ಹೆಣ ಇಟ್ಕೊಂಡು ಬೇರೆ ಹುಡ್ಗೀರ್ ರಾಸಲೀಲೆಯುವತಿಯ ಕುತ್ತಿಗೆ ಸೀಳಿ ಕೊಂದು ಮೃತದೇಹದ ಜೊತೆಗೆ ವಿಡಿಯೋ!ದೇಶದಲ್ಲಿ ಹೆಚ್ಚಾಯ್ತು ಕ್ರೂರ ಅಪರಾಧ NAMMUR EXPRESS NEWSನವ ದೆಹಲಿ: ಮದುವೆಯಾಗಲು ಒತ್ತಾಯಿಸಿದಳು ಎನ್ನುವ ಕಾರಣಕ್ಕೆ ತನ್ನ ಪ್ರೇಯಸಿ ಶ್ರದ್ಧಾಳನ್ನು ಹತ್ಯೆಗೈದು 35 ತುಂಡು ಮಾಡಿದ್ದ ದೆಹಲಿಯ ಅಫ್ತಾಬ್ ಪೊನಾವಾಲನ ವಿರುದ್ಧ ದೇಶದಲ್ಲಿ ಕಿಚ್ಚು ಎದ್ದಿದೆ.ಈ ನಡುವೆ ಆತನ ಮತ್ತಷ್ಟು ಲೈಂಗಿಕ ಹಪಾಹಪಿ, ದುಷ್ಕೃತ್ಯಗಳು ಬೆಳಕಿಗೆ ಬಂದಿವೆ. ಪ್ರೇಯಸಿ ದೇಹವನ್ನು ಕತ್ತರಿಸಿ ಫ್ರಿಡ್ಜ್ ನಲ್ಲಿ ಇಟ್ಟಿದ್ದ ಸಮಯದಲ್ಲೂ ಅಫ್ತಾಬ್ ಮತ್ತಷ್ಟು ಯುವತಿಯರ ಜೊತೆ ಡೇಟಿಂಗ್ ನಡೆಸಿ, ಅವರನ್ನು ಮನೆಗೆ ಕರೆತಂದು ಲೈಂಗಿಕ ಚಟುವಟಿಕೆ ನಡೆಸಿದ್ದ ಎಂಬ ವಿಷಯ ತನಿಖೆ ವೇಳೆ ಬೆಳಕಿಗೆ ಬಂದಿದೆ.ಶ್ರದ್ಧಾ ಹತ್ಯೆಯಾದ 15 – 20 ದಿನಗಳಲ್ಲಿ ಅಫ್ತಾಬ್ ಬಂಬಲ್ ಡೇಟಿಂಗ್ ಆಪ್ ನಲ್ಲಿ ಮತ್ತಷ್ಟು ಯುವತಿಯರ ಸ್ನೇಹ ಬೆಳೆಸಿದ್ದು ಪತ್ತೆಯಾಗಿದೆ. ಯುವತಿಯ ಕತ್ತು ಸೀಳಿ ಶವದೊಂದಿಗೆ ವಿಡಿಯೋ ಪ್ರಿಯತಮನೇ ಕೊಲೆಗಾರನಾದ: ಮಧ್ಯಪ್ರದೇಶದಲ್ಲಿ ವ್ಯಕ್ತಿಯೊಬ್ಬ ಯುವತಿಯ ಕುತ್ತಿಗೆ ಸೀಳಿ ಕೊಂದು, ಆಕೆಯ ಮೃತದೇಹದ ಜೊತೆಗೆ…
Author: Nammur Express Admin
‘ಪುಣ್ಯಕೋಟಿ ದತ್ತು ಯೋಜನೆ’ಗೆ ವೇತನ ಕಡಿತಡಿ ವರ್ಗದ ನೌಕರರಿಗೆ ವಿನಾಯಿತಿ..ಯಾರಿಗೆ ಎಷ್ಟು? NAMMUR EXPRESS NEWSಬೆಂಗಳೂರು: ಗೋಶಾಲೆಯಲ್ಲಿ ಹಸುಗಳನ್ನು ಪೋಷಿಸುವ ಸರ್ಕಾರದ ಮಹತ್ವಾಕಾಂಕ್ಷಿ ‘ಪುಣ್ಯಕೋಟಿ ದತ್ತು ಯೋಜನೆ’ಗೆ ನೌಕರರ ವೇತನದಿಂದ ದೇಣಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರ ಬುಧವಾರ (ನ.16) ಮಂಜೂರಾತಿ ನೀಡಿದೆ.ವೇತನದಿಂದ ಒಂದು ಬಾರಿಗೆ ಸೀಮಿತವಾಗಿ ವಂತಿಗೆ ಕಡಿತಗೊಳಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಇತ್ತೀಚೆಗೆ ಪ್ರಸ್ತಾವ ಸಲ್ಲಿಸಿತ್ತು. ಅದರಂತೆ, ಈ ಮಂಜೂರಾತಿ ನೀಡಲಾಗಿದೆ. ವಂತಿಗೆ ಕೊಡಲು ಇಚ್ಛೆ ಇಲ್ಲದವರು, ಪತ್ರವನ್ನು ಇದೇ 25ರ ಒಳಗೆ ಸಂಬಂಧಿಸಿದ ವೇತನ ಬಟವಾಡೆ ಅಧಿಕಾರಿಗಳಿಗೆ ಲಿಖಿತವಾಗಿ ನೀಡಬೇಕು ಎಂದೂ ಆದೇಶದಲ್ಲಿ ವಿವರಿಸಲಾಗಿದೆ. ಆದರೆ, ಸಂಘ ಸಲ್ಲಿಸಿದ್ದ ಪ್ರಸ್ತಾವ ಮತ್ತು ಸರ್ಕಾರದ ಮಂಜೂರಾತಿಗೆ ನೌಕರರ ವಲಯದಿಂದ ಆಕ್ಷೇಪ ವ್ಯಕ್ತವಾಗಿದೆ.ಪ್ರಸಕ್ತ ಸಾಲಿನ (2022-23) ಬಜೆಟ್‌ನಲ್ಲಿ ‘ಪುಣ್ಯಕೋಟಿ’ ದತ್ತು ಯೋಜನೆಯನ್ನು ಮುಖ್ಯಮಂತ್ರಿ ಘೋಷಿಸಿದ್ದರು. ಅಲ್ಲದೆ, ಈ ಯೋಜನೆಯ ಧೈಯೋದ್ದೇಶಕ್ಕೆ ಪೂರಕವಾಗಿ ಗೋವುಗಳನ್ನು ಪೋಷಿಸುವ ಕಾರ್ಯಕ್ಕೆ ಸರ್ಕಾರದ ಹಾಗೂ ಸರ್ಕಾರದ ಇತರ ಅವಿಭಾಜ್ಯ ಅಂಗಗಳಾದ…
ಇನ್ಮುಂದೆ ಪಿಒಎಸ್ ಸಾಧನ ಅಳವಡಿಕೆ ಕಡ್ಡಾಯದೇಶಾದ್ಯಂತ ಹೊಸ ನಿಯಮ ಜಾರಿ NAMMUR EXPRESS NEWSನವದೆಹಲಿ: ಒಂದು ಕಡೆ, ಸರ್ಕಾರವು ಉಚಿತ ಪಡಿತರದ ಅವಧಿಯನ್ನು ಡಿಸೆಂಬರ್ ವರೆಗೆ ವಿಸ್ತರಿಸಿದೆ. ಮತ್ತೊಂದೆಡೆ, ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ‘ಒಂದು ದೇಶ ಒಂದು ಪಡಿತರ ಚೀಟಿ ಯೋಜನೆ’ ಅನ್ನು ದೇಶಾದ್ಯಂತ ಜಾರಿಗೆ ತರಲಾಗಿದೆ, ಇದರ ನಂತರ ಆನ್ಸೆನ್ ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್ ಅಂದರೆ ಪಿಒಎಸ್ ಸಾಧನವನ್ನು ಎಲ್ಲಾ ಅಂಗಡಿಗಳಲ್ಲಿ ಕಡ್ಡಾಯಗೊಳಿಸಲಾಗಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾನೂನಿನ ಅಡಿಯಲ್ಲಿ, ಫಲಾನುಭವಿಗಳಿಗೆ ಸರಿಯಾದ ಪ್ರಮಾಣದ ಆಹಾರ ಧಾನ್ಯಗಳು ಲಭ್ಯವಿರುವುದನ್ನು ಖಚಿತಪಡಿಸಿಕೊಳ್ಳಲು ಪಡಿತರ ಅಂಗಡಿಗಳಲ್ಲಿ ಎಲೆಕ್ಟ್ರಾನಿಕ್ ಸೈಲ್ಗಳೊಂದಿಗೆ ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್ (ಇಪಿಒಎಸ್) ಸಾಧನಗಳನ್ನು ಅಳವಡಿಕೆ ಮಾಡಲು ಕೇಂದ್ರ ಸರ್ಕಾರವು ಆಹಾರ ಭದ್ರತಾ ಕಾಯ್ದೆಯ ನಿಯಮಗಳನ್ನು ತಿದ್ದುಪಡಿ ಮಾಡಿದೆ. ಇದರ ನಂತರ, ಎಲ್ಲಾ ಕೋಟಾದಾರರು ಎಲೆಕ್ಟ್ರಾನಿಕ್ ಮಾಪಕಗಳನ್ನು ಇಟ್ಟುಕೊಳ್ಳುವುದು ಈಗ ಕಡ್ಡಾಯವಾಗಿದೆ.ಸರ್ಕಾರದ ಈ ಆದೇಶದ ನಂತರ, ಈಗ ದೇಶದ ಎಲ್ಲಾ ನ್ಯಾಯಬೆಲೆ ಅಂಗಡಿಗಳನ್ನು ಆನ್ ಎಲೆಕ್ಟ್ರಾನಿಕ್ ಪಾಯಿಂಟ್ ಆಫ್…
ಮುಂದಿನ ವಾರ ಕರ್ನಾಟಕಕ್ಕೆ ಆಗಮನಅಡಿಕೆ ರೋಗ ಅಧ್ಯಯನಕ್ಕೆ ಕೇಂದ್ರದ ಸಮಿತಿಆಡಿಕೆಗೆ ರೋಗ, ಸರ್ಕಾರ ನಿಮ್ಮ ಜೊತೆಯಿದೆ: ಸಿಎಂ NAMMUR EXPRESS NEWSಶಿವಮೊಗ್ಗ/ ಬೆಂಗಳೂರು: ರಾಜ್ಯದಲ್ಲಿ ಅಡಿಕೆ ತೋಟಗಳಲ್ಲಿ ಹಬ್ಬಿರುವ ಎಲೆಚುಕ್ಕೆ ರೋಗ ರಾಜ್ಯದ ರೈತರ ಕಂಗೆಡಿಸಿರುವ ನಡುವೆ ಈ ಬಗ್ಗೆ ಅಧ್ಯಯನ ನಡೆಸಿ ಪರಿಹಾರ ಕಂಡುಕೊಳ್ಳಲು ಇದೀಗ ಸಮಿತಿ ಮುಂದಿನ ವಾರ ಕರುನಾಡಿಗೆ ಆಗಮಿಸಲಿದೆ.ಕೇಂದ್ರ ಸರಕಾರದ ಏಳು ಮಂದಿ ತಜ್ಞರನ್ನು ಒಳಗೊಂಡ ತಜ್ನರ ಸಮಿತಿ, ಮುಂದಿನ ವಾರ ರಾಜ್ಯಕ್ಕೆ ಆಗಮಿಸಲಿದೆ ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.ಮಲೆನಾಡು ಹಾಗೂ ಕರಾವಳಿ ಭಾಗದ ರೈತರು ಎದುರಿಸುತ್ತಿರುವ ಸಂಕಷ್ಟಕ್ಕೆ, ಕೇಂದ್ರ ಸರಕಾರ, ತಕ್ಷಣ ಸ್ಪಂದಿಸಿದ್ದು, ಅಡಿಕೆ ಬೆಳೆಗೆ ಎದುರಾಗಿರುವ ರೋಗ ನಿವಾರಣೆಗೆ, ತಜ್ನರ ಸಮಿತಿ ಪರಿಹಾರ ಕಂಡುಕೊಳ್ಳಲು ಸಹಕಾರಿಯಾಗಲಿ ಎಂದು ಹಾರೈಸಿದ್ದಾರೆ.ಇತ್ತೀಚೆಗಷ್ಟೇ ರಾಜ್ಯ ಅಡಿಕೆ ಬೆಳೆಗಾರರ ಆತಂಕಕ್ಕೆ ಕಾರಣವಾದ, ಎಲೆ ಚುಕ್ಕೆ ರೋಗಕ್ಕೆ ಪರಿಹಾರ ಬಯಸಿ, ನಿಕಟಪೂರ್ವ ಮುಖ್ಯಮಂತ್ರಿಗಳೂ ಹಾಗೂ ಹಿರಿಯ ಬಿಜೆಪಿ ನಾಯಕರಾದ ಬಿ ಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ,…
ಕನ್ನಡದ ಖ್ಯಾತ ಚಿಂತಕ ಶಂಕರ್ ಅವರ ಆಯ್ಕೆಕುವೆಂಪು ಪ್ರತಿಷ್ಠಾನಕ್ಕೆ ಹೊಸ ಸ್ಪರ್ಶ ನಿರೀಕ್ಷೆ NAMMUR EXPRESS NEWSತೀರ್ಥಹಳ್ಳಿ: ಪ್ರತಿಷ್ಠಿತ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ನೂತನ ಅಧ್ಯಕ್ಷ ರಾಗಿ ಖ್ಯಾತ ಚಿಂತಕ ಡಾ.ಬಿ.ಎಲ್.ಶಂಕರ್ ಆಯ್ಕೆಯಾಗಿದ್ದಾರೆ. ಪಠ್ಯ ಪುಸ್ತಕಗಳ ವಿವಾದದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಖ್ಯಾತ ಸಾಹಿತಿ,ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಡಾ ಹಂಪಾ ನಾಗರಾಜಯ್ಯ ರಾಜೀನಾಮೆ ಸಲ್ಲಿಸಿದ್ದರು. ಅವರ ಮನ ಒಲಿಕೆ ವಿಫಲವಾದ ಹಿನ್ನಲೆಯಲ್ಲಿ ಕುವೆಂಪು ಪ್ರತಿಷ್ಠಾನದ ಸದಸ್ಯರು ಸಭೆ ಸೇರಿ ಕ್ರಿಯಾಶೀಲ ಚಟುವಟಿಕೆಯ ಸಾಹಿತ್ಯ ಪ್ರೇಮಿ ಡಾ.ಬಿ.ಎಲ್ ಶಂಕರ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ.ಕುವೆಂಪು ಟ್ರಸ್ಟ್‌ನಲ್ಲಿ ಹಿರಿಯ ರಾಜಕಾರಣಿಗಳಾದ ಕಾಗೋಡು ತಿಮ್ಮಪ್ಪ, ಡಿ.ಬಿ.ಚಂದ್ರೇಗೌಡ, ಹಿರಿಯ ಸಾಹಿತಿ ಕಮಲಾ ಹಂಪನಾ, ಸ್ಥಳೀಯರಾದ ಡಿ.ಎಂ. ಮನುದೇವ್, ಕೆ.ಟಿ.ನಾರಾಯಣಮೂರ್ತಿ, ಕಡಿದಾಳ್ ಪ್ರಕಾಶ್ ಸೇರಿದಂತೆ ಹಲವು ಪ್ರಮುಖರು ಕಾರ್ಯನಿರ್ವಹಿಸುತ್ತಿದ್ದಾರೆ.ಡಿಸೆಂಬರ್ 29ರಂದು ಕುವೆಂಪು ಜನ್ಮದಿನ ಆಚರಣೆ ಹಿನ್ನಲೆಯಲ್ಲಿ ಕುವೆಂಪು ಪ್ರತಿಷ್ಠಾನ ಪ್ರತಿ ವರ್ಷ ವಿಶಿಷ್ಟ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ಕುವೆಂಪು ಹೆಸರಿನಲ್ಲಿ ರಾಷ್ಟ್ರೀಯ ಪ್ರಶಸ್ತಿ ನೀಡಲಾಗುತ್ತಿದ್ದು ದೇಶದ ಅತ್ಯುನ್ನತ…
ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಆರಂಭಮಂಗಳವಾರದಿಂದ ಪೂಜಾ ವಿಧಿ ವಿಧಾನ ಶುರು NAMMUR EXPRESS NEWSಶಬರಿಮಲೆ: ಸ್ವಾಮಿಯೇ ಶರಣಂ ಅಯ್ಯಪ್ಪ..!.ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ಸ್ವಾಮಿಯ ದರ್ಶನ ಆರಂಭವಾಗಿದೆ. ಕರ್ನಾಟಕ ಸೇರಿ ವಿವಿಧ ರಾಜ್ಯಗಳ ಭಕ್ತರು ಆಗಮಿಸುತ್ತಿದ್ದಾರೆ.ಕರೋನಾ ಆತಂಕದ ಬಳಿಕ ಶಬರಿಮಲೆಯಲ್ಲಿ ಸಂಭ್ರಮ ಮನೆ ಮಾಡಿದೆ.ಮಂಗಳವಾರ ಶಬರಿಮಲೆಯಲ್ಲಿ ಧಾರ್ಮಿಕ ವಿಧಿಗಳು ಆರಂಭಗೊಂಡಿದ್ದು ಬುಧವಾರ ದೇವಸ್ಥಾನದ ಬಾಗಿಲು ತೆರೆಯಲಾಗಿದೆ. ಭಕ್ತರಿಂದ ದರ್ಶನ ಆರಂಭವಾಗುತ್ತಿದೆ.ಕಾರ್ತಿಕ ಮಾಸದ ಸಂಕ್ರಮಣದಂದು ಭಕ್ತರು ಮಾಲೆಯನ್ನು ಹಾಕುತ್ತಾರೆ. ಡಿ. 27ರಂದು ಮಂಡಲ ಪೂಜೆ ನಡೆಯಲಿದ್ದು ಬಳಿಕ ಇನ್ನೊಂದಾವರ್ತಿಯಲ್ಲಿ ಮಕರಸಂಕ್ರಮಣ ದರ್ಶನಕ್ಕೆ ತೆರೆಯಲಾಗುತ್ತದೆ. ಡಿಸೆಂಬರ್ ಮೊದಲೆರಡು ವಾರಗಳಲ್ಲಿಯೂ ವಿವಿಧೆಡೆ ಶಿಬಿರಗಳ ಮೂಲಕ ಮಾಲೆ ಧರಿಸುತ್ತಾರೆ. ಈ ಸಂದರ್ಭ ವ್ರತಧಾರಿಗಳಲ್ಲದೆ ಮನೆಯ ಇತರ ಸದಸ್ಯರೂ ಸಸ್ಯಾಹಾರವನ್ನು ಸ್ವೀಕರಿಸಿರುವುದರಿಂದ ಒಟ್ಟಾರೆ ತರಕಾರಿ, ಹಣ್ಣುಗಳ ಬಳಕೆ ಜಾಸ್ತಿಯಾಗುತ್ತಿದೆ. ಯಾತ್ರೆ ಹೇಗೆ ಎತ್ತ..?, ವಾಹನ ಎಲ್ಲಿ ನಿಲ್ಲಿಸಬೇಕು? ಚೆಂಗನ್ನೂರಿನಿಂದ ನೀಲಕಲ್ ವರೆಗೆ ಸ್ಪಾಟ್ ಬುಕಿಂಗ್ ಮಾಡುವ 12 ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. 15 ಆಸನಗಳಿಗಿಂತ ಕಡಿಮೆ ಇರುವ ವಾಹನಗಳಿಗೆ…
ಆರೋಗ್ಯ ತುರ್ತು ಪರಿಸ್ಥಿತಿ ಸೃಷ್ಠಿ ಆತಂಕ ಸಾಧ್ಯತೆ2 ತಿಂಗಳ ಸಂಬಳ ಬಾಕಿ: ಗುರುವಾರದಿಂದಲೇ ಬಂದ್ ಸಾಧ್ಯತೆ: ಸರ್ಕಾರ ಸಮಸ್ಯೆ ಬಗೆಹರಿಸಲಿ…! NAMMUR EXPRESS NEWSಬೆಂಗಳೂರು: 108 ಆಂಬುಲೆನ್ಸ್ ಸಿಬ್ಬಂದಿ ಬಾಕಿ ವೇತನ ಬಿಡುಗಡೆಗೆ ಒತ್ತಾಯಿಸಿ ಗುರುವಾರದಿಂದ ಮುಷ್ಕರ ನಡೆಸುತ್ತಿದ್ದಾರೆ. ಹೀಗಾಗಿ ಗುರುವಾರ ದಿಂದ ರಾಜ್ಯಾಧ್ಯಂತ ಆಂಬುಲೆನ್ಸ್ ಸೇವೆ ಸ್ಥಗಿತಗೊಳ್ಳಲಿದೆ ಎಂದು ಹೇಳಲಾಗುತ್ತಿದೆ.108 ಆಂಬುಲೆನ್ಸ್ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಪರಮಶಿವಯ್ಯ ಅವರು ಮಾತನಾಡಿ, ಕಳೆದ ಎರಡು ತಿಂಗಳಿನಿಂದ ರಾಜ್ಯದಲ್ಲಿ ಆಂಬುಲೆನ್ಸ್ ಸೇವೆ ಒದಗಿಸುತ್ತಿರುವಂತ ಜಿವಿಕೆ ವೇತನವನ್ನು ಬಾಕಿ ಉಳಿಸಿಕೊಂಡಿದೆ. ವೇತನವಿಲ್ಲದೇ ನೌಕರರು ಸಂಕಷ್ಟಕ್ಕೆ ಸಿಲುಕುವಂತೆ ಆಗಿದೆ. ಈ ಹಿಂದೆ ಅನೇಕ ಬಾರಿ ವೇತನ ಬಿಡುಗಡೆಗೆ ಕೋರಿದ್ದರೂ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಗುರುವಾರ ಸಂಜೆಯೊಳಗೆ ಸಂಬಳ ನೀಡದೇ ಇದ್ದರೇ ಆಂಬುಲೆನ್ಸ್ ಸೇವೆ ಸ್ಥಗಿತಗೊಳಿಸೋದಾಗಿ ಎಚ್ಚರಿಸಿದ್ದಾರೆ.ನಮಗೆ ಬಾಕಿ ವೇತನ ನೀಡಬೇಕು. ಗುರುವಾರದ ಒಳಗೆ ನೀಡದೇ ಇದ್ದರೇ ರಾಜ್ಯಾಧ್ಯಂತ ಆಂಬುಲೆನ್ಸ್ ಸೇವೆಯನ್ನು ಸಂಪೂರ್ಣ ಸ್ಥಗಿತಗೊಳಿಸಲಾಗುತ್ತದೆ. ಆಂಬುಲೆನ್ಸ್ ಸೇವೆ ಸ್ಥಗಿತದಿಂದ ಆರೋಗ್ಯ ತುರ್ತು ಪರಿಸ್ಥಿತಿ ಉಂಟಾದರೇ ಅದಕ್ಕೆ…
ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆವಿಶ್ರಾಂತಿಗೆ ಸೂಚಿಸಿದ ವೈದ್ಯರು NAMMUR EXPRESS NEWSಉಡುಪಿ: ಹಿರಿಯ ಬಿಜೆಪಿ ನಾಯಕ, ಸಚಿವ ಕೋಟ ಶ್ರೀನಿವಾಸ್ ಪೂಜಾರಿಯವರ ಆರೋಗ್ಯದಲ್ಲಿ ಏರುಪೇರಾಗಿದ್ದು, ತುರ್ತು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ವೈದ್ಯರ ಸಲಹೆಯಂತೆ 4-5 ದಿನಗಳ ಕಾಲ ಸಾರ್ವಜನಿಕ ಸಂಪರ್ಕಕ್ಕೆ ಸಿಗುತ್ತಿಲ್ಲ. ಯಾವುದೇ ಕೆಲಸಗಳಿಗಾಗಿ ಆಪ್ತ ಸಹಾಯಕರನ್ನು ಮತ್ತು ದೂರವಾಣಿ ಮೂಲಕ ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ.ರಾಜ್ಯದ ಸರಳ ನಾಯಕರಾಗಿ, ಹಿಂದುಳಿದ ವರ್ಗದ ನಾಯಕರಾಗಿ ಶ್ರೀನಿವಾಸ್ ಪೂಜಾರಿ ಅವರ ಆರೋಗ್ಯ ಸುಧಾರಣೆ ಆಗಲಿ ಎಂಬ ಹಾರೈಕೆ ಜನರಿಂದ ವ್ಯಕ್ತವಾಗುತ್ತಿದೆ.
ತೀರ್ಥಹಳ್ಳಿ, ಸಾಗರದಲ್ಲೇ ಪೈಪೋಟಿ ಹೆಚ್ಚುಪಕ್ಷಕ್ಕೆ ಅರ್ಜಿ ಸಲ್ಲಿಸಲು 5 ದಿನ ಅವಧಿ ವಿಸ್ತರಣೆ NAMMUR EXPRESS NEWSಶಿವಮೊಗ್ಗ: ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಲು ನಿಗದಿ ಮಾಡಿದ್ದ ದಿನಾಂಕದಿಂದ ಐದು ದಿನ ಅರ್ಜಿ ಸಲ್ಲಿಸಲು ಅವಧಿಯನ್ನ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸಲು ನ.21 ಕೊನೆಯ ದಿನಾಂಕದವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಆಕಾಂಕ್ಷಿಗಳ ಪಟ್ಟಿ ಹೆಚ್ಚಾಗಿದೆ. ಸೊರಬ, ಮತ್ತು ಭದ್ರಾವತಿಯಲ್ಲಿ ತಲಾ ಒಬ್ಬರು ಅರ್ಜಿಸಲ್ಲಿಸಿದ್ದಾರೆ. ತೀರ್ಥಹಳ್ಳಿ ಮತ್ತು ಸಾಗರ ವಿಧಾನ ಸಭಾ ಕ್ಷೇತ್ರದಿಂದ ಆರ್.ಎಂ.ಮಂಜುನಾಥ್ ಗೌಡ, ಕಿಮ್ಮನೆ ರತ್ನಾಕರ್, ಕಡ್ತುರ್ ದಿನೇಶ್ ಅರ್ಜಿ ಸಲ್ಲಿಸಿದ್ದಾರೆ.ಸಾಗರದಿಂದ ಬೇಳೂರು ಗೋಪಾಲಕೃಷ್ಣ, ರಾಜನಂದಿನಿ, ಕಾಗೋಡು ತಿಮ್ಮಪ್ಪ, ಕಲಗೋಡು ರತ್ನಾಕರ್, ಬಿ.ಆರ್ ಜಯಂತ್ ಅರ್ಜಿ ಸಲ್ಲಿಸಿದ್ದಾರೆ.ಶಿಕಾರಿಪುರದಲ್ಲಿ ದರ್ಶನ್ ಉಳ್ಳಿ, ಕವುಲೆ ಗಂಗಾಧರ್, ನಿರ್ಮಲಾ ಪಾಟೀಲ್, ರಾಘವೇಂದ್ರ ನಾಯ್ಕ್, ಪಿಒ ಪುಷ್ಪ ಶಿವಕುಮಾರ್, ನಾಗರಾಜ್ ಗೌಡ, ಗೋಣಿ ಮಲ್ಲೇಶ್ ಹಾಗೂ ಮಹಾಲಿಂಗಪ್ಪ ಅರ್ಜಿ ಸಲ್ಲಿಸಿದ್ದಾರೆ.ಶಿವಮೊಗ್ಗ ನಗರದಲ್ಲಿ ಹೆಚ್ ಸಿ ಯೋಗೀಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್…
ನ.28ರಂದು ಬೃಹತ್ ಪ್ರತಿಭಟನೆ: ಸರ್ಕಾರದ ಗಮನ ಸೆಳೆಯಲು ಯತ್ನಮಲೆನಾಡಿನ ಎಲ್ಲಾ ನಾಯಕರು ಹಾಜರ್ NAMMUR EXPRESS NEWSಶಿವಮೊಗ್ಗ: ಶರಾವತಿ ಸಂತ್ರಸ್ತರ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಶರಾವತಿ ಮುಳುಗಡೆ ಸಂತ್ರಸ್ತರ ಕಾಂಗ್ರೆಸ್ ಜಾಗೃತ ಸಮಿತಿ ಬೃಹತ್ ಹೋರಾಟದ ಮೂಲಕ ಸರ್ಕಾರದ ಗಮನ ಸೆಳೆಯಲು ನಿರ್ಧರಿಸಿದೆ.ನಾಡಿಗೆ ಬೆಳಕು ಕೊಟ್ಟು ಕತ್ತಲಲ್ಲಿ ಬದುಕು ಕಾಣುತ್ತಿರುವ ಸಂತ್ರಸ್ತರ ಸಮಸ್ಯೆಯನ್ನು ಬಿಜೆಪಿ ಸರ್ಕಾರ ಸೃಷ್ಟಿಸಿದೆ. ಶರಾವತಿ ಸಂತ್ರಸ್ತರ ಸಮಸ್ಯೆಯನ್ನು ಶೀಘ್ರವೇ ಪರಿಹರಿಸಲು ಒತ್ತಾಯಿಸಿ ನಾವು ನ.28ರಂದು ಶಿವಮೊಗ್ಗದಲ್ಲಿ ಸಂತ್ರಸ್ತರ ಬೃಹತ್ ಸಮಾವೇಶವನ್ನು ಆಯೋಜಿಸಿದ್ದೇವೆ. ಈ ಸಮಾವೇಶಕ್ಕೆ ರಾಜ್ಯದ ಕಾಂಗ್ರೆಸ್ ನಾಯಕರು ಆಗಮಿಸುತ್ತಾರೆ ಎಂದರು.ಸಮಿತಿಯ ಸಂಚಾಲಕ ಆರ್. ಪ್ರಸನ್ನಕುಮಾರ್ ಮಾತನಾಡಿ, ಸಂತ್ರಸ್ತರ ಬದುಕು ದುಸ್ತರವಾಗಿದೆ. ಕಾಂಗ್ರೆಸ್ ಸರ್ಕಾರ ಸಂತ್ರಸ್ತರ ಪರವಾಗಿ ಇತ್ತು. ಸುಮಾರು 58 ಡಿನೋಟಿಫಿಕೇಷನ್ ಮಾಡುವ ಮೂಲಕ ಸಂತ್ರಸ್ತರ ಬದುಕಲ್ಲಿ ಬೆಳಕು ಮೂಡಿಸಿತ್ತು. ಆದರೆ ಬಿಜೆಪಿ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಎರಡು ನೋಟಿಫಿಕೇಷನ್ನಿಗೆ ಸಂಬಂಧಿಸಿದಂತೆ ರದ್ದಾಗಿರುವುದನ್ನೇ ಇಟ್ಟಕೊಂಡು ಉಳಿದೆಲ್ಲಾ ಡಿನೋಟಿಫಿಕೇಷನ್ ರದ್ದುಮಾಡಿ ನೋಟಿಫಿಕೇಷನ್ ಮಾಡಿ ಸಂತ್ರಸ್ತರನ್ನು ಅತಂತ್ರರನ್ನಾಗಿ ಮಾಡಿದೆ…