ರಾಜ್ಯದಲ್ಲಿ ಪಕ್ಷಾಂತರ ಪರ್ವ ಶುರು!ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಎಲ್ಲಾ ಪಕ್ಷದಲ್ಲೂ ಜಂಪಿಂಗ್ಟಿಕೆಟ್ ಫೈಟ್ ಅಲ್ಲೂ ಕೆಲವರ ಹಾವು ಏಣಿ ಆಟ NAMMUR EXPRESS NEWSಬೆಂಗಳೂರು : ರಾಜಕೀಯ ಪಾರ್ಟಿಗಳ ಅಧಿಕಾರದ ಹಪಾಹಪಿಗೆ ವೇದಿಕೆ ಸಿದ್ದಗೊಂಡಿದೆ. ಬಹುತೇಕ ಕ್ಷೇತ್ರಗಳಲ್ಲಿ ಆಕಾಂಕ್ಷಿಗಳಿಂದ ಮುಂದುವರಿದ ಪಕ್ಷಾಂತರ ಪರ್ವ ಈಗ ಎಲ್ಲಾ ನಾಯಕರಿಗೆ ಇರುಸು ಮುರುಸು ತಂದಿದೆ.ತಾವು ಮೆಚ್ಚಿಕೊಂಡ ಪಕ್ಷಗಳು ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಹಾಗೂ ಕೆಲವು ಸೈದ್ಧಾಂತಿಕ ಭಿನ್ನಾಭಿಪ್ರಾಯಗಳ ಹಿನ್ನೆಲೆಯಲ್ಲಿ ಹಲವು ಆಕಾಂಕ್ಷಿಗಳು ಈಗಾಗಲೇ ಪಕ್ಷಾಂತರ ಪರ್ವ ಆರಂಭಿಸಿದ್ದಾರೆ.ಪಕ್ಷ ನಿಷ್ಠೆ ಮತ್ತು ಜನರಿಗಾಗಿ ಕೆಲಸ ಮಾಡುವ ಬದ್ಧತೆಗೆ ಹಿನ್ನಡೆ ಉಂಟು ಮಾಡುತ್ತದೆ.ರಾಜಕೀಯ ಪಕ್ಷಗಳು ಟಿಕೆಟ್ ಘೋಷಿಸಿದ ನಂತರ ಬಂಡಾಯದ ಬಾವುಟ ಹಾರುತ್ತದೆ, ಟಿಕೆಟ್ ಸಿಗದ ನಿರಾಶೆಯಿಂದ ಬೇರೆ ಪಕ್ಷಕ್ಕೆ ಜಿಗಿಯುತ್ತಾರೆ. ಆ ಪಕ್ಷಗಳು ಕೂಡ ಅಂತಹ ಬಂಡಾಯಗಾರರಿಗೆ ಮಣೆಹಾಕಲು ಕಾಯುತ್ತಿರುತ್ತವೆ, ಕರ್ನಾಟಕದಲ್ಲಿ ಜೆಡಿಎಸ್ ಗೆ ಪ್ರಬಲ ನೆಲೆಯಿಲ್ಲದ ಕಾರಣ ಹೆಚ್ಚಿನ ಬಂಡಾಯಗಾರರನ್ನು ತಮ್ಮ ಪಕ್ಷಕ್ಕೆ ಆಹ್ವಾನಿಸುವ ಸಾಧ್ಯತೆಯಿದೆ. ರಾಜಕೀಯ ಪಕ್ಷಗಳ ಅಧಿಕಾರದ ಹಪಾಹಪಿಯಿಂದ ಹೆಚ್ಚಿನ ಸ್ಥಾನಗಳನ್ನು…
Author: Nammur Express Admin
ಶಿವಮೊಗ್ಗದಲ್ಲಿ ಈಶ್ವರಪ್ಪ ವಿರುದ್ಧ ಬಂಡಾಯ ಸ್ಪರ್ಧೆಶಿವಮೊಗ್ಗ ಕಾಂಗ್ರೆಸ್ ಟಿಕೆಟ್ ಬಹುತೇಕ ಪಕ್ಕಾ!? NAMMUR EXPRESS NEWSಶಿವಮೊಗ್ಗ: ಶಿವಮೊಗ್ಗದಲ್ಲಿ ಬಿಜೆಪಿಗೆ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ ರಾಜೀನಾಮೆ ನೀಡಿದ್ದು ಬಿಜೆಪಿಯಲ್ಲಿ ಭಾರೀ ಸಂಚಲನ ಮೂಡಿಸಿದ್ದಾರೆ.ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ಆಯನೂರು ಮಂಜುನಾಥ್ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಪಟ್ಟಿ ಕೂಡ ಬಿಡುಗಡೆ ಆಗಲು ಸಿದ್ಧತೆ ನಡೆಸಿದ್ದು ಆಯನೂರು ಮಂಜುನಾಥ್ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ.ಆಯನೂರು ಮಂಜುನಾಥ್ ಮಾತನಾಡಿ,ನಾನು ರಾಜೀನಾಮೆ ಕೊಟ್ಟು ಕೆ.ಎಸ್ ಈಶ್ವರಪ್ಪ ವಿರುದ್ಧ ಬಂಡಾಯವಾಗಿ ಸ್ಪರ್ಧೆ ಮಾಡುತ್ತೇನೆ. ನಾನು ಮಾಜಿ ಸಚಿವ ಈಶ್ವರಪ್ಪ ಸವಾಲನ್ನ ಸ್ವೀಕಾರ ಮಾಡುತ್ತೇನೆ. ಈಶ್ವರಪ್ಪರಿಂದ ಅಭಿವೃದ್ದಿಯಾಗಿಲ್ಲ ಪ್ರಚೋದನೆಯೇ ಅವರ ಬಂಡವಾಳವಾಗಿದೆ ಎಂದು ಆರೋಪಿಸಿದ್ದಾರೆ. ಆಯನೂರು ಮಂಜುನಾಥ್ ಅವರ ಈ ನಡೆ ರಾಜಕೀಯವಾಗಿ ಕುತೂಹಲ ಮೂಡಿಸಿದೆ.
ಶಾಲೆ ಯಾವಾಗ… ಶೈಕ್ಷಣಿಕ ಅವಧಿ ಏನು?ಸರ್ಕಾರದಿಂದ ನಿಯಮಗಳು ಏನು..? NAMMUR EXPRESS NEWSಬೆಂಗಳೂರು : ರಾಜ್ಯಾದ್ಯಂತ 2023-24ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗುತ್ತಿದ್ದು, ಏಕರೂಪದ ಅನುಷ್ಠಾನಕ್ಕಾಗಿ ವಾರ್ಷಿಕ ಶೈಕ್ಷಣಿಕ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ. ಈ ಮಾರ್ಗಸೂಚಿಯಲ್ಲಿ ವಾರ್ಷಿಕ/ ಮಾಹೆವಾರು ಪಾಠ ಹಂಚಿಕೆ, ಪತ್ಯೇತರ ಚಟುವಟಿಕೆಗಳು, ಪರೀಕ್ಷೆ ಮತ್ತು ಮೌಲ್ಯಾಂಕನ ವಿಶ್ಲೇಷಣೆ, ಗುಣಮಟ್ಟದ ಶಿಕ್ಷಣಕ್ಕಾಗಿ ಫಲಿತಾಂಶಮುಖಿ ಚಟುವಟಿಕೆಗಳ ನಿರ್ವಹಣೆ ಹಾಗೂ ವಿವಿಧ ಶಾಲಾ ಹಂತದ ಸಿಸಿಇ ಚಟುವಟಿಕೆಗಳನ್ನು ನಿರ್ವಹಿಸಲು ಸಹಾಯ ಆಗುವಂತೆ ಶೈಕ್ಷಣಿಕ ಅವಧಿಗಳು, ರಜಾದಿನಗಳನ್ನು ಯೋಜಿಸಿ ಸಿದ್ಧಪಡಿಸಲಾಗಿದೆ ಎಂದು ತಿಳಿಸಿದ್ದಾರೆ. ರಾಜ್ಯಾದ್ಯಂತ 2023-24ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗುತ್ತಿದ್ದು, ಏಕರೂಪದ ಅನುಷ್ಠಾನಕ್ಕಾಗಿ ವಾರ್ಷಿಕ ಶೈಕ್ಷಣಿಕ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ. ಈ ಮಾರ್ಗಸೂಚಿಯಲ್ಲಿ ವಾರ್ಷಿಕ/ ಮಾಹೆವಾರು ಪಾಠ ಹಂಚಿಕೆ, ಪತ್ಯೇತರ ಚಟುವಟಿಕೆಗಳು, ಪರೀಕ್ಷೆ ಮತ್ತು ಮೌಲ್ಯಾಂಕನ ವಿಶ್ಲೇಷಣೆ, ಗುಣಮಟ್ಟದ ಶಿಕ್ಷಣಕ್ಕಾಗಿ ಫಲಿತಾಂಶಮುಖಿ ಚಟುವಟಿಕೆಗಳ ನಿರ್ವಹಣೆ ಹಾಗೂ ವಿವಿಧ ಶಾಲಾ ಹಂತದ ಸಿಸಿಇ ಚಟುವಟಿಕೆಗಳನ್ನು ನಿರ್ವಹಿಸಲು ಸಹಾಯ ಆಗುವಂತೆ ಶೈಕ್ಷಣಿಕ ಅವಧಿಗಳು, ರಜಾದಿನಗಳನ್ನು ಯೋಜಿಸಿ ಸಿದ್ಧಪಡಿಸಲಾಗಿದೆ ಎಂದು…
ಮಂಗಳೂರಿನ ಲಾಡ್ಜ್ ಅಲ್ಲಿ ಮೈಸೂರು ಮೂಲದ ಕುಟುಂಬ ಆತ್ಮಹತ್ಯೆ NAMMUR EXPRESS NEWSಮಂಗಳೂರು : ಮಂಗಳೂರಿನ ಕೆ.ಎಸ್.ರಾವ್ ರಸ್ತೆಯಲ್ಲಿರುವ ಲಾಡ್ಜ್‌ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಶುಕ್ರವಾರ ನಡೆದಿದೆ.ದಂಪತಿ ಸೇರಿದಂತೆ ಇಬ್ಬರು ಹೆಣ್ಣು ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆ ಮಾಡಿಕೊಂಡವರು ಮೈಸೂರು ಮೂಲದವರು ಎಂದು ತಿಳಿದುಬಂದಿದೆ.ಆತ್ಮಹತ್ಯೆ ಮಾಡಿಕೊಂಡವರು ಯಾರು? ಯಾಕೆ ಆತ್ಮಹತ್ಯೆಗೆ ಮಾಡಿಕೊಂಡ್ರು? ಎಂಬ ಮಾಹಿತಿ ತಿಳಿದುಬರಬೇಕಿದೆ. ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದೆ.ನಾಲ್ವರಲ್ಲಿ ಓರ್ವ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಉಳಿದ ಮೂವರು ಮಲಗಿದ ಸ್ಥಿತಿಯಲ್ಲಿದ್ದರು.ಇನ್ನು ಸ್ಥಳಕ್ಕೆ ಬಂದರು ಪೊಲೀಸರು ತೆರಳಿ ತನಿಖೆ ನಡೆಸುತ್ತಿದ್ದಾರೆ.ಎಂ.ಪಿ.ಕುಮಾರಸ್ವಾಮಿ ವಿರುದ್ಧ ದೂರು ದಾಖಲುರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಈ ಹಿನ್ನೆಲೆ ಬುಧವಾರ (ಮಾರ್ಚ್ 29)ರಿಂದಲೇ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾಗಿದೆ. ಆದರೂ ಕೂಡ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ತಮ್ಮ ಮನೆಯಲ್ಲೇ ಚೆಕ್ ವಿತರಣೆ ಮಾಡುವ ಮೂಲಕ ನೀತಿ ಸಂಹಿತೆಯನ್ನು ಉಲ್ಲಘನೆ ಮಾಡಿದ್ದು, ಅವರ ವಿರುದ್ಧ ದೂರು ದಾಖಲಿಸಲಾಗಿದೆ.…
ದೇವಂಗಿ ಸಮೀಪದ ಮಳೂರಿನಲ್ಲಿ ಆನೆ ಸೆರೆತೀರ್ಥಹಳ್ಳಿ ತಾಲೂಕಲ್ಲಿ ಸುದ್ದಿ ಮಾಡಿದ್ದ ಕಾಡಾನೆ NAMMUR EXPRESS NEWSತೀರ್ಥಹಳ್ಳಿ : ತೀರ್ಥಹಳ್ಳಿ ತಾಲೂಕಿನಲ್ಲಿ ಭೀತಿ ಹುಟ್ಟಿಸಿದ್ದ ಕಾಡಾನೆ ಅಂತೂ ಸೆರೆಯಾಗಿದೆ. 2 ತಿಂಗಳ ಕಾರ್ಯಚರಣೆ ಯಶಸ್ವಿಯಾಗಿದೆ.ಡಿಸೆಂಬರ್ 31ರಂದು ಮೇಳಿಗೆ ಮೂಲಕ ಪಟ್ಟಣಕ್ಕೆ ಎಂಟ್ರಿಯಾಗಿದ್ದ ಆನೆ ತೀರ್ಥಹಳ್ಳಿ ಪಟ್ಟಣಕ್ಕೆ ಆಗಮಿಸಿ ಭಾರೀ ಸುದ್ದಿ ಮಾಡಿತ್ತು. ಈ ಕಾಡಾನೆಯನ್ನು ಸತತವಾಗಿ ಅರಣ್ಯ ಇಲಾಖೆಯ ಶ್ರಮ, ಸಕ್ರೆಬೈಲ್ ಆನೆಗಳು ಮತ್ತು ಮಾವುತರ ಕಾರ್ಯಚರಣೆ ಮೂಲಕ ದೇವಂಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಳೂರು ದೇವಂಗಿ ಸಮೀಪ ಕಾಡಿನಲ್ಲಿ ಸೆರೆ ಹಿಡಿಯಲಾಗಿದೆ. ಕಳೆದೊಂದು ವಾರದಿಂದ ಆನೆ ಹಿಡಿಯುವ ಕಾರ್ಯಚರಣೆ ಮಾಡಲಾಗುತ್ತಿತ್ತು. 9 ದಿನಗಳ ಕಾರ್ಯಾಚರಣೆ ಅಂತ್ಯಗೊಂಡಿದೆ.ತೀರ್ಥಹಳ್ಳಿ ಪಟ್ಟಣ ಸೇರಿ ಮೇಲಿನ ಕುರುವಳ್ಳಿ, ದೇವಂಗಿ ,ಹಾರೋ ಗಳಿಗೆ ಮುಂತಾದ ಗ್ರಾಮಗಳಲ್ಲಿ ಕೆಲವು ತಿಂಗಳಿಂದ ಈ ಆನೆ ರೈತರಿಗೆ ಮತ್ತು ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದೆ ಎಂಬ ದೂರಿನ ಮೇರೆಗೆ ಶಿವಮೊಗ್ಗ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿಗಳು,, ವನ್ಯಜೀವಿ ವಿಭಾಗದ ಉಪ…
ದೇಶದಲ್ಲಿಂದು 3,016 ಹೊಸ ಕೇಸ್ ಪತ್ತೆ 13 ಸಾವಿರ ಗಡಿ ದಾಟಿದ ಸಕ್ರಿಯ ಪ್ರಕರಣ ಸಂಖ್ಯೆ NAMMUR EXPRESS NEWSನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ದಿನೇ ದಿನೇಏರಿಕೆಯಾಗುತ್ತಲೇ ಇದ್ದು ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,016 ಹೊಸ ಪ್ರಕರಣಗಳು ಪತ್ತೆಯಾಗಿವೆ.ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,47,12,692ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,862ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 13,509ಕ್ಕೆ ತಲುಪಿದೆ. ಈ ನಡುವೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,41,68,321ಕ್ಕೆ ತಲುಪಿದೆ. ಇನ್ನು ಭಾರತದಲ್ಲಿ ಒಂದೇ 1,10,522 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 92,14,14,314 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ…
ಲಕ್ಷಾನುಗಟ್ಟಲೆ ಹಣ ಸೀಜ್- ಲಿಕ್ಕರ್ ವಶ! NAMMUR EXPRESS NEWSಶಿವಮೊಗ್ಗ: ಚುನಾವಣೆ ಮಾದರಿ ನೀತಿ ಜಾರಿಯಾದ ಬೆನ್ನಲ್ಲೇ ಅನಾಮಧೇಯ ಹಣವೊಂದು ದೊರೆತಿದೆ. ಇದರ ಜೊತೆಗೆ ಅಕ್ರಮ ಮದ್ಯ ವಶ ಪಡಿಸಿಕೊಳ್ಳಲಾಗಿದೆ.ಒಬ್ಬ ಮನುಷ್ಯ ದಾಖಲಾತಿಯಿಲ್ಲದೆ 50 ಸಾವಿರ ರೂ. ಹಣ ಹೊತ್ತಯ್ಯಲು ನೀತಿ ಸಂಹಿತೆಯಲ್ಲಿ ಅವಕಾಶ ಕಲ್ಪಿಸಲಾಗಿದೆ. 50 ಸಾವಿರ ರೂ.ಗಿಂತ ಹೆಚ್ಚಿಗೆ ಹೊತ್ತಯ್ಯಲು ಸೂಕ್ತ ದಾಖಲಾತಿ ಬೇಕಾಗಿರುತ್ತದೆ. ಈ ಹಿನ್ನಲೆಯಲ್ಲಿ ಜೈಲ್ ರಸ್ತೆಯಲ್ಲಿ ದೊಡ್ಡಪೇಟೆ ಪೊಲೀಸರುದಾಳಿ ನಡೆಸಿದ್ದಾರೆ. ಷಣ್ಮುಖ ಎಂಬುವರು ಜೈಲ್ ರಸ್ತೆಯಲ್ಲಿ ಬೈಕ್ ನಲ್ಲಿ ಹೋಗುವಾಗ ಪೊಲೀಸರು ತಡೆದು ತಪಾಸಣೆ ನಡೆಸಿದ್ದಾರೆ. ಬೈಕ್ ನ ಸೈಡ್ ಬ್ಯಾಗ್ ನಲ್ಲಿ 4 ಲಕ್ಷ ರೂ. ಪತ್ತೆಯಾಗಿದೆ. ಈ ಹಣ ನನ್ನದೆ ಎಂಬುದು ಷಣ್ಮುಖರವರ ವಾದವಾಗಿದೆ.ಆದರೆ ಸೂಕ್ತ ದಾಖಲಾತಿ ಇಲ್ಲದ ಕಾರಣ 4 ಲಕ್ಷ ರೂ. ಹಣವನ್ನ ವಶಕ್ಕೆ ಪಡೆಯಲಾಗಿದೆ. ಈ ಕುರಿತು ಎಫ್‌ಐಆರ್ ಸಹ ದಾಖಲಾಗಿದೆ. ಲಿಕ್ಕರ್ ವಶ : ಜಿಲ್ಲೆಯ ಹಲವಾರು ಕಡೆ ಅಬಕಾರಿ ಇಲಾಖೆ ದಾಳಿ ನಡೆಸಿ 82,265…
ಹವಾಮಾನ ಇಲಾಖೆ ಎಚ್ಚರಿಕೆ NAMMUR EXPRESS NEWSಬೆಂಗಳೂರು : ಕರ್ನಾಟಕದಲ್ಲಿ ಮುಂದಿನ ಐದು ದಿನಗಳ ಕಾಲ ಬಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಧ್ಯಪ್ರದೇಶದಿಂದ ತಮಿಳುನಾಡಿನ ಕಡೆಗೆ ಗಾಳಿಯ ದಿಕ್ಕು ಬದಲಾವಣೆಯಾಗಿದ್ದು, ಗುರುವಾರದಿಂದ ಐದು ದಿನಗಳ ಕಾಲ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ. ಮಂಡ್ಯ ಮೈಸೂರು, ಕೋಲಾರ, ಹಾಸನ, ಕೊಡಗು, ಚಾಮರಾಜನಗರ ಸೇರಿದಂತೆ ಹಲವೆಡೆ ಭಾರೀ ಮಳೆ ಯಾಗಲಿದೆ. ಅದೇ ರೀತಿ ಗುರುವಾರ ದಿಂದ ಮೂರು ದಿನಗಳ ಕಾಲ ಉತ್ತರ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದ್ದು, ಗುರುವಾರದಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಯಲ್ಲಿ ಗುರುವಾರ ಮೋಡ ಕವಿದ ವಾತಾವರಣವಿದ್ದು ಗಾಳಿಯ ಪ್ರಮಾಣ ಹೆಚ್ಚಾಗಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಬೆಂಗಳೂರಿನ ಎಚ್‌ಎಎಲ್‌ನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ, ಬೆಂಗಳೂರು ನಗರದಲ್ಲಿ 34.5 ಡಿಗ್ರಿ ಸೆಲ್ಸಿಯಸ್,…
ಪರೀಕ್ಷಾ ಕೇಂದ್ರದ ಸುತ್ತ ಪೊಲೀಸ್ ಭದ್ರತೆ NAMMUR EXPRESS NEWSಬೆಂಗಳೂರು : ಶುಕ್ರವಾರದಿಂದ ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಲಿದ್ದು, 8,42,811 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.ರಾಜ್ಯದಲ್ಲಿ ಒಟ್ಟು 3,305 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪರೀಕ್ಷೆ ಸುಸೂತ್ರವಾಗಿ ನಡೆಯಲು ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.ಪರೀಕ್ಷೆಗೆ ವಿದ್ಯಾರ್ಥಿಗಳು ಮೊಬೈಲ್ ಫೋನ್, ಸ್ಮಾರ್ಟ್ ವಾಚ್, ಇಯರ್ ಫೋನ್ ನಂತಹ ಸಾಧನಗಳನ್ನು ತರುವಂತಿಲ್ಲ. ಬೆಂಗಳೂರಿನ ಎಲ್ಲಾ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರದ ಬಳಿಯಿರುವ ಜೆರಾಕ್ಸ್ ಅಂಗಡಿ, ಸೈಬರ್ ಸೆಂಟರ್ ಗಳನ್ನು ಮುಚ್ಚುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಮಾ.31 ರಿಂದ ಏಪ್ರಿಲ್ 15ರವರೆಗೆ ಪರೀಕ್ಷೆ ನಡೆಯಲಿದೆ.ಎಸ್ ಎಸ್ ಎಲ್ ಸಿ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು, ಪೋಷಕರ ಯಾವುದೇ ಗೊಂದಲ, ಆತಂಕಗಳಿದ್ದರೆ ಪರಿಹರಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಸಹಾಯವಾಣಿ ಆರಂಭಿಸಿದ್ದು, 080- 23310075/76ಕ್ಕೆ ಕರೆ ಮಾಡಬಹುದಾಗಿದೆ.
ಯಾವ್ಯಾವ ಕ್ಷೇತ್ರದಲ್ಲಿ ಎಷ್ಟು ಮತದಾರರಿದ್ದಾರೆ? NAMMUR EXPRESS NEWSಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಾದ್ಯಂತ 14.58 ಲಕ್ಷ ಮತದಾರರು ಇದ್ದಾರೆ. ಈ ಪೈಕಿ 7.22 ಲಕ್ಷ ಪುರುಷ, 7.36 ಲಕ್ಷ ಮಹಿಳಾ ಮತದಾರರಿದ್ದಾರೆ.ಶಿವಮೊಗ್ಗ ಜಿಲ್ಲೆಯಲ್ಲಿ 14,58,680 ಮತದಾರರು ಇದ್ದಾರೆ. ಈ ಪೈಕಿ ಮಹಿಳಾ ಮತದಾರರೆ ಹೆಚ್ಚಿದ್ದಾರೆ. ಒಟ್ಟು ಮತದಾರರ ಪೈಕಿ 7,22,080 ಪುರುಷ ಮತದಾರರು, 7,36,574 ಮಹಿಳಾ ಮತದಾರರು ಇದ್ದಾರೆ. ಶಿವಮೊಗ್ಗ ಗ್ರಾಮಾಂತರದಲ್ಲಿ 1,04,640 ಪುರುಷ, 1,05,768 ಮಹಿಳಾ ಮತದಾರರಿದ್ದಾರೆ. ಭದ್ರಾವತಿಯಲ್ಲಿ 1,02,236 ಪುರುಷ, 107971 ಮಹಿಳಾ ಮತದಾರರು. ಶಿವಮೊಗ್ಗದಲ್ಲಿ 1,25,943 ಪುರುಷ, 1,31,729 ಮಹಿಳಾ ಮತದಾರರು, ತೀರ್ಥಹಳ್ಳಿಯಲ್ಲಿ 92,141 ಪುರುಷ, 94,453 ಮಹಿಳಾ ಮತದಾರರು. ಶಿಕಾರಿಪುರದಲ್ಲಿ 99,129 ಪುರುಷ, 98,311 ಮಹಿಳಾ ಮತದಾರರು. ಸೊರಬದಲ್ಲಿ 97,674 ಪುರುಷ, 95,910 ಮಹಿಳಾ ಮತದಾರರು. ಸಾಗರದಲ್ಲಿ 1,00,317 ಪುರುಷ, 1,02,432 ಮಹಿಳಾ ಮತದಾರರು ಇದ್ದಾರೆ. ಕ್ಷೇತ್ರವಾರು ಮತದಾರರ ವಿವರ ಕ್ಷೇತ್ರ – ಒಟ್ಟು ಮತದಾರರು Vote : ತೀರ್ಥಹಳ್ಳಿ ವಿಧಾನ ಸಭಾ ಚುನಾವಣೆ – 2023…