Author: Nammur Express Admin

ಕಾಂತಾರ ಸಿನಿಮಾ ಟ್ರೈಲರ್ ಬಿಡುಗಡೆ- ಸೆಪ್ಟೆಂಬರ್ 30ರಂದು ರಾಜ್ಯಾದ್ಯಂತ ಬಿಡುಗಡೆ- ಕರಾವಳಿಯ ಸಾಂಸ್ಕೃತಿಕ ಸೊಬಗು ಅನಾವರಣ NAMMUR EXPRESS NEWSರಿಷಬ್ ಶೆಟ್ಟಿ ರಚಿಸಿ, ನಿರ್ದೇಶಿಸಿ, ನಾಯಕನಾಗಿ ನಟಿಸಿರುವ “ಕಾಂತಾರ” – ಒಂದು ದಂತಕಥೆ’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.ಬಿಡುಗಡೆಯಾಗಿ 8 ಗಂಟೆ 4.5 ಲಕ್ಷ ವೀಕ್ಷಕರನ್ನು ಪಡೆದಿದೆ.ಹೊಂಬಾಳೆ ಫಿಲಂಸ್ ನಿರ್ಮಿಸಿರುವ ಕರಾವಳಿಯ ಸಾಂಸ್ಕೃತಿಕ ಕಥೆ ಬಿಂಬಿಸುವ ಈ ಸಿನಿಮಾ ಹೊಸ ಭರವಸೆ ಮೂಡಿಸಿದೆ.ಸಿನಿಮಾ ಸೆಪ್ಟೆಂಬರ್ 30ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. Hombale Films Presents the Official Trailer of “Kantara”, Starring Rishab Shetty and Sapthami Gowda in the lead roles. Written and Directed by Rishab Shetty, Produced by Vijay Kiragandur and Music by B Ajaneesh Loknath.   Kantara movie trailer : Kantara movie teaser Watch Kantara movie famous trending song – Singara siriye

Read More

750 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ ಎನ್ ಐ ಎ NAMMUR EXPRESS NEWSಬೆಂಗಳೂರು: ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್ ಸಲ್ಲಿಕೆ ಮಾಡಿದೆ. ಹತ್ಯೆಗೆ 15 ದಿನದಿಂದಲೂ ಸಂಚು ನಡೆಸಲಾಗಿತ್ತು ಎನ್ನುವುದೂ ಸೇರಿ ಅನೇಕ ಅಂಶಗಳನ್ನು 750ಕ್ಕೂ ಹೆಚ್ಚು ಪುಟಗಳ ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.2022ರ ಫೆಬ್ರವರಿ 20 ರಂದು ರಾತ್ರಿ ಶಿವಮೊಗ್ಗದಲ್ಲಿ ನಡೆದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ರಾಜ್ಯದಲ್ಲಿ ಸಂಚಲನವನ್ನುಂಟು ಮಾಡಿತ್ತು. ಹಿಜಾಬ್ ವಿವಾದದ ಮಧ್ಯೆಯೇ ನಡೆದ ಹತ್ಯೆ ವಿಚಾರವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿತ್ತು.ಈ ಮಧ್ಯೆಯೇ ಸರ್ಕಾರ ಈ ಕೊಲೆ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸಿತ್ತು. ತನಿಖೆಯನ್ನು ಆರಂಭಿಸಿದ ಎನ್‌ಐಎ ಅಧಿಕಾರಿಗಳು ಕೈಗೊಂಡಿದ್ದ ವಿಶೇಷ ನ್ಯಾಯಾಲಯಕ್ಕೆ 750 ಕ್ಕೂ ಹೆಚ್ಚು ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.ವಿಶೇಷ ನ್ಯಾಯಾಲಯಕ್ಕೆ ಹತ್ತು ಮಂದಿ ಆರೋಪಿಗಳ ವಿರುದ್ಧ ದೋಷಾರೋಪಣೆ ಪಟ್ಟಿಯನ್ನು ಸಲ್ಲಿಕೆ ಮಾಡಿದ್ದು, ಈ…

Read More

ಆದೇಶ ಹಿಂಪಡೆದ ಸರ್ಕಾರ NAMMUR EXPRESS NEWSಬೆಂಗಳೂರು: ಬಡತನ ರೇಖೆಗಿಂತ ಕೆಳಗಿರುವ(ಬಿಪಿಎಲ್ ಪಡಿತರ ಚೀಟಿ ಹೊಂದಿರುವ)ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ(ಎಸ್ಸಿ-ಎಸ್ಟಿ) ಕುಟುಂಬಗಳ ಗೃಹ ಬಳಕೆಗೆ ಮಾಸಿಕ 75 ಯುನಿಟ್ ಉಚಿತ ವಿದ್ಯುತ್’ ನೀಡುವ ಸಂಬಂಧ ಹೊರಡಿಸಿದ್ದ ಸುತ್ತೋಲೆಯನ್ನು ರಾಜ್ಯ ಸರಕಾರ ಹಿಂಪಡೆದಿದ್ದು, ಯೋಜನೆ ಆರಂಭಕ್ಕೆ ಮೊದಲೇ ಸ್ಥಗಿತಗೊಂಡಂತೆ ಆಗಿದೆ.ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಭಾಗ್ಯಜ್ಯೋತಿ ಕುಟೀರಜ್ಯೋತಿ ಬಳಕೆದಾರರು ಒಳಗೊಂಡಂತೆ ಮಾಸಿಕ 75 ಯುನಿಟ್‌ಗಳ ವರೆಗೆ ಉಚಿತ ವಿದ್ಯುತ್ ಒದಗಿಸುವ ಯೋಜನೆ ಅನುಷ್ಠಾನಗೊಳಿಸಲು ಆಗಸ್ಟ್ 28ರಂದು ಇಂಧನ ಇಲಾಖೆ ಸುತ್ತೋಲೆ ಹೊರಡಿಸಿತ್ತು. ಇದೀಗ ಇಂಧನ ಇಲಾಖೆ ಸರಕಾರದ ಅಧೀನ ಕಾರ್ಯದರ್ಶಿ ವಿನೋದ್ ಕುಮಾರ್ ಡಿ.ಎಂ. ಅವರು ಆ ಸುತ್ತೋಲೆಯನ್ನು ಹಿಂಪಡೆಯಲಾಗಿದೆ ಎಂದು ಮತ್ತೊಂದು ಸುತ್ತೋಲೆ ಹೊರಡಿಸಿದ್ದಾರೆ.“75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಎಸ್ಸಿ-ಎಸ್ಟಿ ವರ್ಗದ ಬಿಪಿಎಲ್ ಕುಟುಂಬಗಳಿಗೆ ಮಾಸಿಕ 75 ಯುನಿಟ್ ಉಚಿತ ವಿದ್ಯುತ್ ನೀಡಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸ್ವಾತಂತ್ರೋತ್ಸವ ಭಾಷಣದಲ್ಲಿಯೂ ಪ್ರಕಟಿಸಿದ್ದರು. ಆದರೆ,…

Read More

ಎಲ್ಲೆಲ್ಲೂ ಜನ: ಮೋದಿ ಹೆಸರಿನ ಜೈಕಾರ3,700 ಕೋಟಿ ರೂ ಯೋಜನೆಗೆ ಚಾಲನೆ NAMMUR EXPRESS NEWSಮಂಗಳೂರಿನಲ್ಲಿ ಶುಕ್ರವಾರ ವಿವಿಧ ಯೋಜನೆಗಳಿಗೆ ಮೋದಿ ಶಿಲಾನ್ಯಾಸ ನೆರವೇರಿಸಿದ್ದು ಒಟ್ಟು 3,700 ಕೋಟಿ ವೆಚ್ಚದ ಯೋಜನೆಗಳಿಗೆ ಮೋದಿ ಚಾಲನೆ ನೀಡಿದ್ದಾರೆ. ಪ್ರಧಾನಿಯಾದ ಬಳಿಕ ಮೋದಿ ಮೊದಲ ಬಾರಿಗೆ ಕರಾವಳಿಗೆ ಆಗಮಿಸಿದ್ದು ಭಾರೀ ಜನಸ್ತೋಮ ಕಂಡು ಬಂತು. ಎಲ್ಲಿ ನೋಡಿದರೂ ಜನರೇ ಕಾಣಿಸುತ್ತಿದ್ದರು.ವಿಮಾನ ನಿಲ್ದಾಣದಲ್ಲಿ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಸಚಿವರಾದ ಸುನಿಲ್ ಕುಮಾರ್, ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿ ಅನೇಕ ಗಣ್ಯರು ಹಾಜರಿದ್ದರು. ಅಚ್ಚರಿ ಎಂದರೆ ಕರಾವಳಿ ನಾಯಕರಿಗೆ ಮಾತ್ರ ಅವಕಾಶ ನೀಡಲಾಗಿತ್ತು.ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಇಂದು ಭಾರತದ ಸಮುದ್ರ ಶಕ್ತಿಗೆ ದೊಡ್ಡ ದಿನ. ಸೇನೆ, ಆರ್ಥಿಕ ಸುರಕ್ಷತೆಯಲ್ಲಿ ಭಾರತ ದೊಡ್ಡ ಸಾಧನೆ ಮಾಡಿದೆ. ಕಐಎನ್​ಎಸ್ ವಿಕ್ರಾಂತ್ ಲೋಕಾರ್ಪಣೆ ಮಾಡಿದ್ದೇನೆ. ಮಂಗಳೂರಲ್ಲಿ 3,800 ಕೋಟಿ ಮೌಲ್ಯದ ಯೋಜನೆಗಳಿಗೆ ಚಾಲನೆ ನೀಡಿದೆ. 8 ವರ್ಷಗಳಲ್ಲಿ ಕರ್ನಾಟಕಕ್ಕೆ 70 ಸಾವಿರ ಕೋಟಿಯ…

Read More

ಯಾವ ಜಿಲ್ಲೆಯ ಯಾರಿಗೆ ಪ್ರಶಸ್ತಿ? NAMMUR EXPRESS NEWSಬೆಂಗಳೂರು: 2022-23ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಿಸಿದೆ.ಪ್ರಾಥಮಿಕ ಶಾಲೆಯ 20 ಶಿಕ್ಷಕರು, ಪ್ರೌಢಶಾಲೆಯ 11 (ಒಬ್ಬರು ವಿಶೇಷ ಚೇತನ ಶಿಕ್ಷಕರು ಒಳಗೊಂಡಂತೆ) ಶಿಕ್ಷಕರಿಗೆ ಪ್ರಶಸ್ತಿ ಘೋಷಣೆ ಮಾಡಿ ಶನಿವಾರ ಸುತ್ತೋಲೆ ಹೊರಡಿಸಿದೆ. ಸೆಪ್ಟೆಂಬರ್ 5 ರಂದು ನಡೆಯುವ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.2022-23ನೇ ಸಾಲಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾಗಿರುವ ಶಿಕ್ಷಕರಿಗೆ `ಅಕ್ಷರ ಮಾತೆ ಸಾವಿತ್ರಿಬಾಯಿ ಫುಲೆ’ ಹೆಸರಿನಲ್ಲಿ ರಾಜ್ಯ ಸರ್ಕಾರ ಪ್ರಶಸ್ತಿ ಪ್ರದಾನ ಮಾಡಲಿದೆ.ಜೊತೆಗೆ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಶಿಕ್ಷಕರಿಗೆ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಹಾಗೂ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿಯಿಂದ ತಲಾ 10 ಸಾವಿರ ರೂ.ಗಳ ನಗದು ಪುರಸ್ಕಾರ ನೀಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಹೆಚ್.ಎಸ್.ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಪ್ರಾಥಮಿಕ ಶಾಲಾ…

Read More

ಶ್ರೀ ನಡೆದು ಬಂದ ಹಾದಿ.. ಸಮಾಜ ಸೇವೆಯಿಂದ ಚಿತ್ರದುರ್ಗ ಜೈಲಿಗೆ NAMMUR EXPRESS NEWSಚಿತ್ರದುರ್ಗ: ಚಿತ್ರದುರ್ಗದ ಪೊಲೀಸರು, ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಹಿನ್ನೆಲೆಯಲ್ಲಿ ಮುರುಘಾ ಶ್ರೀಗಳನ್ನು ಬಂಧಿಸಿದ್ದಾರೆ. ಜೊತೆಗೆ ನ್ಯಾಯಾಲಯ ಸ್ವಾಮೀಜಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ. ಈ ನಡುವೆ ಚಿತ್ರದುರ್ಗದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಭಾರೀ ಪೊಲೀಸ್ ಪಹರೆ ಹಾಕಲಾಗಿದೆ.ಗುರುವಾರ ರಾತ್ರಿ ಚಿತ್ರದುರ್ಗದ ಮಠದಲ್ಲೇ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ. ಒಡನಾಡಿ ಸಂಸ್ಥೆಯಿಂದ ಮಠದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಮೈಸೂರಿನ ನಜರಾಬಾದ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾದ 7 ದಿನದ ಬಳಿಕ ಮುರುಘಾ ಶ್ರೀಗಳನ್ನು ಬಂಧಿಸಲಾಗಿದೆ.ರಾತ್ರಿಯೇ ಕೋರ್ಟ್ ಹಾಜರು!: ಮುರುಘಾ ಶರಣರನ್ನು ಬಂಧಿಸಿ ಮಧ್ಯರಾತ್ರಿಯೇ ಚಿತ್ರದುರ್ಗದ 1ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ನ್ಯಾಯಧೀಶರಾದ ಕೋಮಲಾ ಅವರ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೊಪ್ಪಿಸುವಂತೆ ಆದೇಶ ನೀಡಿದ ಬಳಿಕ ಮುರುಘಾ ಶರಣರನ್ನು ಚಿತ್ರದುರ್ಗ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ. ರಾಜ್ಯದ ಪ್ರಮುಖ ಮಠದಲ್ಲಿ ಒಂದು!…

Read More

ಒಂದೂವರೆ ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆಇಂದಿರಾಗಾಂಧಿ ಬಳಿಕ ಪ್ರಧಾನಿ ಮೋದಿ ಮಂಗಳೂರಿಗೆ! NAMMUR EXPRESS NEWSಬೆಂಗಳೂರು: ಶುಕ್ರವಾರ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ. ಹೀಗಾಗಿ ಮಂಗಳೂರು ನಗರ ಹೊರವಲಯದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿ ಮೈದಾನದಲ್ಲಿ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಯುತ್ತಿದೆ.ಕಾರ್ಯಕ್ರದಲ್ಲಿ ಒಂದೂವರೆ ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆಯಿದ್ದು, 25 ಎಕರೆ ಪ್ರದೇಶದಲ್ಲಿ ಬೃಹತ್ ಪೆಂಡಾಲ್ ಅಳವಡಿಸಲಾಗುತ್ತಿದೆ. ಶುಕ್ರವಾರ ಮಧ್ಯಾಹ್ನ 12:55ಕ್ಕೆ ವಿಶೇಷ ವಿಮಾನದ ಮೂಲಕ ಕೊಚ್ಚಿಯಿಂದ ಮಂಗಳೂರು ಏರ್‌ಪೋರ್ಟ್‌ಗೆ ಮೋದಿ ಬಂದಿಳಿಯಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಎನ್.ಎಂ.ಪಿ.ಎ ಹೆಲಿಪ್ಯಾಡ್‌ಗೆ ಬಂದು ಬಳಿಕ ಸಮಾವೇಶ ನಡೆಯುವ ಸ್ಥಳಕ್ಕೆ ಆಗಮಿಸಲಿದ್ದಾರೆ.ಇಂದಿರಾ ಗಾಂಧಿ ಬಳಿಕ 40 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಪ್ರಧಾನಿಯೊಬ್ಬರು ಮಂಗಳೂರಿನಲ್ಲಿ ನಡೆಯುತ್ತಿರುವ ಸರ್ಕಾರಿ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ಎನ್‌ಎಂಪಿಟಿ, ಎಂಆರ್ ಪಿ ಎಲ್ ರಾಜ್ಯ ಮೀನುಗಾರಿಕೆ ಇಲಾಖೆಯ ಯೋಜನೆಯ ಶಿಲಾನ್ಯಾಸ, ಲೋಕಾರ್ಪಣೆಯನ್ನು ಪ್ರಧಾನಿ ಮಾಡಲಿದ್ದಾರೆ. ಈ ಎಸ್.ಪಿ.ಜಿ ಅಧಿಕಾರಿಗಳು ಮೂರು ದಿನಗಳಿಂದ ಮಂಗಳೂರಿನಲ್ಲೇ ಮೊಕ್ಕಾಂ ಹೂಡಿದ್ದಾರೆ.…

Read More

ರಾಜ್ಯದಲ್ಲಿ ಇನ್ನೆರಡು ದಿನ ಗುಡುಗು ಸಹಿತ ಮಳೆರಾಜಧಾನಿ ದಾಖಲೆ ಮಳೆ: 1890ರ ಬಳಿಕ ಹೆಚ್ಚು ಮಳೆರಾಮನಗರ, ಕೋಲಾರ ಸೇರಿ ಹಲವೆಡೆ ಭಾರೀ ಹಾನಿಆಶ್ರಯ ಕೇಂದ್ರದಲ್ಲಿ ಜನರಿಗೆ ಆಶ್ರಯ: ಸಾವಿರಾರು ಕೋಟಿ ಬೆಳೆ ನಾಶ NAMMUR EXPRESS NEWSಬೆಂಗಳೂರು: ಕರ್ನಾಟಕದಾದ್ಯಂತ ಇನ್ನೆರಡು ದಿನ ಭಾರೀ ಮಳೆಯಾಗಲಿದೆ. ಈಗಾಗಲೇ ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆ ರಾಜ್ಯದ ಹಲವೆಡೆಭಾರೀ ಹಾನಿ ಸೃಷ್ಟಿ ಮಾಡಿದೆ.ರಾಜಧಾನಿ ಬೆಂಗಳೂರಿನಲ್ಲಿ ಕೂಡ ಪ್ರವಾಹದ ಆತಂಕ ಇದೆ. ರಾಜಧಾನಿ ದಾಖಲೆ ಮಳೆಯಾಗಿದ್ದು 1890ರ ಬಳಿಕ ಹೆಚ್ಚು ಮಳೆಯಾಗಿದೆ.ಕರ್ನಾಟಕದ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಸೇರಿದಂತೆ ಹಲವು ಭಾಗಗಳಲ್ಲಿ ಸೆ.2ರವರೆಗೂ ಮಳೆ ಸುರಿಯುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲೂ ಈ ವಾರಪೂರ್ತಿ ಸಂಜೆಯ ಬಳಿಕ ಮಳೆ ಆರ್ಭಟಿಸುವ ಸಾಧ್ಯತೆಯಿದೆ.ಇನ್ನೆರಡು ದಿನಗಳ ಕಾಲ ಕರ್ನಾಟಕದಲ್ಲಿ ನಿರಂತರ ಮಳೆಯಾಗಲಿದ್ದು, ಬೆಳಗಾವಿ, ಗದಗ, ಬೆಂಗಳೂರು, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಿಗೆ ಗುರುವಾರ…

Read More

ಕೂದಲೆಳೆ ಅಂತರದಲ್ಲಿ ಪಾರಾದ ಸವದಿವಿಜಯಪುರದಲ್ಲಿ ಅಅಪಘಾತಕ್ಕೆ ಮೂವರು ಬಲಿಕಲಬುರಗಿಯ ಚಿಂಚೋಳಿಯಲ್ಲಿ ಭೂಕಂಪನ NAMMUR EXPRESS NEWSಬೆಳಗಾವಿ: ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕಾರು ಅಪಘಾತವಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಲಕ್ಷ್ಮಣ್ ಸವದಿ ಪಾರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಹಾರುಗೇರಿ ಪಟ್ಟಣದ ಹೊರವಲಯದಲ್ಲಿ ಈ ಘಟನೆ ನಡೆದಿದ್ದು ಅಥಣಿಯಿಂದ ಗೋಕಾಕ ಕಡೆಗೆ ಹೋಗುವಾಗ ಈ ಕಾರು ಅಪಘಾತ ನಡೆದಿದೆ. ಲಕ್ಷ್ಮಣ ಸವದಿ ಅವರ ಜತೆಗೆ ಕಾರಿನಲ್ಲಿ ನಾಲ್ಕು ಜನ ಪ್ರಯಾಣಿಸುತ್ತಿದ್ದರು.ಕಿಯಾ ಕಂಪನಿಯ ಕಾರ್ನಿವಾಲ್ ಲಿಮೋಸಿನ್ ಹೆಸರಿನ ಐಶಾರಾಮಿ ಕಾರು ಇದಾಗಿದ್ದು ಏರ್ ಬ್ಯಾಗ್ ಇದ್ದ ಕಾರಣ ಭಾರಿ ಅನಾಹುತ ತಪ್ಪಿದೆ. ಅಪಘಾತಗೊಂಡು ಕಾರು ಪಲ್ಟಿಯಾದ ಬಳಿಕ ಸನ್ ರೂಪ್ ಮೂಲಕ ಲಕ್ಷ್ಮಣ ಸವದಿ ಹೊರ ಬಂದಿದ್ದಾರೆ. ವಾಹನದಲ್ಲಿ ಇದ್ದ ಲಕ್ಷ್ಮಣ ಸವದಿ,ಆಪ್ತ ಸಹಾಯಕ ಮತ್ತು ಚಾಲಕ ಸೇರಿದಂತೆ ಮೂರು ಜನ ಅಪಾಯದಿಂದ ಪಾರಾಗಿದ್ದಾರೆ.ಇನ್ನು ಅಪಘಾತದ ಬಳಕ ಲಕ್ಷ್ಮಣ ಸವದಿ ಅವರನ್ನು ಹಾರೂಗೇರಿ ಪಟ್ಟಣದ ಮಲ್ಲಿಕಾರ್ಜುನ ನಾರಗೊಂಡ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಅಪಘಾತದಲ್ಲಿ ಎದೆ ಭಾಗಕ್ಕೆ…

Read More

ಶೀಘ್ರದಲ್ಲೇ ಹಾಲಿನ ದರ ಏರಿಕೆ ಸುಳಿವುಗಣೇಶ ಹಬ್ಬದಲ್ಲಿ ಆಗುತ್ತಾ ಬೆಲೆ ಏರಿಕೆ? NAMMUR EXPRESS NEWSಬೆಂಗಳೂರು: ಇಂಧನ ದರ ಏರಿಕೆ, ಖಾದ್ಯ ತೈಲ ದರ ಏರಿಕೆಯಿಂದಾಗಿ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಶಾಕ್ ಕಾದಿದೆ.ಶೀಘ್ರದಲ್ಲೇ ನಂದಿನಿ ಹಾಲಿನ ದರ ಕೂಡ ಏರಿಕೆ ಯಾಗಲಿದೆ. ಕಾಫಿ, ಟೀ ಪ್ರಿಯರಿಗೆ ಗಣೇಶ ಚತುರ್ಥಿಯ ಹೊತ್ತಿನಲ್ಲೇ ಕಾಫಿ,ಟೀ ಪ್ರಿಯರಿಗೆ ಹಾಲಿನ ದರ ಕೈಸುಡುವಂತಿದೆ. ಈಗಾಗಲೇ ಹಲವಾರು ಭಾರಿ ರಾಜ್ಯದಲ್ಲಿ ಹಾಲಿನ ದರ ಏರಿಕೆ ಸಂಗತಿ ಪ್ರಸ್ತಾವನೆಗೆ ಬಂದಿತ್ತು. ಆದರೆ ದರ ಏರಿಕೆ ಮಾತ್ರ ಆಗಿರಲಿಲ್ಲ. ಈಗ ದರ ಏರಿಕೆ ಬಹುತೇಕ ಖಚಿತ ಎನ್ನಲಾಗುತ್ತಿದೆ. ಕರ್ನಾಟಕ ಹಾಲು ಒಕ್ಕೂಟ ನಿರ್ದೇಶಕ ಸತೀಶ್ ರವರು ಮಾಹಿತಿ ನೀಡಿದ್ದು, ನಂದಿನಿ ಹಾಲಿನ ಪಾಕೆಟ್ ದರ ಹೆಚ್ಚಳಕ್ಕೆ 14 ಜಿಲ್ಲೆಗಳ ಹಾಲಿನ ಒಕ್ಕೂಟದವರು ಒತ್ತಡ ಮಾಡುತ್ತಿದ್ದಾರೆ ಎಂದಿದ್ದಾರೆ. ರಾಜ್ಯದ 14 ಜಿಲ್ಲೆಗಳ ಹಾಲಿನ ಒಕ್ಕೂಟದವರು ಹಾಲಿನ ದರ ಹೆಚ್ಚಳ ಮಾಡಿ ಎಂದು ಮನವಿ ಮಾಡಿದ್ದಾರೆ. ಅಲ್ಲದೇ ದರ ಏರಿಕೆ ಮಾಡಿದರೆ ಅದನ್ನೇ ರೈತರಿಗೆ…

Read More