Author: Nammur Express Admin

ಅಪಾಯದ ಮಟ್ಟ ಮೀರಿ ಹರಿಯುತ್ತಿರೋ ಜೀವನದಿ ಕಾವೇರಿ.! – ಸ್ನಾನಘಟ್ಟ ಮುಳುಗಡೆ, ದೇವಸ್ಥಾನಕ್ಕೆ ಜಲದಿಗ್ಬಂಧನ – ನೋಡುಗರ ಕಣ್ಣಿಗೆ ಮದ ನೀಡುತ್ತಿರುವ ನದಿಯ ರುದ್ರ ರಮಣೀಯ ದೃಶ್ಯ NAMMUR EXPRESS NEWS ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರಿಂದ ಹಳೆ ಮೈಸೂರು ಭಾಗದ ಜೀವನಾಡಿ ಮಂಡ್ಯ ತಾಲೂಕಿನ ಕೆಆರ್‌ಎಸ್ ಅಣೆಕಟ್ಟು ಭರ್ತಿಯಾಗಿದೆ. ಇನ್ನು ಡ್ಯಾಂನಿಂದ ಒಂದು ಲಕ್ಷ ಕ್ಯೂಸೆಕ್‌ಗೂ ಅಧಿಕ ಪ್ರಮಾಣದಲ್ಲಿ ನೀರು ಬಿಡಲಾಗಿದ್ದು, ಇದರಿಂದ ನಾಡಿನ ಜೀವನದಿ ಕಾವೇರಿ ಮೈದುಂಬಿ ಹರಿಯುತ್ತಿದ್ದಾಳೆ. ಕಾವೇರಿ ನದಿಯ ರುದ್ರ ರಮಣೀಯ ದೃಶ್ಯ ನೋಡುಗರ ಕಣ್ಣಿಗೆ ಮುದ ನೀಡುವಂತಿದೆ. ನಿಮಿಷಾಂಭ ದೇವಸ್ಥಾನದ ಸ್ನಾನಘಟ್ಟ ಸಂಪೂರ್ಣ ಮುಳುಗಡೆ! ಒಂದು ಕಡೆ ಕಾವೇರಿ ಪ್ರಕೃತಿಯ ಮಡಿಲಲ್ಲಿ ಸೌಂದರ್ಯ ದೇವತೆ ಹಾಗೆ ಕಾಣುತ್ತಿದ್ದರೆ, ಇನ್ನೊಂದೆಡೆ ಇದೇ ಕಾವೇರಿ ನದಿ ಅಪಾಯಮಟ್ಟ ಮೀರಿ ಹರಿದು ನದಿ ಪಾತ್ರದಲ್ಲಿ ಪ್ರವಾಹದ ಆತಂಕವನ್ನು ತಂದಿದೆ. ಕೆಆರ್‌ಎಸ್‌ ಡ್ಯಾಂನಿಂದ ಒಂದು ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಬಿಟ್ಟಿರುವ…

Read More

ನೆರೆಗೆ ಬಾಳೆಹೊನ್ನೂರು ಮುಳುಗಡೆ: ಬೋಟ್ ಸಂಚಾರ! – ಬೋಟ್ ಮೂಲಕ ಜನರ ರಕ್ಷಣೆ: ಹಲವೆಡೆ ಕುಸಿತ – ಬಾಳೆಹೊನ್ನೂರು-ಕಳಸ ಮಾರ್ಗ ಸಂಪೂರ್ಣ ಬಂದ್ NAMMUR EXPRESS NEWS ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲೂ ಮಳೆಯ ಆರ್ಭಟಕ್ಕೆ ಜನರು ಕಂಗಾಲಾಗಿದ್ದಾರೆ. ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ ದೋಬಿ ಹಳ್ಳ ಪ್ರವಾಹಕ್ಕೆ ತಗ್ಗು ಪ್ರದೇಶದ ಮನೆಗಳು ಮುಳುಗಡೆಯಾಗಿವೆ. ಮನೆಯಿಂದ ಹೊರಬರಲು ಆಗದೆ ಸಣ್ಣ ಬೋಟ್ ಬಳಸಿ ನೆರೆಯಲ್ಲಿ ಸಿಲುಕಿದ್ದ ಜನರನ್ನು ರಕ್ಷಣೆ ಮಾಡಲಾಗಿದೆ. ಶಾಲೆ, ಮದರಸ, ಸಂತೆ ಮಾರುಕಟ್ಟೆ ಮನೆಗಳು ಜಲಾವೃತಗೊಂಡಿದೆ. ಸದ್ಯ ಒಂದು ಕಡೆಯಿಂದ ಮತ್ತೊಂದು ಕಡೆ ಹೋಗಲು ಬೋಟ್ ಬಳಕೆ ಮಾಡುವಂತಾಗಿದೆ. ಕೊಪ್ಪದ ಹಲವೆಡೆ ಅನಾಹುತ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಹೇರೂರು ಸಮೀಪದ ದೇವಗೋಡು ಗ್ರಾಮದಲ್ಲಿ ಸುಮಾರು ಎರಡು ಎಕರೆ ವಿಸ್ತೀರ್ಣದ ಕೆರೆಯು ಕೋಡಿ ಹೊಡೆದಿದೆ. ಪರಿಣಾಮ ಭತ್ತ ನಾಟಿ ಮಾಡಿದ್ದ ಜಮೀನು ಜಲಾವೃತಗೊಂಡಿದೆ. ಚಿಕ್ಕಮಗಳೂರಿನ ಕಳಸ ತಾಲೂಕಿನ ಚನ್ನಹಡ್ಲು ಗ್ರಾಮದಲ್ಲಿ ಭೂ ಕುಸಿದಿದೆ. ಮಲ್ಲೇಶ್ವರ ಗುಡ್ಡದಲ್ಲಿ ಭಾರಿ ಪ್ರಮಾಣದ ಧರೆ ಕುಸಿದು, ರಸ್ತೆಯ ಅರ್ಧ ಭಾಗಕ್ಕೆ…

Read More

ಚಿನ್ನದ ಹುಡುಗಿ ಮನು ಭಾಕರ್: ಮತ್ತೆ ಗೆದ್ದ ಭಾರತ! – ಒಂದೇ ಒಲಿಂಪಿಕ್ಸಲ್ಲಿ 2 ಪದಕ ಜಯಿಸಿದ ಭಾರತದ ಮೊದಲ ಕ್ರೀಡಾಪಟು – ಶೂಟಿಂಗ್‌ನಲ್ಲಿ ಭಾರತಕ್ಕೆ ಮತ್ತೊಂದು ಪದಕದ ಸಾಧನೆ NAMMUR EXPRESS NEWS ಪ್ಯಾರಿಸ್‌: ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಒಲಿದಿದೆ. 10 ಮೀ. ಏರ್ ಪಿಸ್ತೂಲ್ ಮಿಶ್ರ ತಂಡ ವಿಭಾಗದ ಸ್ಪರ್ಧೆಯಲ್ಲಿ ಸರಬೋಜತ್ ಸಿಂಗ್ ಮತ್ತು ಮನು ಭಾಕರ್ ಜೋಡಿ ಕಂಚಿನ ಪದಕಕ್ಕೆ ಮುತ್ತಿಕ್ಕಿದೆ. ಈ ಮೂಲಕ ಭಾರತ ಮತ್ತೊಂದು ಪದಕ ಸಾಧನೆ ಮಾಡಿದೆ. 2 ದಿನಗಳ ಹಿಂದಷ್ಟೇ ಮಹಿಳೆಯರ 10 ಮೀ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದು ಭಾರತಕ್ಕೆ ಮೊದಲ ಪದಕ ತಂದುಕೊಟ್ಟಿದ್ದ ಮನು ಇದೀಗ 2ನೇ ಪದಕ ಗೆಲ್ಲುವ ಮೂಲಕ ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಜಯಿಸಿದ ಭಾರತದ ಮೊದಲ ಕ್ರೀಡಾಪಟು ಎನಿಸಿಕೊಂಡಿದ್ದಾರೆ. 2 ಪದಕ ಗೆದ್ದ ಮನು ಬಾಕರ್ ಮಂಗಳವಾರ ನಡೆದ ಕಂಚಿನ ಪದಕ ಸ್ಪರ್ಧೆಯಲ್ಲಿ ಭಾರತೀಯ ಜೋಡಿ ದಕ್ಷಿಣ…

Read More

ಕರಾವಳಿಯಲ್ಲಿ ಭಾರಿ ಮಳೆ: ಜನರೇ ಅಲರ್ಟ್! – ಅಪಾಯ ಮಟ್ಟ ಮೀರಿ ಹರಿಯುತ್ತಿರುವ ನದಿಗಳು – ಕುಸಿದು ಬೀಳುವ ಸ್ಥಿತಿಯಲ್ಲಿ ಗುಡ್ಡಗಳು – ಅಂಬುಲೆನ್ಸ್ ಮೀಸಲಿರಿಸುವಂತೆ ಸಾರ್ವಜನಿಕರ ಮನವಿ ವಿಶೇಷ ವರದಿ: ಗಣೇಶ್ ಮಂಗಳೂರು NAMMUR EXPRESS NEWS ಉಡುಪಿ /ಮಂಗಳೂರು: ಕರಾವಳಿಯಾದ್ಯಂತ ಕಳೆದ ಎರಡು ದಿನದಿಂದ ಭಾರೀ ಮಳೆ ಮತ್ತು ಬಿರುಗಾಳಿಯಿಂದ ನದಿ, ತೊರೆಗಳು ಭೋರ್ಗರೆಯುತ್ತಿದ್ದು, ನೀರಿನ ಮಟ್ಟ ಮಿತಿಮೀರಿ ಹರಿಯುತ್ತಿದೆ. ಇನ್ನು ಗುಡ್ಡಗಳೆಲ್ಲವೂ ಮೆತ್ತಗಾಗಿದ್ದು, ಮಣ್ಣು, ಕಾಮಗಾರಿಗಳು ಕುಸಿದುಬೀಳುವ ಸಂಭವ ಹೆಚ್ಚಾಗಿದೆ. ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಬೆಳ್ತಂಗಡಿ ಭಾಗದಲ್ಲಿ ಸಂಚಾರ ಕಷ್ಟವಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಭಾರೀ ಮಳೆಯಾಗಲಿದೆ. ಈ ಹಿನ್ನಲೆ ದಕ್ಷಿಣ ಕನ್ನಡ ಹಾಗೂ ಉಡುಪಿಗೆ ಆಗಸ್ಟ್ 2 ರವರೆಗೂ ಯೆಲ್ಲೋ ಅಲರ್ಟ್ ನೀಡಲಾಗಿದೆ. ಗುಡ್ಡ ಕುಸಿತ ಅಪಾಯ: ಎಚ್ಚರ ಎಚ್ಚರ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ರಾಷ್ಟ್ರೀಯ ಹೆದ್ದಾರಿ 169 ರ ಕೆತ್ತಿಕಲ್ ಮತ್ತು ಗುರುಪುರ ಪ್ರದೇಶವು…

Read More

ಕಾಫಿ ನಾಡಲ್ಲಿ ಮಳೆಗೆ ಕಂಗೆಟ್ಟ ಜನ! – ಎಲ್ಲೆಡೆ ಮಳೆ, ಭೂಕುಸಿತ, ಪ್ರವಾಹ, ಜೀವನ ಕಷ್ಟ ಕಷ್ಟ – ಅತೀ ಹೆಚ್ಚು ಮಳೆ: ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ – ಹೊರನಾಡಿನ ಸಂಪರ್ಕ ಕಡಿತ: ಮತ್ತಷ್ಟು ಕಡೆ ಅಪಾಯ – ಶೃಂಗೇರಿಯಲ್ಲಿ ತುಂಗಾ ನದಿ ಪ್ರವಾಹ: ಜನರಿಗೆ ಭಯ! ವಿಶೇಷ ವರದಿ: ಸಚಿನ್ ಶೃಂಗೇರಿ NAMMUR EXPRESS NEWS ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಅಬ್ಬರಿಸುತ್ತಿರುವ ಪುಷ್ಯ. ಭಾರೀ ಮಳೆಗೆ ಮತ್ತೆ ಪ್ರವಾಹ,ಭೂಕುಸಿತ,ರಸ್ತೆ ಸಂಪರ್ಕ ಬಂದ್ ಎಲ್ಲೆಡೆ ಕೈಕೊಟ್ಟ ವಿದ್ಯುತ್ ಹಾಗೂ ನೆಟ್ವರ್ಕ್. ಎಲ್ಲಾ ಕಡೆ ಅಪಾಯದ ಭೀತಿ. ಕೊಚ್ಚಿಕೊಂಡು ಹೋಗುತ್ತಿರುವ ತೋಟಗಳು. ಮತ್ತೆ ಶಾಲೆ, ಕಾಲೇಜುಗಳಿಗೆ ರಜೆ. ಹೌದು. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ 15 ಗಂಟೆಗಳಿಂದ ಒಂದೇ ಸಮನೆ ಬಿಡದೆ ಸುರಿಯುತ್ತಿದೆ. ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಭಾರಿ ಮಳೆಗೆ ಜಿಲ್ಲೆಯ ಪ್ರಮುಖ ನದಿಗಳು,ಹಳ್ಳ ಕೊಳ್ಳಗಳು ತುಂಬಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು ಹಲವಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ.…

Read More

ಈಗ ಸಕಲೇಶಪುರಪುರದಲ್ಲಿ ಭೂ ಕುಸಿತ! – 6 ವಾಹನಗಳು ಮಣ್ಣಿನಡಿ: ಬಾಯಿ ತೆರೆದ ರಸ್ತೆಗಳು! – ಮಂಗಳೂರು ಸೇರಿ ಹಲವೆಡೆ ಸಂಚಾರ ಬಂದ್ – ವಯನಾಡು ಭೂಕುಸಿತ: 70ಕ್ಕೂ ಹೆಚ್ಚು ಸಾವು – ಶಿರೂರು ಗುಡ್ಡ ಕುಸಿತ:11 ಮಂದಿ ದುರ್ಮರಣ NAMMUR EXPRESS NEWS ಹಾಸನ: ರಾಷ್ಟ್ರೀಯ ಹೆದ್ದಾರಿ 75ರ ದೊಡ್ಡತಪ್ಪಲುನಲ್ಲಿ ಮತ್ತೆ ಭೂ ಕುಸಿತ ಸಂಭವಿಸಿದ್ದು, ಟಿಪರ್, ಗ್ಯಾಸ್ ಟ್ಯಾಂಕರ್ ಹಾಗೂ ಇನೋವಾ ಕಾರು ಜಖಂಗೊಂಡು ಭಾರೀ ಹಾನಿ ಸಂಭವಿಸಿದೆ. ರಾಜ್ಯದಲ್ಲಿ ಕೂಡ ಭೀಕರ ಕುಸಿತ ಕಾಣುತ್ತಿದೆ. ಮಂಗಳೂರು –ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಶಿರಾಡಿ ಘಾಟ್ ಸಕಲೇಶಪುರ ದೊಡ್ಡ ತೆಪ್ಲೆಯಲ್ಲಿ ಭಾರಿ ಭೂಕುಸಿತ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಈ ಹೆದ್ದಾರಿಯಲ್ಲಿ ನಿರ್ಭಂಧಿಸಲಾಗಿದೆ.. ಮಂಗಳೂರು, ಶೃಂಗೇರಿ ಭಾಗದ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.ಕೇರಳದ ವಯನಾಡಿನಲ್ಲಿ ಬೃಹತ್ ಭೂಕುಸಿತ ಸಂಭವಿಸಿ 70ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ ಘಟನೆಯ ಬೆನ್ನಿನಲ್ಲಿಯೇ, ಹಾಸನದ ಶಿರಾಡಿ ಘಾಟಿಯಲ್ಲಿಯೂ ರಸ್ತೆಯ ಮೇಲೆ ಭಾರೀ ಭೂಕುಸಿತ ಸಂಭವಿಸಿದೆ. ಮಣ್ಣಿನಡಿ ಹಲವು…

Read More

ಅಪಾಯದ ಮಟ್ಟ ಮೀರಿ ಹರಿಯುತ್ತಿರೋ ಜೀವನದಿ ಕಾವೇರಿ.! – ಸ್ನಾನಘಟ್ಟ ಮುಳುಗಡೆ, ದೇವಸ್ಥಾನಕ್ಕೆ ಜಲದಿಗ್ಬಂಧನ – ನೋಡುಗರ ಕಣ್ಣಿಗೆ ಮದ ನೀಡುತ್ತಿರುವ ನದಿಯ ರುದ್ರ ರಮಣೀಯ ದೃಶ್ಯ NAMMUR EXPRESS NEWS ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರಿಂದ ಹಳೆ ಮೈಸೂರು ಭಾಗದ ಜೀವನಾಡಿ ಮಂಡ್ಯ ತಾಲೂಕಿನ ಕೆಆರ್‌ಎಸ್ ಅಣೆಕಟ್ಟು ಭರ್ತಿಯಾಗಿದೆ. ಇನ್ನು ಡ್ಯಾಂನಿಂದ ಒಂದು ಲಕ್ಷ ಕ್ಯೂಸೆಕ್‌ಗೂ ಅಧಿಕ ಪ್ರಮಾಣದಲ್ಲಿ ನೀರು ಬಿಡಲಾಗಿದ್ದು, ಇದರಿಂದ ನಾಡಿನ ಜೀವನದಿ ಕಾವೇರಿ ಮೈದುಂಬಿ ಹರಿಯುತ್ತಿದ್ದಾಳೆ. ಕಾವೇರಿ ನದಿಯ ರುದ್ರ ರಮಣೀಯ ದೃಶ್ಯ ನೋಡುಗರ ಕಣ್ಣಿಗೆ ಮುದ ನೀಡುವಂತಿದೆ. ನಿಮಿಷಾಂಭ ದೇವಸ್ಥಾನದ ಸ್ನಾನಘಟ್ಟ ಸಂಪೂರ್ಣ ಮುಳುಗಡೆ! ಒಂದು ಕಡೆ ಕಾವೇರಿ ಪ್ರಕೃತಿಯ ಮಡಿಲಲ್ಲಿ ಸೌಂದರ್ಯ ದೇವತೆ ಹಾಗೆ ಕಾಣುತ್ತಿದ್ದರೆ, ಇನ್ನೊಂದೆಡೆ ಇದೇ ಕಾವೇರಿ ನದಿ ಅಪಾಯಮಟ್ಟ ಮೀರಿ ಹರಿದು ನದಿ ಪಾತ್ರದಲ್ಲಿ ಪ್ರವಾಹದ ಆತಂಕವನ್ನು ತಂದಿದೆ. ಕೆಆರ್‌ಎಸ್‌ ಡ್ಯಾಂನಿಂದ ಒಂದು ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಬಿಟ್ಟಿರುವ…

Read More

ಎನ್. ಆರ್. ಪುರ: ಭಾರೀ ಮಳೆ, ಹಲವೆಡೆ ಬಿದ್ದ ಮನೆ! – ಬಾಳೆಹೊನ್ನೂರು, ಜಯಪುರ ಭಾಗದಲ್ಲಿ ಭಾರೀ ಹಾನಿ – ಅಪಾಯದತ್ತ ಜನ ಜೀವನ: ಮನೆಯಿಂದ ಹೊರ ಹೋದ್ರೆ ಅಪಾಯ – ಸೂಕ್ತ ಪರಿಹಾರಕ್ಕೆ ಮಾಜಿ ಶಾಸಕ ಜೀವರಾಜ್ ಪಟ್ಟು NAMMUR EXPRESS ನ್ಯೂಸ್ ಎನ್ ಆರ್ ಪುರ: ಎನ್ ಆರ್ ಪುರ ತಾಲೂಕಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅನೇಕ ಕಡೆ ಭಾರೀ ಹಾನಿ ಸಂಭವಿಸುತ್ತಿದೆ. ಈಗಾಗಲೇ ಹತ್ತಾರು ಮನೆಗಳು ಬಿದ್ದಿವೆ. ರಸ್ತೆಗಳು ಕುಸಿದಿವೆ. ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊರಳುಕೊಪ್ಪದ ಸಾಧು ಪೂಜಾರಿ ಅವರ ಮನೆ ಸಂಪೂರ್ಣ ಕುಸಿತಗೊಂಡಿದೆ. ಮನೆ ಕುಸಿತಗೊಂಡ ಸ್ಥಳಕ್ಕೆ ಮಾಜಿ ಸಚಿವರಾದ ಡಿ.ಎನ್ ಜೀವರಾಜ್‌ರವರು ಭೇಟಿ ನೀಡಿ ಪರಿಶೀಲನೆ ಮಾಡಿ, ತಹಸೀಲ್ದಾರ್ ಅವರಿಗೆ ಕರೆ ಮಾಡಿ ನೆರವು ನೀಡಲು ಸೂಚಿಸಿದರು. ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಮನೆ ಕಳೆದುಕೊಂಡವರಿಗೆ ಯಡ್ಡಿಯೂರಪ್ಪ 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದರು ಆದರೆ ಈ ಪರಿಹಾರ ಮೊತ್ತವನ್ನ ಕಾಂಗ್ರೆಸ್ 1…

Read More

ಆದರ್ಶ ದಂಪತಿಗಳಿಗಾಗಿ ” ಜನುಮದ ಜೋಡಿ” ರಂಗು! – ಹೊಸದುರ್ಗದಲ್ಲಿ ಒಂದೊಳ್ಳೆ ಕಾರ್ಯಕ್ರಮ: ದಂಪತಿಗಳ ಖುಷ್ – ಪ್ರೇರಣೆ ಮಾತನಾಡಿದ ಯುವ ಉದ್ಯಮಿ ಸದ್ಗುರು ಪ್ರದೀಪ್ – ಕಲರ್ ಫುಲ್ ಕಾರ್ಯಕ್ರಮದಲ್ಲಿ ನಟ ನಟಿಯರ ಮೆರುಗು NAMMUR EXPRESS NEWS ಹೊಸದುರ್ಗ: ದಿನೇ ದಿನೇ ನಾವು ನಮ್ಮ ಬದುಕಿನಲ್ಲಿ ಒತ್ತಡಕ್ಕೆ ಸಿಲುಕುತ್ತಿದ್ದೇವೆ. ಬೆಳಿಗ್ಗೆಯಿಂದ ರಾತ್ರಿವರೆಗೂ ನಮ್ಮ ಒತ್ತಡದ ಜೀವನದ ನಡುವೆ ಹೆಂಡತಿ ಮಕ್ಕಳು ನಮ್ಮ ಪ್ರೀತಿಯಿಂದ ವಂಚಿತರಾಗುತ್ತಿದ್ದಾರೆ ನಮ್ಮ ಬದುಕಿನ ಈ ಸುಂದರ ಜೀವನದಲ್ಲಿ ನಮ್ಮ ಕುಟುಂಬದೊಂದಿಗೆ ಬೆರೆಯದಿದ್ದರೆ ನಮ್ಮ ಮಕ್ಕಳು ಬಹುಬೇಗ ನಮ್ಮ ಪ್ರೀತಿ ವಾತ್ಸಲ್ಯ ಮರೆತು ಬಿಡುತ್ತಾರೆ ಎಂದು ಯುವ ಉದ್ಯಮಿ ಸದ್ಗುರು ಪ್ರದೀಪ್ ಆತಂಕ ವ್ಯಕ್ತಪಡಿಸಿದ್ದಾರೆ. ಹೊಸದುರ್ಗ ನಗರದ ಗಣೇಶ ಸದನದಲ್ಲಿ ನಡೆದ ಆದರ್ಶ ದಂಪತಿಗಳಿಗಾಗಿ ನಡೆದ ಜನುಮದ ಜೋಡಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಳಿಗ್ಗೆಯಿಂದ ರಾತ್ರಿವರೆಗೂ ಮನೆಯ ಹೆಂಡತಿ ಮಕ್ಕಳ ಪ್ರೀತಿಯಿಂದ ದೂರವಾಗಿ ನಮ್ಮ ವ್ಯವಹಾರಗಳ ಜಂಜಾಟದಲ್ಲಿರುತ್ತೇವೆ. ಇದರಿಂದ ಮುಕ್ತವಾಗಿ ಹೊರ ಬಂದು ಒಂದು ದಿನವಾದರೂ…

Read More

3ನೇ ಬಾರಿಗೆ ಮತ್ತೆ ಮುಳುಗಿದ ರಾಮ ಮಂಟಪ! – ತೀರ್ಥಹಳ್ಳಿಯಲ್ಲಿ ಭಾರೀ ಮಳೆ: ಎಲ್ಲೆಡೆ ನೆರೆ – ಅಪಾರ ನಷ್ಟ: ಮಳೆಗೆ ಹೆದರಿ ಮನೆ ಸೇರಿದ ಜನ NAMMUR EXPRES NEWS ತೀರ್ಥಹಳ್ಳಿ/ ಶೃಂಗೇರಿ: ತೀರ್ಥಹಳ್ಳಿಯಲ್ಲಿ ತುಂಗಾ ನದಿ ಮೂರನೇ ಬಾರಿ ಮುಳುಗಡೆ ಆಗಿದೆ ಎರಡು ದಿನದಿಂದ ಸುರಿಯುತ್ತಿರುವ ಭಾರೀ ಮಳೆ ಕಾರಣ ಮಂಗಳವಾರ ಬೆಳಗ್ಗೆ ತೀರ್ಥಹಳ್ಳಿಯಲ್ಲಿ ರಾಮ ಮಂಟಪ ಮುಳುಗಡೆ ಆಗಿದೆ.ಶೃಂಗೇರಿ ಮತ್ತು ತೀರ್ಥಹಳ್ಳಿ ಭಾಗದಲ್ಲಿ ವ್ಯಾಪಕವಾಗಿ ಸುರಿಯುತ್ತಿದ್ದು ತುಂಗಾ ನದಿ ನೀರಿನ ಹರಿವು ಹೆಚ್ಚಾಗಿದೆ. ಈಗಾಗಲೇ ಎಲ್ಲೆಡೆ ಆಡಳಿತ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಶೃಂಗೇರಿಯಲ್ಲಿ ಮುಳುಗಡೆ ಶೃಂಗೇರಿಯಲ್ಲಿ ಕೂಡ ಮಳೆ ನೀರು ಹೆಚ್ಚಾಗಿ ತುಂಗಾ ಪ್ರವಾಹ ಮಟ್ಟದಲ್ಲಿ ಹರಿಯುತ್ತಿದೆ. ದೇವಸ್ಥಾನ ಸೇರಿ ಪಟ್ಟಣದ ಅನೇಕ ಭಾಗಗಳು ಮುಳುಗಡೆ ಆಗಿದೆ.

Read More