ಸೋಷಿಯಲ್ ಮೀಡಿಯಾ ಮೇಲೆ ಸರ್ಕಾರದ ನಿಗಾ! – ಫೇಕ್ ನ್ಯೂಸ್ ಹಾವಳಿಗೆ ಸರ್ಕಾರದ ಬ್ರೇಕ್!? – ಸುಳ್ಳು ಸುದ್ದಿ ಹರಡಿಸುವವರ ಮೇಲೆ ಸೂಕ್ತ ಕ್ರಮ – ಸಾಮಾಜಿಕ ಜಾಲ ತಾಣಗಳ ಮೇಲೆ ಕಣ್ಣು! NAMMUR EXPRESS NEWS ಬೆಂಗಳೂರು: ಫೇಕ್ ನ್ಯೂಸ್ ಹಾವಳಿ ತಡೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಸುಳ್ಳು ಸುದ್ದಿ ಹರಡಿಸುವವರ ಮೇಲೆ ಸೂಕ್ತ ಕ್ರಮಕ್ಕೆ ಮುಂದಾಗಿದ್ದು ಸಾಮಾಜಿಕ ಜಾಲ ತಾಣಗಳ ಮೇಲೆ ಕಣ್ಣು ಇಡಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್ ಹಾವಳಿ ಮಿತಿ ಮೀರಿದೆ. ಈ ಫೇಕ್‌ನ್ಯೂಸ್‌ಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ ಕಾನೂನು ಕ್ರಮಕ್ಕೆ ಒಳಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಗೃಹ ಸಚಿವ ಜಿ.ಪರಮೇಶ್ವರ್ ಅವರ ಜತೆಗೂ ಈ ಬಗ್ಗೆ ವಿವರವಾಗಿ ಚರ್ಚಿಸಿದ್ದಾರೆ. 2013ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ…
Author: Nammur Express Admin
ಶಾಲಾ ಮಕ್ಕಳಿಗೆ ವಾರಕ್ಕೊಂದು ಮೊಟ್ಟೆ! – ಒಂದರಿಂದ ಎಂಟನೇ ತರಗತಿಯ ಮಕ್ಕಳಿಗೆ ಮೊಟ್ಟೆ – ಮೊಟ್ಟೆ ತಿನ್ನದವರಿಗೆ ಬಾಳೆಹಣ್ಣು ಅಥವಾ ಚಿಕ್ಕಿ NAMMUR EXPRESS NEWS ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಒಂದರಿಂದ ಎಂಟನೇ ತರಗತಿಯ ಮಕ್ಕಳಿಗೆ ವಾರಕ್ಕೆ ಒಂದು ಬೇಯಿಸಿದ ಮೊಟ್ಟೆ, ಮೊಟ್ಟೆ ತಿನ್ನದವರಿಗೆ ಚಿಕ್ಕಿ ಅಥವಾ ಬಾಳೆಹಣ್ಣು ನೀಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುತ್ತೋಲೆ ಹೊರಡಿಸಿದೆ. ಅಪೌಷ್ಟಿಕತೆ ಮತ್ತು ರಕ್ತ ಹೀನತೆ ನಿವಾರಣೆಗಾಗಿ ಕಳೆದ ಸಾಲಿನಲ್ಲಿ ಕಲ್ಯಾಣ ಕರ್ನಾಟಕದ ಎಂಟು ಜಿಲ್ಲೆಯ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜತೆ ಮೊಟ್ಟೆ ವಿತರಿಸಲು ಸರ್ಕಾರ ಅನುಮತಿ ನೀಡಿತ್ತು. ನಂತರ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಿತ್ತು. 2023-24ನೇ ಶೈಕ್ಷಣಿಕ ಸಾಲಿಗೆ ಮೊದಲ ಹಂತದಲ್ಲಿ ಜುಲೈ 15ರವರೆಗೆ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಮೊಟ್ಟೆ ವಿತರಣೆಗೆ ಅನುಮತಿ ನೀಡಲಾಗಿದೆ. ಪ್ರತಿ ಮೊಟ್ಟೆಗೆ 6 ರೂ. ನಿಗದಿ ಮಾಡಲಾಗಿದೆ. ಇದರಿಂದ ಮಕ್ಕಳ ಆರೋಗ್ಯದ ಬಗ್ಗೆ ಸರ್ಕಾರ ನಿಗಾ ಇರಿಸಿದೆ.
ಕ್ರಿಯೇಟಿವ್ ನಿನಾದ ಸಂಚಿಕೆ 4, ವಿಶೇಷ ಪುರವಣಿ ಬಿಡುಗಡೆ – ಕ್ರಿಯಾಶೀಲ ಮನಸ್ಸುಗಳನ್ನು ಕಟ್ಟುವ ಮೂಲಕ ಕ್ರಿಯೇಟಿವ್ ಕಾಲೇಜಿನ ವಿಶೇಷ ಪುರವಣಿ – ಒಂದೇ ಸೂರಿನಡಿ ಯಶಸ್ಸಿನ ಆಯ್ಕೆಗೆ ಕ್ರಿಯೇಟಿವ್ ಮುಂಚೂಣಿ: ಪ್ರಾಂಶುಪಾಲ ವಿದ್ವಾನ್ ಗಣಪತಿ ಭಟ್ NAMMUR EXPRESS NEWS ಕಾರ್ಕಳ: ಕ್ರಿಯಾಶೀಲ ಮನಸ್ಸುಗಳನ್ನು ಕಟ್ಟುವುದರ ಮೂಲಕ ಸಮಾಜಮುಖಿ ಚಿಂತನೆ ಹಾಗೂ ಶೈಕ್ಷಣಿಕ ಕ್ರಾಂತಿಯ ಮಹಾತ್ವಾಕಾಂಕ್ಷೆಯೊಂದಿಗೆ ಆರಂಭಿಸಲಾದ “ಕ್ರಿಯೇಟಿವ್ ನಿನಾದ”ದ ನಾಲ್ಕನೇ ಸಂಚಿಕೆ ಹಾಗೂ ವಿಶೇಷ ಪುರವಣಿಯನ್ನು ಬಿಡುಗಡೆಗೊಳಿಸಲಾಯಿತು. ಪತ್ರಿಕೆಯನ್ನು ಅನಾವರಣಗೊಳಿಸಿ ಮಾತನಾಡಿದ ಸಂಸ್ಥಾಪಕರಾದ ಡಾ.ಗಣನಾಥ ಶೆಟ್ಟಿಯವರು ಕ್ರಿಯಾತ್ಮಕ ಮತ್ತು ಸೃಜನ ಶೀಲತೆಯನ್ನು ಒಂದುಗೂಡಿಸಿ ಹೊಸ ವಿಚಾರವಂತಿಕೆಗಳನ್ನು ಮೂಡಿಸುವ ಸಂಚಿಕೆ ಸಮಾಜದಲ್ಲಿ ಜಾಗೃತಿ ಮೂಡಿಸುವಂತಾಗಲಿ ಎಂದು ಹಾರೈಸಿದರು. ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಒಂದೇ ಸೂರಿನಡಿ ಯಶಸ್ಸಿನ ಆಯ್ಕೆಗೆ ಕ್ರಿಯೇಟಿವ್ ಮುಂಚೂಣಿಯಲ್ಲಿದೆ ಎಂದು ಅಭಿಪ್ರಾಯ ಪಟ್ಟರು. ಸಂಸ್ಥಾಪಕರಾದ ಅಮೃತ್ ರೈ ಮಾತನಾಡಿ ಕ್ರಿಯಾಶೀಲ ವ್ಯಕ್ತಿತ್ವಗಳಿಗೆ ವಿಶೇಷ ಅಭಿವ್ಯಕ್ತಿ ನೀಡುವ ಮೂಲಕ ನಿನಾದ ಮುನ್ನಡಿಯಾಗಿದೆ. ಹೊಸ ಯೋಚನೆ, ಯೋಜನೆಗಳೊಂದಿಗೆ ಕಾರ್ಯ ಪ್ರವೃತ್ತರಾಗಲಿದ್ದೇವೆ…
ವಾಟ್ಸಾಪ್ ಬಿಸಿನೆಸ್ ಎಪಿಐ ಎಂಬ ಹೊಸ ತಂತ್ರಜ್ಞಾನ – ಫೋರ್ಥ್ ಫೋಕಸ್ ಗ್ರೂಪಿನಿಂದ ಹೊಸ ಸೌಲಭ್ಯ – ವಾಟ್ಸಾಪ್ ಮೂಲಕವೇ ತನ್ನ ಗ್ರಾಹಕರ ಸಂಪರ್ಕಕ್ಕೆ ಹೊಸ ತಂತ್ರಜ್ಞಾನ NAMMUR EXPRESS NEWS ರಾಜ್ಯದ ಪ್ರಸಿದ್ಧ ಫೋರ್ಥ್ ಫೋಕಸ್ ಗ್ರೂಪ್ ತನ್ನ ಗ್ರಾಹಕರ ಅನುಕೂಲಕ್ಕಾಗಿ ವಾಟ್ಸಾಪ್ ಬಿಸಿನೆಸ್ ಎಪಿಐ ಎಂಬ ಹೊಸ ಸೌಕರ್ಯವನ್ನು ಪರಿಚಯಿಸುತ್ತಿದೆ. ಉಡುಪಿ ಜಿಲ್ಲೆ ಕುಂದಾಪುರ ಮೂಲದ ಅತ್ಯಾಧುನಿಕ ವೆಬ್ ಮತ್ತು ಡಿಜಿಟಲ್ ಪರಿಹಾರಗಳ ಪೂರೈಕೆದಾರ ಸಂಸ್ಥೆಯಾಗಿರುವ ಫೋರ್ಥ್ ಫೋಕಸ್, ಇದೀಗ ತನ್ನ ಕ್ಷೇತ್ರದಿಂದ ಇನ್ನೂ ಒಂದು ಹೆಜ್ಜೆ ಮುಂದೆ ಬಂದಿದ್ದು WhatsApp Business API ಕೊನೆಗೂ ಘೋಷಿಸಿದೆ. ಜಗತ್ತಿನ ಅತ್ಯಂತ ಪ್ರಚಲಿತ ಮೆಸೇಜಿಂಗ್ ಆ್ಯಪ್ ಎನಿಸಿರುವ ವಾಟ್ಸಾಪ್‌ನ ಮೂಲಕವೇ ತನ್ನ ಗ್ರಾಹಕರೊಂದಿಗೆ ವ್ಯವಹರಿಸುವ ಮೂಲಕ ಗ್ರಾಹಕರಿಗೆ ಇನ್ನಷ್ಟು ಸನಿಹವಾಗಲು ಹಾಗೂ ಹೆಚ್ಚಿನ ಸೇವೆಯನ್ನು ಒದಗಿಸುವುದು ಪೋರ್ಥ್ ಪೋಕಸ್ ಸಂಸ್ಥೆಯ ಉದ್ದೇಶವಾಗಿದೆ. ವಿಶ್ವದ ಅತ್ಯಂತ ಜನಪ್ರಿಯ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸಾಪ್‌ನಲ್ಲಿ ತಮ್ಮ ಗ್ರಾಹಕರೊಂದಿಗೆ ಸಂವಹನದಲ್ಲಿ ತೊಡಗಿಸಿಕೊಳ್ಳಲು ವ್ಯವಹಾರಗಳಿಗೆ ಆಯ್ಕೆಯನ್ನು ನೀಡುವ…
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ – karresults.nic.in ನಲ್ಲಿ ಪೂರಕ ಪರೀಕ್ಷೆ ಫಲಿತಾಂಶ – 50,478 ವಿದ್ಯಾರ್ಥಿಗಳು ಉತ್ತೀರ್ಣ: ಎರಡನೇ ಬಾರಿ ಫೇಲ್ ಆದವರೇ ಹೆಚ್ಚು! NAMMUR EXPRESS NEWS ಬೆಂಗಳೂರು: 2023ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವು ಮಂಗಳವಾರ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಜಾಲತಾಣವಾದ https://karresults.nic.in ನಲ್ಲಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. 2023ನೇ ಸಾಲಿನ ದ್ವಿತೀಯ ಪಿಯುಸಿ ಪೂಕರ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆಗೆ ಹಾಜರಾದ ಒಟ್ಟು 1,57,756 ವಿದ್ಯಾರ್ಥಿಗಳ ಪೈಕಿ 50,478 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಕಾಲೇಜುಗಳಲ್ಲಿ ಫಲಿತಾಂಶ ಲಗತ್ತಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಫಲಿತಾಂಶ ನೋಡೋದು ಹೇಗೆ? ಪೂರಕ ಪರೀಕ್ಷೆಗಳಿಗೆ ಹಾಜರಾದ ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ಅಧಿಕೃತ ವೆಬ್ ಸೈಟ್ ನಿಂದ karresults.nic.in ಪರಿಶೀಲಿಸಲು ಸಾಧ್ಯವಾಗುತ್ತದೆ. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ವಿದ್ಯಾರ್ಥಿಗಳು ಮಂಡಳಿಯ ಜಾಲತಾಣ https://karresults.nic.in ನಲ್ಲಿ…
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನಲ್ಲಿ ಉದ್ಯೋಗಾವಕಾಶ – ಸ್ನಾತಕೋತ್ತರ ಪದವೀಧರರಿಗೆ ಉದ್ಯೋಗ – ಕೂಡಲೇ ಅರ್ಜಿ ಸಲ್ಲಿಸಿ, ಯಾವ ಯಾವ ಹುದ್ದೆ? NAMMUR EXPRESS JOB NEWS ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಜೂನ್ 2023ರ ಅಧಿಕೃತ ಅಧಿಸೂಚನೆ ಮೂಲಕ ಟ್ರೈನಿ ಆಫೀಸರ್-I ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮಆನ್‌ಲೈನ್ ಅರ್ಜಿಗಳನ್ನು ಭರ್ತಿ ಮಾಡುವ ಮೊದಲು ಈ ಹುದ್ದೆಗಳಿಗೆ ಅಗತ್ಯವಿರುವ ವಯಸ್ಸಿನ ಮಿತಿ, ವಿದ್ಯಾರ್ಹತೆ ಮತ್ತು ಅನುಭವ ಸೇರಿದಂತೆ ಎಲ್ಲಾ ಅರ್ಹತಾ ಷರತ್ತುಗಳನ್ನು ಪರಿಶೀಲಿಸಲು ಸೂಚಿಸಲಾಗಿದೆ. ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ : ಸಂಸ್ಥೆಯ ಹೆಸರು : ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಹುದ್ದೆಗಳ ಸಂಖ್ಯೆ : 1 ಹುದ್ದೆ ಉದ್ಯೋಗ ಸ್ಥಳ : ಬೆಂಗಳೂರು ಹುದ್ದೆಯ ಹೆಸರು :…
ಖಡಕ್ ಅಧಿಕಾರಿಯಾಗಿದ್ದ ನಾಗರಾಜ್ ಅವರಿಗೆ ಮಹತ್ವದ ಹುದ್ದೆ! – ಡಿಸಿಎಂ ಡಿ.ಕೆ.ಶಿವಕುಮಾರ್ ತಾಂತ್ರಿಕ ಸಲಹೆಗಾರರಾಗಿ ಕೆ.ಟಿ. ನಾಗರಾಜ್ ನೇಮಕ – ತೀರ್ಥಹಳ್ಳಿ ಮೂಲದ ನಿವೃತ್ತ ಮುಖ್ಯ ಇಂಜಿನಿಯರ್ NAMMUR EXPRESS NEWS ಬೆಂಗಳೂರು: ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಾಂತ್ರಿಕ ಸಲಹೆಗಾರರಾಗಿ ಕೆ.ಟಿ.ನಾಗರಾಜ್ ನೇಮಕವಾಗಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಮೂಲದ ಕೊಳಿಗೆ ಕೆ.ಟಿ. ನಾಗರಾಜ್ ಬಿಬಿಎಂಪಿಯ ನಿವೃತ್ತ ಮುಖ್ಯ ಇಂಜಿನಿಯರ್ ಆಗಿದ್ದರು, ಬಿಬಿಎಂಪಿಯಲ್ಲಿ ದಶಕಗಳ ಕಾಲ ಸೇವೆ ಸಲ್ಲಿಸಿ ಕಳೆದ ಎರಡು ವರ್ಷಗಳ ಹಿಂದೆ ನಿವೃತ್ತಿಯಾಗಿದ್ದರು. ಮಲೆನಾಡು ಸಂಘಟನೆಗಳ ಒಕ್ಕೂಟ, ಶಾಂತವೇರಿ ಗೋಪಾಲಗೌಡ ಶತಮಾನೋತ್ಸವ ಆಚರಣಾ ಸಮಿತಿ ಸೇರಿದಂತೆ ಹತ್ತು ಹಲವು ಸಂಘಟನೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಬೆಂಗಳೂರಿಗೆ ಅಭಿವೃದ್ಧಿಗೆ ಕೊಡುಗೆ ಬೆಂಗಳೂರಿನ ಪ್ರಮುಖ ರಸ್ತೆಗಳು ಮೇಲ್ ಸೇತುವೆಗಳು ಮತ್ತು ಆಧುನಿಕ ನಿರ್ಮಾಣದ ಬಗ್ಗೆ ಹೆಚ್ಚು ಒತ್ತು ಕೊಟ್ಟು ನವ ಬೆಂಗಳೂರು ನಿರ್ಮಾಣಕಾರರಲ್ಲಿ ಒಬ್ಬರಾಗಿದ್ದರು. ಇಂಜಿಯರ್ ಅಸೋಸಿಯೇಷನ್ ಅಲ್ಲೂ ಕೆಲಸ ಮಾಡಿದ್ದ ಕೆ.ಟಿ.ನಾಗರಾಜ್ ಇದೀಗ ಡಿಕೆ ಶಿವಕುಮಾರ್ ಅವರ ತಾಂತ್ರಿಕ ಸಲಹೆಗಾರರಾಗಿ…
ಅತಿಥಿ ಉಪನ್ಯಾಸಕರಿಗೆ ಗೌರವಧನವೂ ಇಲ್ಲ, ಕೆಲಸವೂ ಇಲ್ಲ..! – ಪಿಯು ಅತಿಥಿ ಉಪನ್ಯಾಸಕರಿಗೆ 3 ತಿಂಗಳಿಂದ ಬಾರದ ಸಂಬಳ – ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿರುವ ಉಪನ್ಯಾಸಕರು NAMMUR EXPRESS NEWS ಬೆಂಗಳೂರು: ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಕೆಲಸ ಮಾಡಿರುವ ಅತಿಥಿ ಉಪನ್ಯಾಸಕರ ಬದುಕು ಇದೀಗ ಅಡಕತ್ತರಿಯಲ್ಲಿ ಸಿಲುಕಿದೆ. ಕಳೆದ ಜನವರಿಯಿಂದ ಮಾರ್ಚ್‌ವರೆಗಿನ ಗೌರವಧನ ಬಿಡುಗಡೆಯಾಗಿಲ್ಲ. ಅಲ್ಲದೇ, ನೂರಾರು ಅತಿಥಿ ಉಪನ್ಯಾಸಕರನ್ನು ಪ್ರಸಕ್ತ ಶೈಕ್ಷಣಿಕ ವರ್ಷದ ನೇಮಕಾತಿಯಲ್ಲಿ ಪರಿಗಣಿಸದೇ ಕೈಬಿಡಲಾಗಿದೆ. ಕಳೆದ ಶೈಕ್ಷಣಿಕ ವರ್ಷದಲ್ಲಿ ರಾಜ್ಯದಾದ್ಯಂತ ನೇಮಕಗೊಂಡಿದ್ದ 4,000ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರನ್ನು ಮೂರು ತಿಂಗಳ ಸಂಬಳ ನೀಡದೇ ಮಾರ್ಚ್ ತಿಂಗಳಲ್ಲಿ ಸೇವೆಯಿಂದ ಬಿಡುಗಡೆ ಮಾಡಲಾಗಿದೆ. ಹೀಗಾಗಿ ಕಷ್ಟ ಪಟ್ಟು ಓದಿ ಉಪನ್ಯಾಸಕರಾಗುವ ಕನಸು ಹೊತ್ತ ಸಾವಿರಾರು ಮಂದಿ ಉಪನ್ಯಾಸಕರು ಈಗ ಬೀದಿಗೆ ಬಿದ್ದಿದ್ದಾರೆ. ಏನಿದು ಪ್ರಕರಣ?: ಜೂನ್ 3ರಂದು ಹೊಸದಾಗಿ 4,055 ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಂಡಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ, ಆಯಾ ಹುದ್ದೆಗಳಿಗೆ ಮೆರಿಟ್…
ವಿಶ್ವೇಶ್ವರಯ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ತಂಡಕ್ಕೆ ರೇಸಿಂಗ್ ಚಾಂಪಿಯನ್ ಶಿಪ್! – ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ “ಟೀಮ್ ಎಲೆಕ್ಟ್ರಿಮೋ” – 12 ಮಂದಿ ವಿದ್ಯಾರ್ಥಿಗಳ ನಾವೀನ್ಯತೆಯ ಹೆಜ್ಜೆ NAMMUR EXPRESS NEWS ಪುಣೆ: ಇತ್ತೀಚೆಗೆ ಪುಣೆಯಲ್ಲಿ ನಡೆದ ನ್ಯಾಷನಲ್ ಲೆವೆಲ್ ಆಟೋ ಇಂಡಿಯಾ ರೇಸಿಂಗ್ ಚಾಂಪಿಯನ್ ಶಿಪ್ (AIRC)ನಲ್ಲಿ ಭಾಗವಹಿಸಿದ ಬೆಂಗಳೂರಿನ ಯಲಹಂಕದಲ್ಲಿರುವ ಸರ್ ಎಂ ವಿಶ್ವೇಶ್ವರಯ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಎಲೆಕ್ಟ್ರಿಕಲ್ ವಿಭಾಗದಿಂದ ಪ್ರತಿನಿಧಿಸಿದ “ಟೀಮ್ ಎಲೆಕ್ಟ್ರಿಮೋ” Team Electrimo ತಂಡದ 6ನೇ ಸೆಮ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳು electrical Go kart car ತಯಾರಿಸಿದ್ದು ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಹಲವಾರು ರಾಜ್ಯಗಳಿಂದ ಸುಮಾರು 40 ತಂಡಗಳು ಭಾಗವಹಿಸಿದ್ದು E kart ವಿಭಾಗದಲ್ಲಿ Team Electrimo ತಂಡ ಚಾಂಪಿಯನ್ಸ್ ಆಗಿದ್ದಾರೆ. ಈ ತಂಡಕ್ಕೆ ತೀರ್ಥಹಳ್ಳಿಯ ನ್ಯಾಷನಲ್ ಗೋಲ್ಡ್ ಅಂಡ್ ಡೈಮಂಡ್ ಇವರು ಪ್ರೋತ್ಸಾಹಿಸಿ ವಿದ್ಯಾರ್ಥಿಗಳಿಗೆ ಬೆಂಬಲಿಸಿದ್ದಾರೆ. ಯುವ ಪ್ರತಿಭೆಗಳಿಗೆ ಅನೇಕ ಸಂಘಟನೆಗಳು, ಜನತೆ ಅಭಿನಂದಿಸಿದ್ದಾರೆ. 30 ವಿದ್ಯಾರ್ಥಿಗಳ…
ಕರ್ನಾಟಕ ಅನ್ನಭಾಗ್ಯಕ್ಕೆ ಆಮ್ ಆದ್ಮಿ ಅಕ್ಕಿ! – ಪಂಜಾಬ್ ಎಎಪಿ ಸರ್ಕಾರ ಅಕ್ಕಿ ಒದಗಿಸಲು ಸಿದ್ಧ – ಕರ್ನಾಟಕ ಆಮ್ ಆದ್ಮಿ ಅಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿಕೆ NAMMUR EXPRESS NEWS ಕರ್ನಾಟಕದ ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊಡಲು ಪಂಜಾಬ್ ಆಮ್ ಆದ್ಮಿ ಸರ್ಕಾರ ಸಿದ್ದವಾಗಿದೆ. ಕರ್ನಾಟಕ ಸರ್ಕಾರವು ಪ್ರಸ್ತಾಪಿಸಿರುವ ಹೊಸ ಅನ್ನಭಾಗ್ಯ ಯೋಜನೆಯನ್ನು ಈಡೇರಿಸಲು ಬೇಕಿರುವ ಹೆಚ್ಚುವರಿ ಅಕ್ಕಿ ನೀಡಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ನಿರಾಕರಿಸಿರುವುದು ಆಶ್ಚರ್ಯ ಮತ್ತು ದುಃಖದ ಸಂಗತಿಯಾಗಿದೆ. ನಮ್ಮಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳು ಇರಬಹುದು, ಆದರೆ ಅವುಗಳನ್ನು ಲೆಕ್ಕಿಸದೆ, ಎಲ್ಲಾ ಪಕ್ಷಗಳು ನಮ್ಮ ದೇಶದ ಜನರಿಗೆ ಸಹಾಯ ಮಾಡುವ ನೀತಿಗಳನ್ನು ಬೆಂಬಲಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ಬಲವಾಗಿ ನಂಬುತ್ತದೆ. ಅಗತ್ಯವಿರುವ ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿರುವುದು, ಬಿಜೆಪಿ ಸರ್ಕಾರದ ಬಡವರ ವಿರೋಧಿ ಧೋರಣೆ ಮಾತ್ರವಲ್ಲದೆ ಬಿಜೆಪಿಯೇತರ ಆಡಳಿತದ ರಾಜ್ಯಗಳ ಮೇಲೆ ಮಲತಾಯಿ ಧೋರಣೆಯನ್ನು ಎತ್ತಿ ತೋರಿಸುತ್ತದೆ. ಇಂತಹ ವರ್ತನೆಯನ್ನು ನಾವು ಬಲವಾಗಿ ಖಂಡಿಸುತ್ತೇವೆ. ನಮ್ಮ…