ಪಿಡಿಒ ಆಗ್ಬೇಕಾ?..ಹೊಸ ನೇಮಕಾತಿ ಶುರು!.. ಇಲ್ಲಿದೆ ವಿವರ..! – ಪಿಡಿಒ ಹುದ್ದೆ ನೇಮಕಾತಿಗೆ ಶೀಘ್ರದಲ್ಲಿ ಅಧಿಸೂಚನೆ – ಪಿಡಿಒ ಹುದ್ದೆ ನೇಮಕಾತಿಗೆ ಮುಂದಾದ ರಾಜ್ಯ ಸರ್ಕಾರ NAMMUR EXPRESS NEWS ಬೆಂಗಳೂರು: ಪಿಡಿಒ ಆಗ್ಬೇಕಾ?..ಹೊಸ ನೇಮಕಾತಿ ಶುರುವಾಗಲಿದ್ದು, ಪಿಡಿಒ ಹುದ್ದೆ ನೇಮಕಾತಿಗೆ ಶೀಘ್ರದಲ್ಲಿ ಅಧಿಸೂಚನೆ ಹೊರ ಬೀಳಲಿದೆ. ಪಿಡಿಒ ಹುದ್ದೆ ನೇಮಕಾತಿಗೆ ಮುಂದಾದ ರಾಜ್ಯ ಸರ್ಕಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯು (ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ-RDPR) ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ), ಗ್ರಾಮ ಪಂಚಾಯತಿ ಕಾರ್ಯದರ್ಶಿ (ಗ್ರೇಡ್-1) ಮತ್ತು ಪಂಚಾಯತಿ ಕಾರ್ಯದರ್ಶಿ (ಗ್ರೇಡ್-II) ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಹುದ್ದೆಗಳ ನೇಮಕಕ್ಕೆ ಮುಂದಾಗಿದ್ದು, ಸದ್ಯವೇ ನೇಮಕಾತಿ (PDO ನೇಮಕಾತಿ 2023) ಅಧಿಸೂಚನೆ ಹೊರಬೀಳಲಿದೆ. ಪಿಡಿಒ ಮತ್ತು ಕಾರ್ಯದರ್ಶಿ ಹುದ್ದೆಗಳು ಖಾಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಭಿವೃದ್ಧಿಕೆಲಸವಾಗುತ್ತಿಲ್ಲ ಎಂಬ ದೂರಿರುವ ಸರ್ಕಾರವು ಆದಷ್ಟು ಬೇಗ ಈ ಹುದ್ದೆಗಳಿಗೆ ನೇಮಕ…
Author: Nammur Express Admin
– ಪರಿಷತ್ ಚುನಾವಣೆ ಟಿಕೆಟ್ ಫೈಟ್ ಶುರು! – ಶೆಟ್ಟರ್, ಬೋಸರಾಜು, ಡಾ.ಆರ್ ಎಂ ಮಂಜುನಾಥಗೌಡ ರೇಸ್ ಅಲ್ಲಿ ಮುಂದು NAMMUR EXPRESS NEWS ಬೆಂಗಳೂರು: ವಿಧಾನ ಸಭೆಯಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದ ಮೂವರು ಸದಸ್ಯರು ಅವಧಿಗೆ ಮುನ್ನ ರಾಜೀನಾಮೆ ನೀಡಿದ ಪರಿಣಾಮ ತೆರವಾಗಿರುವ ಮೂರು ಸ್ಥಾನ ಹಾಗೂ ಖಾಲಿ ಇರುವ ಮೂರು ನಾಮ ನಿರ್ದೇಶಿತ ಸ್ಥಾನಗಳಿಗೆ ಜೂನ್ 30ರಂದು ಚುನಾವಣೆ ನಡೆಯಲಿದೆ. ಈ ಚುನಾವಣೆ ಕಾಂಗ್ರೆಸ್ ಪಕ್ಷಕ್ಕೆ ಪ್ರತಿಷ್ಠೆಯಾಗಿದೆ. ವಿಧಾನಪರಿಷತ್ ಸ್ಥಾನಕ್ಕೆ ಆಯ್ಕೆಯಾಗಲು ಕಾಂಗ್ರೆಸ್ ಪಕ್ಷದಲ್ಲಿ ಹಲವು ನಾಯಕರ ನಡುವೆ ಭಾರೀ ಪೈಪೋಟಿ ಕಂಡು ಬಂದಿದೆ. ವಿಧಾನಸಭೆಯಿಂದ ಪರಿಷತ್ ಗೆ ನಡೆಯುವ ಉಪ ಚುನಾವಣೆ ಸಂಬಂಧ ಮಂಗಳವಾರದಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚರ್ಚೆ ನಡೆಸಲಿದ್ದಾರೆ. ಈ ನಾಯಕರು ಈಗ ಎಲ್ಲ ಆರು ಸ್ಥಾನಗಳಿಗೆ ಮುಂಬರುವ ಲೋಕಸಭೆ ಚುನಾವಣೆ, ಜಾತಿ ಸೇರಿದಂತೆ ವಿವಿಧ…
ಬಾಲಕನ ಕೊಂದ ಮೊಸಳೆ ಹೊಡೆದು ಸಾಯಿಸಿದ ಜನ! – 62ನೇ ವರ್ಷದಲ್ಲಿ ಮೂರು ಮಕ್ಕಳಿಗೆ ಅಪ್ಪನಾದ ಅಜ್ಜ – ಬೆಂಗಳೂರಲ್ಲಿ ಬಿಎಂಟಿಸಿ ಬಸ್: ಇಬ್ಬರು ಸಾವು..! – ಶಿವಮೊಗ್ಗದಲ್ಲಿ ಯುವಕನ ಬರ್ಬರ ಹತ್ಯೆ! NAMMUR EXPRESS NEWS ಬೆಂಗಳೂರು: ರಸ್ತೆ ದಾಟುತ್ತಿದ್ದ ವೇಳೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಇಬ್ಬರು ಯುವಕರು ಮೃತಪಟ್ಟ ಘಟನೆ ಬೆಂಗಳೂರಲ್ಲಿ ನಡೆದಿದೆ. ರಸ್ತೆ ದಾಟುತ್ತಿದ್ದ ಯುವಕರಿಬ್ಬರು ಮೃತಪಟ್ಟ ಘಟನೆ ಲಗ್ಗೆರೆಯ ರಿಂಗ್ ರಸ್ತೆಯ ಕೆಂಪೇಗೌಡ ಆರ್ಚ್ ಬಳಿ ನಡೆದಿದೆ. ಮೃತಪಟ್ಟ ಓರ್ವ ಯುವಕನನ್ನು ಸುರೇಶ್ ಎಂದು ಗುರುತಿಸಲಾಗಿದ್ದು, ಮತ್ತೊಬ್ಬ ಯುವಕನ ಗುರುತು ಪತ್ತೆ ಆಗಿಲ್ಲ. ಘಟನಾ ಸ್ಥಳಕ್ಕೆ ರಾಜಾಜಿನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಬಾಲಕನ ಕೊಂದ ಮೊಸಳೆ!: ಬಾಲಕನನ್ನು ಮೊಸಳೆ ಕೊಂದಿದ್ದರಿಂದ ಕುಪಿತಗೊಂಡ ಗ್ರಾಮಸ್ಥರು ಮೊಸಳೆಯನ್ನು ಹೊಡೆದು ಕೊಂದ ಘಟನೆ ಬಿಹಾರದ ವೈಶಾಲಿ ಜಿಲ್ಲೆಯ ಬಿದುಪುರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗೋಕುಲಪುರ ನಿವಾಸಿ ಧರ್ಮೇಂದ್ರ ದಾಸ್ ಎಂಬುವವರು…
ರೈಲ್ವೆ ನಿಲ್ದಾಣದಲ್ಲಿ ಕುಳಿತಿದ್ದ ಬಾಲಕಿ ರೇಪ್: ಆರೋಪಿಗಳಿಗೆ ಜೈಲು! – ಇಬ್ಬರು ಅಪರಾಧಿಗಳಿಗೆ 20 ವರ್ಷ ಜೈಲು – ಮಂಗಳೂರು ರೈಲ್ವೆ ನಿಲ್ದಾಣದಿಂದ ಕರೆದೊಯ್ದು ಅತ್ಯಾಚಾರ NAMMUR EXPRESS NEWS ಮಂಗಳೂರು: ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಪಿಯುಸಿ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಅಪಹರಣ ಮಾಡಿ ಅತ್ಯಾಚಾರಗೈದಿರುವ ಇಬ್ಬರು ಅಪರಾಧಿಗಳಿಗೆ ಮಂಗಳೂರಿನ ಹೆಚ್ಚುವರಿ ಸತ್ರ ಮತ್ತು ಎಫ್‌ಟಿಎಸ್‌ಸಿ-2 ನ್ಯಾಯಾಲಯವು 20 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಅತ್ಯಾಚಾರದ ಆರೋಪಿಗಳನ್ನು ಉತ್ತರ ಕನ್ನಡ ಜಿಲ್ಲೆಯ ಅಂಕೋಲ ಕಾವಳಗದ್ದೆಯ ಸಚಿನ್ ಸಂತೋಷ್ ನಾಯ್ಕ (22) ಮತ್ತು ಹಟ್ಟಿಕೆರೆಯ ಪ್ರವೀಣ್ ಜಯಪಾಲ ನಾಯ್ಕ (33) ಎಂದು ಗುರುತಿಸಲಾಗಿದೆ. ಏನಿದು ಘಟನೆ?: 2022ರ ಏಪ್ರಿಲ್ 12ರ ಮಧ್ಯಾಹ್ನ 12.45ಕ್ಕೆ ಪಿಯುಸಿ ವಿದ್ಯಾರ್ಥಿನಿಯಾದ ಬಾಲಕಿ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಹರಿಯಾಣಕ್ಕೆ ಹೋಗುವ ಟಿಕೆಟ್ ಪಡೆಯಲೆಂದು ನಿಂತಿದ್ದಳು. ಅಲ್ಲಿಗೆ ಬಂದ ದುರುಳ ಆಕೆಯಲ್ಲಿ ಟಿಕೆಟ್ ಮಾಡಿಸಿಕೊಡುವುದಾಗಿ ಹೇಳಿದ್ದಾನೆ. ಬಳಿಕ ಟಿಕೆಟ್ ಕೌಂಟರ್‌ನಲ್ಲಿ ಟಿಕೆಟ್ ಪಡೆಯುವಂತೆ ನಟಿಸಿ ‘ಇಲ್ಲಿ ಟಿಕೆಟ್…
ರಕ್ತದಾನ ಮಾಡಿ ಜೀವ ಉಳಿಸೋಣ! – ಇಂದು ವಿಶ್ವ ರಕ್ತದಾನಿಗಳ ದಿನ: ರಕ್ತದಾನಿಗಳಿಗೆ ಸಲಾಂ – ಯಾರು ರಕ್ತದಾನ ಮಾಡಬಹುದು? NAMMUR EXPRESS NEWS ದಾನಗಳಲ್ಲೇ ಶ್ರೇಷ್ಠ ದಾನ ‘ರಕ್ತದಾನ’!. ಒಂದು ಯೂನಿಟ್ ರಕ್ತದಿಂದ ನಾಲ್ವರ ಜೀವ ಉಳಿಸಬಹುದಾಗಿದೆ. ಇಂತಹ ಮಹತ್ವದ ಕಾರ್ಯದ ಕುರಿತು ಜನರಲ್ಲಿ ಜಾಗೃತಿ ಮತ್ತು ಅರಿವು ಮೂಡಿಸಲು ಪ್ರತಿ ವರ್ಷ ಜೂ. 14 ರಂದು ವಿಶ್ವ ರಕ್ತ ದಾನಿಗಳ ದಿನ ಆಚರಿಸಲಾಗುತ್ತಿದೆ. ಈ ದಿನದಂದು ಸಮಸ್ತ ರಕ್ತದಾನಿಗಳಿಗೆ ನಮನಗಳು. ರಕ್ತದಾನಕ್ಕೆ ಕೈ ಜೋಡಿಸಿ ಜೀವ ಉಳಿಸೋಣ’ ಎಂಬ ಘೋಷವಾಕ್ಯದೊಂದಿಗೆ ಸರ್ಕಾರ, ರಕ್ತನಿಧಿಗಳು ಹಾಗೂ ಸಂಘ-ಸಂಸ್ಥೆಗಳು ರಾಜ್ಯಾದ್ಯಂತ ರಕ್ತದಾನ ಶಿಬಿರಗಳನ್ನು ಆಯೋಜಿಸಿವೆ. ಜತೆಗೆ ರಕ್ತದಾನಿಗಳನ್ನು ಪ್ರೋತ್ಸಾಹಿಸಲು ಅತಿ ಹೆಚ್ಚು ಬಾರಿ ರಕ್ತದಾನ ಮಾಡಿರುವವರನ್ನು ಗುರುತಿಸಿ ಗೌರವಿಸುವ ಕಾರ್ಯವೂ ನಡೆಯುತ್ತಿದೆ. ಇಂಟರ್‌ನ್ಯಾಷನಲ್ ಫೆಡರೇಷನ್ ಆಫ್ ರೆಡ್ ಕ್ರಾಸ್ ಮತ್ತು ರೆಡ್ ಕ್ರೆಸೆಂಟ್ ಸೊಸೈಟಿ ಇಂಟರ್‌ನ್ಯಾಷನಲ್ ಫೆರಡೇಷನ್ ಆಫ್ ಬ್ಲಡ್ ಡೋನರ್ ಆರ್ಗನೈಸೇಷನ್ ಮತ್ತು ಇಂಟರ್‌ನ್ಯಾಷನಲ್ ಸೊಸೈಟಿ ಆಫ್ ಬ್ಲಡ್ ಟ್ರಾನ್ಸ್ಪ್ಯೂಷನ್…
ಎನ್‌ಪಿಎಸ್ ರದ್ದು:ಸರಕಾರಿ ನೌಕರರಿಗೆ ಸಿಹಿ ಸುದ್ದಿ! – ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ: ಸಿದ್ದರಾಮಯ್ಯ ಹೇಳಿಕೆ – 19 ಸಾವಿರ ಕೋಟಿ ಹಣ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಕ್ಕೆ ಬಳಕೆ NAMMUR EXPRESS NEWS ದೇಶದಾದ್ಯಂತ 2006ರ ಎಪ್ರಿಲ್ 1ರಿಂದಲೇ ಎನ್‌ಪಿಎಸ್ ಜಾರಿಯಾಗಿದೆ. ರಾಜ್ಯದಲ್ಲಿನ 2.98 ಲಕ್ಷ ನೌಕರರು ಎನ್‌ಪಿಎಸ್ ವ್ಯಾಪ್ತಿಗೆ ಒಳಪಡುತ್ತಿದ್ದು, ಪಿಂಚಣಿ ಮೊತ್ತವನ್ನು ಎನ್‌ಎಸ್‌ಡಿಎಲ್‌ನಲ್ಲಿ ಠೇವಣಿ ಇರಿಸಲಾಗುತ್ತಿದೆ. ಆದ್ರೆ ಇದೀಗ ಎನ್‌ಪಿಎಸ್ ರದ್ದು ಮಾಡುವುದಾಗಿ ಸರಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕರ್ನಾಟಕದಲ್ಲಿ ಎನ್‌ಪಿಎಸ್ ರದ್ದು ಮಾಡಿ, ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಸಂಬಂಧಿಸಿದಂತೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಸರಕಾರಿ ಎನ್‌ಪಿಎಸ್ ನೌಕರರ ಸಂಘ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ರಾಜ್ಯದಲ್ಲಿ ಎನ್‌ಪಿಎಸ್ ರದ್ದು ಮಾಡಿ ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸುವ ಬಗ್ಗೆ ಸಂಪುಟ…
10 ರೂ. ಕೇಳಿದ್ದಕ್ಕೆ ಮಗನನ್ನೇ ಕೊಂದ ತಂದೆ..! – ತಾಯಿ ಕೊಂದು ಶವ ಸೂಟ್‌ಕೇಸ್‌ನಲ್ಲಿ ತುಂಬಿಸಿ ಪೊಲೀಸ್ ಠಾಣೆಗೆ ತಂದ ಮಗಳು! – ವಿಜಯಪುರದಲ್ಲಿ ಮಹಿಳೆ ಮರ್ಡರ್ – ರಾಜ್ಯದಲ್ಲಿ ಏನೇನ್ ಆಯ್ತು.. ಇಲ್ಲಿದೆ ವಿಶೇಷ ವರದಿ NAMMUR EXPRESS NEWS ಮಹಿಳೆಯೊಬ್ಬಳು ತಾಯಿಯನ್ನು ಕೊಂದು ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿಸಿ ಪೊಲೀಸ್ ಠಾಣೆಗೆ ತಂದು ಶರಣಾದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. 39 ವರ್ಷ ಪ್ರಾಯದ ಫಿಸಿಯೋಥೆರಪಿಸ್ಟ್ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಮೈಕೋಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದಾರುಣ ಘಟನೆ ಸಂಭವಿಸಿದೆ. ಬೀವಾಪಾಲ್ ಮೃತ ದುರ್ದೈವಿಯಾಗಿದ್ದಾರೆ. ಸೆನಾಲಿ ಸೇನ್ (39) ಕೊಲೆ ಮಾಡಿದ ಮಗಳು. ಇಲ್ಲಿನ ಬಿಳೇಕಹಳ್ಳಿಯ ಎನ್‌ಎಸ್‌ಆರ್ ಗ್ರೀನ್ ಅಪಾರ್ಟ್ ಮೆಂಟ್‌ನ ಒಂದೇ ಫ್ಲಾಟ್‌ನಲ್ಲಿ ಸೆನಾಲಿ ಸೇನ್ , ಆಕೆಯ ತಾಯಿ ಬೀವಾ ಪಾಲ್ ಮತ್ತು ಅತ್ತೆ ವಾಸವಿದ್ದರು. ನಿತ್ಯ ಆರೋಪಿ ಸೆನಾಲಿ ಸೇನ್ ತಾಯಿ ಮತ್ತು ಅತ್ತೆ ಗಲಾಟೆ ಮಾಡುತ್ತಿದ್ದರಂತೆ. ಹೀಗಾಗಿ ಮನನೊಂದು ಈ ಕೃತ್ಯವೆಸಗಿರುವುದಾಗಿ ಆಕೆ…
– ಗಂಡ ಬೇರೆ ಮನೆ ಮಾಡಲಿಲ್ಲ ಎಂದು ಅತ್ತೆಯನ್ನೇ ಕೊಂದಳಾ ಸೊಸೆ! – ಮಹಿಳೆ ಸ್ನಾನ ಮಾಡುವುದನ್ನು ಇಣುಕಿ ನೋಡುತ್ತಿದ್ದ ಕಾಮುಕ ಅರೆಸ್ಟ್ – ಒಂದೂವರೆ ಬಕೆಟ್ ನೀರು ಕುಡಿಸಿದಕ್ಕೆ ಸಾವು ಕಂಡಳಾ ವಿದ್ಯಾರ್ಥಿನಿ? NAMMUR EXPRESS NEWS ಬೆಳಗಾವಿ: ಗಂಡ ಬೇರೆ ಮನೆ ಮಾಡಲಿಲ್ಲ ಅಂತ ಅತ್ತೆಯನ್ನೇ ಹೊಡೆದು ಸೊಸೆ ಕೊಲೆ ಮಾಡಿದ್ದಾಳೆ ಎಂಬ ಆರೋಪ ಕೇಳಿ ಬಂದಿದೆ. ಗಂಡ ಬೇರೆ ಮನೆ ಮಾಡಲಿಲ್ಲವೆಂದು ಆರೋಪಿಸಿ ಅತ್ತೆ ಹಾಗೂ ಗಂಡನ ಮೇಲೆ ಹೆಂಡತಿಯೊಬ್ಬಳು ಹಲ್ಲೆ ಮಾಡಿದ್ದು, ತೀವ್ರವಾಗಿ ಹಲ್ಲೆಗೊಳಗಾಗಿದ್ದ ಅತ್ತೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದಿದೆ. ಮೃತ ಅತ್ತೆಯನ್ನು ಮೆಹಾಬೂಬಿ ಯಾಕೂಶಿ(53) ಎಂದು ಗುರುತಿಸಲಾಗಿದೆ. ಮೇ.22ರಂದು ಸೊಸೆ ಮೇಹರೂಣಿ ತನ್ನ ಇಬ್ಬರು ಸಹೋದರರ ಜತೆ ಸೇರಿ ರಾಡ್‌ನಿಂದ ಗಂಡ ಸುವಾನ್ ಮತ್ತು ಅತ್ತೆ ಮೆಹಬೂಬಿ ಮೇಲೆ ಹಲ್ಲೆ ನಡೆಸಿದ್ದರು. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಅತ್ತೆ ಮೆಹಬೂಬಿ ಇಂದು(ಜೂ.13) ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಸಾವಿಗೆ…
– ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡಿದ ಅಜ್ಜಿ – ಪ್ರತಿ ಮಹಿಳೆಯೂ ಈ ಯೋಜನೆಯ ಹಿಂದಿನ ಪ್ರೇರಕ ಶಕ್ತಿ: ಸಿದ್ದರಾಮಯ್ಯ NAMMUR EXPRESS NEWS ಬೆಳಗಾವಿ: ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಚಾಲನೆ ಸಿಕ್ಕ ಬೆನ್ನಲ್ಲೇ ಧಾರವಾಡದಲ್ಲಿ ವೃದ್ಧೆ ನಿಂಗವ್ವಾಶಿಂಗಾಡಿ ಬಸ್ಸಿನ ಮೆಟ್ಟಿಲಿಗೆ ಶಿರವಿಟ್ಟು ನಮಸ್ಕರಿಸಿ ಬಸ್ಸಿನೊಳಗೆ ಪ್ರವೇಶಿಸಿದ್ದು ಇದೀಗ ಅವರು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಬಸ್ ಹತ್ತುವ ಮುನ್ನ ಅಜ್ಜಿ ಬಸ್ ಮೆಟ್ಟಿಲಿಗೆ ನಮಸ್ಕರಿಸಿದ್ದು ಈ ಕುರಿತು ಫೋಟೋ ವೈರಲ್ ಆಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಅಜ್ಜಿಯ ಪೋಟೋ ಹಂಚಿಕೊಂಡು ಯೋಜನೆ ತಂದಿದ್ದಕ್ಕೆ ಸಾರ್ಥಕವಾಯ್ತು ಎಂದು ಹೇಳಿದ್ದಾರೆ. ಯೋಜನೆ ಬಗ್ಗೆ ಅಜ್ಜಿ ನಿಂಗವ್ವಾ ಶಿಂಗಾಡಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಸಿದ್ದರಾಮಯ್ಯ ಅವರಿಗೆ ಧನ್ಯವಾದ ಹೇಳಿದ್ದಾರೆ. ಎಲ್ಲ ಹೆಣ್ಣು ಮಕ್ಕಳಿಗೆ ಬಸ್ ಫ್ರೀ ಮಾಡಿದ್ದಕ್ಕೆ ಬಹಳ ಅನುಕೂಲ ಆಗಿದೆ. ಸಿದ್ದರಾಮಯ್ಯನವರಿಗೆ ಒಳ್ಳೆಯದಾಗಲಿ ಎಂದು ಹೇಳಿದ್ದಾರೆ. ಭಾನುವಾರ ಮೊಮ್ಮಗನ ಮನೆ ಗೃಹ ಪ್ರವೇಶ ಇರುವ ಹಿನ್ನೆಲೆ ನಿಂಗವ್ವ ಸಂಗೊಳ್ಳಿಯಿಂದ ಧಾರವಾಡಕ್ಕೆ…
– ಭಾರೀ ಬಿರುಗಾಳಿ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ – ಕರಾವಳಿ, ಮಲೆನಾಡಲ್ಲಿ ಮಳೆ ಆರ್ಭಟ? NAMMUR EXPRESS NEWS ಬೆಂಗಳೂರು: ಕರ್ನಾಟಕಕ್ಕೆ ಮುಂಗಾರು ಆಗಮನವಾಗಿದೆ. 2 ದಿನ ಭಾರೀ ಮಳೆ ಸೂಚನೆ ಇದೆ. ರಾಜಧಾನಿ ಬೆಂಗಳೂರು, ಕರಾವಳಿ ಜಿಲ್ಲೆಗಳಲ್ಲಿ ಕಳೆದ ಮೂರು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಮುಂದಿನ ಎರಡರಿಂದ ಮೂರು ದಿನಗಳ ಕಾಲ ಇದೇ ರೀತಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 13 ಮತ್ತು 14 ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ, ದಕ್ಷಿಣ ಒಳನಾಡಿನ ಅಂದರೆ ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ರಾಯಚೂರು, ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿಯಲ್ಲಿ ಬಿರುಗಾಳಿ!: ಕರಾವಳಿ ಭಾಗದಲ್ಲಿ ಬಿರುಗಾಳಿ ಗಂಟೆಗೆ 40-45 ಕಿಲೋ ಮೀಟರ್ ನಿಂದ 55 ಕಿಲೋ ಮೀಟರ್ ವೇಗದಲ್ಲಿ ಬೀಸುವ ವಾತಾವರಣ ಇದೆ. ಮುಂಜಾಗ್ರತಾ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ…