Author: Nammur Express Admin

80 ಮಂದಿ ಪಟ್ಟಿ ಬಿಡುಗಡೆ: ಅಖಾಡಕ್ಕೆ ಇಳಿದ ಆಪ್ಟೆನ್ನಿಸ್ ಕೃಷ್ಣ ಸೇರಿ ಎಲ್ಲಾ ರಂಗದವರಿಗೂ ಮಣೆ NAMMUR EXPRESS NEWSಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ ಹಲವು ತಿಂಗಳಿನಿಂದ ಸಿದ್ಧತೆ ನಡೆಸಿದ್ದು ಇದೀಗ 80 ಮಂದಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಮಾಡಿದೆ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳಿಗೆ ತೀವ್ರ ಪೈಪೋಟಿ ನೀಡುವುದಕ್ಕಾಗಿಯೇ ಹಲವು ರೀತಿಯಲ್ಲಿ ಕಸರತ್ತು ಕೂಡ ನಡೆಸಿದೆ. ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳಿಗಿಂತ ಮುಂದೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಆಮ್ ಆದ್ಮಿ ಪಾರ್ಟಿ ಬಿಡುಗಡೆ ಮಾಡಿದೆ. ಅದರಲ್ಲಿ ಇಬ್ಬರು ಸಿನಿಮಾ ರಂಗದವರು ಇದ್ದಾರೆ. ಹಾಗೆಯೇ ಎಲ್ಲಾ ಕ್ಷೇತ್ರದವರು ಇಲ್ಲಿ ಟಿಕೆಟ್ ಪಡೆದಿದ್ದಾರೆ. ಪಕ್ಷ ರಿಲೀಸ್ ಮಾಡಿರುವ ಪಟ್ಟಿಯಲ್ಲಿ ಏಳು ಜನ ರೈತ ಹೋರಾಟಗಾರರು. ಏಳು ಜನ ಮಹಿಳೆಯರು, 5 ಮಂದಿ ಸಮಾಜಸೇವಕರು, ಮೂರು ಜನ ಡಾಕ್ಟರೇಟ್, 15 ಜನ ಮಾಸ್ಟರ್ಸ್ ಮುಗಿಸಿರುವವರು , 3 ಜನ ಎಂಬಿಬಿಎಸ್ ಮುಗಿಸಿರುವವರು, 13 ಜನ ಲಾಯರ್ಸ್, …

Read More

ಶಿಕ್ಷಣ ಸಚಿವ ನಾಗೇಶ್ ಅವರಿಂದ ಘೋಷಣೆ NAMMUR EXPRESS NEWSಬೆಂಗಳೂರು: ಮೇ ಮೊದಲ ವಾರ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ನಾಗೇಶ್ ಘೋಷಣೆ ಮಾಡಿದ್ದಾರೆ.ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಡಿಯಲ್ಲಿ ಮಾರ್ಚ್ 9, 2023 ರಿಂದ ಪ್ರಾರಂಭವಾಗಿದೆ. ವರದಿಗಳ ಪ್ರಕಾರ 2023 ರಲ್ಲಿ ಕರ್ನಾಟಕ 2 ನೇ ಪಿಯುಸಿ ಪರೀಕ್ಷೆಗೆ ಸುಮಾರು 126,195 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಇದೀಗ ಕರ್ನಾಟಕ 2ನೇ ಪಿಯುಸಿ ಫಲಿತಾಂಶ 2023ರ ದಿನಾಂಕವನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ. ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶವನ್ನು ಮೇ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.’ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಮೇ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.ಎಲ್ಲ ವಿಷಯಗಳಲ್ಲಿ 20 ಅಂಕಗಳಿಗೆ ಬಹು ಆಯ್ಕೆಯ ಪ್ರಶ್ನೆಗಳಿದ್ದು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ವ್ಯವಸ್ಥೆ ಮಾಡಿದ್ದೇವೆ. ಕಲಾ ವಿಭಾಗದಲ್ಲಿ 2,34,815 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 2,47,260…

Read More

ಶ್ರೀ ಮಂಜುನಾಥನಿಗೆ ಪೂಜೆ ಸಲ್ಲಿಸಿದ ನಾಯಕಡಾ. ವೀರೇಂದ್ರ ಹೆಗ್ಗಡೆ ಅವರಿಂದ ಆಶೀರ್ವಾದ NAMMUR EXPRESS NEWSಧರ್ಮಸ್ಥಳ: ಮಾಜಿ ಸಚಿವ, ತೀರ್ಥಹಳ್ಳಿ ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ಅವರು ಧರ್ಮಸ್ಥಳ ಶ್ರೀ ಮಂಜುನಾಥನ ಸನ್ನಿಧಿಯಲ್ಲಿ ತುಲಾಭಾರ ಸೇವೆ ಮಾಡಿಸಿ ದೇವರಲ್ಲಿ ವಿಶೇಷ ಪ್ರಾರ್ಥನೆ ಮಾಡಿಕೊಂಡಿದ್ದಾರೆ.ಮಾ.20ರಂದು ಕಾಂಗ್ರೆಸ್ ಮುಖಂಡರೂ ಆಪ್ತರಾದ ಬೇಹಳ್ಳಿ ನಾಗರಾಜ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ತುಲಾಭಾರ ಸೇವೆ ಹೇಳಿಕೊಂಡಿದ್ದರು. ಆದ್ದರಿಂದ ಸೋಮವಾರ ತುಲಾಭಾರ ಮಾಡಿಸಿ. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗಡೆಯವರ ಆಶೀರ್ವಾದ ಪಡೆದರು ಈ ಸಂದರ್ಭದಲ್ಲಿ ಚಂದ್ರ ಮೌಳಿ ಜೊತೆಗಿದ್ದರು.ಕಾಂಗ್ರೆಸ್ ಟಿಕೆಟ್ ಘೋಷಣೆ ಸಾಧ್ಯತೆ ಇರುವುದರಿಂದ ದೇವರಲ್ಲಿ ಕಿಮ್ಮನೆ ವಿಶೇಷ ಪ್ರಾರ್ಥನೆ ಕೂಡ ಮಾಡಿಕೊಂಡಿದ್ದಾರೆ.

Read More

ಮಲೆನಾಡು ಸೇರಿದಂತೆ ಹಲವೆಡೆ ಮಳೆ NAMMUR EXPRESS NEWSಬೆಂಗಳೂರು: ಬಿಸಿಲ ಧಗೆ ಹೆಚ್ಚುತ್ತಿರುವ ಇಂತಹ ವೇಳೆ ರಾಜ್ಯಕ್ಕೆ ಬೇಸಿಗೆ ಮಳೆ ಬೀಳಲಿದೆ. ಇಂದಿನಿಂದ ಮುಂದಿನ ಐದು ದಿನ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಸದ್ಯ ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 32 ಮತ್ತು ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಮಧ್ಯಾಹ್ನದ ನಂತರ ಕೆಲ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸುಳಿಗಾಳಿ ಬೀಸಲಿದೆ.ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Read More

ಮತದಾರರಿಗೆ ಹಂಚುವ 2900 ಕುಕ್ಕರ್​ಗಳು ಜಪ್ತಿಚುನಾವಣೆ ವೇಳೆ ಮತದಾರರಿಗೆ ಭಾರೀ ಆಫರ್ಪೊದೆಯ ಮಧ್ಯೆ ದೇವರ ವಿಗ್ರಹಗಳು ಪತ್ತೆ NAMMUR EXPRESS NEWSರಾಮನಗರ: ರಾಮನಗರ ತಾಲೂಕಿನ ಕರಿಕಲ್ ದೊಡ್ಡಿ ಬಳಿಯಿರುವ ಕುಕ್ಕರ್ ತಯಾರಿಕಾ ಕಾರ್ಖಾನೆ ಮೇಲೆ ತಹಶೀಲ್ದಾರ್​ ತೇಜಸ್ವಿನಿ ನೇತೃತ್ವದಲ್ಲಿ ದಾಳಿ ಮಾಡಿದ್ದು, 2900 ಕುಕ್ಕರ್​ಗಳನ್ನು ಜಪ್ತಿ ಮಾಡಲಾಗಿದೆ. ವಿಶ್ವಾಸ್ ವೈದ್ಯ ಎಂಬುವರಿಗೆ ಕುಕ್ಕರ್​ಗಳು ಸೇರಿದ್ದು ಎನ್ನಲಾಗುತ್ತಿದೆ. ಸವದತ್ತಿ ಯಲ್ಲಮ್ಮ ಕ್ಷೇತ್ರದ ಮತದಾರರಿಗೆ ಹಂಚಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು ಎನ್ನಲಾಗುತ್ತಿದೆ. ಸದ್ಯ ಈ ಕುರಿತು ಇಬ್ಬರ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಕುಕ್ಕರ್, ಮಿಕ್ಸರ್ ಗ್ರೈಂಡರ್, ಸೀರೆಗಳನ್ನು ಹಂಚುವ ಕಾರ್ಯ ಎಲ್ಲ ಪಕ್ಷದ ಶಾಸಕರು, ನಾಯಕರು, ಉಚ್ಚಾಟಿತ ನಾಯಕರು ಶುರವಿಟ್ಟುಕೊಂಡಿದ್ದಾರೆ. ಜೆಡಿಎಸ್ ಪಕ್ಷದಿಂದ ಹೊರದೊಬ್ಬಲ್ಪಟ್ಟಿರುವ ಗುಬ್ಬಿ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ ಅವರು ಇತ್ತೀಚೆಗೆ ಶಿವರಾತ್ರಿಯಂದು ತಮ್ಮ ಕ್ಷೇತ್ರದಲ್ಲಿ ಕುಕ್ಕರ್​ ಹಂಚಲು ಹೋಗಿ ಮತದಾರರಿಂದ ಮಂಗಳಾರತಿ ಮಾಡಿಸಿಕೊಂಡಿದ್ದಾರೆತಲೆ ಮೇಲೆ ಹ್ಯಾಟು ಧರಿಸಿ ವಿದೇಶಿ ಮಹಿಳೆಯಂತೆ ಕಾಣುವ ಕಾರ್ಯಕರ್ತೆಯೊಬ್ಬರು ಶಾಸಕರ…

Read More

ಸಮಾರಂಭ ಮುಗಿದ ಕೂಡಲೇ ಬ್ಯಾನರ್, ಪ್ಲೆಕ್ಸ್ ತೆರವುಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್ ರಮೇಶ್ NAMMUR EXPRESS NEWSಚಿಕ್ಕಮಗಳೂರು: ಅನುಮತಿ ಪಡೆಯದೆ ಅಳವಡಿಸಲಾದ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಬ್ಯಾನರ್, ಪ್ಲೆಕ್ಸ್ ಬಂಟಿಂಗ್ಸ್, ಹೋರ್ಡಿಂಗ್ಸ್, ವಾಲ್ ಪೇಂಟಿಂಗ್ ಮತ್ತು ಪೋಸ್ಟರ್‌ಗಳನ್ನು ತೆರವುಗೊಳಿಸುವಂತೆ ಡಿಸಿ ಕೆ.ಎನ್. ರಮೇಶ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ವಾರ್ತಾ ಇಲಾಖೆಯಲ್ಲಿ ಶುಕ್ರವಾರ ವಿಧಾನಸಭಾ ಚುನಾವಣಾ ಕರ್ತವ್ಯಕ್ಕೆ ನೇಮಕಗೊಂಡಿರುವ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಮಾತನಾಡಿದ ಅವರು ಧಾರ್ಮಿಕ ಸ್ಥಳಗಳನ್ನು ಸೌಹಾರ್ದ ಕದಡುವ ಹೇಳಿಕೆಗಳನ್ನು ನೀಡುವುದನ್ನು ನಿಷೇಧಿಸಲಾಗಿದೆ. ಇಂತಹ ಕೃತ್ಯಗಳಲ್ಲಿ ತೊಡಗದಂತೆ ಸಾರ್ವಜನಿಕರಿಗೂ ಸೂಚನೆ ನೀಡಲಾಗುತ್ತಿದೆ. ಒಂದು ವೇಳೆ ನಿಯಮ ಬಾಹಿರ ಕೃತ್ಯಗಳಲ್ಲಿ ಪಾಲ್ಗೊಂಡರೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕು ಎಂದು ಸೂಚಿಸಿದರು.ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಇಒಗಳು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಅಧಿಕಾರಿಗಳು ಕ್ರಮ ಜರುಗಿಸಬೇಕು. ರಾಜಕೀಯ ಪಕ್ಷಗಳ ಸಭೆ, ಸಮಾರಂಭದ ನಂತರ ಎರಡು ತಾಸಿನೊಳಗೆ ಬ್ಯಾನರ್, ಪ್ಲೆಕ್ಸ್‌ ಗಳನ್ನು ತೆರವುಗೊಳಿಸಬೇಕು. ತೆರವು ಮಾಡದಿದ್ದರೆ ಆಯೋಗದ ನಿರ್ದೇಶನದಂತೆ ಕ್ರಮ ಜರುಗಿಸಬೇಕು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಎಸ್ಪಿ ಉಮಾ…

Read More

NAMMUR EXPRESS NEWSಸ್ಯಾಂಡಲ್‌ವುಡ್ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಕಬ್ಬ’ ದೇಶದಾದ್ಯಂತ ತೆರೆ ಕಂಡಿದ್ದು, ಈಗಾಗಲೇ ಸಿನಿಮಂದಿರಗಳಲ್ಲಿ ಸಾಕಷ್ಟು ಸಿನಿಪ್ರೇಕ್ಷಕರು ನೋಡಿದ್ದಾರೆ. ಆಕ್ಷನ್ ಸಿನಿಮಾ ಮಾರ್ಚ್ 17 ರಂದು ಅದ್ಧೂರಿಯಾಗಿ ಬಿಡುಗಡೆಯಾಗುವ ಮುನ್ನ ಜನರಲ್ಲಿ ಭಾರೀ ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಕನ್ನಡ, ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ವಿಶ್ವದಾದ್ಯಂತ ಸುಮಾರು 4,000 ಸಿನಿಮಂದಿರಗಳಲ್ಲಿ ಪ್ಯಾನ್-ಇಂಡಿಯಾ ಸಿನಿಮಾವನ್ನು ಬಿಡುಗಡೆ ಮಾಡಲು ತಯಾರಕರು ಯೋಜಿಸುತ್ತಿದ್ದಾರೆ. ಅದರಲ್ಲೂ ಫಸ್ಟ್ ಡೇ ಫಸ್ಟ್ ಶೋ ನೋಡಲು ಅಭಿಮಾನಿಗಳು ಸಿನಿಮಂದಿರದಲ್ಲಿ ಮುಗಿಬಿದ್ದಿದ್ದಾರೆ. ಸಿನಿಮಾ ವಿಮರ್ಶಕರ ಎಣಿಕೆಯಂತೆ ಆದರೆ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸುವುದು ಪಕ್ಕಾ ಎಂದು ನೆಟ್ಟಿಗರು ಹೇಳಿದ್ದಾರೆ. ಕಳೆದ ವರ್ಷ ಭಾರತದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ ಅದ್ಭುತವಾದ ಓಟದ ನಂತರ, ಕನ್ನಡ ಚಲನಚಿತ್ರೋದ್ಯಮವು ಈ ವರ್ಷ ಮತ್ತೊಂದು ಆಕ್ಷನ್‌ನೊಂದಿಗೆ ಪ್ರಾರಂಭವಾಗಲಿದೆ. ಕಿಚ್ಚ ಸುದೀಪ್ ಮತ್ತು ಉಪೇಂದ್ರ ಅವರ ಕಬ್ಜ ಸಿನಿಮಾದಿಂದ ಇತ್ತೀಚಿನ ಕೊಡುಗೆಯಾಗಿದೆ. ಇದು ಮಿಸೆಸ್ ಚಟರ್ಜಿ ವರ್ಸಸ್ ನಾರ್ವೆ ಮತ್ತು ಜಿಗಾಟೊ ಎರಡು ಹಿಂದಿ…

Read More

ಸಮಾಧಿಯಲ್ಲಿ ಕುಟುಂಬಸ್ಥರಿಂದ ಪೂಜೆ NAMMUR EXPRESS NEWSಬೆಂಗಳೂರು: ಇಂದು ನಟ ಪವರ್ ಸ್ಟಾರ್, ದಿ. ಪುನೀತ್ ರಾಜ್ ಕುಮಾರ್ ಅವರ ಹುಟ್ಟುಹಬ್ಬವಾಗಿದ್ದು ಈ ಹಿನ್ನೆಲೆಯಲ್ಲಿ ಅಪ್ಪು ಸಮಾಧಿ ಬಳಿಗೆ ಅಭಿಮಾನಿಗಳ ದಂಡೇ ಆಗಮಿಸುತ್ತಿದೆ.ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಸಮಾಧಿ ಬಳಿ ಅಪಾರ ಅಭಿಮಾನಿಗಳು ನೆರೆದಿದ್ದಾರೆ. ನಟ ಪುನೀತ್ ರಾಜ್ ಕುಮಾರ್ ಅವರಿಗೆ ಸೆಲೆಬ್ರಿಟಿಗಳು ಅಭಿಮಾನಿಗಳು ಜನ್ಮದಿನದ ಶುಭಾಶಯ ತಿಳಿಸುತ್ತಿದ್ದಾರೆ. ಪುನೀತ್ ಜನ್ಮದಿನಕ್ಕೆ ಅಭಿಮಾನಿಗಳಿಂದ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರ ನಿಯೋಜನೆ ಮಾಡಲಾಗಿದೆ.ಇನ್ನು ಕಂಠೀರವ ಸ್ಟುಡಿಯೋಗೆ ಡಾ.ರಾಜ್ ಕುಟುಂಬಸ್ಥರು ಭೇಟಿ ನೀಡಿದ್ದು ದಿ. ಪುನೀತ್ ರಾಜ್ ಕುಮಾರ್ ಅವರ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಇನ್ನು ನಟ ಅಪ್ಪು ನೆನೆದು ಪೋಸ್ಟ್ ಹಾಕಿರುವ ನಟ ಶಿವರಾಜ್ ಕುಮಾರ್, ನನಗೆ ಪ್ರತಿ ಪದವು ಪ್ರೀತಿ ಮಮತೆಯಿಂದ ಕೂಡಿದ್ದು, ನೀನು ಹುಟ್ಟಿದಾಗ ನಮ್ಮ ಮನೆಯಲ್ಲಿ ಉಲ್ಲಾಸ ಉಕ್ಕಿ ಹರಿಯುತ್ತಿತ್ತು. ನೀನು ನಕ್ಕರೆ ಎಲ್ಲರೂ ನಗುತ್ತಾ ಇದ್ದರು. ನಿನ್ನ ಜೀವನ ಒಂದು ದಂತಕಥೆ. ನಿನ್ನ ನೆನಪು…

Read More

ನಾಳೆ ದೆಹಲಿಗೆ ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ NAMMUR EXPRESS NEWSಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯ ಚಟುವಟಿಕೆ ಚುರುಕುಗೊಂಡಿದ್ದು ಕಾಂಗ್ರೆಸ್ ನಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಜೋರಾಗಿದೆ. ಈ ಮಧ್ಯೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ಧವಾಗಿದ್ದು ಮಾರ್ಚ್ 17 ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ಧರಾಮಯ್ಯ ದೆಹಲಿಗೆ ತೆರಳಲಿದ್ದಾರೆ ಎನ್ನಲಾಗಿದೆ.ಈಗಾಗಲೇ 120ರಿಂದ 150 ಅಭ್ಯರ್ಥಿಗಳನ್ನು ಒಳಗೊಂಡಿರುವ ಮೊದಲ ಪಟ್ಟಿ ಅಂತಿಮವಾಗಿದ್ದು ಈ ಹಿನ್ನೆಲೆಯಲ್ಲಿ ಮೊದಲ ಪಟ್ಟಿ ಬಿಡುಗಡೆ ಮಾಡುವ ಮುನ್ನ ಅಂತಿಮವಾಗಿ ಚರ್ಚಿಸಲು ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಮಾ.17ರಂದು ಸಭೆ ಕರೆದಿದೆ. ಈ ಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭಾಗಿಯಾಗಲಿದ್ದಾರೆ.ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಮಾರ್ಚ್ 17ರಂದು ದೆಹಲಿಗೆ ತೆರಳಲಿದ್ದು, ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಈಗಾಗಲೇ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಮೋಹನ್ ಪ್ರಕಾಶ್ ನೇತೃತ್ವದ ಸೀನಿಂಗ್ ಕಮಿಟಿಯಲ್ಲಿ ಪರಿಶೀಲಿಸಿದ್ದು, ಅಂತಿಮ…

Read More