Author: Nammur Express Admin

ಕುಮಾರಸ್ವಾಮಿ, ನಿಖಿಲ್ ವಿರುದ್ದ ಕೇಸ್! – ಬೆಳಗಾವಿ: ತಹಶೀಲ್ದಾರ್ ಕಚೇರಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು – ಯಾದಗಿರಿ : ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕನಾಗಿ ನೇಮಕವಾಗಿರುವ ರೌಡಿಶೀಟರ್ NAMMUR EXPRESS NEWS ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್‌ಗೆ ಬೆದರಿಕೆ ಆರೋಪದ ಹಿನ್ನೆಲೆ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಮತ್ತು ಅವರ ಪುತ್ರ ಚನ್ನಪಟ್ಟಣ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ವಿರುದ್ಧ ಎಫ್ಐಆರ್‌ ದಾಖಲಾಗಿದೆ. ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಅವರು ತಮಗೆ ಬೆದರಿಕೆ ಹಾಕಿದ್ದಾರೆಂದು ಸುಳ್ಳು ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಹೆಚ್‌.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಅವರ ಅಪ್ತ ಸುರೇಶ್ ಬಾಬು ಮೇಲೆ ದೂರು ದಾಖಲಾಗಿತ್ತು. ಈ ಬಗ್ಗೆ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕುಮಾರಸ್ವಾಮಿ ವಿರುದ್ಧದ ಡಿ ನೋಟಿಫಿಕೇಷನ್ ಪ್ರಕರಣದ ತನಿಖೆ ವಿಚಾರಣೆ ನಂತರ ಪತ್ರಿಕಾಗೋಷ್ಠಿ ನಡೆಸಿ ಎಡಿಜಿಪಿ ವಿರುದ್ದ ಸುಳ್ಳು ಆರೋಪ ಮಾಡಿರುವುದಾಗಿ ದೂರು ನೀಡಲಾಗಿತ್ತು. ಎಸ್‌ಐಟಿಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಹೆಚ್ಚಿನ ಸಾಕ್ಷ್ಯಾಧಾರ ಕಲೆ ಹಾಕಲಾಗುತ್ತಿದೆ. ಸಾಕ್ಷ್ಯಾಧಾರ ಇರುವ ಹಿನ್ನೆಲೆ…

Read More

ಕರಾವಳಿ ನ್ಯೂಸ್ – ಉಡುಪಿ: ಭಯದ ವಾತಾವರಣ ಸೃಷ್ಟಿಸಿದ ಯುವಕನ ಸೆರೆ – ಬಂಟ್ವಾಳ: ದೇವಸ್ಥಾನಕ್ಕೆ ನುಗ್ಗಿದ ಕಳ್ಳರು – 2.3ಲಕ್ಷ ಮೌಲ್ಯದ ಚಿನ್ನಾಭರಣ ಕಳವು! – ಉಡುಪಿ: ಸಿಲಿಂಡರ್ ಸ್ಫೋಟ; ಅಪಾರ್ಟ್ ಮೆಂಟ್ ನ ಗೋಡೆಗಳು ಛಿದ್ರ! NAMMUR EXPRESS NEWS ಉಡುಪಿ: ಸಾರ್ವಜನಿಕ ಸ್ಥಳಗಳಲ್ಲಿ ಭೀತಿ‌ಯ‌ ವಾತಾವರಣ ಸೃಷ್ಟಿಸಿದ ಯುವಕನೋರ್ವನನ್ನು ಸೆರೆ ಹಿಡಿದ ಘಟನೆ ಉಡುಪಿಯ ಅಜ್ಜರಕಾಡು ಬಳಿ ನಡೆದಿದೆ. ಸಮಾಜಸೇವಕ ನಿತ್ಯಾನಂದ‌ ಒಳಕಾಡು ಸಹಾಯವಾಣಿ‌ ಪೋಲಿಸರ‌ ಸಹಕಾರದಿಂದ‌ ಯುವಕನನ್ನು ವಶಕ್ಕೆ ಪಡೆದು ದೊಡ್ಡಣಗುಡ್ಡೆಯ ಡಾ ಎ ವಿ ಬಾಳಿಗ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೆಲವು ದಿನಗಳಿಂದ ಯುವಕ ಉಡುಪಿ ನಗರದಲ್ಲಿ ರಂಪಾಟ ನಡೆಸಿದ್ದನು. ರಕ್ಷಿಸಲ್ಪಟ್ಟ ಯುವಕ ಬೇಲೂರು ತಾಲೂಕಿನ ಚನ್ನಕೇಶವ ನಗರದ ಹೇಮಂತ್ ಎಂದು ತಿಳಿದುಬಂದಿದೆ. ವಾರಸುದಾರರು ಸಮಾಜಸೇವಕ ನಿತ್ಯಾನಂದ‌ ಒಳಕಾಡು ಅವರನ್ನು‌ ಸಂಪರ್ಕಿಸಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 91649 01111 ಅನ್ನು ಸಂಪರ್ಕಿಸಬಹುದಾಗಿದೆ. * ಬಂಟ್ವಾಳ: ದೇವಸ್ಥಾನಕ್ಕೆ ನುಗ್ಗಿದ ಕಳ್ಳರು – 2.3ಲಕ್ಷ ಮೌಲ್ಯದ…

Read More

ಅಯ್ಯೋ ದೇವ್ರೇ ಈ ಮಳೆ ಬಿಡಲ್ಲ! – ನವೆಂಬರ್ 9 ರಿಂದ ಮತ್ತೆ ಹಲವೆಡೆ ಮಳೆ ಅಬ್ಬರ! – ಅಡಿಕೆ, ಕಾಫಿ, ಬೆಳೆ ಕಥೆ ಗೋವಿಂದಾ…?! NAMMUR EXPRESS NEWS ಬೆಂಗಳೂರು: ನವೆಂಬರ್ 9ರಿಂದ ರಾಜ್ಯದಲ್ಲಿ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಆರು ಜಿಲ್ಲೆಗಳಲ್ಲಿ ಬೀಳಲಿರುವ ಮಳೆಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು, ಕೋಲಾರ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಇದಷ್ಟೇ ಅಲ್ಲದೆ ಧರ್ಮಸ್ಥಳ, ಮಾಣಿ, ಉಪ್ಪಿನಂಗಡಿ, ಪುತ್ತೂರು, ಬೆಳ್ತಂಗಡಿ, ಭಾಗಮಂಡಲ, ಹೆಸರಘಟ್ಟ, ಕೊಲ್ಲೂರು, ಚನ್ನರಾಯಪಟ್ಟಣ, ಮೂಡಿಗೆರೆ, ಸೋಮವಾರಪೇಟೆ, ಕೊಟ್ಟಿಗೆಹಾರ, ಚಿಂತಾಮಣಿ, ಬೇಲೂರು, ದೊಡ್ಡಬಳ್ಳಾಪುರ, ಎಂಎಂ ಹಿಲ್ಸ್​ನಲ್ಲಿ ಈಗಾಗಲೇ ಸಣ್ಣ…

Read More

ಟಾಪ್ ನ್ಯೂಸ್ ಕರ್ನಾಟಕ ಮೈಸೂರು: ಯುವತಿಮೇಲೆ ಸ್ನೇಹಿತರಿಂದಲೇ ಗ್ಯಾಂಗ್ ರೇಪ್..! – ತುಮಕೂರು: ವಸತಿ ಶಾಲೆಯಲ್ಲಿ ವಿದ್ಯಾರ್ಥಿ ನಿಗೂಢ ಸಾವು NAMMUR EXPRESS NEWS ಮೈಸೂರು: ಕಳೆದ ಮೂರು ವರ್ಷಗಳ ಹಿಂದೆ ಮೈಸೂರಿನ ಹೊರವಲಯದಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಇಡೀ ದೇಶವೇ ಬೆಚ್ಚಿ ಬೀಳಿಸಿತ್ತು. ಇದೀಗ ಮೈಸೂರಿನಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಯುವತಿಯ ಮೇಲೆ ಆಕೆ ಸ್ನೇಹಿತರಿಂದಲೇ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಯುವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಮೈಸೂರಿನಲ್ಲಿ ಇದೀಗ ಮತ್ತೊಂದು ಗ್ಯಾಂಗ್ ರೇಪ್ ನಡೆದಿದ್ದು, ಯುವತಿಯ ಮೇಲೆ ಆಕೆ ಸ್ನೇಹಿತರೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಮಡಿಕೇರಿ ಮೂಲದ ಯುವತಿಯಿಂದ ಇದೀಗ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ. ಮೈಸೂರಿನ ವಿಜಯನಗರ ಠಾಣೆಯಲ್ಲಿ ಯುವತಿ ಖುದ್ದು ಹಾಜರಾಗಿ ದೂರು ದಾಖಲಿಸಿದ್ದಾಳೆ. ಮಡಿಕೇರಿಯಿಂದ ಬಂದ ಯುವತಿ ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ತಂಗಿದ್ದಳು. ಈ ವೇಳೆ…

Read More

ಟಾಪ್ 3 ನ್ಯೂಸ್ ಮಲ್ನಾಡ್ ತೀರ್ಥಹಳ್ಳಿ ಮೂಲದ ನಟೋರಿಯಸ್ ಮನೆಗಳ್ಳನ ಬಂಧನ – ಬೆಂಜ್ ಕಾರು, ಪಿಸ್ತೂಲು ಸಹಿತ ಕೋಟ್ಯಾಂತರ ಮೌಲ್ಯದ ವಸ್ತು, ನಗದು ವಶಕ್ಕೆ ..!! – ಮೂಡಿಗೆರೆ: ಚಾರ್ಮಾಡಿ ಘಾಟ್ ನಲ್ಲಿ ಬಂಡೆಗಲ್ಲಿಗೆ ಡಿಕ್ಕಿ ಹೊಡೆದ ಕಾರು – ಚಿರತೆ ಉಗುರು ಮತ್ತು ಹಲ್ಲುಗಳ ಅಕ್ರಮ ಸಾಗಣೆ – ತರೀಕೆರೆ: ಜಲಪಾತದಲ್ಲಿ ಈಜಲು ಹೋಗಿ ಪ್ರವಾಸಿಗ ನೀರುಪಾಲು ! NAMMUR EXPRESS NEWS ಮಲೆನಾಡಿನ ಕುಖ್ಯಾತ ಕಳ್ಳರಿಬ್ಬರನ್ನು ಬೆಂಗಳೂರು ಪೋಲಿಸರು ಬಂಧಿಸಿ ಬೆಂಜ್ ,ಸ್ಕೋಡಾ ಕಾರು ಸಮೇತ ಕೋಟ್ಯಾಂತರ ರೂ ನಗದು ಹಾಗೂ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಇತ್ತೀಚೆಗೆ ತೀರ್ಥಹಳ್ಳಿಯಲ್ಲಿ ಮನೆಯ ಹಿಂಭಾಗದಲ್ಲಿ ಮುಚ್ಚ್ಚಿಟ್ಟಿದ್ದ ಚಿನ್ನಾಭರಣವನ್ನು ವಶಪಡಿಸಿಕೊಂಡಿರುವ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರು ತೀರ್ಥಹಳ್ಳಿ ಮೂಲದ ಆರೋಪಿ ಹಾಗೂ ಚಿಕ್ಕಮಗಳೂರಿನ ಆರೋಪಿಯೊಬ್ಬನನ್ನು ಬಂಧಿಸಿ ಐಶರಾಮಿ ಕಾರುಗಳು ಹಾಗೂ 3 ಕೋಟಿ 60 ಲಕ್ಷ ರೂ. ಮೌಲ್ಯದ ಚಿನ್ನ ಜಪ್ತಿ ಮಾಡಿಕೊಂಡಿದ್ದಾರೆ. ತೀರ್ಥಹಳ್ಳಿ ಮೂಲದ ಹಮ್ಜಾ…

Read More

ದಾಖಲೆ ಬರೆದ ಹಾಸನಾಂಬೆ! – ಪ್ರಸಾದ, ಕಾಣಿಕೆ ಸೇರಿ ಒಟ್ಟು 12 ಕೋಟಿ 63 ಲಕ್ಷ ಆದಾಯ – 20.40 ಲಕ್ಷ ಭಕ್ತರಿಂದ ದೇವಿ ದರ್ಶನ NAMMUR EXPRESS NEWS ಹಾಸನ : ಪ್ರತಿವರ್ಷದಂತೆ ಈ ವರ್ಷವೂ ಕೂಡ ಅದಿದೇವತೆ ಹಾಸನಾಂಬೆ ದೇವಿಯ ಗರ್ಭಗುಡಿ ಬಾಗಿಲು ತೆಗೆದು ದರ್ಶನದ ಭಾಗ್ಯ ನೀಡಿ ಈಗಾಗಲೇ ಈಗಾಗಲೇ ೨೦೨೪ರ ದರ್ಶನೋತ್ಸವಕ್ಕೆ ತೆರೆ ಎಳೆದಿದ್ದು, ಬಂದ ಭಕ್ತರಿಂದ ಟಿಕೆಟ್, ಲಾಡು ಮಾರಾಟ, ಸ್ಕ್ಯಾನ್ ಮೂಲಕ ಹಣ ಹಾಕಿರುವುದು, ಕಾಣಿಕೆ ಹುಂಡಿಯಿಂದ ಎಲ್ಲಾ ಸೇರಿ ಬರೋಬ್ಬರಿ 12,63,83,808 ರೂಗಳು ಸಂಗ್ರಹವಾಗುವ ಮೂಲಕ ಹಾಸನಾಂಬೆ ಮತ್ತು ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವದ ಇತಿಹಾಸದಲ್ಲೆ ಈ ವರ್ಷ ಮತ್ತೊಂದು ಹೊಸ ದಾಖಲೆ ನಿರ್ಮಿಸಿದೆ. ಹಾಸನಾಂಬೆ ದೇವಿಯ ಬಾಗಿಲು ಅಕ್ಟೋಬರ್ 24ಕ್ಕೆ ತೆಗೆದು ನವೆಂಬ‌ರ್ ೩ಕ್ಕೆ ಮದ್ಯಾಹ್ನ ಬಾಗಿಲು ಮುಚ್ಚಲಾಗಿದೆ. ಜಿಲ್ಲಾಡಳಿತ ಬಹಳ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡುವ ಮೂಲಕ ಅದ್ಭುತವಾಗಿ ಜಾತ್ರಾ ಮಹೋತ್ಸವ ನಡೆಸಿದೆ. ಈ ಬಾರಿ 20.40 ಲಕ್ಷ ಭಕ್ತರು…

Read More

ಕರಾವಳಿ ನ್ಯೂಸ್ ಸುಬ್ರಹ್ಮಣ್ಯ: ಮರ ಬಿದ್ದು, ಭಾರೀ ಅನಾಹುತ: ತಪ್ಪಿದ ಘಟನೆ – ಬೆಳ್ತಂಗಡಿ:ವಿದ್ಯಾರ್ಥಿಯ ಹನಿಟ್ರ್ಯಾಪ್ ಯತ್ನಿಸಿದ ಮಹಿಳೆ – ಪುತ್ತೂರು: ಮಾದಕ ವಸ್ತು ಸಾಗಾಟ ಪ್ರಕರಣ; ಆರೋಪಿಗೆ ಜಾಮೀನು ಸುಬ್ರಹ್ಮಣ್ಯ/ಸುಳ್ಯ : ಸುಳ್ಯ ಹಾಗೂ ಸುಬ್ರಹ್ಮಣ್ಯ ಪರಿಸರದಲ್ಲಿ ನ. 4 ರಂದು ಅಪರಾಹ್ನ ಉತ್ತಮ ಮಳೆಯಾಗಿದೆ. ಕುಕ್ಕೆ ಸುಬ್ರಹ್ಮಣ್ಯ ಪರಿಸರದ ಕುಮಾರಪರ್ವತ ತಪ್ಪಲು ಹಾಗೂ ಕುಕ್ಕೆ ಸುಬ್ರಹ್ಮಣ್ಯ ಪರಿಸದಲ್ಲಿ ಸಂಜೆ ಒಂದೂವರೆ ತಾಸು ಮಳೆಯಾಗಿದ್ದು, ದರ್ಪಣ ತೀರ್ಥ ನದಿಯಲ್ಲಿ ಭಾರೀ ನೀರು ಹರಿದು ಬಂತು. ಸುಬ್ರಹ್ಮಣ್ಯ, ಕೊಲ್ಲಮೊಗ್ರು, ಬಿಳಿನೆಲೆ, ಹರಿಹರ ಪಲ್ಲತ್ತಡ್ಕ, ಬಳ್ಪ, ಎಡಮಂಗಲ, ಸುಳ್ಯದಲ್ಲೂ ಸಂಜೆ ಮಳೆಯಾಗಿದೆ. ಸುಳ್ಯ ತಾಲೂಕಿನ ಮರ್ಕಂಜದ ಕೊರ್ಟಡ್ಕದಲ್ಲಿ ರಸ್ತೆಗೆ ಮರ ಬಿದ್ದು ಭಾರೀ ಅನಾಹುತ ತಪ್ಪಿದ ಘಟನೆ ಸಂಭವಿಸಿದೆ. ಕೆಲವು ವಿದ್ಯುತ್‌ ಕಂಬಗಳಿಗೆ ಹಾನಿಯಾಗಿದೆ. ಬೆಳ್ತಂಗಡಿ: ಹದಿ ಹರೆಯದ ವಿದ್ಯಾರ್ಥಿಯ ಹನಿಟ್ರ್ಯಾಪ್’ಗೆ ಯತ್ನಿಸಿದ ಮಹಿಳೆ.!! ಬೆಳ್ತಂಗಡಿ : ಫೇಸ್‌ಬುಕ್ ಫ್ರೆಂಡ್ಸ್ ಬಳಗದಲ್ಲಿದ್ದ ಮಹಿಳೆಯೋರ್ವಳು ಹದಿ ಹರೆಯದ ವಿದ್ಯಾರ್ಥಿಯೋರ್ವನನ್ನು ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್…

Read More

ಈ ದಿನದ ರಾಶಿ ಭವಿಷ್ಯ ಹೇಗಿದೆ? – ಚಂದ್ರನ ಸ್ಥಾನ ಬದಲಾವಣೆಯಿಂದ ಯಾವ ರಾಶಿಯವರಿಗೆ ಶುಭ ? ಯಾವ ರಾಶಿಯವರಿಗೆ ಅಶುಭ ? NAMMUR EXPRESS NEWS ಗ್ರಹಗಳ ಸ್ಥಾನ ಬದಲಾವಣೆಯಿಂದ ಮೇಷದಿಂದ ಮೀನ ರಾಶಿವರೆಗಿನ ಎಲ್ಲಾ ರಾಶಿಯವರಿಗೆ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಯಾವ ರಾಶಿಯವರಿಗೆ ಅದೃಷ್ಟ? ಯಾವ ರಾಶಿಯವರು ಎಚ್ಚರದಿಂದಿರಬೇಕು? ** ಮೇಷ ರಾಶಿ : ಇಂದು ನಿಮಗೆ ಉತ್ತಮ ದಿನವಾಗಿದೆ. ಇಂದು ನೀವು ಹಣದ ವಿಷಯದಲ್ಲಿ ಸಮೃದ್ಧರಾಗಿದ್ದೀರಿ. ನಿಮ್ಮ ಸಾಮರ್ಥ್ಯಗಳನ್ನು ಅರ್ಥಮಾಡಿಕೊಳ್ಳಿ. ಕೆಲಸದ ಹೆಚ್ಚಳದಿಂದ ನಿಮ್ಮ ದಿನವು ಬಿಡುವಿಲ್ಲದಂತಾಗಿಸಬಹುದು. ನಿಮ್ಮ ವೃತ್ತಿಪರ ಜೀವನದಲ್ಲಿ ನಿಮ್ಮ ಭಾವನೆಗಳು ನಿಮ್ಮ ಮೇಲೆ ಪ್ರಾಬಲ್ಯ ಸಾಧಿಸಲು ಬಿಡಬೇಡಿ. ಅವಮಾನವಾಗುವ ಭಯವಿರುತ್ತದೆ. ಪ್ರಯಾಣದಲ್ಲಿ ತೊಂದರೆ ಸಾಧ್ಯತೆ. ** ವೃಷಭ ರಾಶಿ : ಇಂದು ವೃಷಭ ರಾಶಿಯವರಿಗೆ ಸಾಮಾನ್ಯ ದಿನವಾಗಿರುತ್ತದೆ. ನಿಮ್ಮ ಉತ್ಸಾಹವನ್ನು ಮುಂದುವರಿಸಲು ಮತ್ತು ನಿಮ್ಮ ಹೊಸ ಆಲೋಚನೆಗಳನ್ನು ಕಾರ್ಯರೂಪಕ್ಕೆ ತನ್ನಿ. ನಿಮ್ಮ ವೃತ್ತಿಪರ ಕೆಲಸವನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ. ಆವ್ಯಾಪಾರವು ಮಧ್ಯಮ ವೇಗದಲ್ಲಿ…

Read More

ಕಾಫಿ ನಾಡಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ – ವಕ್ಫ್ ಕಾಯ್ದೆ ನಿಯಮಗಳನ್ನು ಬದಲಾವಣೆಗೆ ಪಟ್ಟು – ಚಿಕ್ಕಮಗಳೂರು, ಶೃಂಗೇರಿ, ಎನ್.ಆರ್ ಪುರದಲ್ಲಿ ಪ್ರತಿಭಟನೆ NAMMUR EXPRESS NEWS ಶೃಂಗೇರಿ: ವಕ್ಫ್ ಕಾಯ್ದೆ ನಿಯಮಗಳನ್ನು ಬದಲಾವಣೆ ಮಾಡಬೇಕು ಎಂದು ಅಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಲ್ಲಾ ತಾಲೂಕಲ್ಲಿ ಬಿಜೆಪಿ ಪ್ರತಿಭಟನೆ ಮಾಡಿತು. ಉತಾರೆಗಳಲ್ಲಿ ವಕ್ಫ್ ಹೆಸರನ್ನು ತೆಗೆದು ರೈತರ ಹೆಸರನ್ನು ಹಾಕಬೇಕು, ಉತಾರೆಯ ಯಾವುದೇ ಕಾಲಂ ನಲ್ಲಿ ವಕ್ಫ್ ಹೆಸರು ಇರಬಾರದು, ಆಸ್ತಿಗಳಿಗೆ ಸಂಬಂಧಿಸಿದ ವ್ಯಾಜ್ಯಗಳು ನ್ಯಾಯಾಲಯದಲ್ಲಿ ಮಾತ್ರ ವಿಚಾರಣೆಯಾಗಬೇಕು.1974 ರ ವಕ್ಫ್ ಗೆಜೆಟ್ ನೋಟಿಫಿಕೇಶನ್ ಅನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ರದ್ದುಗೊಳಿಸಬೇಕು.ಕೇಂದ್ರ ಸಂಸ್ಕೃತಿ ಇಲಾಖೆ ಹಾಗೂ ಪುರಾತತ್ವ ಇಲಾಖೆಯ ಒಡೆತನ/ನಿರ್ವಹಣೆಯಲ್ಲಿರುವ ಸ್ಮಾರಕಗಳ ದಾಖಲಾತಿ/ಪಹಣಿಯಲ್ಲಿ ವಕ್ಫ್ ಹೆಸರು ಇರಬಾರದು. ಮಠಗಳಿಗೆ, ದೇವಸ್ಥಾನಗಳಿಗೆ, ಶಾಲಾ ಕಾಲೇಜುಗಳಿಗೆ, ಸರ್ಕಾರಿ ಕಚೇರಿಗಳಿಗೆ ನೀಡಿರುವ ನೋಟೀಸನ್ನು ಸಹ ವಾಪಾಸ್ ಪಡೆಯಬೇಕು ಎಂದು ಅಗ್ರಹಿಸಲಾಯಿತು.

Read More

ತೀರ್ಥಹಳ್ಳಿ ರಾಮೇಶ್ವರ ದೇಗುಲದಲ್ಲಿ ದೀಪೋತ್ಸವ – ತೀರ್ಥಹಳ್ಳಿ ಪಟ್ಟಣ, ತಾಲೂಕಿನಲ್ಲಿ ದೀಪೋತ್ಸವ ಸಂಭ್ರಮ – ಕಾರ್ತಿಕ ಮಾಸದ ದೀಪೋತ್ಸವಕ್ಕೆ ಎಲ್ಲೆಡೆ ಸಜ್ಜು NAMMUR EXPRESS NEWS ತೀರ್ಥಹಳ್ಳಿ: ತೀರ್ಥಹಳ್ಳಿ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಪ್ರಯುಕ್ತ ಶ್ರೀರಾಮೇಶ್ವರ ದೇವಸ್ಥಾನದಲ್ಲಿ ನ.4ರಂದು ಕಾರ್ತೀಕ ಮಾಸ ಆರಂಭವಾಗಿದ್ದು, ಪ್ರತಿ ದಿನ ಸಂಜೆ ದೀಪೋತ್ಸವ ನೆರವೇರಲಿದೆ. ಶ್ರೀರಾಮೇಶ್ವರ ದೇವರಿಗೆ ಮಹಾಮಂಗಳಾರತಿ ಮತ್ತು ವಿವಿಧ ಪೂಜಾ ವಿಧಿವಿಧಾನಗಳು ನೆರವೇರಲಿದ್ದು ಹಾಗೂ ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗ ನಡೆಯಲಿದೆ.ಪಟ್ಟಣದ ಮಾರಿಕಾಂಬಾ ದೇವಸ್ಥಾನ, ಕಲ್ಲಾರೆ ವಿನಾಯಕ ದೇವಸ್ಥಾನ, ಜಿ.ಎಸ್.ಬಿ ತಿರುಮಲ ವೆಂಕಟರಮಣ ದೇವಸ್ಥಾನ, ಆಂಜನೇಯ ದೇವಸ್ಥಾನ ಎಲ್ಲೆಡೆ ವಿಶೇಷ ಪೂಜೆ, ದೀಪೋತ್ಸವ ಶುರುವಾಗಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಪ್ರಮುಖ ದೇವಾಲಯಗಳಲ್ಲಿ ಕಾರ್ತೀಕ ದೀಪೋತ್ಸವ ನಡೆಯಲಿದೆ.

Read More