Author: Nammur Express Admin

ಈ ದಿನದ ರಾಶಿ ಭವಿಷ್ಯ ಹೇಗಿದೆ? – ಯಾವ ರಾಶಿಯವರಿಗೆ ಲಾಭ? ಯಾವ ರಾಶಿಯವರಿಗೆ ನಷ್ಟ? NAMMUR EXPRESS NEWS ಗ್ರಹಗಳ ಸ್ಥಾನ ಬದಲಾವಣೆಯಿಂದ ಮೇಷದಿಂದ ಮೀನ ರಾಶಿವರೆಗಿನ ಎಲ್ಲಾ ರಾಶಿಯವರಿಗೆ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಯಾವ ರಾಶಿಯವರಿಗೆ ಅದೃಷ್ಟ? ಯಾವ ರಾಶಿಯವರು ಎಚ್ಚರದಿಂದಿರಬೇಕು? ** ಮೇಷ ರಾಶಿ : ಮೇಷ ರಾಶಿಯವರಿಗೆ ಇಂದು ಅತ್ಯಂತ ಶುಭ ದಿನವಾಗಿರುತ್ತದೆ. ಸಾಮಾಜಿಕ ಸ್ಥಾನಮಾನ ಮತ್ತು ಪ್ರತಿಷ್ಠೆ ಹೆಚ್ಚಾಗುತ್ತದೆ. ನಿಮ್ಮ ಕೆಲಸದಲ್ಲಿ ಉತ್ತಮ ಫಲಿತಾಂಶಗಳನ್ನು ನೀವು ಪಡೆಯುತ್ತೀರಿ. ಆದರೂ, ನೀವು ಕೆಲಸದ ನಿಮಿತ್ತ ಇದ್ದಕ್ಕಿದ್ದಂತೆ ಪ್ರಯಾಣಿಸಬೇಕಾಗಬಹುದು. ಪಾಲುದಾರಿಕೆ ವ್ಯವಹಾರದಲ್ಲಿ ಯಾರನ್ನೂ ಕುರುಡಾಗಿ ನಂಬಬೇಡಿ. ವಿಶೇಷ ಸ್ನೇಹಿತರ ಸಹಾಯದಿಂದ, ನೀವು ಹಣಕಾಸಿನ ಮುಗ್ಗಟ್ಟುಗಳಿಂದ ಪರಿಹಾರವನ್ನು ಪಡೆಯುತ್ತೀರಿ. ** ವೃಷಭ ರಾಶಿ : ವೃಷಭ ರಾಶಿಯ ಜನರು ಇಂದು ಯಶಸ್ಸನ್ನು ಸಾಧಿಸಲು ಹೆಚ್ಚು ಶ್ರಮಿಸಬೇಕಾಗುತ್ತದೆ. ಕೆಲಸದ ಜವಾಬ್ದಾರಿಗಳು ಹೆಚ್ಚಾಗುತ್ತವೆ. ಬಹುಕಾಲದಿಂದ ಬಾಕಿ ಉಳಿದಿರುವ ಕೆಲಸಗಳು ಯಶಸ್ವಿಯಾಗುತ್ತವೆ. ಸಂವಾದದ ಮೂಲಕ ಕುಟುಂಬದಲ್ಲಿ ಉದ್ಭವಿಸುವ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಿ.…

Read More

ತೀರ್ಥಹಳ್ಳಿ ಸರ್ಕಾರಿ ಪಿಯು ಕಾಲೇಜು ಹಳೆಯ ವಿದ್ಯಾರ್ಥಿಗಳ ಸಮಾವೇಶ – ಅ.31ರಂದು ತೀರ್ಥಹಳ್ಳಿ ಟಿ.ಎ. ಪಿ. ಸಿ.ಎಂ.ಎಸ್ ಅಲ್ಲಿ ಸಮಾವೇಶ – ಸಮಸ್ತ ಹಳೆಯ ವಿದ್ಯಾರ್ಥಿಗಳಿಗೆ ಆಹ್ವಾನ: ಸುಸ್ವಾಗತ ತೀರ್ಥಹಳ್ಳಿ: ಸರ್ಕಾರಿ ಪದವಿ ಪೂರ್ವ ಕಾಲೇಜು, ತೀರ್ಥಹಳ್ಳಿ ಇದರ ಹಳೆಯ ವಿದ್ಯಾರ್ಥಿಗಳ ಸಮಾವೇಶ ಅ.31ರಂದು ಬೆಳಿಗ್ಗೆ 10.30 ಗಂಟೆಗೆ ತೀರ್ಥಹಳ್ಳಿಯ TAPCMS ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಓದಿರುವ ಹಳೆಯ ವಿದ್ಯಾರ್ಥಿಗಳು ತಾವು ಹಾಗೂ ತಮ್ಮ ಸ್ನೇಹಿತರನ್ನು ಈ ಸಮಾಲೋಚನಾ ಸಭೆಗೆ ಕರೆದುಕೊಂಡು ಬರಲು ಕೋರಲಾಗಿದೆ.ಕಾಲೇಜಿನ ಅಭಿವೃದ್ಧಿ ಜತೆಗೆ ಎಲ್ಲಾ ಹಳೆಯ ವಿದ್ಯಾರ್ಥಿಗಳ ಸಮ್ಮಿಲನಕ್ಕೆ ಈ ಸಮಾವೇಶ ವೇದಿಕೆ ಆಗಲಿದೆ. ಪ್ರೀತಿಯ ಹಳೆಯ ವಿದ್ಯಾರ್ಥಿಗಳೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ. ನಿಮ್ಮ ಸಲಹೆ ಸೂಚನೆ ನೀಡಿ. ಕಾಲೇಜಿನ ಅಭಿವೃದ್ಧಿಗೆ ಕೈ ಜೋಡಿಸೋಣ ಎಂದು ಕಾಲೇಜು ಆಡಳಿತ ಮಂಡಳಿ ಮತ್ತು ಸಂಚಾಲಕರು ಮನವಿ ಮಾಡಿದ್ದಾರೆ. ಸರ್ಕಾರಿ ಪದವಿ ಪೂರ್ವ ಕಾಲೇಜು ತೀರ್ಥಹಳ್ಳಿ ಆಡಳಿತ ಮಂಡಳಿ ಮತ್ತು ಶಿಕ್ಷಕ ವರ್ಗ ಎಲ್ಲಾ ಹಳೆಯ…

Read More

ಮೊಬೈಲ್ ಮಾಯೆ ಮಕ್ಕಳನ್ನು ಹಾಳು ಮಾಡುತ್ತಿದೆ – ಮಕ್ಕಳ ಶಿಕ್ಷಣದಲ್ಲಿ ಪೋಷಕರ ಪಾತ್ರ ಮತ್ತು ಮೊಬೈಲ್ ಬಳಕೆಯಿಂದಾಗುವ ದುಷ್ಪರಿಣಾಮಗಳ ವಿಚಾರ ಸಂಕಿರಣ – ಸಮಾಜದಲ್ಲಿ ಧರ್ಮಸ್ಥಳ ಯೋಜನೆಯಿಂದ ಸಾಮಾಜಿಕ ಕ್ರಾಂತಿ NAMMUR EXPRESS NEWS ಹೊಸದುರ್ಗ: ಜಾಗತೀಕರಣದ ಹಾವಳಿಯಿಂದಾಗಿ ಮನುಷ್ಯ ಮನುಷ್ಯರ ಮಧ್ಯೆ ಸಂಬಂಧವೇ ದೂರವಾಗಿದೆ. ಮೊಬೈಲ್ ಎಂಬ ಮಾಯೆ ಮಕ್ಕಳನ್ನ ಬಿಡದೆ ಬಾಧಿಸುತ್ತಿದೆ. ಇದು ಇದೇ ರೀತಿ ಮುಂದುವರೆದರೆ ತಂದೆ ಮಕ್ಕಳ ಬಾಂಧವ್ಯದ ಬದುಕೆ ದೂರವಾಗಿದ್ದು ಅತಿಯಾದ ಮೊಬೈಲ್ ಬಳಕೆಯಿಂದ ಭಾವನಾತ್ಮಕ ಸಂಬಂಧ ದೂರವಾಗಿ ಬುದ್ಧಿಶಕ್ತಿಯನ್ನೇ ಕಳೆದುಕೊಳ್ಳುತ್ತಾರೆ ಎಂದು ಭದ್ರಾವತಿ ಸರ್ಕಾರಿ ಪದವಿ ಪೂರ್ವ ಕಾಲೇಜ್ ಉಪನ್ಯಾಸಕ ನಾಗೇಶ್ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ರಾಧಾಕೃಷ್ಣ ಸಮುದಾಯ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ, ಹಾಲು ರಾಮೇಶ್ವರ ಯೋಜನಾ ಕಚೇರಿ ವತಿಯಿಂದ ಹಮ್ಮಿಕೊಂಡಿದ್ದ ಮಕ್ಕಳ ಶಿಕ್ಷಣದಲ್ಲಿ ಪೋಷಕರ ಪಾತ್ರ ಮತ್ತು ಮೊಬೈಲ್ ಬಳಕೆಯಿಂದಾಗುವ ದುಷ್ಪರಿಣಾಮಗಳ ಕುರಿತ ವಿಚಾರ ಸಂಕೀರ್ಣದಲ್ಲಿ ಅವರು ಮಾತನಾಡಿದರು. ನಾವೆಲ್ಲಾ ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ, ಬದುಕು…

Read More

ಮಾರುಕಟ್ಟೆಯಲ್ಲಿ ಅಡಕೆ ರೇಟು ಎಷ್ಟಿದೆ ಗೊತ್ತಾ?? * ಬೆಟ್ಟೆ,ರಾಶಿ ಬೆಲೆ ಹೇಗಿದೆ? NAMMUR EXPRESS NEWS ಬೆಟ್ಟೆ 48009 – 56109 ಸರಕು 53190 – 90170 ಗೊರಬಲು 17650 – 34590 ರಾಶಿ 35069 – 50189 ನ್ಯೂ ವೆರೈಟಿ 45539 – 49461

Read More

ತೀರ್ಥಹಳ್ಳಿ ಟಾಪ್ ನ್ಯೂಸ್ – ತಮ್ಮ ಕೊಟ್ಟಿಗೆಯಲ್ಲೇ ಗೋ ಗಣತಿಗೆ ಶಾಸಕರ ಚಾಲನೆ! – ಜಾನುವಾರು ಗಣತಿ ಕಾರ್ಯ ತೀರ್ಥಹಳ್ಳಿ ತಾಲೂಕಲ್ಲಿ ಶುರು – ನಿವೃತ್ತ ಪ್ರಾಂಶುಪಾಲ ಜಗದೀಶ್ ಗೌಡರ ನಿಧನ NAMMUR EXPRESS NEWS ತೀರ್ಥಹಳ್ಳಿ: ಭಾರತ ಸರ್ಕಾರದ ಪಶುಸಂಗೋಪನಾ ಇಲಾಖೆ ವತಿಯಿಂದ ಜಾನುವಾರು ಗಣತಿ ಕಾರ್ಯಕ್ಕೆ ಕೇಂದ್ರ ಪಶುಸಂಗೋಪನೆ ಸಚಿವರು ಚಾಲನೆ ನೀಡಿದ್ದು, ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ನೌಕರರು ಶಾಸಕರಾದ ಆರಗ ಜ್ಞಾನೇಂದ್ರರವರ ಗುಡ್ಡೇಕೊಪ್ಪದ ತೋಟದ ಮನೆಯಲ್ಲಿ ಶಾಸಕರು ಸಾಕಿದ ಜಾನುವಾರುಗಳ ಗಣತಿಯ ಮೂಲಕ ತೀರ್ಥಹಳ್ಳಿ ತಾಲೂಕಿನ ಜಾನುವಾರು ಗಣತಿ ಕಾರ್ಯಕ್ಕೆ ಶಾಸಕರ ಮೂಲಕ ಚಾಲನೆ ಕೊಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಗೋ ಸಂತತಿ ಅಪಾಯದಲ್ಲಿ ಇದೆ,ಭಾರತದ ಕೃಷಿ ಚಟುವಟಿಕೆ ಗೋ ಆದಾರಿತವಾಗಿರಬೇಕಿತ್ತು,ಈ ಮಣ್ಣಿನ ಪಲವತ್ತತೆ ಜಾನುವಾರುಗಳ ಸಗಣಿ ಮೂತ್ರದಿಂದ ಹೆಚ್ಚಳವಾಗಬೇಕಿತ್ತು,ದುರ್ದೈವದ ಸಂಗತಿ ಎಂದರೆ ಇವತ್ತು ಗೋ ಸಂತತಿ ಅವನತಿಯ ಕಡೆ ಸಾಗುತ್ತಿದೆ ಗೋ ಆದಾರಿತ ಕೃಷಿಯಿಂದ ನಮ್ಮ ರೈತರು ವಿಮುಕರಾಗುತ್ತಿರುವುದು ಭವಿಷ್ಯದ ದೃಷ್ಟಿಯಿಂದ ಒಳಿತಲ್ಲಾ ಎಂದು…

Read More

ಕರಾವಳಿ ಟಾಪ್ ನ್ಯೂಸ್ – ಮಂಗಳೂರು ಕಮಿಷನರ್ ಫೇಸ್ ಬುಕ್ ಖಾತೆ ಹ್ಯಾಕ್‌! – ಕಾರ್ಕಳ: ಗೂಡ್ಸ್ ವಾಹನ ಡಿಕ್ಕಿ, ನಿಂತುಕೊಂಡಿದ್ದ ವ್ಯಕ್ತಿ ಸಾವು – ಉಡುಪಿ: ವೈನ್‌ಶಾಪ್‌ನಲ್ಲಿ ಎಣ್ಣೆ ಕದ್ದೋಯ್ದ ಕಳ್ಳರು! NAMMUR EXPRESS NEWS ಮಂಗಳೂರು: ಉದ್ಯಮಿಗಳು ಹಾಗೂ ಬ್ಯಾಂಕ್ ನೌಕರರನ್ನು ಗುರಿಯಾಗಿಸಿಕೊಂಡು ಸೈಬರ್ ವಂಚಕರು ಅವರ ಖಾತೆಗಳನ್ನು ಹ್ಯಾಕ್ ಮಾಡುವುದು ಅಥವಾ ನಕಲಿ ಖಾತೆಗಳನ್ನು ಸೃಷ್ಟಿಸಿದ್ದನ್ನು ನೋಡಿದ್ದೇವೆ. ಆದರೆ ಇದೀಗ ಸೈಬರ್ ವಂಚಕರು ಒಂದು ಹೆಜ್ಜೆ ಮುಂದೆ ಹೋಗಿ ಪೊಲೀಸ್ ಕಮಿಷನರ್ ಹೆಸರಿನಲ್ಲೇ ನಕಲಿ ಫೇಸ್ಬುಕ್ ಖಾತೆ ತೆರೆದಿದ್ದು ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೇ ಮಂಗಳೂರಲ್ಲಿ ನಡೆದಿದೆ. ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಅವುಗಳ ಮುಖಾಂತರ ಫ್ರೆಂಡ್ಸ್ ರಿಕ್ವೆಸ್ಟ್ ಗಳನ್ನ ಅಕ್ಸೆಪ್ಟ್ ಮಾಡಿಕೊಂಡು, ಮೆಸೆಂಜರ್ ಮುಖಾಂತರ ಹಣಕ್ಕೆ ಬೇಡಿಕೆ ಇಡುತ್ತಿದ್ದರು ಎಂದು ತಿಳಿದುಬಂದಿದೆ. ಈ ವಿಚಾರ ತಿಳಿದ ಮಂಗಳೂರು ಪೊಲೀಸ್ ಆಯುಕ್ತ ​​​​ ಅನುಪಮ್ ಅಗರ್ವಾಲ್ ಅವರು…

Read More

ಟಾಪ್ ನ್ಯೂಸ್ ಕರ್ನಾಟಕ – ಶಾಸಕ ಸತೀಶ್ ಸೈಲ್ ಅವರಿಗೆ 7 ವರ್ಷ ಶಿಕ್ಷೆ ಪ್ರಕಟ! – ಹಾಸನ : ಪೊಲೀಸ್ ಠಾಣೆ ಎದುರೇ ಗಾಂದೀಜಿ ವೇಷದಲ್ಲಿ ಮಕ್ಕಳ ಭಿಕ್ಷಾಟನೆ – ಗಂಡ ಕಪ್ಪಗಿದ್ದಾನೆ ಎಂದು ಮನನೊಂದು ಯುವತಿ ನೇಣಿಗೆ ಶರಣು NAMMUR EXPRESS NEWS ಕಾರವಾರ: ಅದಿರು ನಾಪತ್ತೆ ಪ್ರಕರಣ ಸಂಬಂಧ ಆರು ಪ್ರಕರಣಗಳಲ್ಲಿ ಕಾರವಾರದ ಶಾಸಕ ಸತೀಶ್ ಸೈಲ್ ಗೆ ಜನಪ್ರತಿನಿಧಿಗಳ ನ್ಯಾಯಾಲಯ ಏಳು ವರ್ಷ ಜೈಲು ಶಿಕ್ಷ ವಿಧಿಸಿ ತೀರ್ಪು ನೀಡಿದೆ. ಎಲ್ಲಾ ಆರು ಪ್ರಕರಣಗಳ ಒಟ್ಟಾರೆ ಪರಿಗಣಿಸಿ ಈ ಶಿಕ್ಷೆ ಪ್ರಕಟವಾಗಿದೆ. ಈ ಹಿಂದೆ ನ್ಯಾಯಾಲಯ ಶಾಸಕ ಸತೀಶ್ ಸೈಲ್ ಅವರನ್ನು ದೋಷಿ ಎಂದು ತೀರ್ಪು ನೀಡಿತ್ತು. ಈಗ ಎಲ್ಲಾ ಪ್ರಕರಣಗಳನ್ನು ಪರಿಗಣಿಸಿ ಏಳು ವರ್ಷ ಶಿಕ್ಷೆ ಪ್ರಕಟಿಸಿದೆ. ಶಿಕ್ಷೆ ಅವಧಿಯನ್ನು ಕಡಿಮೆ ಮಾಡಬೇಕು ಎಂದು ಶಾಸಕ ಸೈಲ್ ಮನವಿ ಮಾಡಿದ್ದರು. ಆದರೆ ಇದೀಗ 7 ವರ್ಷ ಜೈಲು ಆಗಿರುವುದರಿಂದ ಶಾಸಕ ಸ್ಥಾನವೂ ಅನರ್ಹ ಆಗಲಿದೆ.…

Read More

ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್‌ ಚೌಟಗೆ ಮಹತ್ವದ ಹುದ್ದೆ – ರಕ್ಷಣಾ ಸಚಿವಾಲಯ ಸಲಹಾ ಸಮಿತಿ ಸದಸ್ಯರಾಗಿ ನೇಮಕ – ಮಾಜಿ ಸೈನಿಕನಿಗೆ ಕೇಂದ್ರ ಸರ್ಕಾರದ ಮನ್ನಣೆ NAMMUR EXPRESS NEWS ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಕೇಂದ್ರ ರಕ್ಷಣಾ ಸಚಿವರಾದ ರಾಜ್‌ನಾಥ್ ಸಿಂಗ್ ಹಾಗೂ ರಕ್ಷಣಾ ಖಾತೆ ರಾಜ್ಯ ಸಚಿವರಾದ ಸಂಜಯ್ ಸೇಠ್ ಅವರ ಅಧ್ಯಕ್ಷತೆಯ ಈ ಸಲಹಾ ಸಮಿತಿಯಲ್ಲಿ ಲೋಕಸಭೆಯ ಒಟ್ಟು 14 ಹಾಗೂ ರಾಜ್ಯಸಭೆಯ 6 ಮತ್ತು ಇಬ್ಬರು ಪದನಿಮಿತ್ತ ಸದಸ್ಯರು ಇದ್ದಾರೆ. ಲೋಕಸಭೆಯಿಂದ ಆಯ್ಕೆಯಾದ ಸದಸ್ಯರ ಪೈಕಿ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ ಕೂಡಾ ಒಬ್ಬರು. ರಕ್ಷಣಾ ಸಚಿವಾಲಯದ ಈ ಸಲಹಾ ಸಮಿತಿಯೂ ಸರ್ಕಾರದ ರಕ್ಷಣಾ ನೀತಿಗಳು, ವಿವಿಧ ಯೋಜನೆ-ಕಾರ್ಯಕ್ರಮಗಳ ಅನುಷ್ಠಾನದ ವಿಧಾನ ಹಾಗೂ ದೇಶದ ರಕ್ಷಣೆಗೆ ಸಂಬಂಧಿಸಿದ ವಿಚಾರಗಳ ಕುರಿತಂತೆ ಆಗಾಗ ಸಭೆ ನಡೆಸಿ ಸೂಕ್ತ ಸಲಹೆ ನೀಡಲಿದೆ.…

Read More

ಕುವೆಂಪು ವಿಶ್ವವಿದ್ಯಾಲಯದ ಎಡವಟ್ಟು: ವಿದ್ಯಾರ್ಥಿಗಳಿಗೆ ಬಿಕ್ಕಟ್ಟು! – ಸ್ನಾತಕೊತ್ತರ ಪದವಿ ಕೋರ್ಸ್‌ಗಳ ಪ್ರವೇಶ ಆಫ್‌ಲೈನ್ ಮೂಲಕ ಅರ್ಜಿ – ಪೋರ್ಟಲ್ ಮೂಲಕ ಪ್ರವೇಶಾತಿಗೆ ಅರ್ಜಿ ಸಲ್ಲಿಕೆಯಲ್ಲಿ ತಾಂತ್ರಿಕ ಸಮಸ್ಯೆ – ಬಿ.ಎಡ್ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಇನ್ನೂ ಸಿಕ್ಕಿಲ್ಲ ಅಂಕಪಟ್ಟಿ!? NAMMUR EXPRESS NEWS ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯವು 2024-25ನೇ ಸಾಲಿಗೆ ವಿವಿಧ ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಡಿಪ್ಲೋಮಾ/ ಸರ್ಟಿಫಿಕೇಟ್ ಕೋರ್ಸ್‌ಗಳ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಪ್ರವೇಶಾತಿ ಅರ್ಜಿಗಳನ್ನು ಉಲ್ಲೇಖಿತ(1)ರ ಅಧಿಸೂಚನೆಯಲ್ಲಿ ಯು.ಯು.ಸಿ.ಎಂ.ಎಸ್. ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :30-10-2024ರವರೆಗೆ ಎಂದು ನಿಗದಿಗೊಳಿಸಲಾಗಿತ್ತು. ಆದರೆ ಕೆಲವೊಂದಿಷ್ಟು ತಾಂತ್ರಿಕ ಸಮಸ್ಯೆಗಳು ಉಂಟಾಗಿರುವುದರಿಂದ ವಿದ್ಯಾರ್ಥಿಗಳಿಗೆ ಬಾರಿ ತೊಂದರೆ ಉಂಟಾಗಿದೆ. 2024-25ನೇ ಶೈಕ್ಷಣಿಕ ಸಾಲಿನ ಯು.ಯು.ಸಿ.ಎಂ.ಎಸ್. ಪೋರ್ಟಲ್ ಮೂಲಕ ಪ್ರವೇಶಾತಿ ಅರ್ಜಿ ಸಲ್ಲಿಕೆಯಲ್ಲಿ ತಾಂತ್ರಿಕ ತೊಂದರೆಯಾಗಿದ್ದು, ಉಲ್ಲೇಖಿತ (2)ರ ಮಾನ್ಯ ಕುಲಪತಿಗಳ ಅನುಮೋದನೆ ಮೇರೆಗೆ, 2024-25ನೇ ಶೈಕ್ಷಣಿಕ ಸಾಲಿನ ಸ್ನಾತಕೊತ್ತರ ಪದವಿ/ ಸ್ನಾತಕೊತ್ತರ ಡಿಪ್ಲೋಮಾ / ಸರ್ಟಿಫೀಕೇಟ್ ಕೋರ್ಸ್‌ಗಳ ಪ್ರವೇಶಾತಿಗೆ ವಿದ್ಯಾರ್ಥಿಗಳು…

Read More

ಉಡುಪಿ: ಬೆಂಗಳೂರು ಇಬ್ಬರು ಯುವಕರು ಕುಂದಾಪುರ ಬೀಚ್ ನಲ್ಲಿ ನೀರುಪಾಲು! – ಮುಲ್ಕಿ: ಸಂಬಂಧಿತ ಕಾಯಿಲೆ ಉಲ್ಬಣಿಸಿ 7ನೇ ತರಗತಿಯ ವಿದ್ಯಾರ್ಥಿ ನಿಧನ! – ಕಾಪು: ತ್ಯಾಜ್ಯ ಪೇಪರ್ ಸಾಗಾಟ ವಾಹನ ಪಲ್ಟಿ NAMMUR EXPRESS NEWS ಉಡುಪಿ: ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ಸಮುದ್ರಪಾಲಾಗಿರುವ ಘಟನೆ ಅ.26 ಬೆಳಿಗ್ಗೆ ಬೀಜಾಡಿ ಬೀಚ್ ನಲ್ಲಿ ಸಂಭವಿಸಿದೆ. ಘಟನೆಯಲ್ಲಿ ಓರ್ವನ ಮೃತದೇಹ ಪತ್ತೆಯಾಗಿದ್ದು ಇನ್ನೋರ್ವನಿಗಾಗಿ ಹುಡುಕಾಟ ನಡೆಯುತ್ತಿದೆ. ಘಟನೆಯಲ್ಲಿ ನೀರುಪಾಲಾಗಿದ್ದ ಕುಂದಾಪುರ ಮೂಲದ ಅಜಯ್ ಮೃತಪಟ್ಟಿದ್ದು, ಬೆಂಗಳೂರು ದಾಸರಹಳ್ಳಿ ನಿವಾಸಿ ಸಂತೋಷ್ ನೀರುಪಾಲಾದ ಮತ್ತೊಬ್ಬ ಯುವಕ. ಈತನಿಗಾಗಿ ಹುಡುಕಾಟ ಮುಂದುವರೆದಿದೆ. ಜೊತೆಗೆ ಬಂದಿದ್ದ ಮೋಕ್ಷಿತ್ ಮತ್ತು ಶ್ರೀಯಾನ್ ಅಪಾಯದಿಂದ ಪಾರಾಗಿದ್ದಾರೆ. ಮದುವೆ ಕಾರ್ಯಕ್ರಮಕ್ಕೆಂದು ಇಬ್ಬರು ಬೆಂಗಳೂರಿನ ದಾಸರಹಳ್ಳಿಯಿಂದ ಕುಂದಾಪುರಕ್ಕೆ ಬಂದಿದ್ದು ಬೀಜಾಡಿ ಬೀಚ್ ಪಕ್ಕದ ರೆಸಾರ್ಟ್ ವೊಂದರಲ್ಲಿ ಉಳಿದುಕೊಂಡಿದ್ದರು ಎನ್ನಲಾಗಿದೆ. ಅದರಂತೆ ಅ. 26ರಂದು ಬೆಳಿಗ್ಗೆ ತನ್ನ ಇನ್ನಿಬ್ಬರು ಸ್ಥಳೀಯ ಸ್ನೇಹಿತರ ಜೊತೆ ಸಮುದ್ರದಲ್ಲಿ ಈಜಲು ತೆರಳಿದ ವೇಳೆ ಸಮುದ್ರಪಾಲಾಗಿದ್ದಾರೆ. ಈ ವೇಳೆ…

Read More