ಟಾಪ್ ಕರ್ನಾಟಕ ನ್ಯೂಸ್ ಝೀಕಾ ವೈರಸ್ಗೆ ಮೊದಲ ಬಲಿ! – ಶಿವಮೊಗ್ಗದಲ್ಲಿ 73 ವರ್ಷದ ವೃದ್ಧರೊಬ್ಬರ ಸಾವು – ಗರ್ಭಿಣಿಯರ ಮೇಲೆ ಹೆಚ್ಚಿನ ನಿಗಾ ಇಡಲು ಇಲಾಖೆ ಸೂಚನೆ ಬೆಂಗಳೂರು ರೇಪ್ ಸಂತ್ರಸ್ತೆ ಮೇಲೆ ಕೇಸ್! – ಪಬ್ ಹೋಗಿ ಕಾರು ಅಪಘಾತ: ದೂರು ದಾಖಲು – ಬಳಿಕ ಬೈಕ್ ಡ್ರಾಪ್ ತೆಗೆದುಕೊಳ್ಳುವಾಗ ರೇಪ್ ಯತ್ನ NAMMUR EXPRESS NEWS ಬೆಂಗಳೂರು : ರಾಜ್ಯದಲ್ಲಿ ಮಾರಕ ಝೀಕಾ ವೈರಸ್ಗೆ ಮೊದಲ ಬಲಿಯಾಗಿದ್ದು, ಶಿವಮೊಗ್ಗದಲ್ಲಿ ಜೀಕಾ ವೈರಸ್ ಸೋಂಕಿನಿಂದ ಬಳಲುತ್ತಿದ್ದ 73 ವರ್ಷದ ವೃದ್ಧರೊಬ್ಬರು ಸೋಮವಾರ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಝೀಕಾ ವೈರಸ್ ಲಕ್ಷಣಗಳಿದ್ದ ವೃದ್ಧನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಕೋಮಾರ್ಬಿಟಿಸ್ ಇದ್ದು, ಜೊತೆಗೆ ಝೀಕಾ ವೈರಸ್ ಅಟ್ಯಾಕ್ ಆಗಿತ್ತು. ಹೀಗಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ರಾಜ್ಯದಲ್ಲಿ ಇದುವರೆಗೂ ಒಟ್ಟು 9 ಜೀಕಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಶಿವಮೊಗ್ಗದಲ್ಲಿ 3, ಬೆಂಗಳೂರಿನ ಜಿಗಣಿ ಪ್ರದೇಶದಲ್ಲಿ 6 ಜನರಿಗೆ ಜೀಕಾ ವೈರಸ್ ಸೋಂಕು…
Author: Nammur Express Admin
ಮಂಗಳೂರಲ್ಲಿ ನಕಲಿ ನೋಟು ಮುದ್ರಿಸುತ್ತಿದ್ದವರು ಅರೆಸ್ಟ್! – ಸಾಲದ ಸುಳಿಯಲ್ಲಿ ಸಿಕ್ಕ ಗ್ಯಾಂಗ್ ಮಾಸ್ಟರ್ ಪ್ಲಾನ್ – ಯೂಟ್ಯೂಬ್ ನೋಡಿ ದುಡ್ಡು ಪ್ರಿಂಟ್ ಮಾಡೋದು ಕಲಿತರು! – ಕರಾವಳಿಯಲ್ಲಿ ನಕಲಿ ನೋಟು ಹುಷಾರ್ ಹುಷಾರ್ NAMMUR EXPRESS NEWS ಮಂಗಳೂರು: ನಕಲಿ ನೋಟು ಮುದ್ರಿಸುತ್ತಿದ್ದ ಆರೋಪದ ಮೇಲೆ ಮಂಗಳೂರಿನ ಹಂಪನಕಟ್ಟೆಯಲ್ಲಿ ನಾಲ್ವರನ್ನು ಬಂಧಿಸಿರುವ ಮಂಗಳೂರು ಪೊಲೀಸರು, 500 ರೂಪಾಯಿ ಮುಖಬೆಲೆಯ 2,13,500 ರೂಪಾಯಿ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ಕೇರಳದ ಕಾಸರಗೋಡು ಮೂಲದ ವಿ ಪ್ರಿಯೇಶ್ (38), ವಿನೋದ್ ಕುಮಾರ್ ಕೆ (33), ಅಬ್ದುಲ್ ಖಾದರ್ ಎಸ್ಎಂ (58) ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಅಯೂಬ್ ಖಾನ್ (51) ಎಂದು ಗುರುತಿಸಲಾಗಿದೆ ಕಾಸರಗೋಡಿನ ಚೆರ್ಕಳದಲ್ಲಿ ಪ್ರಿಂಟಿಂಗ್ ಪ್ರೆಸ್ ಹೊಂದಿರುವ ಪ್ರಮುಖ ಆರೋಪಿ ಪ್ರಿಯೇಶ್ ಸಾಲದ ಸುಳಿಯಲ್ಲಿ ಸಿಲುಕಿದ್ದು, ಸಾಲ ಮರುಪಾವತಿಸಲು ನಕಲಿ ನೋಟು ಮುದ್ರಣಕ್ಕೆ ಮುಂದಾಗಿದ್ದಾನೆ ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ತಿಳಿಸಿದ್ದಾರೆ. ಅವರು ಕೋಝಿಕ್ಕೋಡ್ ಮತ್ತು…
ಈ ದಿನದ ರಾಶಿ ಭವಿಷ್ಯ ಹೇಗಿದೆ? – ಹನುಮಂತನ ವಿಶೇಷ ಅನುಗ್ರಹದಿಂದ ಯಾವ ರಾಶಿಯವರಿಗೆ ಲಾಭ? ಯಾವ ರಾಶಿಯವರಿಗೆ ನಷ್ಟ? NAMMUR EXPRESS NEWS ಗ್ರಹಗಳ ಸ್ಥಾನ ಬದಲಾವಣೆಯಿಂದ ಮೇಷದಿಂದ ಮೀನ ರಾಶಿವರೆಗಿನ ಎಲ್ಲಾ ರಾಶಿಯವರಿಗೆ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಯಾವ ರಾಶಿಯವರಿಗೆ ಅದೃಷ್ಟ? ಯಾವ ರಾಶಿಯವರು ಎಚ್ಚರದಿಂದಿರಬೇಕು? ** ಮೇಷ ರಾಶಿ : ಕೌಟುಂಬಿಕ ಜೀವನದಲ್ಲಿ ಸಂತೋಷ ಇರುತ್ತದೆ, ಆದರೆ ನಿಮ್ಮಲ್ಲಿ ಆತ್ಮವಿಶ್ವಾಸದ ಕೊರತೆ ಹೆಚ್ಚಾಗಬಹುದು. ನಿಮ್ಮಲ್ಲಿರುವ ಅಜ್ಞಾತ ಭಯದಿಂದ ಮನಸ್ಸು ತೊಂದರೆಗೊಳಗಾಗಬಹುದು. ಉದ್ಯೋಗದಲ್ಲಿ ಸ್ಥಳ ಬದಲಾವಣೆಯಾಗುವ ಸಾಧ್ಯತೆಗಳಿವೆ. ಕೆಲಸದ ಜವಾಬ್ದಾರಿಗಳು ಹೆಚ್ಚಾಗಬಹುದು. ಕೆಲಸದ ನಿಮಿತ್ತ ಪ್ರಯಾಣ ಮಾಡಬೇಕಾಗಬಹುದು. ಇಂದು, ನಿಮಗೆ ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಲಿದೆ. ** ವೃಷಭ ರಾಶಿ : ವೃತ್ತಿಪರ ಜೀವನದಲ್ಲಿ ಪ್ರಗತಿಗೆ ಸಾಕಷ್ಟು ಅವಕಾಶಗಳಿವೆ. ನಿಮ್ಮ ತಾಯಿಯ ನೆರವಿನಿಂದ ಆರ್ಥಿಕ ಲಾಭಕ್ಕೆ ಅವಕಾಶವಿರುತ್ತದೆ. ಕುಟುಂಬದಲ್ಲಿ ಧಾರ್ಮಿಕ ಕಾರ್ಯಗಳನ್ನು ಆಯೋಜಿಸಬಹುದು. ಕೌಟುಂಬಿಕ ಜೀವನದಲ್ಲಿ ಸಂತೋಷ ಹೆಚ್ಚಾಗಬಹುದು. ವಾನ ಿರ್ವಹಣೆಗೆ ಹಣ ವ್ಯಯವಾಗಬಹುದು. ಇಂದು, ನಿಮ್ಮ…
ಸಿದ್ದರಾಮಯ್ಯ ಒಂದು ವಾರ ನಿರಾಳ!? – ಮುಂದಿನ ಹಂತದ ವಿಚಾರಣೆಯನ್ನು 29ಕ್ಕೆ ಮುಂದೂಡಿ ಆದೇಶ – ಸಲ್ಲಿಕೆಯಾಗುತ್ತಿರುವ ದೂರು ಅರ್ಜಿಗಳಿಗೂ ಹೈಕೋರ್ಟ್ ತಡೆ? NAMMUR EXPRESS NEWS ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟಿಗೆ 712 ಪುಟಗಳ ರಿಟ್ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಮುಂದಿನ ಹಂತದ ವಿಚಾರಣೆಯನ್ನು 29ಕ್ಕೆ ಮುಂದೂಡಿ ಆದೇಶ ಹೊರಡಿಸಿದ್ದಾರೆ. ‘ಈಗಾಗಲೇ ರಾಜಪಾಲರ ಶೋಕಾಸ್ ನೋಟಿಸ್ ಗೆ ಸರ್ಕಾರದಿಂದ ಉತ್ತರ ನೀಡಲಾಗಿತ್ತು. ಅಷ್ಟಾದರೂ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದು ದುರುದ್ದೇಶಪೂರಿತ. ಶೋಕಾಸ್ ನೋಟಿಸ್ ಗೆ ಕ್ಯಾಬಿನೆಟ್ ಸಲಹೆ ಕೂಡ ಕೊಟ್ಟಿದೆ. 100 ಪುಟಗಳಲ್ಲಿ ಕೊಟ್ಟ ಕ್ಯಾಬಿನೆಟ್ ಸಲಹೆ ಪರಿಗಣಿಸದೆ, ಸಲಹೆಗೆ ಕೇವಲ ಎರಡು ಪುಟಗಳ ಉತ್ತರ ಕೊಟ್ಟಿದ್ದೇ ರಾಜ್ಯಪಾಲರ ದುರುದ್ದೇಶ ಹೊಂದಿರುವ ಬಗ್ಗೆ ಸ್ಪಷ್ಟವಾಗಿದೆ’ ಎಂದು ಮುಖ್ಯಮಂತ್ರಿ ಪರ ವಾದ ಮಂಡಿಸಿದ ಅಭಿಷೇಕ್ ಮುಸಿಂಗ್ವಿ…
ತೀರ್ಥಹಳ್ಳಿಯಲ್ಲಿ ಸರ್ಕಾರಕ್ಕೆ ರೈತರ ಎಚ್ಚರಿಕೆ! – ಒತ್ತುವರಿಯ ತೆರವು ವಿರೋಧಿಸಿ ಬೃಹತ್ ಪ್ರತಿಭಟನೆ – ಪಕ್ಷ ಭೇದ ಮರೆತು ಎಲ್ಲಾ ಪಕ್ಷದ ಪ್ರಮುಖರು ಹಾಜರ್ NAMMUR EXPRESS NEWS ತೀರ್ಥಹಳ್ಳಿ : ಕರ್ನಾಟಕ ರಾಜ್ಯ ರೈತ ಸಂಘ ತೀರ್ಥಹಳ್ಳಿ, ಹಾಗೂ ದಲಿತ ಸಂಘರ್ಷ ಕ್ರಿಯಾ ಸಮಿತಿ, ಕರ್ನಾಟಕ ರಕ್ಷಣಾ ವೇದಿಕೆ, ಮತ್ತು ಸಮಾನ ಮನಸ್ಕರ ಸಂಘಟನೆ ನೇತೃತ್ವದಲ್ಲಿ ತೀರ್ಥಹಳ್ಳಿಯಲ್ಲಿ ಒತ್ತುವರಿಯ ತೆರವು ವಿರೋಧಿಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ಮೂಲಕ ಸರ್ಕಾರಕ್ಕೆ ರೈತರು ಎಚ್ಚರಿಕೆ ನೀಡಿದ್ದಾರೆ. ತೀರ್ಥಹಳ್ಳಿಯ ಕೃಷಿ ಮಾರುಕಟ್ಟೆಯ ಮುಂಭಾಗದಿಂದ ರೈತರ ಪ್ರತಿಭಟನೆ ಹೋರಾಟ , ಪಟ್ಟಣದ ಮುಖ್ಯ ಬಸ್ ನಿಲ್ದಾಣ ಅಲ್ಲಿಂದ ತಾಲೂಕ್ ಆಫೀಸ್ ಆವರಣ ತಲುಪಿ ಪ್ರತಿಭಟನಾ ಸಭೆಯನ್ನು ಮಾಡಲಾಯಿತು. ಈ ಸಭೆಯನ್ನ ಉದ್ದೇಶಿಸಿ ಪ್ರಾಸ್ತಾವಿಕ ನುಡಿ ಆಡಿದ ಪತ್ರಕರ್ತ ಶಿವಾನಂದ ಕರ್ಕಿ, ಜನಸಾಮಾನ್ಯರು ಅರಣ್ಯ ಪ್ರದೇಶದಲ್ಲಿ ಇರಬಾರದು ಎಂದು ಸರ್ಕಾರ ತಿಳಿಸುತ್ತದೆ. ಆದರೆ ಮೊದಲು ಯಾಕೆ ಅರಣ್ಯ ಪ್ರದೇಶದಲ್ಲಿ ನಮಗೆ ಅವಕಾಶವ್ನು ೀಡಿದ್ದರು, ರೈತರು ಸಾಕಷ್ಟು…
3 ಎಕರೆಗಿಂತ ಕಡಿಮೆ ಅರಣ್ಯ ಪ್ರದೇಶ ಒತ್ತುವರಿ ತೆರವು ಇಲ್ಲ! – ಅರಣ್ಯ ಭೂಮಿ ದೊಡ್ಡ ಒತ್ತುವರಿದಾರರಿಗೆ ಶಾಕ್ – ಯಾವ ಯಾವ ಭೂಮಿ ಗುರುತು? ಯಾರದ್ದು ಹೋಗುತ್ತೆ?.. ಕ್ಲಿಕ್ ಮಾಡಿ NAMMUR EXPRESS NEWS ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆ ಸೇರಿ ರಾಜ್ಯದಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವು ಆರಂಭಗೊಂಡಿದೆ. 20, ವರ್ಷಗಳಿಂದೆ 25 ವರ್ಷಗಳಿಂದ ಅರಣ್ಯ ಭೂಮಿ ಒತ್ತುವರಿ ಮಾಡಿಕೊಂಡು ಅಡಿಕೆ ಕಾಫಿ, ಕಾಳುಮೆಣಸು ಇತರ ಬೆಳೆಗಳನ್ನು ಬೆಳೆದಿರುವ ಬೆಳೆಗಾರರು ಇದೀಗ ಬೆಳೆಗಳನ್ನು ಕಳೆದುಕೊಳ್ಳುವಂತಾಗಿದೆ. ಭಾರಿ ಪ್ರಮಾಣದ ಒತ್ತುವರಿಯನ್ನು ಮೊದಲು ತೆರವುಗೊಳಿಸಲಾಗುತ್ತದೆ. ಮೂರು ಎಕರೆ ವರೆಗಿನ ಒತ್ತುವರಿದಾರರು ಸದ್ಯಕ್ಕೆ ಸೇಫ್ ಆಗಿದ್ದಾರೆ. ಬೆಳೆಗಾರರ ವಿರೋಧ ಹಾಗೂ ಜನ ಪ್ರತಿನಿಧಿಗಳ ಒತ್ತಡದಿಂದಾಗಿ ಇದುವರೆಗೆ ಅರಣ್ಯ ಭೂಮಿ ಒತ್ತುವರಿ ತೆರವು ಮಾಡಲು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಾಧ್ಯವಾಗಿರಲಿಲ್ಲ. ಆದರೆ ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂ ಕುಸಿತ ಹಾಗೂ ರಾಜ್ಯದ ಮಲೆನಾಡು ಭಾಗದಲ್ಲಿಯೂ ಸಣ್ಣ ಪ್ರಮಾಣದಲ್ಲಿ ಗುಡ್ಡ ಕಸಿತ ರಂಭಗೊಂಡ ಹಿನ್ನೆಲೆಯಲ್ಲಿ ಅರಣ್ಯ…
ಸಿಎಂ ರಾಜೀನಾಮೆಗೆ ಬಿಜೆಪಿ ಪಟ್ಟು! – ವಿಜಯೇಂದ್ರ ನೇತೃತ್ವದಲ್ಲಿ ಬೆಂಗಳೂರಲ್ಲಿ ಭಾರೀ ಪ್ರತಿಭಟನೆ – ರಾಜ್ಯದಲ್ಲಿ ಹೆಚ್ಚಿದ ಬಿಜೆಪಿ ಹೋರಾಟ NAMMUR EXPRESS NEWS ಬೆಂಗಳೂರು: ಮುಡಾ ಹಗರಣದಲ್ಲಿ ಭಾಗಿ ಆಗಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಬೆಂಗಳೂರಲ್ಲಿ ಭಾರೀ ಪ್ರತಿಭಟನೆ ನಡೆಸಿದೆ. ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪನವರ ನೇತೃತ್ವದಲ್ಲಿ ವಿಧಾನಸೌಧ ಮುಂಭಾಗದ ಗಾಂಧಿ ಪ್ರತಿಮೆ ಎದುರು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ವಿಧಾನಸಭಾ ಹಾಗೂ ವಿಧಾನಪರಿಷತ್ ಸದಸ್ಯರುಗಳ ಸಮ್ಮುಖದಲ್ಲಿ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ವಿರೋಧ ಪಕ್ಷ ನಾಯಕರಾದ ಆರ್ ಅಶೋಕ್, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದ ಗೌಡ, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಛಲವಾದಿ ನಾರಾಯಣ ಸ್ವಾಮಿ, ಮಾಜಿ ಉಪಮುಖ್ಯಮಂತ್ರಿಗಳಾದ ಡಾ ಸಿ ಎನ್ ಅಶ್ವಥ್ ನಾರಾಯಣ್, ವಿರೋಧ ಪಕ್ಷ ಉಪ ನಾಯಕರಾದ ಅರವಿಂದ್ ಬೆಲ್ಲದ್, ಮಾಜಿ ಸಚಿವರಾದ ಅರಗ ಜ್ಞಾನೇಂದ್ರ, ಸಿ.ಟಿ.ರವಿ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಪ್ರಮುಖರು, ಶಾಸಕರು ಹಾಗೂ ವಿಧಾನ…