Author: Nammur Express Admin

ದೇವಸ್ಥಾನಗಳಲ್ಲಿ ಹಿರಿಯ ನಾಗರಿಕರಿಗೆ ನೇರ ಎಂಟ್ರಿ – ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಟ್ಟ ರಾಜ್ಯ ಸರ್ಕಾರ – ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಲ್ಲಿ ಹೊಸ ನಿಯಮ – ಏನೇನು ದಾಖಲೆ ಬೇಕು… ಇಲ್ಲಿದೆ ವಿವರ NAMMUR EXPRESS NEWS ಬೆಂಗಳೂರು: ಕರ್ನಾಟಕದ ಹಿಂದೂ ಧಾರ್ಮಿಕ ದೇವಾಲಯಗಳಾದ ಎ ವರ್ಗ ಹಾಗೂ ಬಿ ವರ್ಗ ಸಂಸ್ಥೆಗಳಲ್ಲಿ 65 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ ನೇರವಾಗಿ ದೇವರ ದರ್ಶನ ಸೌಲಭ್ಯವನ್ನು ಕಲ್ಪಿಸಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಹಿರಿಯ ನಾಗರೀಕರಿಗೆ ಸರದಿ ಸಾಲಿನಲ್ಲಿ ನಿಂತುಕೊಂಡು ದೇವರ ದರ್ಶನ ಪಡೆಯುವುದಕ್ಕೆ ತುಂಬಾ ತೊಂದರೆಯಾಗುತ್ತಿದೆ. ಹೀಗಾಗಿ ವಯಸ್ಸಿನ ಆಧಾರದ ಮೇಲೆ ಸರದಿ ಸಾಲಿನಲ್ಲಿ ನಿಲ್ಲದಂತೆ ನೇರವಾಗಿ ದೇವರ ದರ್ಶನಕ್ಕೆ ಅನುವು ಮಾಡಿಕೊಡಬೇಕೆಂದು ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ, ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟ(ರಿ) ಕೋರಿದೆ ಎಂದಿದ್ದಾರೆ. ಇತ್ತೀಚಿಗೆ ದೇವಾಲಯಗಳಿಗೆ ಆಗಮಿಸುತ್ತಿರುವ ಭಕ್ತರ ಸಂಖ್ಯೆ ಕೂಡ ಗಣನೀಯವಾಗಿ ಹೆಚ್ಚಾಗುತ್ತಿದೆ.…

Read More

NEET 2023 : ನೀಟ್ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳೇ ಗಮನಿಸಿ..ರಾಜ್ಯದಲ್ಲಿ ಮೆಡಿಕಲ್ ಸೀಟುಗಳ ಸಂಖ್ಯೆ ಹೆಚ್ಚಳ.. ಎಷ್ಟು? ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 314 ಸೀಟುಗಳು ದೊರೆಯಲಿವೆ. ಚನ್ನಪಟ್ಟಣದಲ್ಲಿ ಒಂದು ಖಾಸಗಿ ವೈದ್ಯಕೀಯ ಕಾಲೇಜು ಆರಂಭವಾಗಲಿದ್ದು, ಅಲ್ಲಿ 150 ಸೀಟುಗಳು, ಅಂಬೇಡ್ಕರ್ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ 50 ಹಾಗೂ ಕಲಬುರಗಿಯ ಇಎಸ್‌ಐ ವೈದ್ಯಕೀಯ ಕಾಲೇಜಿನಲ್ಲಿ 25 ಸೀಟುಗಳನ್ನು ಹೆಚ್ಚಿಸಲು ಈಗಾಗಲೇ ಅನುಮತಿ ಸಿಕ್ಕಿದೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ. ಹೈಲೈಟ್ಸ್‌: ನೀಟ್ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳೆ ಗಮನಿಸಿ. ರಾಜ್ಯದಲ್ಲಿ ಮೆಡಿಕಲ್ ಸೀಟುಗಳ ಸಂಖ್ಯೆ ಹೆಚ್ಚಳ. ಎಷ್ಟು ಸೀಟುಗಳು ಹೆಚ್ಚಳ? ಇಲ್ಲಿದೆ ಮಾಹಿತಿ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಿದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET 2023) ಫಲಿತಾಂಶವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದ್ದು, ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಶೀಘ್ರದಲ್ಲೇ ಕೌನ್ಸಿಲಿಂಗ್ ಪ್ರಕ್ರಿಯೆ ಆರಂಭವಾಗಲಿದೆ. ನೀಟ್ ಪ್ರವೇಶ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ…

Read More

ಲೀಟರ್ ಹಾಲಿನ ದರ 5 ರೂ ಏರಿಕೆ? – ಕೆಎಂಎಫ್ ನೂತನ ದರ ಶೀಘ್ರದಲ್ಲಿ ಜಾರಿಗೆ? – ಏನಿದು ಹೊಸ ದರ ಚರ್ಚೆ? ಇಲ್ಲಿದೆ ಮಾಹಿತಿ NAMMUR EXPRESS NEWS ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ನೂತನ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಭೀಮಾ ನಾಯ್ಕ ಅವರು ನಂದಿನಿ ಹಾಲಿನ ದರವನ್ನು 5 ರೂ.ಗೆ ಹೆಚ್ಚಿಸುವ ನಿರೀಕ್ಷೆ ಇದೆ ಎಂದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಹಾಲಿನ ದರ ಹೆಚ್ಚಳಕ್ಕೆ ಒತ್ತಾಯಿಸಿದ್ದೇವೆ ಎಂದಿದ್ದಾರೆ. ಹಾಲಿನ ದರ ಹೆಚ್ಚಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುತ್ತೇವೆ. ಎಲ್ಲಾ ಹಾಲು ಒಕ್ಕೂಟಗಳು 5 ರೂ. ದರ ಏರಿಕೆಗೆ ಆಗ್ರಹಿಸಿದ್ದಾರೆ. ಬೆಲೆ ಏರಿಕೆ ಮಾಡುವುದಲ್ಲದೆ ಗುಣಮಟ್ಟದ ಹಾಲು, ಮೊಸರು, ತುಪ್ಪವನ್ನು ಗ್ರಾಹಕರಿಗೆ ನೀಡಲು ಆದ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ. ಇದೇ ವೇಳೆ, ಸಹಕಾರ ಸಚಿವ ಕೆ.ಎನ್.ರಾಜಣ್ಣ ಬೆಂಗಳೂರಿನಲ್ಲಿ ಮಾತನಾಡಿ, ಹಾಲು ಉತ್ಪಾದಕರಿಗೆ ನೀಡುವ ಮೊತ್ತವನ್ನು ಹೆಚ್ಚಿಸುವ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ರೈತರಿಂದ ಖರೀದಿಸುವ ಹಾಲಿನ ದರ ಹೆಚ್ಚಿಸುವ…

Read More

ಎಬಿವಿಪಿ ಅಧ್ಯಕ್ಷನ ಕಾಮ ಕೇಸ್: ಯುವ ಕಾಂಗ್ರೆಸ್ ಪ್ರತಿಭಟನೆ! – ತೀರ್ಥಹಳ್ಳಿಯಲ್ಲಿ ಎನ್ ಎಸ್ ಯು ಐ, ಯುವ ಕಾಂಗ್ರೆಸ್ ಪ್ರತಿಭಟನೆ – ನೂರಾರು ವಿದ್ಯಾರ್ಥಿಗಳಿಂದ ಮೆರವಣಿಗೆ – ಶಾಸಕ ಆರಗ ಜ್ಞಾನೇಂದ್ರ ಉತ್ತರಿಸಲು ಅಗ್ರಹ – ಕಿಮ್ಮನೆ, ಆರ್ ಎಂ ಸೇರಿ ಅನೇಕರು ಹಾಜರ್ NAMMUR EXPRESS NEWS ತೀರ್ಥಹಳ್ಳಿ: ತೀರ್ಥಹಳ್ಳಿಯ ಎಬಿವಿಪಿ ಅಧ್ಯಕ್ಷ ಯುವತಿಯರ ಅಶ್ಲೀಲ ವಿಡಿಯೋ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟ ಹಾಗೆ ವಿದ್ಯಾರ್ಥಿ ಸಂಘಟನೆ ಎನ್ ಎಸ್ ಯು ಐ ಹಾಗೂ ವಿದ್ಯಾರ್ಥಿಗಳು ತೀರ್ಥಹಳ್ಳಿಯ ಬಾಳೇಬೈಲು ಡಿಗ್ರಿ ಕಾಲೇಜಿನಿಂದ ಪಟ್ಟಣದಲ್ಲಿ ಮೆರವಣಿಗೆ ನಡೆಸಿ ತಾಲೂಕು ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು. ಆರೋಪಿಗೆ ಉಗ್ರ ಶಿಕ್ಷೆ ವಿಧಿಸಬೇಕು. ಜೊತೆಗೆ ಸಹಕಾರ ನೀಡಿದ ಸಂಘಟನೆ ಮತ್ತು ಇನ್ನಿತರ ವಿರುದ್ಧ ತನಿಖೆ ಆಗಬೇಕು. ಪೋಕ್ಸೋ ಕಾಯ್ದೆ ಅಡಿ ಆತನನ್ನು ಬಂಧಿಸಿ ಜಾಮೀನು ರಹಿತ ಜೈಲು ಶಿಕ್ಷೆ ವಿಧಿಸಬೇಕು ಹಾಗೂ ಇವರಿಗೆ ಸಹಕರಿಸಿದ ಎಬಿವಿಪಿ ಮುಖಂಡರು ಪ್ರಮುಖ ಪ್ರಭಾವಿ ನಾಯಕರನ್ನು ಕೂಡ…

Read More

ಗೃಹಜ್ಯೋತಿ ಅರ್ಜಿ ನೋಂದಣಿಗೆ ಹೊಸ ಲಿಂಕ್! – ಒಂದೇ ನಿಮಿಷದಲ್ಲಿ ಅರ್ಜಿ ಹಾಕಬಹುದು – ಏನಿದು ಹೊಸ ಲಿಂಕ್ ಇಲ್ಲಿದೆ ಮಾಹಿತಿ! NAMMUR EXPRESS NEWS ಬೆಂಗಳೂರು: ಗೃಹ ಜ್ಯೋತಿ ಅರ್ಜಿ ನೋಂದಣಿ ವಿಳಂಬವನ್ನು ಮನಗಂಡ ಸರ್ಕಾರ ಕೊನೆಗೂ ಹೊಸ ಲಿಂಕ್ ಬಿಟ್ಟು ಜನರ ಪರ ನಿಂತಿದೆ ಮೊದಲು ಬೆಂಗಳೂರು ಒನ್ ಕೇಂದ್ರಗಳಲ್ಲಿ ಜಾರಿ ಮಾಡಿದ್ದು ಬೆಂಗಳೂರು ಒನ್ ಕೇಂದ್ರಗಳಿಗೆ ಈಗ ಹೊಸ ಲಿಂಕ್ ಲಭ್ಯವಾಗಿದೆ. ಕೇವಲ ಒಂದೇ ನಿಮಿಷದಲ್ಲಿ ಈಗ ಗೃಹಜ್ಯೋತಿ ನೋಂದಣಿ ಮಾಡಬಹುದಾಗಿದೆ. ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಗಳಿಗೆ ಮಾತ್ರ ಲಿಂಕ್ ಕೊಡಲಾಗಿದೆ. ಹಾಗಾಗಿ ಅದು ಸ್ಪೀಡ್ ವರ್ಕ್ ಆಗುತ್ತಿದೆ. ಇನ್ನು ಹೊರಗಡೆ ಯಾರಿಗೂ ಲಿಂಕ್ ನೀಡದಿರಲು ಸರ್ಕಾರ ನಿರ್ಧಾರ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಭಾನುವಾರದಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಆದರೆ, ಆರಂಭದಲ್ಲಿಯೇ ವಿಘ್ನ ಎಂಬಂತೆ 200 ಯೂನಿಟ್‌ವರೆಗೂ ಉಚಿತ ವಿದ್ಯುತ್‌ ಪಡೆಯಲು…

Read More

ಹೆಬ್ರಿಯ ಎಸ್.ಆರ್ ಕಾಲೇಜಲ್ಲಿ ಯೋಗ ದಿನ! – ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ – ವಿದ್ಯಾರ್ಥಿಗಳು, ಸಿಬ್ಬಂದಿ ಯೋಗ ಮಾಡಿ ಆಚರಣೆ NAMMUR EXPRESS NEWS ಹೆಬ್ರಿ: ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ದೈಹಿಕ ಶಿಕ್ಷಕರಾದ ಮಧುಶೇಖರ್ ಅವರ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿಯಾದ ಹೆರಾಲ್ಡ್ ಲೂಯಿಸ್, ಎಸ್.ಆರ್. ಪಬ್ಲಿಕ್ ಸ್ಕೂಲ್ನ ಪ್ರಾಂಶುಪಾಲರಾದ ಭಗವತಿ, ಎಸ್.ಆರ್.ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಗೋಪಾಲ ಆಚಾರ್ಯ, ಶಿಕ್ಷಕರಾದ ಅಕ್ಷತಾ, ಅಕ್ಷಿತಾ, ಸಂಗೀತಾ, ಶಾರದಾ, ಸುಕೇಶ್, ಜಗನ್ನಾಥ್ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Read More

ಕರಾವಳಿಯಲ್ಲಿ ಭಾರೀ ಮಳೆ ಅಲರ್ಟ್! – ಜೂನ್ 25ಕ್ಕೆ ಭಾರೀ ಮಳೆ,ಯೆಲ್ಲೋ ಅಲರ್ಟ್ ಘೋಷಣೆ – ಕಾಪುವಿನಲ್ಲಿ ಜಾಸ್ತಿ, ಕಾರ್ಕಳದಲ್ಲಿ ಕಡಿಮೆ ಮಳೆ! NAMMUR EXPRESS NEWS ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಭಾರೀ ಮಳೆಯಾಗುವ ಕುರಿತು ಉಡುಪಿ ಜಿಲ್ಲಾಡಳಿತ ಮಾಹಿತಿಯನ್ನು ನೀಡಿದೆ. ಜೂನ್ 25 ರಂದು ಭಾರೀ ಮಳೆ ಸುರಿಯುವ ಸಾಧ್ಯತೆಯ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಜೂನ್ 21 ರಿಂದ ಜೂನ್ 24ರ ವರೆಗೆ ಉಡುಪಿ ಜಿಲ್ಲೆಯಲ್ಲಿ ಹಗುರ/ ಸಾಧಾರಣ ಮಳೆಯಾಗಲಿದೆ. ಕರಾವಳಿಯ ಕೆಲವು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 3 ರಿಂದ 4 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಕನಿಷ್ಠ ಉಷ್ಣಾಂಶ 25.7 ಡಿಗ್ರಿ ಸೆಲ್ಸಿಯಸ್ ಇದ್ದು, ಗರಿಷ್ಠ ಉಷ್ಣಾಂಶ 32.6 ಡಿಗ್ರಿ ಸೆಲ್ಸಿಯಸ್ ಇರಲಿದೆ. ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಸರಾಸರಿ 3.9 ಮಿ.ಮೀ. ಮಳೆ ಸುರಿದೆ. ಅದ್ರಲ್ಲೂ ಕಾಪುವಿನಲ್ಲಿ ಅತೀ ಹೆಚ್ಚು ಪ್ರಮಾಣದಲ್ಲಿ ಮಳೆ ಸುರಿದಿದೆ. ಕಾಪುವಿನಲ್ಲಿ 1.8…

Read More

ಜ.25ಕ್ಕೆ ಅಯೋಧ್ಯೆ ರಾಮ ಮಂದಿರ ಓಪನ್! – ಏನೇನಿದೆ… ಯಾವಾಗ ಕಾರ್ಯಕ್ರಮ…? – ಜ.14ರ ಮಕರ ಸಂಕ್ರಾಂತಿಯಿಂದ 24ರವರೆಗೆ ಪ್ರಾಣ ಪ್ರತಿಷ್ಠೆ NAMMUR EXPRESS NEWS ಅಯೋಧ್ಯೆ: ಬಹು ನಿರೀಕ್ಷೆಯ ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಮುಹೂರ್ಥ ಫಿಕ್ಸ್ ಆಗಿದೆ. ಈಗಾಗಲೇ ನಿರ್ಮಾಣವಾಗುತ್ತಿರುವ ರಾಮ ಮಂದಿರದ ಪ್ರಾಣಪ್ರತಿಷ್ಠೆ 2024ರ ಜ.14ರ ಮಕರ ಸಂಕ್ರಾಂತಿ ಯಿಂದ 24ರವರೆಗೆ ನಡೆಯಲಿದೆ. ಈಗಾಗಲೇ ರಾಮ ಮಂದಿರದ ಕೆಲಸ ಅಂತಿಮ ಹಂತಕ್ಕೆ ಬಂದಿದೆ. ಕೊನೆಯ ದಿನ ನಡೆಯುವ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲು ಉದ್ದೇಶಿಸಲಾಗಿದೆ. ಪ್ರಾಣಪ್ರತಿಷ್ಠೆಯ ಬಳಿಕ ಜ. 25ರಿಂದ ಮಂದಿರ ತೆರೆದುಕೊಳ್ಳಲಿದೆ ಎಂದು ರಾಮ ಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ಹೇಳಿದ್ದಾರೆ. ಈ ಮೂಲಕ ದೇಶದ ಕೋಟಿ ಕೋಟಿ ರಾಮ ಭಕ್ತರಿಗೆ ಇದು ಸಂತಸದ ವಿಷಯವಾಗಿದೆ. ದೇಶ-ವಿದೇಶಗಳ ಭಕ್ತರು ಅದನ್ನು ವೀಕ್ಷಿಸಲು ವ್ಯವಸ್ಥೆ ಮಾಡಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಸಾರ್ವಜನಿಕರ ಪ್ರವೇಶಕ್ಕೆ ಜ.14ರಿಂದ ಪ್ರಾಣಪ್ರತಿಷ್ಠೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಪ್ರಧಾನಿ…

Read More

ಚಿನ್ನ ಬೆಳ್ಳಿ ದರ ಇಳೀತು..! – ಆಭರಣ ಪ್ರಿಯರಿಗೆ ಸಿಹಿ ಸುದ್ದಿ – ಮಾರುಕಟ್ಟೆಯಲ್ಲಿ ಚಿನ್ನ ಬೆಳ್ಳಿಯ ದರ ಇಳಿಕೆ NAMMUR EXPRESS NEWS ಬೆಂಗಳೂರು: ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಕಂಡಿದೆ. ಅದರಲ್ಲೂ ಈ ವಾರದಲ್ಲಿ ಚಿನ್ನದ ಬೆಲೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ಭವಿಷ್ಯಕ್ಕಾಗಿ ತಮ್ಮ ಆದಾಯ ಸ್ವಲ್ಪ ಭಾಗವನ್ನು ಚಿನ್ನದಲ್ಲಿ ಹೂಡಿಕೆ ಮಾಡುವವರಿಗೆ ಸಹಾಯವಾಗಲಿದೆ. ಭಾರತದಲ್ಲಿ ಸದ್ಯ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 55,000 ರೂ.ಆಗಿದೆ. 24 ಕ್ಯಾರೆಟ್‌ನ ಚಿನ್ನದ ಬೆಲೆ 60,000 ರೂ.ಆಗಿದೆ. ಇನ್ನು 100 ಗ್ರಾಮ್ ಬೆಳ್ಳಿ ಬೆಲೆ 7,400 ರೂ. ಆಗಿದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 55,000 ರೂ. ಆಗಿದ್ದು ಬೆಳ್ಳಿ ಬೆಲೆ 7,475 ರೂ.ಗಳಲ್ಲಿ ಲಭ್ಯವಿದೆ. ಸದ್ಯ ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗಿದ್ದರೂ ಮುಂದಿನ ದಿನಗಳಲ್ಲಿ ಏರಿಕೆ ಆಗುವ ಸಾಧ್ಯತೆ ಕೂಡ ಇರುತ್ತದೆ. ಇನ್ನುಳಿದಂತೆ ದೇಶದ ವಿವಿಧ ವಾಣಿಜ್ಯ ನಗರಗಳಲ್ಲಿ ಇಂದಿನ ಚಿನ್ನ ಹಾಗೂ ಬೆಳ್ಳಿ ಬೆಲೆಗಳನ್ನು ಈ…

Read More

ಸಖತ್ ಸುದ್ದಿ… ಹೀಗೂ ಉಂಟೆ! ಮೇಕಪ್ ಮಾಡಿಸಲು ಹೋಗಿ ಮುಖವೇ ಹೋಯ್ತು! – ಮಸಾಜ್‌ನಿಂದ ಮುಖದ ಸೌಂದರ್ಯ ಹಾಳು – ಸಲೂನ್ ವಿರುದ್ಧ ಎಫ್ ಐಆರ್ ದಾಖಲಿಸಿದ ಮಹಿಳೆ! NAMMUR EXPRESS NEWS ಮುಂಬೈ : ಮುಖದ ಮಸಾಜ್ ಚಿಕಿತ್ಸೆಯಿಂದ ಮುಖದ ಚರ್ಮ ಹಾನಿಗೊಳಗಾದ ನಂತರ ಮುಂಬೈನಲ್ಲಿ ಮಹಿಳೆಯೊಬ್ಬರು ಬ್ಯೂಟಿ ಸಲೂನ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಜೂನ್ 17 ರಂದು ಈ ಘಟನೆ ನಡೆದಿದ್ದು ಹೆಸರು ಬಹಿರಂಗಪಡಿಸದ ಮಹಿಳೆ ಅಂಧೇರಿಯ ಕಾಮಧೇನು ಶಾಪಿಂಗ್ ಸೆಂಟರ್‌ನಲ್ಲಿರುವ ಗ್ಲೋ ಲಕ್ಸ್ ಸಲೂನ್‌ನಿಂದ 17,500 ರೂಪಾಯಿ ಮೌಲ್ಯದ ಹೈಡ್ರಾಫೇಶಿಯಲ್ ಚಿಕಿತ್ಸೆಯನ್ನು ಪಡೆದಿದ್ದಾರೆ. ಹೈಡ್ರಾಫೇಶಿಯಲ್ ಎಂಬುದು ವೈದ್ಯಕೀಯ-ದರ್ಜೆಯ ರಿಸರ್ಫೇಸಿಂಗ್ ಚಿಕಿತ್ಸೆಯಾಗಿದ್ದು ಅದು ರಂಧ್ರಗಳನ್ನು ತೆರವುಗೊಳಿಸುತ್ತದೆ ಮತ್ತು ಚರ್ಮವನ್ನು ಹೈಡ್ರೆಟ್ ಮಾಡುತ್ತದೆ. ಪರವಾನಗಿ ಪಡೆದ ವೈದ್ಯಕೀಯ ವೃತ್ತಿಪರ ಸೌಲಭ್ಯಗಳಲ್ಲಿ ಅಥವಾ ಪ್ರಮಾಣೀಕೃತ ಹೈಡ್ರಾಫೇಶಿಯಲ್ ಸೌಂದರ್ಯಶಾಸ್ತ್ರಜ್ಞರು ಲಭ್ಯವಿರುವಲ್ಲಿ ಇದನ್ನು ನೀಡಲಾಗುತ್ತದೆ. ಆದಾಗ್ಯೂ, ಚಿಕಿತ್ಸೆಯ ನಂತರ, ಮಹಿಳೆಯು ತನ್ನ ಮುಖದಲ್ಲಿ ಸುಡುವ ಸಂವೇದನೆಯನ್ನು ಅನುಭವಿಸಿದಳು ಮತ್ತು ಚರ್ಮಶಾಸ್ತ್ರಜ್ಞರನ್ನು ಸಂಪರ್ಕಿಸಿದರು. ಆದರೆ ಮಸಾಜಿಂದ…

Read More