ವಿದ್ಯಾಗಿರಿ: ನವದೆಹಲಿಯಲ್ಲಿ ನಡೆಯಲಿರುವ 2025 ರ ಗಣರಾಜ್ಯೋತ್ಸವ ದಿನದ ಪಥಸಂಚಲನ ಶಿಬಿರಕ್ಕೆ (ಆರ್‌ಡಿಸಿ) ಆಳ್ವಾಸ್ ಶಿಕ್ಷಣ ಸಂಸ್ಥೆಯ ಎನ್‌ಸಿಸಿ ಘಟಕದ ಐದು ಕೆಡೆಟ್‌ಗಳು ಆಯ್ಕೆಯಾಗಿದ್ದಾರೆ. ವಾಯುದಳ ವಿಭಾಗದಲ್ಲಿ ಎನ್‌ಸಿಸಿ ಕರ್ನಾಟಕ ಹಾಗೂ ಗೋವಾ ನಿರ್ದೇಶನಾಲಯವನ್ನು ಪ್ರತಿನಿಧಿಸಲಿರುವ ಹಾರ್ದಿಕ್ ಶೆಟ್ಟಿ, ನಿರೂಪ್ ಎಸ್., ಜೇವಿಟಾ ಪರ್ಲ್ ಹಾಗೂ ಪ್ರಶಸ್ತಿ ಪಾಲ್ಗೊಳ್ಳಲಿದ್ದಾರೆ. ಪ್ರಮುಖವಾಗಿ ಪ್ರಶಸ್ತಿ ಈ ಬಾರಿಯ ಪ್ರಧಾನ ಮಂತ್ರಿ ರ‍್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾಳೆ.ನೌಕಾದಳ ವಿಭಾಗದಲ್ಲಿ 5ನೇ ಕರ್ನಾಟಕ ನೌಕಾ ಘಟಕವನ್ನು ಪ್ರತಿನಿಧಿಸಲಿರುವ ಅಜ್‌ರಾಜ್ ಆಯ್ಕೆಯಾಗಿದ್ದಾರೆ. ಆಳ್ವಾಸ್‌ನಿಂದ ಒಟ್ಟು 49 ಕೆಡೆಟ್‌ಗಳು ಭಾಗಿ. ಇಲ್ಲಿಯವರೆಗೆ ಸಂಸ್ಥೆಯಿAದ 44 ಕೆಡೆಟ್‌ಗಳು ಗಣರಾಜ್ಯೋತ್ಸವ ದಿನದ ಪಥಸಂಚಲನ ಶಿಬಿರದಲ್ಲಿ ಪಾಲ್ಗೊಂಡಿದ್ದು, ಈ ಬಾರಿಯ 5 ಜನರು ಸೇರಿದಂತೆ ಒಟ್ಟು 45 ವಿದ್ಯಾರ್ಥಿಗಳು ಆಳ್ವಾಸ್ ಒಂದೇ ಸಂಸ್ಥೆಯಿOದ ಪಾಲ್ಗೊಳ್ಳುತ್ತಿರುವುದು ಉಲ್ಲೇಖಾರ್ಹ ಸಾಧನೆಯಾಗಿದೆ.ಆಳ್ವಾಸ್ ವಿದ್ಯಾರ್ಥಿಗಳ ಕೊಡುಗೆಆಳ್ವಾಸ್ ಸಂಸ್ಥೆಯಲ್ಲಿ ಇಲ್ಲಿಯವರೆಗೆ 57ಕ್ಕೂ ಅಧಿಕ ಸೇನಾ ಶಿಬಿರಗಳು ನಡೆದಿದ್ದು, ಐದು ಸೇನಾ ನೇಮಕಾತಿ ರ‍್ಯಾಲಿಗಳು, ಅಗ್ನಿಪಥ ನೇಮಕಾತಿ ಪರೀಕ್ಷೆ ಸೇರಿದಂತೆ ಹತ್ತು ಹಲವು ಎನ್‌ಸಿಸಿಯ ಚಟುವಟಿಕೆಗಳು…
Author: Nammur Express Karkala
ಕಾರ್ಕಳ: ಚಿಕ್ಕಮಗಳೂರು ಅಥ್ಲೆಟಿಕ್ಸ್ ಅಸೋಸಿಯೇಷನ್ ಮತ್ತು ತಿಲಕ್ ರೋಡ್ ಫ್ರೆಂಡ್ಸ್, ಕೊಪ್ಪ, ಚಿಕ್ಕಮಗಳೂರು ಇವರ ಸಂಯುಕ್ತಾಶ್ರಯದಲ್ಲಿ ಜ.19 ರಂದು ನಡೆದ ಕೊಪ್ಪ ಮ್ಯಾರಥಾನ್ ನಲ್ಲಿ ಭಾಗವಹಿಸಿದ ನಿಟ್ಟೆ ಕ್ರೀಡಾಪಟುಗಳ ಪೈಕಿ ಮಹಿಳೆಯರ ಮುಕ್ತ 10 ಕಿ.ಮೀ ಓಟದಲ್ಲಿ ನಿಟ್ಟೆಯ ಡಾ.ಎನ್.ಎಸ್.ಎ.ಎಂ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಕಾಂ ವಿದ್ಯಾರ್ಥಿನಿ ನಂದಿನಿ ಜಿ., 15,000/- ರೂ.ಗಳ ನಗದು ಬಹುಮಾನದೊಂದಿಗೆ ಚಿನ್ನದ ಪದಕವನ್ನು ಪಡೆದರು. ಮಹಿಳೆಯರ ಮುಕ್ತ 10 ಕಿ.ಮೀ ಓಟದಲ್ಲಿ ನಿಟ್ಟೆಯ ಡಾ.ಎನ್.ಎಸ್.ಎ.ಎಂ ಪ್ರಥಮ ದರ್ಜೆ ಕಾಲೇಜಿನ 3ನೇ ಬಿಕಾಂ ವಿದ್ಯಾರ್ಥಿನಿ ಪ್ರತೀಕ್ಷಾ ಬೆಳ್ಳಿ ಪದಕ ಹಾಗೂ 10,000 ರೂ.ಗಳ ನಗದು ಬಹುಮಾನ ಪಡೆದರು. ಮಹಿಳೆಯರ ಮುಕ್ತ 20 ಕಿ.ಮೀ ಓಟದಲ್ಲಿ ನಿಟ್ಟೆಯ ಡಾ.ಎನ್.ಎಸ್.ಎ.ಎಂ ಕನ್ನಡ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ದೀಕ್ಷಿತಾ ಕಂಚಿನ ಪದಕ ಹಾಗೂ 5,000 ರೂ.ಗಳ ನಗದು ಬಹುಮಾನ ಪಡೆದರು. ಪುರುಷರ ಮುಕ್ತ 10 ಕಿ.ಮೀ ಓಟದಲ್ಲಿ ನಿಟ್ಟೆಯ ಡಾ. ಎನ್.ಎಸ್.ಎ.ಎಂ ಪಿಯು ಕಾಲೇಜಿನ ಪ್ರಥಮ ಕಾಮರ್ಸ್ ವಿದ್ಯಾರ್ಥಿ…
ನಿಟ್ಟೆ: ಬೆಳಗಾವಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಷ್ಠಿತ ಲೋಕಮಾನ್ಯ ಮ್ಯಾರಥಾನ್ ಕಾರ್ಯಕ್ರಮವನ್ನು ಭಾರತದ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಉದ್ಘಾಟಿಸಿದರು. ಈ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ನಿಟ್ಟೆಯ ವಿದ್ಯಾರ್ಥಿಗಳ ಸಾಧನೆ ಈ ಕೆಳಗಿನಂತಿದೆ.ನಿಟ್ಟೆಯ ಡಾ.ಎನ್.ಎಸ್.ಎ.ಎಂ ಕನ್ನಡ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ದೀಕ್ಷಿತಾ ಗಣಪತಿ ನಾಯ್ಕ್ 17 ವರ್ಷದೊಳಗಿನ ಬಾಲಕಿಯರ 3 ಕಿ.ಮೀ ಓಟದಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ನಿಟ್ಟೆಯ ಡಾ.ಎನ್.ಎಸ್.ಎ.ಎಂ ಪ್ರಥಮ ದರ್ಜೆ ಕಾಲೇಜಿನ 3ನೇ ವರ್ಷದ B.Com ವಿದ್ಯಾರ್ಥಿನಿ ಪ್ರತೀಕ್ಷಾ ಆಚಾರ್ಯ 5 ಕಿ.ಮೀ ಮುಕ್ತ ವಿಭಾಗದಲ್ಲಿ ಬೆಳ್ಳಿ ಪದಕ ಗಳಿಸಿದ್ದಾರೆ. ನಿಟ್ಟೆಯ ಡಾ.ಎನ್.ಎಸ್.ಎ.ಎಂ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ರಕ್ಷಿತ್ ಆರ್.ಬಂಗೇರ 17 ವರ್ಷದೊಳಗಿನ ಬಾಲಕರ 5 ಕಿ.ಮೀ ಓಟದಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.ನಿಟ್ಟೆಯ ಡಾ.ಎನ್.ಎಸ್.ಎ.ಎಂ ಕನ್ನಡ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ದೀಪಿಕಾ 14 ವರ್ಷದೊಳಗಿನ ಬಾಲಕಿಯರ 3 ಕಿ.ಮೀ ಓಟದಲ್ಲಿ 4ನೇ ಸ್ಥಾನ ಪಡೆದಿದ್ದಾರೆ.
ಉಡುಪಿ, ಜನವರಿ 21 (ಕವಾ): ನಗರ ಹಾಗೂ ಗ್ರಾಮೀಣ ಭಾಗದ ಸ್ಥಳೀಯ ಸಂಸ್ಥೆಗಳು ಬೀದಿ ನಾಯಿಗಳ ನಿಯಂತ್ರಣಕ್ಕೆ ಅಗತ್ಯ ಇರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ ಕೆ.ವಿದ್ಯಾಕುಮಾರಿ ಅವರು ಸೂಚನೆ ನೀಡಿದರು.ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಾಣಿ ದಯಾ ಸಂಘದ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ನಾಯಿ ಕಡಿತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಬಗ್ಗೆ ಅನೇಕ ದೂರುಗಳು ಸಹ ಬರುತ್ತಿವೆ. ನಾಯಿಗಳ ಸಂತಾನ ನಿಯಂತ್ರಣ ಶಸ್ತ್ರ ಚಿಕಿತ್ಸೆಗೆ ನಗರ ಹಾಗೂ ಗ್ರಾಮೀಣ ಮಟ್ಟದ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ ಹಾಗೂ ಗ್ರಾಮ ಪಂಚಾಯಿತಿ ಗಳು ಬೀದಿ ನಾಯಿಗಳ ಸಂಖ್ಯೆ ನಿಯಂತ್ರಣಕ್ಕಾಗಿ ಬಜೆಟ್ ನಲ್ಲಿ ಅನುದಾನ ಮಿಸಲಿರಿಸಿ, ಅವುಗಳ ಸಂತಾನ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಸೂಚನೆ ನೀಡಿದರು. ಸ್ಥಳೀಯ ಸಂಸ್ಥೆಗಳು ಪ್ರತೀ ಮೂರು ತಿಂಗಳಿಗೊಮ್ಮೆ ಬೀದಿ ನಾಯಿಗಳ ಗಣತಿ ಕಾರ್ಯ ಕೈಗೊಳ್ಳಬೇಕು. ಒಂದೊಮ್ಮೆ…
ಉಡುಪಿ, ಜನವರಿ 21 (ಕವಾ): 12 ನೇ ಶತಮಾನವು ವಚನ ಸಾಹಿತ್ಯದಲ್ಲಿ ಬಹು ಮುಖ್ಯವಾದ ಕಾಲಘಟ್ಟವಾಗಿದ್ದು, ವಚನಕಾರರು ತಮ್ಮ ವಚನಗಳ ಮೂಲಕ ಸಮಾಜದಲ್ಲಿದ್ದ ತಾರತಮ್ಯವನ್ನು ಹೋಗಲಾಡಿಸಿ, ಸಮಾನತೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಅಜ್ಜರಕಾಡುವಿನ ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪಿ.ಜಿ.ಎ.ವಿ. ಹಾಲ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಶ್ರೀ ಶಿವಯೋಗಿ ಸಿದ್ದರಾಮೇಶ್ವರ, ಶ್ರೀ ಮಹಾಯೋಗಿ ವೇಮನ ಮತ್ತು ಶ್ರೀಅಂಬಿಗರ ಚೌಡಯ್ಯರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಹನೀಯರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತಿದ್ದರು. ವಚನಕಾರರು ಜನರಲ್ಲಿ ವೈಚಾರಿಕ ಪ್ರಜ್ಞೆ ಮೂಡಿಸುವುದರೊಂದಿಗೆ ಸಮಾಜದಲ್ಲಿನ ಮೌಢ್ಯ, ಮೇಲು-ಕೀಳು, ಶ್ರೀಮಂತ-ಬಡವ, ಕಂದಾಚಾರದ ವಿರುದ್ಧ ಹೋರಾಡಿದ್ದಾರೆ. ಇಂತಹ ವಚನಕಾರರ ಜಯಂತಿಗಳನ್ನು ಆಚರಿಸುವ ಮೂಲಕ ಅವರುಗಳ ಚಿಂತನೆಗಳನ್ನು, ತತ್ವ ಆದರ್ಶಗಳನ್ನು ಜೀವನದಲ್ಲಿ…
ಕಾರ್ಕಳ: : ವಿದ್ಯಾರ್ಥಿಯೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜನವರಿ 19ರಂದು ಕಾರ್ಕಳ ಪುರಸಭಾ ವ್ಯಾಪ್ತಿಯ ಮೀನಗುಂಡಿ ಕಾಂಪೌಂಡ್ ಎಂಬಲ್ಲಿ ವರದಿಯಾಗಿದೆ. ವೆಂಕಟೇಶ ಹೆಗ್ಡೆ (22) ಆತ್ಮಹತ್ಯೆ ಶರಣಾದ ವಿದ್ಯಾರ್ಥಿ. ಮಂಗಳೂರು ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಪ್ರಥಮ ವರ್ಷದ ಎಂಬಿಎ ಓದುತ್ತಿರುವ ವೆಂಕಟೇಶ್ ತಂದೆಯ ಬಳಿ ವಿದ್ಯಾಭ್ಯಾಸ ಮಾಡಲು ತನಗೆ ಕಷ್ಟವಾಗುತ್ತಿದೆ ಎಂದು ಹೇಳಿಕೊಂಡಿದ್ದು ಸುಮಾರು 10 ದಿನಗಳಿಂದ ಮೌನವಾಗಿದ್ದ. ಇದೇ ಕಾರಣದಿಂದ ಮನನೊಂದು ಜನವರಿ 19ರ ರಾತ್ರಿ ಮನೆಯ ಹಿಂಬದಿಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಕಾರ್ಕಳ: ತಾಲೂಕಿನ ಸಾಣೂರು ಯುವಕ ಮಂಡಲವು ಕೇವಲ ವಾರ್ಷಿಕೋತ್ಸವ ಮನೋರಂಜನೆಗೆ ಮಾತ್ರ ಸೀಮಿತವಾಗದೆ ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಸೇವಾ ಕಾರ್ಯಗಳ ಮೂಲಕ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ್ ಶೆಟ್ಟಿ ಹೇಳಿದರು. ಅವರು ಸಾಣೂರು ಪಠೇಲ್ ಮುದ್ದಣ್ಣ ಶೆಟ್ಟಿ ಸ್ಮಾರಕ ಜ್ಯೋತಿ ಕಲಾ ಮಂಟಪದಲ್ಲಿ ಶನಿವಾರ ನಡೆದ ಸಾಣೂರು ಯುವಕ ಮಂಡಲದ 71ನೇ ವಾರ್ಷಿಕೋತ್ಸವ ಸಂಭ್ರಮ ಹಾಗೂ ಶ್ರೀ ವಾಣೀ ಯಕ್ಷಗಾನ ಸಭಾ ಯುವಕ ಮಂಡಲ ಇದರ 54ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ತುಳುನಾಡಿನ ಸಂಸ್ಕೃತಿ ಸಭ್ಯತೆ ನಮ್ಮ ಪರಿಸರ ಉಳಿಯಬೇಕಾದರೆ ಯುವಕರು ಜಾಗೃತರಾಗಬೇಕು. ಯುವಕರ ನೇತೃತ್ವದಲ್ಲಿ ತುಳುನಾಡಿನ ಸಾರ್ವಭೌಮತೆ ಉಳಿಸಬೇಕಾಗಿದೆ ಎಂದರು. ಬರೋಡದ ಉದ್ಯಮಿ ಶಶಿಧರ್ ಶೆಟ್ಟಿ ಅವರು ಸಾಣೂರು ಗ್ರಾಮ ವ್ಯಾಪ್ತಿಯ ಬಡ ಕುಟುಂಬಗಳಿಗೆ ನೆರವಾಗುವ ಆರೋಗ್ಯ ನಿಧಿ ಯೋಜನೆಗೆ ತಮ್ಮ ದೇಣಿಗೆಯನ್ನು ನೀಡುವುದರ ಮೂಲಕ ಆರೋಗ್ಯ ನಿಧಿ ಯೋಜನೆಗೆ ಚಾಲನೆ ನೀಡಿದರು. ಶಾಶ್ವತ ವಿದ್ಯಾ ನಿಧಿ ಶೈಕ್ಷಣಿಕ ಯೋಜನೆ ಅಡಿಯಲ್ಲಿ ಸುಮಾರು 97,000…
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ತುಮಕೂರು ಜಿಲ್ಲಾ ಘಟಕದ ಸಹಯೋಗದೊಂದಿಗೆ ತುಮಕೂರಿನಲ್ಲಿ ರವಿವಾರ ನಡೆದ 39ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಲೋಕೇಶ್, ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಉಡುಪಿ ಜಿಲ್ಲಾ ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ಮೊದಲಾದವರು ಉಪಸ್ಥಿತರಿದ್ದರು.
ಕರ್ನಾಟಕ ಕ್ರೀಡಾಕೂಟ ಸಮಾರೋಪ : ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಿ ಉಡುಪಿ, ಜನವರಿ 20 (ಕವಾ): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಜಿಲ್ಲಾಡಳಿತ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟ-2025 ರ ಸಮಾರೋಪ ಸಮಾರಂಭವು ಜನವರಿ 23 ರಂದು ಸಂಜೆ 5 ಗಂಟೆಗೆ ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಸದರಿ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ಘನವೆತ್ತ ರಾಜ್ಯಪಾಲರಾದ ಗೌರವಾನ್ವಿತ ಥಾವರ್ ಚಂದ್ ಗೆಹೋಟ್, ರಾಜ್ಯದ ಗೃಹ ಸಚಿವರಾದ ಡಾ.ಜಿ ಪರಮೇಶ್ವರ ಹಾಗೂ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ಆಳ್ವಾಸ್ ಮೂಡಬಿದಿರೆ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಷ್ಟಿçÃಯ ಮತದಾರರ ದಿನಾಚರಣೆ ಉಡುಪಿ, ಜನವರಿ…
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ತುಮಕೂರು ಜಿಲ್ಲಾ ಘಟಕದ ಸಹಯೋಗದೊಂದಿಗೆ ತುಮಕೂರಿನಲ್ಲಿ ರವಿವಾರ ನಡೆದ 39ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಲೋಕೇಶ್, ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಉಡುಪಿ ಜಿಲ್ಲಾ ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ಮೊದಲಾದವರು ಉಪಸ್ಥಿತರಿದ್ದರು.