರಿಣಾಮದಿಂದಾಗಿ ಸುಮಾರು 350 ಮಂದಿ ಸಾವನ್ನಪ್ಪಿರುವ ಕುರಿತು ಮಾಹಿತಿ ಲಭಿಸಿದೆ. ಅಲ್ಲದೆ 1500 ಜನ ನಾಪತ್ತೆ ಆಗಿದ್ದಾರೆ ಎಂದು ಸಂಬಂಧಿತ ಅಧಿಕಾರಿಗಳು ತಿಳಿಸಿದ್ದಾರೆ. ಪ್ರವಾಹದಿಂದಾಗಿ ಹಾನಿಗೊಳಗಾದ ಪ್ರದೇಶಗಳಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದ್ದು, ಮಳೆಯ ತೀವ್ರತೆ ಹೆಚ್ಚಾದಲ್ಲಿ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗಬಹುದು ಎನ್ನುವಂತಹ ಭಯದ ವಾತಾವರಣ ಸೃಷ್ಟಿಯಾಗಿದೆ. ಹೀಗಾಗಿ ರಕ್ಷಣಾ ತಂಡಗಳು ಹೆಚ್ಚಿನ ಮತ್ತು ವಿಶೇಷ ರೀತಿಯ ಎಚ್ಚರಿಕೆಯನ್ನು ವಹಿಸಿ ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ. ಮೃತರ ಸಂಖ್ಯೆ ಕೂಡ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎನ್ನುವಂತಹ ಆತಂಕಕಾರಿ ವರದಿ ಹೊರಬಿದ್ದಿದೆ. ಪ್ರವಾಸ, ಉದ್ಯೋಗ, ಆಪ್ತರ ಭೇಟಿ ಸೇರಿದಂತೆ ಹಲವಾರು ಕಾರಣಗಳಿಗಾಗಿ…



