ತೀರ್ಥಹಳ್ಳಿಯಲ್ಲೂ ಹೈಟೆಕ್ ವೇಷ್ಯಾವಾಟಿಕೆ ದಂಧೆ! – ಮಲೆನಾಡಿನ ಹಲವು ತಾಲೂಕಿಗೂ ಲಿಂಕ್..? – ಸಿಕ್ಕಿಬಿದ್ದಿದ್ದು ಯುವತಿಯರಲ್ಲ, ಮಹಿಳೆಯರು! – ಹೇಗೆ ಸಿಕ್ಕಿಬಿದ್ದರು…ಹೇಗೆ ದಂಧೆ ನಡೆಯುತ್ತಿತ್ತು..? – ತೀರ್ಥಹಳ್ಳಿ ಪೊಲೀಸರ ಖಡಕ್ ಕೆಲಸಕ್ಕೆ ಮೆಚ್ಚುಗೆ NAMMUR EXPRESS NEWS ತೀರ್ಥಹಳ್ಳಿ: ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಹೈಟೆಕ್ ವೇಷ್ಯಾವಾಟಿಕೆ ದಂಧೆ ಬಯಲಾಗಿದ್ದು ಇದೀಗ ಈ ದಂಧೆ ಮಲೆನಾಡಿನ ಎಲ್ಲಾ ತಾಲೂಕಲ್ಲಿ ಕಾರ್ಯಚರಣೆ ಮಾಡುತ್ತಿದೆ ಎಂಬ ಸುಳಿವು ಸಿಕ್ಕಿದೆ. ಮೊಬೈಲ್ ಮೂಲಕವೇ ವ್ಯವಹಾರ ಮಾಡುವ ಈ ದಂಧೆಯಲ್ಲಿ ಮಹಿಳೆಯರು ಹೆಚ್ಚಾಗಿದ್ದಾರೆ ಎಂದು ತಿಳಿದು ಬಂದಿದೆ. ಏನಿದು ಘಟನೆ?: ತೀರ್ಥಹಳ್ಳಿ ಪೊಲೀಸರು ಪೇಟೆಯಲ್ಲಿಯೇ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ರೇಡ್ ನಡೆಸಿ, ಆರೋಪಿಗಳನ್ನು ಬಂಧಿಸಿದ್ದಾರೆ. ಸಾಂತ್ವನ ಕೇಂದ್ರ ಅಧಿಕಾರಿಯು ಸೇರಿದಂತೆ ಪೊಲೀಸರ ತಂಡ ಮಾಹಿತಿ ಆಧರಿಸಿ ದಾಳಿ ನಡೆಸಿದೆ. ಈ ವೇಳೆ ವಾಸದ ಮನೆಯಲ್ಲಿದ್ದ ಮೂವರು ಮಹಿಳೆಯರನ್ನು ರಕ್ಷಿಸಲಾಗಿದೆ. ಈ ಸಂಬಂಧ ಪೊಲೀಸರೇ ನೀಡಿರುವ ಪ್ರಕಟಣೆಯ ಪ್ರಕಾರ, ಇಬ್ಬರನ್ನ ಬಂಧಿಸಲಾಗಿದೆ. ಪ್ರಶಾಂತ್ ಕೆ.ಎಸ್. 33 ವರ್ಷ, ಜೆ.ಪಿ. ನಗರ,…
Author: Nammur Express Admin
ಮೋದಿ ಮತ್ತೆ ವಿಶ್ವದ ನಂ.1 ಜನಪ್ರಿಯ ನಾಯಕ! – ಅಮೇರಿಕಾ ಪ್ರವಾಸದಲ್ಲಿರುವ ಮೋದಿ ಹೆಸರು ಟಾಪ್ – ಜಾಗತಿಕ ನಾಯಕರಲ್ಲಿ ಭಾರತಕ್ಕೆ ಅಗ್ರ ಸ್ಥಾನ – ಏನಿದು ಸಮೀಕ್ಷೆ… ಇಲ್ಲಿದೆ ಡೀಟೇಲ್ಸ್ NAMMUR EXPRESS NEWS ನವದೆಹಲಿ: ಜಾಗತಿಕ ಜನಪ್ರಿಯ ನಾಯಕರಲ್ಲಿ ಪ್ರಧಾನಿ ನರೇಂದ್ರ ಮತ್ತೊಮ್ಮೆ ಮೊದಲ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ. ಈಗಾಗಲೇ ಕಳೆದ 9 ವರ್ಷದಲ್ಲಿ ಹಲವು ಸಮೀಕ್ಷೆಗಳಲ್ಲಿ ಮೋದಿ ಅವರ ವರ್ಚಸ್ಸು ಹೆಸರು ಮಾಡಿತ್ತು. ಇದೀಗ ಮತ್ತೆ ವಿಶ್ವದ ನಂ.1 ಜನಪ್ರಿಯ ನಾಯಕರ ಪಟ್ಟಿಯಲ್ಲೇ ಮುಂದುವರೆದಿದ್ದಾರೆ. ಈ ಬಗ್ಗೆ ಮಾರ್ನಿಂಗ್ ಕನ್ಸಲ್ಟ್ ಎನ್ನುವಂತ ಸಂಸ್ಥೆಯೊಂದು ಸಮೀಕ್ಷೆ ನಡೆಸಿದೆ. ತನ್ನ ವರದಿಯನ್ನು ಬಿಡುಗಡೆ ಮಾಡಿದ್ದು, ಈ ಬಾರಿ ಶೇ.76ರಷ್ಟು ಅನುಮೋದನೆಯ ರೇಟಿಂಗ್ ಪಡೆದಿರುವಂತ ಪ್ರಧಾನಿ ಮೋದಿಯವರು ನಂ.1 ಜನಪ್ರಿಯ ಜಾಗತಿಕ ನಾಯಕರಾಗಿ ಮತ್ತೊಮ್ಮೆ ಮೊದಲ ಸ್ಥಾನವನ್ನು ಗಳಿಸಿಕೊಂಡಿದ್ದಾರೆ. ಅಮೇರಿಕಾ ಮೂಲಕ ಈ ಸಂಸ್ಥೆ ಪ್ರತಿ ತಿಂಗಳು ಸಮೀಕ್ಷೆ ನಡೆಸುತ್ತದೆ. ಅದೇ ರೀತಿ ಜೂನ್ ತಿಂಗಳಿನಲ್ಲಿ ಸಮೀಕ್ಷೆ ನಡೆಸಿತ್ತು. ಅದರಲ್ಲಿ ಪ್ರಧಾನಿ ಮೋದಿ…
ಕ್ರೈಂ ಫೈಲ್: ನಮ್ಮೂರ್ ಎಕ್ಸ್ ಪ್ರೆಸ್ ಮದುವೆಗೆ ವಧು ಸಿಗಲಿಲ್ಲ ಯುವಕ ಆತ್ಮಹತ್ಯೆ! – ದಾವಣಗೆರೆಯಲ್ಲಿ ಟಿಪ್ಪರ್ ಹರಿದು ಮಗು ಸಾವು! – ಸುತ್ತಿಗೆಯಿಂದ ಹೊಡೆದು ಮಕ್ಕಳನ್ನೇ ಕೊಂದ ತಂದೆ.! – ತನ್ನ ಅಂಗಡಿ ಓಪನ್ ದಿನವೇ ಹೆಣವಾದ ಯುವಕ – ಪತ್ನಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿದ ಪತಿ – ಬಂಟ್ವಾಳದಲ್ಲಿ ಇಬ್ಬರು ಬಾಲಕಿಯರು ನಾಪತ್ತೆ? NAMMUR EXPRESS NEWS ಬ್ಯಾಡಗಿ( ಹಾವೇರಿ): ಮದುವೆಗೆ ವಧು ಸಿಗಲಿಲ್ಲ ಎಂಬ ಕಾರಣಕ್ಕೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮಾಸಣಗಿ ಗ್ರಾಮದಲ್ಲಿ ಕೃಷಿಕನೊಬ್ಬ ಬುಧವಾರ ಆತ್ಮಹತ್ಯೆ ಮಾಡಿಕೊಂಡಿ ದ್ದಾನೆ. ಮಂಜು ರುದ್ರಪ್ಪನಾಗನೂರ(36)ಮೃತ ಯುವಕ. ಕೃಷಿ ಮಾಡಿಕೊಂಡಿದ್ದ ಮಂಜು ಹಲವು ವರ್ಷಗಳಿಂದ ಹುಡುಗಿ ಹುಡುಕುತ್ತಿದ್ದ. ಆದರೆ, ಹುಡುಗಿ ಸಿಕ್ಕಿರಲಿಲ್ಲ. ತಂದೆ-ತಾಯಿಗೆ ಅಡುಗೆ ಮಡಲು ಯಾರೂ ಇಲ್ಲ ಎಂದು ನೊಂದುಕೊಂಡಿದ್ದ. ಇದನ್ನೇ ಮನಸ್ಸಿಗೆ ಹಚ್ಚಿಕೊಂಡು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಟಿಪ್ಪರ್ ಹರಿದು ಮಗು ಸಾವು!: ಅಂಗನವಾಡಿ ಮುಗಿಸಿ ಅಜ್ಜಿಯೊಂದಿಗೆ…
ಪರಶುರಾಮ ಥೀಂ ಪಾರ್ಕ್ ಭೇಟಿ: ತಾತ್ಕಾಲಿಕ ನಿಷೇಧ! – ಮೂರ್ತಿ ಬಲಪಡಿಸುವಿಕೆ, ಸಿಡಿಲು ನಿರೋಧಕ ಅಳವಡಿಕೆ ಕಾಮಗಾರಿ – ಸೆಪ್ಟೆಂಬರ್ ಅಂತ್ಯದವರೆಗೆ ಪ್ರವಾಸಿಗರಿಗೆ ನಿಷೇಧ – ದೇವಸ್ಥಾನದ ನೌಕರರಿಗೆ ಆರೋಗ್ಯ ವಿಮೆ ಸೌಲಭ್ಯ NAMMUR EXPRESS NEWS ಕಾರ್ಕಳ: ಕಾರ್ಕಳ ತಾಲೂಕು ಯರ್ಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಶುರಾಮ ಥೀಂ ಪಾರ್ಕ್ನಲ್ಲಿ ಪರಶುರಾಮ ಮೂರ್ತಿಯನ್ನು ಬಲಪಡಿಸುವ, ಮೂರ್ತಿಗೆ ಸಿಡಿಲು ನಿರೋಧಕವನ್ನು ಅಳವಡಿಸುವ, ಮೂರ್ತಿಗೆ ತುಕ್ಕು ನಿರೋಧಕ ಲೇಪನದ ಹಾಗೂ ಇನ್ನಿತರ ಮುಕ್ತಾಯದ ಕಾಮಗಾರಿಯನ್ನು ಪೂರ್ಣಗೊಳಿಸಲು ಅನುಕೂಲವಾಗುವಂತೆ ಜೂನ್ 26 ರಿಂದ ಸೆಪ್ಟಂಬರ್ ಅಂತ್ಯದವರೆಗೆ ಪರಶುರಾಮ ರ್ಥೀಂ ಪಾರ್ಕ್ಗೆ ಸಾರ್ವಜನಿಕರು ಹಾಗೂ ಪ್ರವಾಸಿಗರ ಭೇಟಿಯನ್ನು ನಿಷೇಧಿಸಲಾಗಿದೆ ಎಂದು ಕಾರ್ಕಳ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದೇವಸ್ಥಾನದ ನೌಕರರಿಗೆ ಆರೋಗ್ಯ ವಿಮೆ ಸೌಲಭ್ಯ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ವತಿಯಿಂದ ಜಿಲ್ಲೆಯ ಪ್ರವರ್ಗ-ಸಿ ದೇವಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರು ಆರೋಗ್ಯ ವಿಮೆ ಸೌಲಭ್ಯ ಪಡೆಯಲು, ನೌಕರರ ಹೆಸರು, ಹುದ್ದೆಗೆ ಸೇರಿದ ದಿನಾಂಕ,…
ಹೋಂ ಸ್ಟೇಗಳ ನೋಂದಣಿ ಕಡ್ಡಾಯ! – ಪ್ರವಾಸೋದ್ಯಮ ಇಲಾಖೆಯ ಪ್ರಕಟಣೆ – ಪ್ರವಾಸೋದ್ಯಮ ಅಭಿವೃದ್ಧಿ, ಕಾನೂನು ಸುರಕ್ಷತೆ ಹೆಜ್ಜೆ NAMMUR EXPRESS NEWS ಸರ್ಕಾರದ ಆದೇಶದಂತೆ ಹೋಂ ಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಪ್ರತಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಂ ಸ್ಟೇಗಳನ್ನು ಜಿಲ್ಲಾಡಳಿತಗಳು ಗಂಭೀರವಾಗಿ ಪರಿಗಣಿಸಿದ್ದು, ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿಯಾಗದ ಹೋಂ ಸ್ಟೇಗಳು ಇದ್ದಲ್ಲಿ ಕಡ್ಡಾಯವಾಗಿ ನೋಂದಣಿಯಾಗಿ ಪ್ರವಾಸೋದ್ಯಮ ಇಲಾಖೆಯಲ್ಲಿ ಅನುಮೋದನೆ ಪಡೆಯುವಂತೆ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಪ್ರವಾಸೋದ್ಯಮ ಅಭಿವೃದ್ಧಿ, ಕಾನೂನು ಸುರಕ್ಷತೆ ದೃಷ್ಟಿಯಿಂದ ಈ ನೋಂದಣಿ ಕಡ್ಡಾಯವಾಗಿದೆ. ಇದನ್ನೂ ಓದಿ : ಗೃಹಜ್ಯೋತಿ ಅರ್ಜಿ ನೋಂದಣಿಗೆ ಹೊಸ ಲಿಂಕ್! HOW TO APPLY : NEET-UG COUNSELLING 2023
ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ! – ರಾಜ್ಯ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ – ನೂರಾರು ಹುದ್ದೆ ಭರ್ತಿಗೆ ಅರ್ಜಿ… ಯಾವ ಯಾವ ಹುದ್ದೆಗೆ ಅರ್ಜಿ? NAMMUR EXPRESS NEWS ಬೆಂಗಳೂರು: ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿರುವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈ ಕುರಿತು ಅಧಿಸೂಚನೆ ಬಿಡುಗಡೆ ಮಾಡಿದ್ದು, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ಸಂಸ್ಥೆಗಳಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ವೃಂದದ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಹ…
ತೀರ್ಥಹಳ್ಳಿಯಲ್ಲಿ ಮತ್ತೊಂದು ಸೆಕ್ಸ್ ರಾಕೆಟ್!? – ಪಟ್ಟಣದ ಮಧ್ಯ ಭಾಗದಲ್ಲೇ ವೇಶ್ಯಾವಾಟಿಕೆ – ತಡ ರಾತ್ರಿ ದಾಳಿ: 3 ಮಂದಿ ಮಹಿಳೆಯರ ರಕ್ಷಣೆ, ಹಲವರ ಬಂಧನ? NAMMUR EXPRESS NEWS ತೀರ್ಥಹಳ್ಳಿ: ತೀರ್ಥಹಳ್ಳಿಯಲ್ಲಿ ಎಬಿವಿಪಿ ಅಧ್ಯಕ್ಷನ ಅಶ್ಲೀಲ ವಿಡಿಯೋ ಪ್ರಕರಣದ ಪ್ರಮುಖ ಆರೋಪಿ ಪ್ರತೀಕ್ ಗೌಡ ಮೇಲೆ ತೀರ್ಥಹಳ್ಳಿ ಪೊಲೀಸರು ಪೋಕ್ಸೋ ಕಾಯ್ದೆಯಡಿಯಲ್ಲಿ ದಾಖಲು ಮಾಡಿ ಜೈಲಿಗೆ ಕಳುಹಿಸಿದ್ದಾರೆ. ಈ ನಡುವೆ ತೀರ್ಥಹಳ್ಳಿ ಪಟ್ಟಣದಲ್ಲಿ ಮತ್ತೊಂದು ವೇಶ್ಯಾವಾಟಿಕೆ ರಾಕೆಟ್ ಬುಧವಾರ ರಾತ್ರಿ ಬಯಲಾದ ಬಗ್ಗೆ ಮೂಲಗಳು ತಿಳಿಸಿವೆ. ತೀರ್ಥಹಳ್ಳಿ ಪಟ್ಟಣದ ಮಧ್ಯ ಭಾಗದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸಿದ ಪ್ರಕರಣದಲ್ಲಿ ಮೂವರು ಮಹಿಳೆಯರನ್ನು ರಕ್ಷಿಸಿದ್ದು ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಆದರೆ ಪೊಲೀಸ್ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಮಹಿಳೆಯರು ಬೆಂಗಳೂರು ಮತ್ತು ಶಿವಮೊಗ್ಗ ಮೂಲದವರು ಎನ್ನಲಾಗಿದೆ. ಸ್ಥಳೀಯರ ಮಾಹಿತಿ ಮೇರೆಗೆ ರಾತ್ರೋ ರಾತ್ರಿ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ. Watch now : ಚಕ್ರವರ್ತಿ ಸೂಲಿಬೆಲೆ ತೀರ್ಥಹಳ್ಳಿ…
ರಜನಿಕಾಂತ್ ಜತೆ ಯಶ್ ನಟನೆ?! – ಯಶ್ ಮುಂದಿನ ಸಿನಿಮಾ ಸಾವಿರ ಕೋಟಿ ಬಜೆಟ್ – ಪ್ಯಾನ್ ಇಂಡಿಯಾ ಮಟ್ಟದಲ್ಲಿ ಯಶ್ ಹವಾ NAMMUR EXPRESS NEWS ಕನ್ನಡದ ರಾಕಿಂಗ್ ಸ್ಟಾರ್ ಯಶ್ ಈಗ ರಾಷ್ಟ್ರ ಮಟ್ಟದ ಹೀರೋ. ಅವರ ಕಾಲಿಶೀಟ್ ಪಡೆಯಲು ದೇಶದ ಟಾಪ್ ನಿರ್ದೇಶಕರು ಕೂಡ ಕ್ಯೂ ನಿಲ್ಲುತ್ತಾರೆ. ಅವರು ತಮ್ಮ 19ನೇ ಸಿನಿಮಾವನ್ನು ಯಾವಾಗ ಅನೌನ್ಸ್ ಮಾಡುತ್ತಾರೆ ಎಂಬ ಕುತೂಹಲದಲ್ಲಿ ಅವರ ಅಭಿಮಾನಿಗಳಿದ್ದಾರೆ. ಈ ನಡುವೆ ಭಾರತದ ಮತ್ತೊಬ್ಬ ಸಿನಿಮಾ ದಿಗ್ಗಜರಾದ ರಜನೀಕಾಂತ್ ಅವರ ಜತೆ ಯಶ್ ಮಗನಾಗಿ ನಟನೆ ಮಾಡಲಿದ್ದಾರೆ ಎಂಬ ಚರ್ಚೆ ಕೇಳಿ ಬಂದಿದೆ. ಅವರು ಆ ಸಿನಿಮಾದಲ್ಲಿ ನಟಿಸುತ್ತಾರೆ, ಈ ಸಿನಿಮಾದಲ್ಲಿ ನಟಿಸುತ್ತಾರೆ ಎಂಬಂತಹ ಸುದ್ದಿಗಳು ಹಬ್ಬುತ್ತಲೇ ಇವೆ. ಮೊನ್ನೆ ಎಷ್ಟೇ ನಿತೇಶ್ ತಿವಾರಿ ಅವರ ರಾಮಾಯಣದಲ್ಲಿ ನಟಿಸುತ್ತಾರೆ ಎಂದು ಸುದ್ದಿಯಾಗಿ ಅದು ಇಲ್ಲ ಎಂದು ಮತ್ತೊಂದು ಸುದ್ದಿಯಾಗಿತ್ತು. ಈಗ ಸೂಪರ್ ಸ್ಟಾರ್ ರಜನಿಕಾಂತ್ ಅವರ ಸಿನಿಮಾದಲ್ಲಿ ಯಶ್ ಮಗನಾಗಿ ನಟಿಸಬಹುದು ಎನ್ನಲಾಗುತ್ತಿದೆ.…
ಕ್ರಿಯೇಟಿವ್ ಕಾಲೇಜಲ್ಲಿ ಯೋಗ ದಿನದ ರಂಗು – ಯೋಗಾಭ್ಯಾಸದಿಂದ ಆತ್ಮವಿಶ್ವಾಸ ಹೆಚ್ಚಳ: ವಿದ್ವಾನ್ ಗಣಪತಿ ಭಟ್ – ರೋಗ ಮುಕ್ತಿಗೆ ಯೋಗವೂ ಮದ್ದು: ಅಶ್ವತ್.ಎಸ್.ಎಲ್ NAMMUR EXPRESS NEWS ಕಾರ್ಕಳ: ಯೋಗಾಭ್ಯಾಸದಿಂದ ಸದೃಢ ದೇಹ ಮತ್ತು ಆತ್ಮವಿಶ್ವಾಸ ಹೆಚ್ಚುತ್ತದೆ ಎಂದು ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಹೇಳಿದ್ದಾರೆ. ಕಾರ್ಕಳ ಕ್ರಿಯೇಟಿವ್ ಪಿ ಯು ಕಾಲೇಜಿನಲ್ಲಿ ನಡೆದ ವಿಶ್ವ ಯೋಗ ದಿನದಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಪ್ರತಿನಿತ್ಯ ಯೋಗ ಮತ್ತು ಸೂರ್ಯ ನಮಸ್ಕಾರಗಳನ್ನು ಮಾಡುವುದರಿಂದ ಶರೀರ ಮತ್ತು ಮನಸ್ಸು ಪ್ರಫುಲ್ಲಗೊಳ್ಳುವುದರ ಜೊತೆಗೆ ಆತ್ಮವಿಶ್ವಾಸ, ಏಕಾಗ್ರತೆ ಹೆಚ್ಚುತ್ತದೆ. ಇದರಿಂದ ಸ್ವಸ್ಥ ಮನಸ್ಸು, ಸುಂದರ ಬದುಕು, ರೋಗ ರಹಿತ ಜೀವನ ನಡೆಸಬಹುದಾಗಿದೆ ಎಂದರು. ಜೂನ್ 21ನ್ನು ಅಂತರಾಷ್ಟ್ರೀಯ ಯೋಗದಿನವನ್ನಾಗಿ ಆಚರಿಸುವ ಮೂಲಕ ಇಡೀ ಜಗತ್ತೇ ಯೋಗವನ್ನು ಒಪ್ಪಿಕೊಂಡಿದೆ. ಇದರಿಂದ ಆರೋಗ್ಯಪೂರ್ಣ ವ್ಯಕ್ತಿತ್ವದೊಂದಿಗೆ, ವ್ಯಕ್ತಿಯ ವಯಕ್ತಿಕ ರೋಗ ಮುಕ್ತಿಯೂ ಆಗುವುದರಿಂದ ಎಲ್ಲರೂ ಯೋಗವನ್ನು ಪ್ರತಿದಿನ ಮಾಡುವಂತಾಗಬೇಕು ಎಂದು ಸಂಸ್ಥಾಪಕರಾದ ಅಶ್ವತ್.ಎಸ್.ಎಲ್ ಕರೆ…
ಮಕ್ಕಳಿಗೆ ಬ್ಯಾಗ್ ಭಾರ ಇಳಿಸಿದ ಸರ್ಕಾರ! – ತರಗತಿವಾರು ಬ್ಯಾಗ್ ಭಾರ ನಿಗದಿಪಡಿಸಿದ ಇಲಾಖೆ – ಪ್ರಾಥಮಿಕ ಮತ್ತು ಪ್ರೌಢಶಾಲೆ ಮಕ್ಕಳಿಗೆಗುಡ್ ನ್ಯೂಸ್ – ಯಾವ ತರಗತಿಗೆ ಎಷ್ಟು ತೂಕ ನಿಗದಿ.. ಇಲ್ಲಿದೆ ಮಾಹಿತಿ NAMMUR EXPRESS NEWS ಬೆಂಗಳೂರು: ಶಾಲಾ ಮಕ್ಕಳಿಗೆ ಇನ್ಮುಂದೆ ಬ್ಯಾಗ್ ಭಾರ ಕಡಿಮೆ ಆಗಲಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಹೊರೆಯಿಲ್ಲದ ಕಲಿಕೆ ಅನುಸಾರ 1ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶಾಲಾ ಬ್ಯಾಗ್ ಹೊರೆ ತಗ್ಗಿಸುವ ಬಗ್ಗೆ ಯಶಪಾಲ ಶರ್ಮಾ ಸಮಿತಿಯ ಶಿಫಾರಸ್ಸಿನ ಮೇರೆಗೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹೊರೆಯಿಲ್ಲದೇ ಸಂತಸದಾಯಕವಾಗಿ ಕಲಿಯುವ ವಾತಾವರಣವನ್ನು ರೂಪಿಸುವ ಸಲುವಾಗಿ ಹೊಸ ನಿಯಮ ಜಾರಿಗೆ ತರಲಾಗಿದೆ. ಇದರಿಂದಾಗಿ ಹೆಚ್ಚು ಭಾರ ಹೊರುವ ಅವಶ್ಯಕತೆ ಇಲ್ಲ. ಎಷ್ಟನೇ ತರಗತಿ ಮಕ್ಕಳಿಗೆ ಎಷ್ಟು ತೂಕ? – 1 -2 ನೇ ತರಗತಿ…