Author: Nammur Express Admin

ಮಡಕೆ ಒಡೆದ ಕೃಷ್ಣ ವೇಷಧಾರಿ ಮಕ್ಕಳು NAMMUR EXPRESS NEWSಹೆಬ್ರಿ : ಹೆಬ್ರಿಯ ಎಸ್ಆರ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಆಚರಿಸಿದ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಸಂಸ್ಥೆಯ ಅಧ್ಯಕ್ಷರಾದ ಹೆಚ್ ನಾಗರಾಜ ಶೆಟ್ಟಿ ಹಾಗೂ ಕಾರ್ಯದರ್ಶಿಯವರಾದ ಸ್ವಪ್ನ ಎನ್ ಶೆಟ್ಟಿ ಉದ್ಘಾಟಿಸಿದರು, ಬಳಿಕ ಕೃಷ್ಣ ವೇಷಧಾರಿ ಪುಟಾಣಿಗಳು ದೀಪ ಬೆಳಗಿಸಿ ಮಡಿಕೆ ಒಡೆದು ಕರುವಿಗೆ ಆಹಾರ ನೀಡುವ ಮೂಲಕ ವಿಶೇಷವಾಗಿ ಆಚರಿಸಿದರು, ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮೊಸರು ಕುಡಿಕೆಯಲ್ಲಿ ಪಾಲ್ಗೊಂಡು ಸಂಭ್ರಮವನ್ನು ಆಚರಿಸಿದರು.ಈ ಸಂದರ್ಭದಲ್ಲಿ ಎಸ್ ಆರ್ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿಯವರಾದ ಹೆರಾಲ್ಡ್ ಲೂಯಿಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಶಾಂತ್ ಹೆಚ್,ಪಬ್ಲಿಕ್ ಸ್ಕೂಲ್ ನ ಪ್ರಾಂಶುಪಾಲೆ ಶ್ರೀಮತಿ ಭಗವತಿ, ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಗೋಪಾಲ ಆಚಾರ್ಯ ಎಸ್ ಆರ್ ಶಿಕ್ಷಣ ಸಂಸ್ಥೆಯ ಉಪನ್ಯಾಸಕರು ಶಿಕ್ಷಕರು ಬೋಧಕೇತರ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Read More

ಫೋಟೋಗ್ರಫಿ ಇಂದು ಜೀವನದ ಒಂದು ಅಂಶವಾಗಿದೆ. ಸುಖ ದುಃಖ, ನೋವು ನಲಿವುಗಳ ಫೋಟೋ ಬದುಕಿನ ಕನ್ನಡಿ ಇದ್ದಂತೆ. ಮಾಧ್ಯಮ ಕ್ಷೇತ್ರದ ಫೋಟೋಗ್ರಾಫರ್ ಜೊತೆಗೆ ಫೋಟೋಗ್ರಫಿ ಮಾಡುತ್ತಿರುವ ಎಲ್ಲಾ ಫೋಟೋಗ್ರಾಫರ್ ಗಳಿಗೂ ನಮ್ಮ ಶುಭಾಶಯಗಳು

Read More

ಬಸವರಾಜ ಬೊಮ್ಮಾಯಿ ಮಲೆನಾಡಿಗೆ ಹೊಸ ಘೋಷಣೆ?ಫ್ರೀಡಂಪಾರ್ಕ್ ಆವರಣದಲ್ಲಿ ಕಾರ್ಯಕ್ರಮ NAMMUR EXPRESS NEWSಶಿವಮೊಗ್ಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೆಪ್ಟೆಂಬರ್ 2ರಂದು ಶಿವಮೊಗ್ಗಕ್ಕೆ ಆಗಮಿಸಿ, ಸರ್ಕಾರದ ವಿವಿಧ ಇಲಾಖೆಗಳ ಕಟ್ಟಡಗಳ ಲೋಕಾರ್ಪಣೆ, ಶಂಕುಸ್ಥಾಪನೆ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಣೆಯ ಭವ್ಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ಈ ಸಂಬಂಧ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳಿಗಾಗಿ ಏರ್ಪಡಿಸಲಾಗಿದ್ದ ಪೂರ್ವಸಿದ್ದತಾ ಸಭೆಯಲ್ಲಿ ಭಾಗವಹಿಸಿದ್ದ ಮಾಜಿ ಸಚಿವ ಹಾಗೂ ಶಾಸಕಕೆ.ಎಸ್.ಈಶ್ವರಪ್ಪ ಅವರು ಮಾತನಾಡಿ, ಪ್ರಸಕ್ತ ಆಡಳಿತಾರೂಢ ಸರ್ಕಾರದ ಅವಧಿಯಲ್ಲಿ ಮಂಜೂರಾಗಿ ಪೂರ್ಣಗೊಳ್ಳುತ್ತಿರುವ, ಲೋಕಾರ್ಪಣೆಗೆ ಸಿದ್ಧಗೊಂಡಿರುವ ಕಟ್ಟಡಗಳು, ನೂತನವಾಗಿ ಮಂಜೂರಾಗಿ ಶಂಕುಸ್ಥಾಪನೆಗೆ ಸಿದ್ಧವಾಗಿರುವ ಯೋಜನೆಗಳ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದ ಅವರು, ಲೋಕಾರ್ಪಣೆಗೆ ಸಿದ್ದವಾಗಿರುವ ಕಟ್ಟಡಗಳು, ಸಮುದಾಯಭವನಗಳು, ಶಾಲೆ-ಅಂಗನವಾಡಿ ಕಟ್ಟಡಗಳು, ರಸ್ತೆಗಳು, ಕೆರೆಗಳ ವಿವರವಾದ ಮಾಹಿತಿಯನ್ನು ಆಗಸ್ಟ್ 25ರೊಳಗಾಗಿ ಜಿಲ್ಲಾಧಿಕಾರಿಗಳಿಗೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಗಳು ಹಾಗೂ ನಿಗಮ-ಮಂಡಳಿಗಳಿಂದ ನೀಡಲಾಗುವ ಸೌಲತ್ತುಗಳಿಗೆ ಆಯ್ಕೆಯಾಗಿರುವ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಲು ಹಾಗೂ ಸ್ತ್ರೀಶಕ್ತಿ…

Read More

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಮಲೆನಾಡಿನ ನಿಯೋಗ NAMMUR EXPRESS NEWSರಾಜ್ಯ ಅಡಿಕೆ ಬೆಳೆಗಾರರ ಸಂಘದ ನಿಯೋಗದೊಂದಿಗೆ ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ, ಅಡಿಕೆ ಬೆಳೆಗಾರರ ಹಿತ ರಕ್ಷಿಸುವಂತೆ ಮನವಿ ಸಲ್ಲಿಸಲಾಯಿತು.ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಜೀವರಾಜ್, ಶಾಸಕ ಹರತಾಳು ಹಾಲಪ್ಪ ಕ್ಯಾಂಪ್ಕೋ ಅಧ್ಯಕ್ಷ ಶ್ರಿ ಕಿಶೋರ್ ಕುಮಾರ್ ಕೊಡಗಿ, ವ್ಯವಸ್ಥಾಪಕ ನಿರ್ದೇಶಕ ಕೃಷ್ಣಕುಮಾರ್ ಸೇರಿದಂತೆ ಇನ್ನಿತರ ಗಣ್ಯರು ಜೊತೆಗಿದ್ದರು.

Read More

ಕನ್ನಡದ ಮೂರು ಚಿತ್ರಗಳು ಕಣದಲ್ಲಿ! ರಾಬರ್ಟ್, ಯುವರತ್ನ, ಗರುಡ ಗಮನ ವೃಷಭ ವಾಹನ’ ಪೈಪೋಟಿ NAMMUR EXPRESS NEWSಬೆಂಗಳೂರು: ಪ್ರತಿಷ್ಠಿತ ದಕ್ಷಿಣ ಭಾರತದ ಅಂತರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಅಥವಾ ‘ಸೈಮಾ 2021’ನೇ ಸಾಲಿನ ನಾಮನಿರ್ದೇಶನ ಪಟ್ಟಿ ಬಿಡುಗಡೆ ಆಗಿದೆ. ಸೈಮಾ 10ನೇ ಆವೃತ್ತಿ (2021) ಬೆಂಗಳೂರಿನಲ್ಲಿ ಇದೇ ಸೆ.10 ಹಾಗೂ 11ರಂದು ನಡೆಯಲಿದ್ದು, ಬುಧವಾರ ಸೈಮಾ ನಾಮನಿರ್ದೇಶನಗೊಂಡ ಸಿನಿಮಾಗಳ ಪಟ್ಟಿ ಬಿಡುಗಡೆ ಮಾಡಿದೆ. ದಕ್ಷಿಣ ಭಾರತದ ವಿವಿಧ ಸಿನಿಮಾಗಳು ಇಲ್ಲಿ ನಾಮನಿರ್ದೇಶನಗೊಂಡಿವೆ. ಕನ್ನಡದಿಂದ ಮೂರು ಚಿತ್ರಗಳು ನಾಮಿನೇಟ್ ಆಗಿವೆ. ಕನ್ನಡದ ಮೂರು ಚಿತ್ರಗಳು ನಾಮಿನೇಟ್​:ತಮಿಳು, ಮಲಯಾಳಂ, ತೆಲುಗು ಹಾಗೂ ಕನ್ನಡದಲ್ಲಿ ನಾಮನಿರ್ದೇಶನಗೊಂಡ ಸಿನಿಮಾಗಳ ವಿವರವನ್ನು ಸೈಮಾ ತನ್ನ ಟ್ವಿಟರ್‌ ಖಾತೆಯಲ್ಲಿ ಪ್ರಕಟಿಸಿದೆ. ಕನ್ನಡದಲ್ಲಿ 2021ರಲ್ಲಿ ಬಿಡುಗಡೆಯಾದ ಸಿನಿಮಾಗಳ ಪೈಕಿ ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ತರುಣ್​ ನಿರ್ದೇಶನದ ರಾಬರ್ಟ್​, ನಟ ದಿವಂಗತ ಪುನೀತ್‌ ರಾಜ್‌ಕುಮಾರ್‌ ನಟನೆಯ ‘ಯುವರತ್ನ’, ರಾಜ್‌ ಬಿ.ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಗರುಡ ಗಮನ ವೃಷಭ ವಾಹನ’, ಚಿತ್ರಗಳು ನಾಮ ನಿರ್ದೇಶನಗೊಂಡಿದೆ.ರಾಬರ್ಟ್​, ಯುವರತ್ನ, ರಾಜ್‌ ಬಿ.ಶೆಟ್ಟಿ…

Read More

NAMMUR EXPRESS NEWSಬೆಂಗಳೂರು : ಗ್ರಾಮ ಒನ್ ಸೇವೆಯನ್ನು ಇನ್ನಷ್ಟು ವಿಸ್ತರಿಸಲು ಸರ್ಕಾರ ಬಯಸಿದ್ದು ಮೈಕ್ರೋ ಬ್ಯಾಂಕಿಂಗ್ ಎಲ್ ಪಿ ಜಿ ಬುಕ್ಕಿಂಗ್ ನಂತಹ ಸೇವೆಗಳನ್ನು ಸೇರ್ಪಡೆಗೊಳಿಸಲು ಉದ್ದೇಶಸಿದೆ.ಬುಧವಾರ ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಇ- ಆಡಳಿತ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗ್ರಾಮ ಒನ್ ಕೇಂದ್ರಗಳ ಮೂಲಕ ಒದಗಿಸಬಹುದಾದ ಸೇವೆಗಳನ್ನು ಗುರುತಿಸಿ ಸಂಬಂಧಿಸಿದ ಇಲಾಖೆಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಈವರೆಗೆ ಒಟ್ಟು 7,274 ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು 2022ರ ಜನವರಿಯಲ್ಲಿ 65,520 ವ್ಯವಹಾರ ನಡೆದಿದ್ದು, ಜೂನ್ ನಲ್ಲಿ 10,36,542 ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು, ಹೋಬಳಿ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಟಲ್ ಜನಸ್ನೇಹಿ ಕೇಂದ್ರಗಳ ಸೇವೆಯನ್ನು ಗ್ರಾಮ ಒನ್ ಮೂಲಕ ಒದಗಿಸುವ ಬಗ್ಗೆ ಪ್ರಾಯೋಗಿಕವಾಗಿ ಕೆಲವು ಕೇಂದ್ರಗಳಲ್ಲಿ ಪ್ರಾರಂಭಿಸಲು ಮುಖ್ಯಮಂತ್ರಿಯವರು ಸೂಚಿಸಿದರು.ರಾಜ್ಯದಲ್ಲಿ ಹೊಸ ಡಾಟಾ ಸೆಂಟರ್ ಪ್ರಾರಂಭಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು, ಹೊಸ ಡಾಟಾ ಸೆಂಟರ್ ಸ್ಥಾಪನೆಗೆ ಸೂಕ್ತ…

Read More

ಬಿಬಿಎಂಪಿ ವಾರ್ ಶುರು: ಮೀಸಲಾತಿ ಪ್ರಕಟವಾರ್ಡ್ ಮೀಸಲಾತಿಯಲ್ಲಿ ಬದಲಾವಣೆ ಇಲ್ಲರಾಜಧಾನಿಯಲ್ಲಿ ರಾಜಕೀಯ ಜಿದ್ದಾಜಿದ್ದು? NAMMUR EXPRESS NEWSಬೆಂಗಳೂರು: ಅಂತೂ ಇಂತೂ ಬಿಬಿಎಂಪಿ ವಾರ್ಡ್‌ವಾರು ಕ್ಷೇತ್ರಗಳನ್ನು ಪುನರ್ ವಿಂಗಡಣೆ ಮಾಡಲಾಗಿದ್ದು, ಮೀಸಲಾತಿಯ ಅಂತಿಮ ಅಧಿಸೂಚನೆ ಪ್ರಕಟಿಸಲಾಗಿದೆ. ಇದೀಗ ರಾಜ್ಯದಲ್ಲಿ ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆ ಏನಾಗಲಿದೆ ಎಂಬ ಚರ್ಚೆ ಕೇಳಿ ಬಂದಿದೆ. ಬಿಬಿಎಂಪಿ ಮೀಸಲಾತಿ ಮತ್ತು ವಾರ್ಡ್2011ರ ಜನಗಣತಿಯ ಆಧಾರದ ಮೇರೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 243 ವಾರ್ಡ್‌ವಾರು ಮೀಸಲಾತಿಯನ್ನು ಅಂತಿಮಗೊಳಿಸಿದೆ. 243 ವಾರ್ಡ್ ಗಳ ಮೀಸಲಾತಿಯಲ್ಲಿ ಯಾವುದೇ ಬದಲಾವಣೆ ಮಾಡದೇ ಆದೇಶ ಹೊರಬಿದ್ದಿದೆ.ಇದರ ಕರಡು ಅಧಿಸೂಚನೆಯನ್ನು ಆಗಸ್ಟ್ 3 ರಂದು ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ಒಂದು ವಾರ ಕಾಲಾವಕಾಶ ನೀಡಲಾಗಿತ್ತು. ಬಂದ ಆಕ್ಷೇಪಣಿಗಳನ್ನು ಪರಿಶೀಲಿಸಿ ಈಗ ಅಂತಿಮ ಅಧಿಸೂಚನೆ ಪ್ರಕಟಿಸಲಾಗಿದೆ.ಕೋರ್ಟ್ ಹೇಳಿದ್ದೇನು?: ಬಿಬಿಎಂಪಿ ಚುನಾವಣೆ ಸಂಬಂಧ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ಈ ಹಿಂದೆ 8 ವಾರಗಳಲ್ಲಿ ಚುನಾವಣೆ ನಡೆಸಲು ಸೂಚನೆ ನೀಡಿತ್ತು. ಇದನ್ನು ಪಾಲಿಸದ ಸರ್ಕಾರವನ್ನು…

Read More

ಎಂದಿನಂತೆ ಶಾಲಾ, ಕಾಲೇಜುಗಳು ಪ್ರಾರಂಭಶಿವಮೊಗ್ಗ ಹೆಸರಿಗೆ ಪದೇ ಪದೇ ಗಲಭೆ ಕಳಂಕ! NAMMUR EXPRESS NEWSಶಿವಮೊಗ್ಗ: ಅಶಾಂತಿಗೆ ಕಾರಣವಾಗಿದ್ದ ಶಿವಮೊಗ್ಗ ಹಾಗೂ ಭದ್ರಾವತಿ ನಗರ ವ್ಯಾಪ್ತಿಯ ಎಲ್ಲಾ ಶಾಲೆ, ಕಾಲೇಜುಗಳು ಬುಧವಾರ ಎಂದಿನಂತೆ ಶುರುವಾಗಿವೆ.ನಗರದಲ್ಲಿ ಜನ ಎಂದಿನಂತೆ ಓಡಾಟ ನಡೆಸಿದ್ದಾರೆ.ಶಿವಮೊಗ್ಗದಲ್ಲಿ ಸಾವರ್ಕರ್ ಫೋಟೋ ತೆರವು ವಿಚಾರಕ್ಕೆ ಗಲಾಟೆಯಾಗಿ ಯುವಕನಿಗೆ ಚಾಕು ಇರಿತವಾಗಿದ್ದರಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳವಾರ ಶಿವಮೊಗ್ಗ, ಭದ್ರಾವತಿ ನಗರ ವ್ಯಾಪ್ತಿಯ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿತ್ತು.ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ ಹಿನ್ನಲೆಯಲ್ಲಿ ಬುಧವಾರದಿಂದ ಎಂದಿನಂತೆ ಶಾಲಾ, ಕಾಲೇಜುಗಳು ನಡೆಯುತ್ತಿವೆ.ಶಿವಮೊಗ್ಗದಲ್ಲಿ ನಡೆಯುತ್ತಿರುವ ಗಲಭೆ ಪದೇ ಪದೇ ಶಿವಮೊಗ್ಗ ಹೆಸರಿಗೆ ಕಳಂಕ ತರುತ್ತಿದೆ. ವ್ಯಾಪಾರ, ವಹಿವಾಟು, ಮಲೆನಾಡಿನ ಹೆಸರಿಗೆ ಕಳಂಕ ತರುತ್ತಿದೆ. ನಿಷೇಧಾಜ್ಞೆ ಮುಂದುವರಿಕೆ ಪ್ರೇಮ್ ಸಿಂಗ್ ಚಾಕು ಇರಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಮುಂದುವರಿಸಲಾಗಿದ್ದು, ಶಿವಮೊಗ್ಗ ನಗರ ಸಂಪೂರ್ಣ ಶಾಂತಿಯುತವಾಗಿದೆ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಶಿವಮೊಗ್ಗದಲ್ಲಿ ಹೇಳಿದ್ದಾರೆ. ಪ್ರಕರಣದ ಸಂಬಂಧ…

Read More

ಸರ್ಕಾರಿ ಶಾಲಾ ಮಕ್ಕಳ ಬಿಸಿಯೂಟಕ್ಕೆ ತೊಂದರೆ? NAMMUR EXPRESS NEWSಬೆಂಗಳೂರು : ಮಂಗಳವಾರ ಸರ್ಕಾರಿ ಶಾಲಾ ಮಕ್ಕಳಿಗೆ ಬಿಸಿಯೂಟ ಸಿಗೋದು ಡೌಟ್ ಇದ್ದು, ಬಿಸಿಯೂಟ ಕಾರ್ಯ ಕರ್ತೆಯರು ಮತ್ತೆ ಹೋರಾಟಕ್ಕಿಳಿದಿದ್ದಾರೆ. ಮಂಗಳವಾರ ರಾಜ್ಯಾದ್ಯಂತ ಬಿಸಿಯೂಟ ಕಾರ್ಯಕರ್ತೆಯರಿಂದ ಪ್ರತಿಭಟನೆ ನಡೆಸಲಾಗುತ್ತದೆ.60 ವರ್ಷ ವಯಸ್ಸಾದ ಕಾರ್ಯಕರ್ತೆಯರನ್ನು ವಜಾ ಮಾಡಿದ ಹಿನ್ನೆಲೆ ಮಂಗಳವಾರ ಶಾಲೆಗಳಲ್ಲಿ ಬಿಸಿಯೂಟ ಮಾಡದಿರಲು ನಿರ್ಧಾರ ಮಾಡಿದ್ದಾರೆ. ಸುಮಾರು 6,500 ಕಾರ್ಯಕರ್ತೆಯರನ್ನು ಕೆಲಸದಿಂದ ವಜಾ ಮಾಡಲಾಗಿದೆ. ಹೀಗಾಗಿ ಮಂಗಳವಾರ ರಾಜ್ಯಾದ್ಯಂತ ಬಿಸಿಯೂಟ ಕಾರ್ಯಕರ್ತೆಯರಿಂದ ಪ್ರತಿಭಟನೆ ನಡೆಸಲಾಗುತ್ತದೆ. ಮಂಗಳವಾರದಿಂದ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆ ನಿರ್ಧಾರ ಮಾಡಲಾಗಿದೆ.

Read More

ಬಿಅರ್ಪಿ ಬಳಿ ಘಟನೆ: ಜೀಪಿಗೆ ಡಿಕ್ಕಿ ಹೊಡೆದ ಕಾರುಯಾವುದೇ ಅನಾಹುತ ಇಲ್ಲ NAMMUR EXPRESS NEWSತುಮಕೂರಿನಿಂದ ತೀರ್ಥಹಳ್ಳಿಗೆ ಆಗಮಿಸುತ್ತಿದ್ದ ವೇಳೆ ಗೃಹ ಸಚಿವರ ಬೆಂಗಾವಲು ವಾಹನ ಮತ್ತು ಕಾರು ಉಂಬ್ಳೇಬೈಲ್ ಹತ್ತಿರ ಮುಖಾಮುಖಿ ಡಿಕ್ಕಿಯಾಗಿದೆ. ಹೆಚ್ಚಿನ ಅನಾಹುತ ಏನೂ ಆಗಿಲ್ಲ. ಆದ್ರೆ ಕಾರು ಮತ್ತು ಜೀಪ್ ಜಖಂ ಆಗಿವೆ. ನಗರ ಮೂಲದ ಕಾರು ಎನ್ನಲಾಗಿದೆ. ಸ್ಥಳದಲ್ಲಿ ಗೃಹ ಸಚಿವ ಆರಗ ಅವರು ಇದ್ದು ಸಾಂತ್ವನ ಹೇಳಿದರು. ಬಳಿಕ ಶಿವಮೊಗ್ಗ ತೆರಳಿದರು.

Read More