Author: Nammur Express Admin

ಉಡುಪಿ ನಗರಸಭೆ ನೂತನ ಸಾರಥಿಗಳು! – ಅಧ್ಯಕ್ಷರಾಗಿ ಬಿಜೆಪಿಯ ಪ್ರಭಾಕರ ಪೂಜಾರಿ, ಉಪಾಧ್ಯಕ್ಷೆಯಾಗಿ ರಜನಿ ಹೆಬ್ಬಾರ್ ಆಯ್ಕೆ – ನೂತನ ಸಾರಥಿಗಳಿಗೆ ಅಭಿನಂದನೆಗಳು NAMMUR EXPRESS NEWS ಉಡುಪಿ: ಉಡುಪಿ ನಗರಸಭೆ ನೂತನ ಅಧ್ಯಕ್ಷರಾಗಿ ಬಿಜೆಪಿಯ ಪ್ರಭಾಕರ ಪೂಜಾರಿ ಹಾಗೂ ಉಪಾಧ್ಯಕ್ಷೆಯಾಗಿ ರಜನಿ ಹೆಬ್ಬಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲು ನಿಗದಿಪಡಿಸಲಾಗಿತ್ತು. ಈ ಎರಡು ಸ್ಥಾನಗಳಿಗೆ ಕ್ರಮವಾಗಿ ಗುಂಡಿಬೈಲು ವಾರ್ಡ್ ನ ಪ್ರಭಾಕರ ಪೂಜಾರಿ ಹಾಗೂ ಒಳಕಾಡು ವಾರ್ಡ್ ನ ರಜನಿ ಹೆಬ್ಬಾರ್ ನಾಮಪತ್ರ ಸಲ್ಲಿಸಿದ್ದರು. ಯಾವುದೇ ಪ್ರತಿಸ್ಪರ್ಧಿ ಇಲ್ಲದ ಕಾರಣ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಿ ಚುನಾವಣಾಧಿಕಾರಿ ಘೋಷಿಸಿದರು. ಪ್ರಭಾಕರ ಪೂಜಾರಿ ಗುಂಡಿಬೈಲು ವಾರ್ಡ್ ನಿಂದ ಮೂರು ಬಾರಿ ಸದಸ್ಯರಾಗಿ ಆಯ್ಕೆಯಾಗಿದ್ದು, ರಜಿನಿ ಹೆಬ್ಬಾರ್ ಒಳಕಾಡು ವಾರ್ಡ್ ನಿಂದ ಮೊದಲ ಾರಿಗೆ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಒ್ಟು 35 ಸಂಖ್ಯಾಬಲ ಇರುವ ನಗರಸಭೆಯಲ್ಲಿ ಬಿಜೆಪಿ 32 ಹಾಗೂ ಕಾಂಗ್ರೆಸ್ 3…

Read More

ಸರ್ಕಾರದ ಎಲ್ಲಾ ಬೋರ್ಡ್ ಕನ್ನಡ ಕಡ್ಡಾಯ – ತೀರಾ ಅವಶ್ಯಕತೆ ಇದ್ರೆ ಮಾತ್ರ ಆಂಗ್ಲ ಬಳಕೆಗೆ ಅನುಮತಿ – ಏನಿದು ಹೊಸ ಆದೇಶ? ಯಾಕೆ ಹೊಸ ಆದೇಶ? NAMMUR EXPRESS NEWS ಬೆಂಗಳೂರು: ಸರ್ಕಾರದ ಎಲ್ಲಾ ಇಲಾಖೆಗಳಲ್ಲಿನ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸುವ ಕುರಿತು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿರುತ್ತದೆ. ರಾಜ್ಯದಲ್ಲಿ ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಅಧಿನಿಯಮ, 2024 ಜಾರಿಗೆ ಬಂದಿದೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022ರನ್ವಯ ಕನ್ನಡ ಭಾಷೆಯು ರಾಜ್ಯದ ಹಾಗೂ ಸ್ಥಳೀಯ ಪ್ರಾಧಿಕಾರದ ಅಧಿಕೃತ ಭಾಷೆಯಾಗಿದೆ. ಆದುದರಿಂದ, ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಇಲಾಖೆಗಳ ಅಧೀನದಲ್ಲಿ ಬರುವ ಎಲ್ಲಾ ಕ್ಷೇತ್ರ ಇಲಾಖೆಗಳಲ್ಲಿ, ಆಯುಕ್ತಾಲಯ, ನಿರ್ದೇಶನಾಲಯ, ನಿಗಮ, ಮಂಡಳಿ, ಪ್ರಾಧಿಕಾರಗಳ ಆವರಣಗಳಲ್ಲಿನ ಹೆಸರು, ಪದನಾಮ, ಸೇವಾ ಅವಧಿಯ ನಾಮಫಲಕಗಳು, ಮಾರ್ಗಗಳ ಸೂಚನಾ ಫಲಕಗಳು, ಇನ್ನಿತರೆ…

Read More

ಈ ವರ್ಷ ಪರಿಸರ ಸ್ನೇಹಿ ಗಣೇಶ ಹಬ್ಬ! – ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಬಳಕೆಗೆ ಆದೇಶ – ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಮೂರ್ತಿಗಳ ನಿಷೇಧ – ಗಣೇಶ ಹಬ್ಬಕ್ಕೆ ಏನೇನು ನಿಯಮ? ಇಲ್ಲಿದೆ ಮಾಹಿತಿ NAMMUR EXPRESS NEWS ಬೆಂಗಳೂರು: ಗಣೇಶ ಹಬ್ಬದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಬಳಕೆ ಮತ್ತು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಮೂರ್ತಿಗಳ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸರ್ಕಾರ ಆದೇಶ ಹೊರಡಿಸಿದೆ. ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಈ ಬಗ್ಗೆ ಎಲ್ಲಾ ಜಿಲ್ಲಾಡಳಿತಗಳಿಗೆ ಸೂಚಿಸಿದ್ದಾರೆ. ಆದೇಶವನ್ನು ಉಲ್ಲಂಘಿಸುವ ಮತ್ತು ಜಲಮೂಲಗಳನ್ನು ಕಲುಷಿತಗೊಳಿಸುವವರ ವಿರುದ್ಧ ವಾಯು ಮತ್ತು ಜಲ ಕಾಯ್ದೆಯಡಿ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಲಾಗುವುದು. ಇಲ್ಲಿಯವರೆಗೆ ಕೇವಲ ನಿರ್ದೇಶನಗಳನ್ನು ನೀಡಲಾಗುತ್ತಿದೆ. ಆದರೆ ಈಗ ಸಾಕಷ್ಟು ಮುಂಚಿತವಾಗಿಯೇ ಸರ್ಕಾರಿ ಆದೇಶ ಹೊರಡಿಸಲಾಗಿದೆ ಎಂದಿದ್ದಾರೆ. ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರೊಂದಿಗೆ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದ ಖಂಡ್ರೆ, ಪರಿಸರ ಸ್ನೇಹಿ ವಿಗ್ರಹಗಳನ್ನು…

Read More

12 ವರ್ಷಗಳ ಬಳಿಕ ರಬ್ಬರ್ ಬೆಳೆ ಬೆಲೆ ಏರಿಕೆ! – ರಬ್ಬರ್ ಬೆಲೆ ದಾಖಲೆಯ ಏರಿಕೆ: ಬೆಳೆಗಾರರಿಗೆ ಖುಷಿ – ಕರ್ನಾಟಕದ ಕರಾವಳಿ, ಮಲೆನಾಡು ಭಾಗದಲ್ಲಿ ಅತೀ ಹೆಚ್ಚು ಬೆಳೆ NAMMUR EXPRESS NEWS ಮಂಗಳೂರು: ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಬೆಳೆಯುತ್ತಿದ್ದ ರಬ್ಬರ್ ಬೆಲೆ 12 ವರ್ಷಗಳ ನಂತರ ದಾಖಲೆಯ ಗರಿಷ್ಠ ಮಟ್ಟದಲ್ಲಿ ಏರಿಕೆ ಕಂಡಿದೆ. ರಬ್ಬರ್ ಬೋರ್ಡ್ ಕೆಜಿಗೆ 235 ರೂ. ಬೆಲೆ ನಿಗದಿಪಡಿಸಿದೆ. ಈ ಮೂಲಕ ರೈತರಲ್ಲಿ ಹೊಸ ಭರವಸೆ ಮೂಡಿದೆ. ಕಾಸರಗೋಡು ಸೇರಿದಂತೆ ಕೇರಳದ ಬಹುತೇಕ ಪ್ರದೇಶಗಳಲ್ಲಿ 237 ರಿಂದ 241 ರೂ.ಗಳಿಗೆ ಮಾರಾಟವಾಗುತ್ತಿದೆ. ಕೆಲವು ವ್ಯಾಪಾರಿಗಳು 241 ರೂ.ಗೆ ಮಾರಾಟ ಮಾಡಿದ್ದಾರೆ. 2011-12ರಲ್ಲಿ ರಬ್ಬರ್ ಶೀಟ್‌ ಗಳ ಬೆಲೆ ಕಿಲೋಗೆ 283 ರೂ. ತಲುಪಿತ್ತು. ಬಳಿಕ ಬೆಲೆ ಇಳಿದಿತ್ತು. ರಬ್ಬರ್ ಇಲ್ಲ: ಪೂರೈಕೆ ಕೊರತೆ ಅತಿವೃಷ್ಟಿ ಹಾಗೂ ಹವಾಮಾನ ವೈಪರೀತ್ಯದಿಂದ ಮಾರುಕಟ್ಟೆಯಲ್ಲಿ ರಬ್ಬರ್ ಕೊರತೆ ಉಂಟಾಗಿದೆ. ಕಳೆದ ಕೆಲವು ದಿನಗಳಿಂದ ಕೆಜಿಗೆ 2 ರಿಂದ…

Read More

ಕರಾವಳಿಯಲ್ಲಿ ಭಾರೀ ಮಳೆ! – ಬೆಳಿಗ್ಗೆಯಿಂದಲೇ ಹಲವೆಡೆ ಭಾರೀ ಮಳೆ – ಆ. 27ರವರೆಗೆ ಮಳೆ ಸಾಧ್ಯತೆ – ಕರಾವಳಿ ಜಿಲ್ಲೆಗಳ ಜನರೇ ಎಚ್ಚರ ಎಚ್ಚರ NAMMUR EXPRESS NEWS ಮಂಗಳೂರು/ಉಡುಪಿ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಬೆಳಿಗ್ಗೆಯಿಂದಲೇ ಭಾರೀ ಮಳೆಯಾಗುತ್ತಿದೆ. ಕಾರ್ಕಳ, ಹೆಬ್ರಿ, ಮೂಡಬಿದ್ರೆ, ಬೆಳ್ತಂಗಡಿ ಸೇರಿ ಅನೇಕ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಜುಲೈ ಮಧ್ಯದ ನಂತರ ಮಳೆ ಎಲ್ಲೆಡೆ ಕಾಣೆಯಾಗಿದ್ದು, ಇದೀಗ ಮತ್ತೆ ಮಳೆ ಶುರುವಾಗಿದೆ. ಕರ್ನಾಟಕದ ಉಳಿದ ಜಿಲ್ಲೆಗಳು ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಆ.24ರಂದು ಕೂಡ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಭಾರಿ ಮಳೆ ಸಾಧ್ಯತೆಯಿದೆ. ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಹವಾಮಾನ ಆ.27ರವರೆಗೆ ಇರಲಿದೆ ಎಂದು ಮಾಹಿತಿ ನೀಡಿದೆ.

Read More

ಹಿಂದೂ ಯುವತಿ ಅತ್ಯಾಚಾರ ಆರೋಪ: ಕಾರ್ಕಳ ಪ್ರಕ್ಷುಬ್ಧ! – ಹಿಂದೂ ಯುವತಿಯ ಕರೆದೊಯ್ದ ಮುಸ್ಲಿಂ ಯುವಕ – ಕಾರನ್ನು ಅಡ್ಡಗಟ್ಟಿ ಹಿಡಿದ ಹಿಂದೂ ಕಾರ್ಯಕರ್ತರು – ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ:ಗಾಂಜಾ ನೀಡಿ ಅತ್ಯಾಚಾರ ಆರೋಪ NAMMUR EXPRESS NEWS ಕಾರ್ಕಳ: ಉಡುಪಿ ಜಿಲ್ಲೆ ಕಾರ್ಕಳದ ಕುಕ್ಕುಂದೂರು ಗ್ರಾಮದ 21ರ ವಯಸ್ಸಿನ ಯುವತಿಗೆ ಅನ್ಯಕೋಮಿನ ಮೂವರು ಯುವಕರು ಅಮಲು ಪದಾರ್ಥ ನೀಡಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು ಕಾರ್ಕಳ ಪ್ರಕ್ಷುಬ್ಧಗೊಂಡಿದೆ. ಸಂತ್ರಸ್ತೆ ಯುವತಿ ಕುಕ್ಕುಂದೂರಿನ ಮನೆ ಪಕ್ಕದ ಸ್ಥಳಕ್ಕೆ ಕರೆದೊಯ್ದು ಹಾಡಿಯಲ್ಲಿ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ. ಆರಂಭದಲ್ಲಿ ಯುವತಿಗೆ ಮದ್ಯ ಹಾಗೂ ಇತರ ಮಾದಕ ಪದಾರ್ಥ ನೀಡಿ ಓರ್ವ ಅತ್ಯಾಚಾರ ಎಸಗಿದ್ದು, ಬಳಿಕ ಮತ್ತಿಬ್ಬರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ. ಯುವತಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾಳೆ ಎಂದು ತಿಳಿದು ಬಂದಿದೆ. ಬಜರಂಗದಳ ರಾಜ್ಯ ಸಂಚಾಲಕ ಸುನಿಲ್ ಕೆ.ಆರ್. ಅವರು ಘಟನೆಯ್ು ಖಂಡಿಸಿದ್ದು ತಕ್ಷಣ…

Read More

ಈ ದಿನದ ರಾಶಿ ಭವಿಷ್ಯ ಹೇಗಿದೆ? – ಯಾವ ರಾಶಿಯವರಿಗೆ ಅನುಕೂಲ ? ಯಾವ ರಾಶಿಯವರಿಗೆ ಅನಾನುಕೂಲ ? NAMMUR EXPRESS NEWS ಗ್ರಹಗಳ ಸ್ಥಾನ ಬದಲಾವಣೆಯಿಂದ ಮೇಷದಿಂದ ಮೀನ ರಾಶಿವರೆಗಿನ ಎಲ್ಲಾ ರಾಶಿಯವರಿಗೆ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಯಾವ ರಾಶಿಯವರಿಗೆ ಅದೃಷ್ಟ? ಯಾವ ರಾಶಿಯವರು ಎಚ್ಚರದಿಂದಿರಬೇಕು? ** ಮೇಷ ರಾಶಿ : ಇಂದು ಆರ್ಥಿಕ ಸಮಸ್ಯೆಗಳಿಂದ ಮುಕ್ತಿ ಸಿಗಲಿದೆ. ಹೊಸ ವ್ಯವಹಾರ ಪ್ರಾರಂಭಿಸಲು ಇದು ಉತ್ತಮ ದಿನ. ಇಂದು ತುಂಬಾ ಬಿಡುವಿಲ್ಲದ ಕೆಲಸವಿರುತ್ತದೆ. ಉದ್ಯೋಗ ಮತ್ತು ವ್ಯವಹಾರದಲ್ಲಿ ಪ್ರಗತಿಯ ಸಾಧ್ಯತೆ ಇರುತ್ತದೆ. ನಿಮ್ಮ ಸಂಗಾತಿಯೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯಿರಿ. ಇಂದು ನೀವು ವಿಶೇಷ ವ್ಯಕ್ತಿಯ ಪ್ರೀತಿಯನ್ನು ಅನುಭವಿಸಬಹುದು. ಆದರೆ ಸಂಬಂಧಕ್ಕೆ ಆತುರಪಡಬೇಡಿ. ** ವೃಷಭ ರಾಶಿ : ಮನಸ್ಸು ಗೊಂದಲಮಯವಾಗಿರುತ್ತದೆ. ಅಜ್ಞಾತ ಭಯವು ನಿಮ್ಮನ್ನು ಕಾಡುತ್ತದೆ. ಹೂಡಿಕೆಯಿಂದ ಆರ್ಥಿಕ ನಷ್ಟದ ಲಕ್ಷಣಗಳಿವೆ. ಕೆಲಸದ ಸವಾಲುಗಳು ಹೆಚ್ಚಾಗುತ್ತವೆ. ಎಲ್ಲಾ ಕೆಲಸಗಳು ಮಧ್ಯತರವಾಗಿ ನಡಯುತ್ತವೆ. ಕೆಲವು ಜನರು ಪೂರ್ವಜರ ಆಸ್ತಿಗೆ ಸಂಬಂಧಿಸಿದಂತೆ…

Read More

ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು! – 1494 ಕೋಟಿ ರೂ ಹಣ ದುರುಪಯೋಗ ಆರೋಪ – ಸಿಎಂ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು NAMMUR EXPRESS NEWS ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ನೀಡಲಾಗಿದೆ. ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ನಲ್ಲಿ ಬಾಕಿ ಉಳಿದಿರುವ 1494 ಕೋಟಿ ರೂ. ಹಣ ದುರುಪಯೋಗದ ಬಗ್ಗೆ ಎಂಎಲ್ಸಿ ಅರುಣ್ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸಿ ರಾಜ್ಯಪಾಲರು ಹೊರಡಿಸಿರೋ ಪ್ರಾಸಿಕ್ಯೂಷನ್ ಸರ್ಕಾರ ಮತ್ತು ಗವರ್ನರ್ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆ. ಪ್ರಾಸಿಕ್ಯೂಷನ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಸಿಎಂಗೆ, ಕೊಂಚ ರಿಲೀಫ್ ಸಿಕ್ಕಿದೆ. ಈ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ನೀಡಲಾಗಿದೆ. ಜಿಲ್ಲಾ ಮತ್ತು ತಾಲೂಕು ಪಂಚಾಯತ್ನಲ್ಲಿ ಬಾಕಿ ಉಳಿದಿರುವ 1494 ಕೋಟಿ ರೂ. ಹಣ ದುರುಪಯೋಗದ ಬಗ್ಗೆ ವಿಧಾನಪರಿಷತ್ ಸದಸ್ಯ ಅರುಣ್ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. 1494 ಕೋಟಿ ರೂ. ಹಣ ಎಲ್ಲಿದೆ,…

Read More

ಟಾಪ್ 4 ನ್ಯೂಸ್ ಮಲ್ನಾಡ್ ಭದ್ರಾವತಿ :ತಂದೆ ಮಾಡಿದ್ದ ಸಾಲಕ್ಕೆ ಮಗನಿಗೆ ಹಲ್ಲೆ ಮನನೊಂದ ಯುವಕ ಆತ್ಮಹತ್ಯೆ – ಶಿವಮೊಗ್ಗ : ವಿದ್ಯುತ್ ತಗುಲಿ ಗಾರೆ ಕೆಲಸದ ಯುವಕ ಸಾವು – ಸಾಗರ: ಚಂಪಕ ಸರಸ್ ನಲ್ಲಿ ಈಜಲು ಇಳಿದ ಯುವಕ ಸಾವು – ಮೂಡಿಗೆರೆ: ಬೈಕ್ ಮತ್ತು ಟಾಟಾ ಸುಮೋ ವಾಹನ ಮುಖಾಮುಖಿ ಡಿಕ್ಕಿ NAMMUR EXPRESS NEWS ಭದ್ರಾವತಿ : ತಂದೆ ಮಾಡಿದ್ದ ಸಾಲಕ್ಕೆ ಮಗನಿಗೆ ಹಲ್ಲೆ ಮಾಡಲಾಗಿದ್ದು, ಮನನೊಂದ ಪುತ್ರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭದ್ರಾವತಿಯ ಪೇಪರ್ ಟೌನ್ ನಲ್ಲಿ ಸಂಭವಿಸಿದೆ. ಸ್ಟೀವನ್ (25) ಯುವಕ ಮೃತನಾಗಿದ್ದು, ಭದ್ರಾವತಿಯ ಪೇಪರ್ ಟೌನ್ ಬಡಾವಣೆಯಲ್ಲಿ ಘಟನೆ ನಡೆದಿದೆ. ಪರಶುರಾಮ್ ಎಂಬುವರ ಬಳಿ 2 ಲಕ್ಷ ಸಾಲವನ್ನ ಪೇಪರ್ ಟೌನ್ ನ ನಿವಾಸಿ ಜೋಸೆಫ್ ಎಂಬುವರು ಪಡೆದಿದ್ದರು. ಜೋಸೆಫ್, ಮೃತ ಸ್ಟೀವನ್ ನ ತಂದೆಯಾಗಿದ್ದಾರೆ. ಸಾಲ ಪಡೆದುಕೊಂಡು ತೀರಿಸಲಾಗದೇ ಜೋಸೆಫ್ ಮನೆ ಬಿಟ್ಟು ಹೋಗಿದ್ದನು. ಸಾಲ ವಸೂಲಿಗಾಗಿ…

Read More

ಟಾಪ್ ನ್ಯೂಸ್ ಕರಾವಳಿ ಉಡುಪಿಯಲ್ಲಿ ಪತ್ನಿ ಕಡಿದು ಕೊಂದು ಹಾಕಿದ ಪತಿ! – ಆನ್ ಲೈನ್ ಟ್ರೇಡಿಂಗ್ ನಲ್ಲಿ ಮೋಸ; ನಾಲ್ವರು ಆರೋಪಿಗಳ ಬಂಧನ – ಮೂಡುಬಿದಿರೆ: ತಂದೆಯಿಂದಲೇ ಅತ್ಯಾಚಾರ ಹೈಸ್ಕೂಲ್ ವಿದ್ಯಾರ್ಥಿನಿ ಗರ್ಭಿಣಿ! – ಮಂಗಳೂರು: ಪರಸ್ಪರ ಹೊಡೆದಾಡಿಕೊಂಡ ಬೀದಿಬದಿ ವ್ಯಾಪಾರಸ್ಥರ ಸಂಘದ ಪದಾಧಿಕಾರಿಗಳು! NAMMUR EXPRESS NEWS ಉಡುಪಿ: ಪತಿಯೇ ಪತ್ನಿಯನ್ನು ಬರ್ಬರವಾಗಿ ಕೊಂದಿರುವ ಆರೋಪ ಕೇಳಿ ಬಂದಿದ್ದು, ಆರೋಪಿಯನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಜಯಶ್ರೀ (28) ಕೊಲೆಯಾದವಳು. ಕಿರಣ್ ಉಪಾಧ್ಯ(30) ಕೊಲೆ ಆರೋಪಿಯಾಗಿದ್ದಾನೆ.ಉಡುಪಿಯಲ್ಲಿ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಕಡಿದ ಹೆದ್ದಾರಿ ಬಳಿ ಘಟನೆ ನಡೆದಿದೆ. ಈ ಜೋಡಿ ಕಾರ್ಕಡ ಅಂಗನವಾಡಿ ಕೇಂದ್ರದ ಸಮೀಪ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಶುಕ್ರವಾರ ಮುಂಜಾನೆ ಪತ್ನಿಯನ್ನು ಕಿರಣ್ ಉಪಾಧ್ಯ ಕೊಲೆ ಮಾಡಿದ್ದ ಎನ್ನುವ ಮಾಹಿತಿ ಇೆ. ಶಂಕ ಮೇರೆಗೆ ಪತಿ ಕಿರಣ್ ಉಪಾಧ್ಯ ಗುಂಡ್ಮಿಯನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ದೂರು ದಾಖಲಾಗಿದ್ದುಈ ಕುರಿತು ಪೊಲೀಸರು ವಿವರ ಸಂಗ್ರಹಿಸುತ್ತಿದ್ದಾರೆ.…

Read More