Author: Nammur Express Admin

-30 ಲಕ್ಷ ರೂ ದೇಣಿಗೆ ನೀಡಿದ ನಟ ಪವನ್ ಕಲ್ಯಾಣ್ ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ಭವ್ಯವಾದ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಈಗ ದೇಶಾದ್ಯಂತ ದೇಣಿಗೆ ಸಂಗ್ರಹ ಕಾರ್ಯ ಕೂಡ ಜೋರಾಗಿ ನಡೆಯುತ್ತಿದೆ. ಈಗಾಗಲೇ ಅನೇಕ ರಾಜಕೀಯ ಗಣ್ಯರು, ಸಿನಿಮಾ ತಾರೆಯರು ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದಾರೆ. ಈಗ ಆ ಸಾಲಿಗೆ ತೆಲುಗು ನಟ, ಜನ ಸೇನಾ ಪಕ್ಷದ ಸಂಸ್ಥಾಪಕ ಪವನ್ ಕಲ್ಯಾಣ್ ಕೂಡ ಸೇರಿಕೊಂಡಿದ್ದಾರೆ. ಮಂದಿರ ನಿರ್ಮಾಣಕ್ಕಾಗಿ ಅವರು 30 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ನಟ, ಜನ ಸೇನಾ ಪಕ್ಷದ ಸಂಸ್ಥಾಪಕ ಪವನ್ ಕಲ್ಯಾಣ್ ಶುಕ್ರವಾರ (ಜ.22) 30 ಲಕ್ಷ ರೂ.ಗಳ ಚೆಕ್ ಅನ್ನು ಅಯೋಧ್ಯ ರಾಮ ಮಂದಿರ ನಿರ್ಮಾಣಕ್ಕೆ ನೀಡಿದ್ದಾರೆ. ಮಾಜಿ ಸಚಿವ ಕಾಮಿನೇನಿ ಶ್ರೀನಿವಾಸ್ ಅವರ ಸಮ್ಮುಖದಲ್ಲಿ ಚೆಕ್ ಅನ್ನು ಮಂದಿರ ನಿರ್ಮಾಣಕ್ಕೆ ಸಂಬಂಧಪಟ್ಟವರಿಗೆ ನೀಡಿದ್ದಾರೆ. ಜೊತೆಗೆ ಪವನ್ 11 ಸಾವಿರ ರೂ.ಗಳ ಇನ್ನೊಂದು ಚೆಕ್ ಅನ್ನು ನೀಡಿದ್ದಾರೆ. ಇದು ಅವರ ಸಿಬ್ಬಂದಿ ನೀಡಿದ…

Read More

-ಖಾತೆ ಮರುಹಂಚಿಕೆ ಬೆಂಗಳೂರು: ಖಾತೆ ಮರುಹಂಚಿಕೆ ಆದರೂ ಬಿಜೆಪಿಯಲ್ಲಿಮತ್ತೆ ಅಸಮಾಧಾನ ಮುಂದುವರಿದಿದೆ. ಖಾತೆ ಮರು ಹಂಚಿಕೆ ರಾಜ್ಯ ಬಿಜೆಪಿಯಲ್ಲಿ ತಲ್ಲಣ ಸೃಷ್ಟಿಸಿದ್ದು ಅತೃಪ್ತರ ಜೊತೆಗಿನ ಸಿಎಂ ಬಿಎಸ್ ಯಡಿಯೂರಪ್ಪ ಮಾತುಕತೆ ಫಲಿಸಲಿಲ್ಲ. ಕೆ. ಸುಧಾಕರ್, ಜೆ.ಸಿ ಮಾಧುಸ್ವಾಮಿ ಹಾಗೂ ಆರ್. ಶಂಕರ್ ಅಸಮಾಧಾನ ಮುಂದುವರಿದಿದೆ.ವೈದ್ಯಕೀಯ ಶಿಕ್ಷಣದ ಜೊತೆಗೆ ಹಜ್ ಹಾಗೂ ವಕ್ಫ್ ಇಲಾಖೆ ಕೊಟ್ಟರೂ ಜೆ.ಸಿ ಮಾಧುಸ್ವಾಮಿ ಸಣ್ಣ ನೀರಾವರಿ ಖಾತೆ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿದ್ದಾರೆ. ಇನ್ನು ಕೆ. ಸುಧಾಕರ್ ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಖಾತೆ ಒಬ್ಬರಿಗೆ ಕೊಡಿ ಎಂದು ಪಟ್ಟು ಹಿಡಿದಿದ್ದಾರೆ. ಪೌರಾಡಳಿತ ಖಾತೆಯಿಂದ ತೃಪ್ತಿ ಹೊಂದಿದ್ದ ಆರ್. ಶಂಕರ್ ಅವರಿಂದ ಆ ಖಾತೆಯನ್ನು ವಾಪಸ್ ಪಡೆದು ಅವರಿಗೆ ತೋಟಗಾರಿಕೆ ಹಾಗೂ ರೇಷ್ಮೆ ಖಾತೆ ನೀಡಿದಕ್ಕಾಗಿ ಅಸಮಾಧಾನಗೊಂಡಿದ್ದಾರೆ. ಸರ್ಕಾರಿ ಕಾರನ್ನುಅತೃಪ್ತಿ ಹೊಂದಿರುವ ಸಚಿವರ ಜೊತೆಗೆ ಸಿಎಂ ಮತ್ತೊಂದು ಸುತ್ತಿನ ಮಾತುಕತೆ ನಡೆಸುವ ಸಾಧ್ಯತೆ ಇದೆ.

Read More

-ಪ್ರತಿಷ್ಠಿತ ಲ್ಯಾನ್ಸೆಟ್ ವೈದ್ಯಕೀಯ ಜರ್ನಲ್ ನಿಂದ ಸರ್ಟಿಫಿಕೇಟ್ ದೆಹಲಿ: ಭಾರತೀಯ ಕೊರೊನಾ ಲಸಿಕೆ ಕುರಿತು ದೇಶದಲ್ಲಿ ಸಾಕಷ್ಟು ಅನುಮಾನ ವ್ಯಕ್ತವಾಗಿದ್ದವು. ಲಸಿಕೆಗಳ ಅದರಲ್ಲೂ ಭಾರತ್ ಬಯೋಟೆಕ್ ಸಂಸ್ಥೆ ತಯಾರಿಸಿದ ಕೊವ್ಯಾಕ್ಸಿನ್ ಲಸಿಕೆಯ ಬಗ್ಗೆ ಹಲವರು ಸಂದೇಹ ವ್ಯಕ್ತಪಡಿಸಿದ್ದರು. ಆದರೆ, ಇದೀಗ ಪ್ರತಿಷ್ಠಿತ ಲ್ಯಾನ್ಸೆಟ್ ವೈದ್ಯಕೀಯ ಜರ್ನಲ್ನಲ್ಲಿ ಈ ಕುರಿತು ಮಾಹಿತಿ ನೀಡಿದೆ. ಕೊವ್ಯಾಕ್ಸಿನ್ ಲಸಿಕೆ ಸುರಕ್ಷಿತ ಎಂದು ಲ್ಯಾನ್ಸೆಟ್ ಅಭಿಪ್ರಾಯಪಟ್ಟಿದೆ. ಕೊವ್ಯಾಕ್ಸಿನ್ ಲಸಿಕೆಯಿಂದ ರೋಗ ನಿರೋಧಕ ಶಕ್ತಿ ವೃದ್ಧಿಸುತ್ತದೆ. ಈ ಲಸಿಕೆ ಸುರಕ್ಷಿತವೂ ಆಗಿದೆ ಎಂದು ಹೇಳಿರುವ ಲ್ಯಾನ್ಸೆಟ್ ವೈದ್ಯಕೀಯ ಜರ್ನಲ್ ಕೊವ್ಯಾಕ್ಸಿನ್ ಕುರಿತಾಗಿ ಎದ್ದಿದ್ದ ಗೊಂದಲವನ್ನು ಬಗೆಹರಿಸಿದೆ. ಈ ಮಧ್ಯೆ ಭಾರತ್ ಬಯೋಟೆಕ್ ಸಂಸ್ಥೆ ತಯಾರಿಸುತ್ತಿರುವ ಮೂಗಿನ ಮೂಲಕ ನೀಡಬಹುದಾದ ಕೊರೊನಾ ಲಸಿಕೆಯ ಮೊದಲ ಹಂತದ ವೈದ್ಯಕೀಯ ಪರೀಕ್ಷೆಗೂ ಅನುಮತಿ ಸಿಕ್ಕಿರುವುದು ಮತ್ತಷ್ಟು ನಿರೀಕ್ಷೆಗಳಿಗೆ ಕಾರಣವಾಗಿದೆ.

Read More

-ಕನ್ನಡದ ಸ್ಟಾರ್ ನಿರ್ದೇಶಕನ ಸಿನಿಮಾದಲ್ಲಿ ನಟನೆ-ಇದು ಬಿಗ್ ಬಜೆಟ್ನ ಸಿನಿಮಾ ತಮ್ಮ ಸಹನೆ ನಟನೆಯ ಮೂಲಕ ಅಭಿಮಾನಿಗಳನ್ನು ಮೋಡಿ ಮಾಡಿದ ನಟ ವಿಜಯ್ ಸೇತುಪತಿ. ಸ್ಯಾಂಡಲ್ವುಡ್ ನ ಸ್ಟಾರ್ ನಿರ್ದೇಶಕರೊಬ್ಬರ ಸಿನಿಮಾದಲ್ಲಿ ನಟಿಸಲಿದ್ದಾರೆ. ಎಂಬ ಮಾಹಿತಿ ಬರುತ್ತಿದೆ.ರಾಕಿಂಗ್ ಸ್ಟಾರ್’ ಯಶ್ ಜೊತೆಗೆ ಬ್ಯಾಕ್ ಟು ಬ್ಯಾಕ್ ಸಿನಿಮಾ ಮಾಡಿದ ಮೇಲೆ “ಪ್ರಶಾಂತ್ ನೀಲ್” ಈಗ ನಟ ಪ್ರಭಾಸ್ಗೆ ಸಿನಿಮಾ ಮಾಡಲಿದ್ದಾರೆ. ಅದಕ್ಕೆ ‘ಸಲಾರ್’ ಅಂತ ಶೀರ್ಷಿಕೆ ಇಡಲಾಗಿದ್ದು, ಕೆಲವೇ ದಿನಗಳಲ್ಲಿ ಶೂಟಿಂಗ್ ಕೂಡ ಆರಂಭಗೊಳ್ಳಲಿದೆ. ಕನ್ನಡದ ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯೇ ಈ ಸಿನಿಮಾಕ್ಕೂ ಬಂಡವಾಳ ಹೂಡಲಿದೆ. ದೊಡ್ಡ ಬಜೆಟ್ನಲ್ಲಿ ಸಿದ್ಧಗೊಳ್ಳಲಿರುವ ಈ ‘ಸಲಾರ್’ನಲ್ಲಿ ವಿಜಯ್ ಸೇತುಪತಿ ನಟಿಸಲಿದ್ದಾರೆ ಅನ್ನೋದು ಲೇಟೆಸ್ಟ್ ನ್ಯೂಸ್!ಮೂಲಗಳು ನೀಡುವ ಮಾಹಿತಿ ಪ್ರಕಾರ, ‘ವಿಜಯ್ ಸೇತುಪತಿ ಇಲ್ಲಿ ವಿಲನ್ ಪಾತ್ರ ಮಾಡಲಿದ್ದಾರೆ. ಚಿತ್ರೀಕರಣವು ಸೇತುಪತಿ ಮತ್ತು ಪ್ರಭಾಸ್ ಅವರ ಕಾಂಬಿನೇಷನ್ ದೃಶ್ಯಗಳಿಂದಲೇ ಆರಂಭಗೊಳ್ಳಲಿದೆ.

Read More

-ದುರ್ಘಟನೆಗೆ ಬೇಸರ ತೋರಿದ ರಾಮನಾಥ್ ಕೋವಿಂದ್ ಶಿವಮೊಗ್ಗದಲ್ಲಿ ಸಂಭವಿಸಿದ ದುರಂತ ಘಟನೆಗೆ ದೇಶದಾದ್ಯಂತ ಎಲ್ಲರೂ ಸಂತಾಪ ವ್ಯಕ್ತಪಡಿಸುತ್ತಿದ್ದಾರೆ. ಪ್ರಧಾನಿಯೂ ಸಹಾ ಸಂತಾಪ ಸೂಚಿಸುವ ಮೂಲಕ ಮೃತರ ಕುಟುಂಬಕ್ಕೆ ರಾಜ್ಯಸರ್ಕಾರದ ನೆರವು ನೀಡುವಂತೆ ಮಾಡಿದ್ದಾರೆ. ಹಾಗೆಯೇ ಶಿವಮೊಗ್ಗದಲ್ಲಿ ಸಂಭವಿಸಿದ ಭಾರೀ ಸ್ಫೋಟದ ಬಗ್ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಬೇಸರ ವ್ಯಕ್ತಪಡಿಸಿದ್ದು, ಇದೊಂದು ದುರದೃಷ್ಟದ ಘಟನೆ ಎಂದು ಹೇಳಿ, ನನ್ನ ಪ್ರಾರ್ಥನೆ ಮೃತರ ಕುಟುಂಬದೊಂದಿಗಿದೆ. ಇನ್ನು ಗಾಯಗೊಂಡವರು ಬೇಗ ಗುಣಮುಖರಾಗಲಿ ಎಂದು ಆಶಿಸುತ್ತೇನೆ ಎಂದು ರಾಷ್ಟ್ರಪತಿ ಹೇಳಿದ್ದಾರೆ.

Read More

-ಕೆಜಿಎಫ್ ನಲ್ಲಿ ಮುಖ್ಯ ವಿಲನ್ ಆಗಿ ಕಾಣಿಸಿಕೊಂಡಿದ್ದ ನಟ-ಈಗ ಮೋಹನ್ಲಾಲ್ ಸಿನಿಮಾದಲ್ಲಿ ನಟಿಸುವ ಚಾನ್ಸ್ ಸಾಮಾನ್ಯವಾಗಿ ನಟ ರಾಮಚಂದ್ರರಾಜು ಎಂದಾಕ್ಷಣ ಯಾರು ಎಂಬುದು ತತ್ಷಣಕ್ಕೆ ನೆನಪಿಗೆ ಬರುವುದು ಕಷ್ಟವಾಗಬಹುದು. ಅದೇ “ಗರುಡ ರಾಮ್” ಎಂದಾಕ್ಷಣವೇ ಕೆಜಿಎಫ್ ಚಿತ್ರಣ ಕಣ್ಮುಂದೆ ಬರುತ್ತದೆ. ಏಕೆಂದರೆ ಗರುಡ ನಿರ್ವಹಿಸಿದ್ದ, ಪಾತ್ರ ಎಲ್ಲರ ಮನದಂಚಿನಲ್ಲಿನಲ್ಲಿ ಉಳಿದಿದೆ. ದೇಶಾದ್ಯಂತ ಖ್ಯಾತಿಗಳಿಸಿರುವ “ಗರುಡ” ಈಗ ಪರಭಾಷೆಯಲ್ಲೂ ಭಾರೀ ಅವಕಾಶಗಳು ಹರಿದು ಬರುತ್ತಿದೆ. ಈಗ ಮಾಲಯಾಳಂ ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ.ಬಿ. ಉನ್ನಿಕೃಷ್ಣನ್ ನಿರ್ದೇಶನ ಹಾಗೂ ಖ್ಯಾತ ನಟ ಮೋಹನ್ ಲಾಲ್ ಅಭಿನಯದ ಸಿನಿಮಾ “ಆರಾಟ್ಟು” ಈ ಸಿನಿಮಾಗೆ ಮಹತ್ವದ ಪಾತ್ರವೊಂದಕ್ಕೆ ರಾಮ್ ಸೆಲೆಕ್ಟ್ ಆಗಿದ್ದಾರೆ. ಸದ್ಯಕ್ಕೆ ಮೋಹನ್ ಲಾಲ್ ಜೊತೆಗೆ ಇರುವ ಪೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ.

Read More

ಮಾರಿಗೋಲ್ಡ್ ಹೂವಲ್ಲಡಗಿದೆ ಆರೋಗ್ಯ ಗುಟ್ಟುಮನೆಯ ಉದ್ಯಾನದಲ್ಲಿದೆ ಔಷಧ ಚೆಂಡು ಹೂವು ಅಥವಾ ಮಾರಿಗೋಲ್ಡ್ ಹೂವನ್ನು ಮನೆಯ ಅಲಂಕಾರ ಮಾಡಲು ಅತ್ಯಂತ ಸುಂದರ. ಹಾಗೆಯೇ ಇದರಿಂದ ಹಲವು ಆರೋಗ್ಯದ ಲಾಭಗಳನ್ನು ಪಡೆಯಬಹುದು ಎನ್ನುವುದು ಗಮನದಲ್ಲಿರಲಿ.ಈ ಹೂವನ್ನು ಚರ್ಮದ ಅಲರ್ಜಿಗೆ ಹಾಗೂ ಕಜ್ಜಿಯಂಥ ಸಮಸ್ಯೆ ನಿವಾರಣೆಗೆ ಬಳಸಲಾಗುತ್ತದೆ. ಮೂತ್ರಪಿಂಡದ ಸಮಸ್ಯೆಗಳನ್ನು ದೂರಮಾಡುವ ಗುಣ ಇದರಲ್ಲಿದೆ. ಈ ಹೂವಿನ ಕಷಾಯವನ್ನು ತಯಾರಿಸಿ ಕುಡಿಯುವುದರಿಂದ ಮೂತ್ರಪಿಂಡದ ಕಲ್ಲು ಕರಗಿ ಹೋಗುತ್ತದೆ.ಇದರಲ್ಲಿ ಆಂಟಿ ಬ್ಯಾಕ್ಟೀರಿಯಾ ಗುಣವಿದ್ದು ಮೊಡವೆಗಳನ್ನು ನಿವಾರಿಸುತ್ತದೆ. ಕಣ್ಣಿನ ನೋವು, ಬಾವು ಸಮಸ್ಯೆಗಳನ್ನೂ ಇದು ಗುಣಪಡಿಸುತ್ತದೆ.ಇದರ ಹೂವಿನ ಕಷಾಯದಿಂದ ಬಾಯಿ ಮುಕ್ಕಳಿಸಿದರೆ ಹಲ್ಲು ನೋವು ಕಡಿಮೆಯಾಗುತ್ತದೆ. ಮಾರಿಗೋಲ್ಡ್ ಹೂವಿನ ಚಹಾ ಸೇವನೆಯಿಂದ ಅಲ್ಸರ್ ಹಾಗೂ ಹೊಟ್ಟೆಯೊಳಗಿನ ಗಾಯ ನಿವಾರಣೆಯಾಗುತ್ತದೆ. ಕೆಲವೊಮ್ಮೆ ಮೂಗಿನಿಂದ ರಕ್ತಸ್ರಾವವಾದರೆ ಅದ ನಿವಾರಣೆಗೂ ಈ ಹೂವಿನ ರಸವನ್ನು ಬಳಸಲಾಗುತ್ತದೆ.

Read More

ಸಂತಾಪ ಸೂಚಿಸಿದ ಅಭಿನಯ ಚಕ್ರವರ್ತಿಸರ್ಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಕಿಚ್ಚನ ಮನವಿ ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದ ಅಕ್ರಮ ಕಲ್ಲು ಗಣಿಗಾರಿಕೆ ಸ್ಥಳದಲ್ಲಿ ಸಂಭವಿಸಿದ ಭಾರಿ ಸ್ಫೋಟಕ್ಕೆ ಇಡೀ ಜಿಲ್ಲೆ ಬೆಚ್ಚಿಬಿದ್ದಿದೆ.ಈ ದುರಂತ ಘಟನೆ ಬಗ್ಗೆ ರಾಜಕೀಯ ಗಣ್ಯರು ಪ್ರತಿಕ್ರಿಯೆ ನೀಡಿ, ಸೂಕ್ತ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ. ಇದೀಗ ಈ ಅವಘಡದ ಬಗ್ಗೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಹ ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಮೃತ ಬಡ ಕಾರ್ಮಿಕರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಜೊತೆಗೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿ ಎಂದಿದ್ದಾರೆ.ಶಿವಮೊಗ್ಗದ ಹುಣಸೋಡಿನಲ್ಲಿ ಮೃತಪಟ್ಟ ಕಾರ್ಮಿಕರ ಅತ್ಮಕ್ಕೆ ಶಾಂತಿಸಿಗಲಿ, ಪ್ರತಿ ಪ್ರಾಣವು ಅಮೂಲ್ಯ ಸರ್ಕಾರ ಅಗತ್ಯ ಕ್ರಮತಗೆದು ಕೊಳ್ಳಲಿ’ ಎಂದು ಹೇಳಿದ್ದಾರೆ. ಜೊತೆಗೆ ಮೊದಲು ಮಾನವನಾಗು ಎಂದು ಹ್ಯಾಷ್ ಟ್ಯಾಗ್ ಹಾಕಿ ಬರೆದುಕೊಂಡಿದ್ದಾರೆ.

Read More

ಬಂಡಾಯ ಸಚಿವರ ಒತ್ತಡಕ್ಕೆ ಮಣಿದ ಬಿಎಸ್ವೈಬೆಂಗಳೂರು: ಖಾತೆ ಹಂಚಿಕೆ ಹಾಗೂ ಬದಲಾವಣೆಯಿಂದ ಅಸಮಾಧಾನಗೊಂಡಿದ್ದ ಸಚಿವರ ಬಂಡಾಯಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಮಣಿದಿದ್ದಾರೆ. ಇದೀಗ ಮತ್ತೆ ಖಾತೆ ಹಂಚಿಕೆಯಲ್ಲಿ ಕೆಲವೊಂದು ಬದಲಾವಣೆಯನ್ನು ಮಾಡಲಾಗಿದೆ. ಜೆ.ಸಿ ಮಾಧುಸ್ವಾಮಿ ಅವರಿಗೆ ವೈದ್ಯಕೀಯ ಶಿಕ್ಷಣದ ಜೊತೆಗೆ ಹಜ್ ಹಾಗೂ ವಕ್ಫ್ ಇಲಾಖೆಯನ್ನು ನೀಡಲಾಗಿದೆ. ಅರವಿಂದ ಲಿಂಬಾವಳಿಗೆ ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಖಾತೆಯನ್ನು ನೀಡಲಾಗಿದೆ. ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಮೊದಲು ಮಾಧುಸ್ವಾಮಿಗೆ ನೀಡಲಾಗಿತ್ತು.ಅಬಕಾರಿ ಖಾತೆ ನೀಡಿದ್ದಕ್ಕೆ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದ ಸಚಿವ ಎಂಟಿಬಿ ನಾಗರಾಜ್ ಅವರಿಗೆ ಪೌರಾಡಳಿತ ಹಾಗೂ ಸಕ್ಕರೆ ಇಲಾಖೆಯನ್ನು ನೀಡಲಾಗಿದೆ. ಇನ್ನು ಕೆ. ಗೋಪಾಲಯ್ಯ ಅವರಿಗೆ ಅಬಕಾರಿ ಖಾತೆಯನ್ನು ನೀಡಲಾಗಿದೆ. ಈ ಹಿಂದೆ ಅವರಿಗೆ ತೋಟಗಾರಿಕೆ ಹಾಗೂ ಸಕ್ಕರೆ ಇಲಾಖೆಯನ್ನು ನೀಡಲಾಗಿತ್ತು. ಇನ್ನು ಸಚಿವ ಆರ್ ಶಂಕರ್ಗೆ ಪೌರಾಡಳಿತದ ಬದಲಾಗಿ ತೋಟಗಾರಿಕೆಯನ್ನು ನೀಡಲಾಗಿದೆ. ಜೊತೆಗೆ ಕೆ.ಸಿ ನಾರಾಯಣ ಗೌಡ ಅವರಿಗೆ ಯುವ ಜನ ಹಾಗೂ ಕ್ರೀಡೆ ಜೊತೆಗೆ ಮುಖ್ಯಮಂತ್ರಿ ಬಳಿ ಇದ್ದ…

Read More

ಜನರಲ್ಲಿ ಮೂಡಿದ ಆತಂಕ!ಪವಿತ್ರ ರಾಮಯ್ಯ ಅವರಿಂದ ಸ್ಥಳ ಪರಿಶೀಲನೆ ಶಿವಮೊಗ್ಗ: ಹುಣಸೋಡು ಗ್ರಾಮದ ಬಳಿ ಕ್ವಾರಿಯಲ್ಲಿ ಗುರುವಾರ ರಾತ್ರಿ ಭಾರಿ ಪ್ರಮಾಣದ ಜಿಲೆಟಿನ್ ಸ್ಫೋಟಗೊಂಡ ಪರಿಣಾಮ ಘಟನೆಯಲ್ಲಿ ಐದಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಈ ನಡುವೆ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷೆ ಪವಿತ್ರ ರಾಮಯ್ಯ ಘಟನೆ ನಡೆದ ರಾತ್ರಿಯೇ ಭದ್ರಾ ಡ್ಯಾಂಗೆ ಭೇಟಿ ನೀಡಿ ಪವಿತ್ರ ರಾಮಯ್ಯ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಇನ್ನೂ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಪವಿತ್ರ ರಾಮಯ್ಯ ಸದ್ಯದ ಮಟ್ಟಿಗೆ ಯಾವುದೇ ಅಪಾಯ ಕಂಡು ಬಂದಿಲ್ಲ ಎಂದು ತಿಳಿಸಿದರು. ಇನ್ನೂ ಒಂದು ವೇಳೆ ಭದ್ರಾ ಅಣೆಕಟ್ಟೆಗೆ ತೊಂದರೆ ಯಾಗಿದ್ದರೆ ತರಿಕೇರೆ, ಭದ್ರವಾತಿ, ಶಿವಮೊಗ್ಗ ಜಿಲ್ಲೆಗೆ ಅಪಾಯ ಕಟ್ಟಿಟ್ಟ ಬುತ್ತಿಯಾಗಿತ್ತು, ಇದರಿಂದ ನೂರಾರು ಹಳ್ಳಿಗಳು ಜಲಾವೃತ್ತವಾಗುತ್ತಿದ್ದವು. ಸದ್ಯದ ಮಟ್ಟಿಗೆ ಅಪಾಯ ಇಲ್ಲವಾದರೂ ಸ್ಥಳಕ್ಕೆ ತಜ್ಞರು ಬಂದು ಪರಿಶೀಲನೆ ನಡೆಸುವ ತನಕ ಜಿಲ್ಲೆಯಲ್ಲಿ ಯಾರೂ ನೆಮ್ಮದಿಯಿಂದ ಇರುವುದಕ್ಕೆ ಸಾಧ್ಯವಾಗುವುದಿಲ್ಲಎಂದು ಸ್ಥಳೀಯ ಜನರು ಹೇಳಿದ್ದಾರೆ.

Read More