-ಜ.17ರಿಂದ ಪಲ್ಸ್ ಪೋಲಿಯೋ ಆರಂಭ -ಪೋಷಕರೇ ಇಲ್ಲಿ ಗಮನಿಸಿ ಬೆಂಗಳೂರು: ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಜನವರಿಯಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮ ಆರಂಭವಾಗಲಿದೆ ಎಂದು ಹೇಳಿದ್ದಾರೆ.ವಿಧಾನಸೌಧದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಇದೇ ಜನವರಿ 17ರಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮ ಆರಂಭವಾಗಲಿದ್ದು, ಇದರಲ್ಲಿ 65 ಲಕ್ಷ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲಾಗುತ್ತದೆ. 5 ವರ್ಷದ ಒಳಗಿನ ಎಲ್ಲ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಹೇಳಿದರು.
Author: Nammur Express Admin
-ಶಿವಮೊಗ್ಗ ಕಲಾವಿದರು ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆ – ಮೊದಲ ಬಾರಿಗೆ ರಂಗಾಯಣ ಕಲಾವಿದರ ಆಯ್ಕೆ ಶಿವಮೊಗ್ಗ: ಈ ಬಾರಿ ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪರೇಡ್‍ಗೆ ಶಿವಮೊಗ್ಗದ ರಂಗಾಯಣ ಕಲಾವಿದರು ಆಯ್ಕೆಯಾಗಿದ್ದಾರೆ. ವಿಜಯನಗರ ಸಂಸ್ಥಾನದ ಇತಿಹಾಸ ಬಿಂಬಿಸುವ ರಾಜ್ಯದ ಸ್ತಬ್ಧಚಿತ್ರದ ಪಾತ್ರಗಳಿಗೆ ಜೀವ ತುಂಬಲಿದ್ದು, ಖ್ಯಾತ ಕಲಾ ನಿರ್ದೇಶಕ ಶಶಿಧರ ಅಡಪ ಅವರು ಸ್ತಬ್ಧಚಿತ್ರ ವಿನ್ಯಾಸ ಮಾಡಿದ್ದಾರೆ ಎಂದು ರಂಗಾಯಣ ನಿರ್ದೇಶಕ ಸಂದೇಶ ಜವಳಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ದೇಶದ 14 ರಾಜ್ಯಗಳ ಸ್ತಬ್ಧಚಿತ್ರಗಳು ಭಾಗವಹಿಸುತ್ತಿದ್ದು, ಅದರಲ್ಲಿ ರಾಜ್ಯದಿಂದ ವಿಜಯನಗರದ ಇತಿಹಾಸ ಸಾರುವ ಸ್ತಬ್ಧಚಿತ್ರ ಆಯ್ಕೆಯಾಗಿದೆ. ಇದೇ ಮೊದಲ ಬಾರಿಗೆ ಶಿವಮೊಗ್ಗ ರಂಗಾಯಣ ಕಲಾವಿದರಿಗೆ ಅವಕಾಶ ಸಿಕ್ಕಿರುವುದಾಗಿ ನಿರ್ದೇಶಕರು ತಿಳಿಸಿದ್ದಾರೆ.. 12 ಕಲಾವಿದರಾದ ಆರ್.ಪ್ರಸನ್ನ ಕುಮಾರ್, ಡಿ.ಆರ್. ನಿತಿನ್, ರಮ್ಯ ಆರ್., ಸವಿತಾ ಆರ್. ಕಾಳಿ, ಆರ್. ರಂಜಿತಾ, ಎಂ.ಎಚ್. ದೀಪ್ತಿ, ಎಸ್.ಎಂ. ರವಿಕುಮಾರ್, ಸುಜಿತ್ ಕಾರ್ಕಳ, ಎನ್.ಚಂದನ್, ಎಂ.ಎಲ್. ಶರತ್ ಬಾಬು, ಬಿ.ಕೆ. ಮಹಾಬಲೇಶ್ವರ್, ಕಾರ್ತಿಕ ಕಲ್ಲುಕುಟಿಕರ್ ಭಾಗವಹಿಸಲಿದ್ದು, ಜ.12ರಂದು ಬೆಂಗಳೂರಿನಿಂದ ದೆಹಲಿಗೆ…
-ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.-ಹೆಚ್ಚಿನ ಸುರಕ್ಷತೆಗಾಗಿ ಹೊಸ ವ್ಯವಸ್ಥೆ ಜಾರಿ. ಎಸ್ಎಸ್ಎಲ್ಸಿಯಿಂದ ಹಿಡಿದು ಉನ್ನತ ಶಿಕ್ಷಣದ ಕೊನೆಯ ಹಂತದವರೆಗೂ ಎಲ್ಲ ವಿದ್ಯಾರ್ಥಿಗಳ ಶೈಕ್ಷಣಿಕ ದಾಖಲೆಗಳನ್ನು ಇನ್ಮುಂದೆ ಡಿಜಿಟಲ್ ರೂಪದಲ್ಲಿ ಸಂಗ್ರಹಿಸಿ ಇಡುವ ಡಿಜಿ ಲಾಕರ್ ವ್ಯವಸ್ಥೆಯ ಬಗ್ಗೆ ಡಿಸಿಎಂ ಡಾ. ಸಿ. ಎನ್ ಅಶ್ವತ್ಥ ನಾರಾಯಣ ಮಾಹಿತಿ ನೀಡಿದ್ದಾರೆ. ಡಿಜಿ ಲಾಕರ್ ವ್ಯವಸ್ಥೆಯಿಂದಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ದಾಖಲೆಗಳು ಇನ್ಮುಂದೆ ಹೆಚ್ಚು ಸುರಕ್ಷಿತವಾಗಿ ಇರಲಿದೆ. ಈ ವ್ಯವಸ್ಥೆ ಅನುಷ್ಠಾನದ ಬಳಿಕ ರಾಜ್ಯದಲ್ಲಿ ಯಾವುದೇ ಮಾದರಿಯ ಕಾಗದ ರೂಪದ ಶೈಕ್ಷಣಿಕ ದಾಖಲೆಗೆ ಅವಕಾಶ ಇರೋದಿಲ್ಲ ಎಂದು ಅಶ್ವತ್ಥ ನಾರಾಯಣ ಹೇಳಿದ್ದಾರೆ. ರಾಷ್ಟ್ರೀಯ ಶೈಕ್ಷಣಿಕ ದಾಖಲೆಗಳ ಸಂಗ್ರಹಗಾರದ ಕೇಂದ್ರ ಮಟ್ಟದ ಅಧಿಕಾರಿಗಳು ಹಾಗೂ ರಾಜ್ಯ ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆಗಿನ ಸಭೆ ಬಳಿಕ ಈ ಮಹತ್ವದ ಮಾಹಿತಿಯನ್ನು ನೀಡಿದ್ದಾರೆ. ವಿದ್ಯಾರ್ಥಿಗಳ ಶೈಕ್ಷಣಿಕ ದಾಖಲೆಗಳನ್ನು ಭದ್ರವಾಗಿ ಇಡುವ ಸಲುವಾಗಿ ಈ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದೆ. ಇದಕ್ಕೆ ರಾಷ್ಟ್ರೀಯ ಶೈಕ್ಷಣಿಕ ದಾಖಲೆಗಳ ಸಂಗ್ರಹಗಾರ ಎಂದು ಕರೆಯಲಾಗುತ್ತದೆ. ಅಲ್ಲದೇ ಪ್ರತಿ ವಿದ್ಯಾರ್ಥಿಯೂ ತನ್ನ…
-ವಾಟ್ಸಾಪ್ ಪ್ರಿಯರೇ ಇಲ್ಲಿ ಗಮನಿಸಿ ನವದೆಹಲಿ, ಜ.6 -ಜಾಗತಿಕವಾಗಿ ಮುಂಚೂಣಿಯಲ್ಲಿರುವ ವಾಟ್ಸ್ಅಪ್ ಮೆಸೆಜಿಂಗ್ ಅಪ್ಲಿಕೇಶನ್ ಫೆ.8ರಿಂದ ಸ್ಥಗಿತಗೊಳ್ಳಲಿದೆ ಎಂಬ ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿದ್ದು, ಇದಕ್ಕೆ ವಾಟ್ಸ್ಅಪ್ ಸಂಸ್ಥೆ ಸ್ಪಷ್ಟನೆ ನೀಡಿದೆ. ನಿನ್ನೆ ಮತ್ತು ಇಂದು ಬಹಳಷ್ಟು ವಾಟ್ಸ್ಅಪ್ ಬಳಕೆದಾರರಿಗೆ ಅಪ್ಡೇಟ್ ಮೆಸೆಜ್ಗಳು ರವಾನೆಯಾಗಿವೆ. ಆ ನೋಟಿಫಿಕೇಶನನ್ನು ಅಂಗೀಕರಿಸಿ ಅಗತ್ಯವಾದ ಪ್ರಮುಖ ಮಾಹಿತಿಯನ್ನು ಒದಗಿಸದೇ ಇದ್ದರೆ 2021ರ ಫೆಬ್ರವರಿ 8ರಿಂದ ನಿಮ್ಮ ಮೊಬೈಲ್ನಲ್ಲಿ ವಾಟ್ಸ್ಅಪ್ ನಿಷ್ಕ್ರಿಯೆಗೊಳ್ಳಲಿದೆ.ಹೊಸ ನೀತಿಯ ಪ್ರಕಾರ ವಾಟ್ಸ್ಅಪ್ ಬಳಕೆದಾರರ ದತ್ತಾಂಶವನ್ನು ಸಂಗ್ರಹಿಸುತ್ತಿದೆ. ಯಾವ ಬಳಕೆದಾರರು ನೋಟಿಫಿಕೇಶನನ್ನು ಸ್ವೀಕರಿಸಿ ವಾಟ್ಸ್ಅಪ್ನ್ನು ಅಪ್ಡೇಟ್ ಮಾಡಿಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಅವರಿಗೆ ಸೇವೆ ಸ್ಥಗಿತಗೊಳಿಸುವುದಾಗಿ ವಾಟ್ಸ್ಅಪ್ ಸಂಸ್ಥೆ ಹೇಳಿದ್ದು, ಜ.4ರಂದು ದೇಶಾದ್ಯಂತ ನೋಟಿಫಿಕೇಶನ್ ರವಾನಿಸಲಾಗಿದೆ. ನಿರ್ವಹಣೆ, ಸ್ವೀಕಾರ, ಉತ್ತಮಗೊಳಿಸುವಿಕೆ, ಕಸ್ಟಮೈಸ್, ಬೆಂಬಲ ಹಾಗೂ ಮಾರುಕಟ್ಟೆ ಸೇರಿದಂತೆ ವಾಟ್ಸ್ಅಪ್ ಹಲವಾರು ಸೇವೆಗಳನ್ನು ಒದಗಿಸುತ್ತಿದೆ. ಈ ಸೇವೆಗಳನ್ನು ಮುಂದುವರೆಸಬೇಕಾದರೆ ಅಪ್ಲಿಕೇಶನ್ ಅಪ್ಡೇಟ್ ಮಾಡಿಕೊಳ್ಳುವುದು ಅನಿವಾರ್ಯ. ಬಳಕೆದಾರರ ಮೊಬೈಲ್ನಲ್ಲಿ ಸಂದೇಶ ಸೇವ್ ಆಗಿರುತ್ತದೆ. ರವಾನೆಯಾಗದೆ ಬಾಕಿ ಉಳಿದ ಸಂದೇಶಗಳನ್ನು…
-ಜನವರಿ 7ರಿಂದ ವರುಣನ ಆರ್ಭಟ-ಹವಾಮಾನ ಇಲಾಖೆಯ ಮುನ್ಸೂಚನೆ ಬೆಂಗಳೂರು, ಜ. 05. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಾದ ಹಿನ್ನೆಲೆ ರಾಜ್ಯದ ವಿವಿಧೆಡೆ ತುಂತುರು ಮಳೆಯಾಗುತ್ತಿದ್ದು , ಜ.9ರ ವರೆಗೆ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ರಾಜ್ಯದ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಜ. 7ಕ್ಕೆ 64.5 ಮಿ.ಮೀನಿಂದ 115.5 ಮಿ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೋ ಅಲರ್ಟ್’ಘೋಷಿಸಲಾಗಿದೆ. ಸೋಮವಾರದ ವರದಿಯಂತೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ 5ಸೆಂ.ಮೀ. ಅತೀ ಹೆಚ್ಚು ಮಳೆಯಾಗಿದೆ. ಉಳಿದಂತೆ ಶಿವಮೊಗ್ಗ, ಕೊಡಗಿನ ಭಾಗಮಮಂಡಲ ತಲಾ 3 ಸೆಂ.ಮೀ, ದಕ್ಷಿಣ ಕನ್ನಡದ ಸುಳ್ಯ, ಶಿವಮೊಗ್ಗದ ಭದ್ರಾವತಿ, ಚಿಕ್ಕಮಗಳೂರಿನ ಲಕ್ಕವಳ್ಳಿ ತಲಾ 2 ಸೆಂ.ಮೀ ಮಳೆಯಾಗಿದೆ. ರಾಜ್ಯದ ಕನಿಷ್ಠ ತಾಪಮಾನ ಹಾಸನದಲ್ಲಿ 11.6, ಬೀದರ್ನಲ್ಲಿ 12.6 ಹಾಗೂ ಗರಿಷ್ಠ ತಾಪಮಾನ ಕಾರವಾರದಲ್ಲಿ 35.8 ಡಿಗ್ರಿ ಸೇಲ್ಸಿಯಸ್ ದಾಖಲಾಗಿದೆ ಎಂದು ಹವಾಮಾನ ವರದಿ ತಿಳಿಸಿದೆ.
ಚಿಕ್ಕಮಗಳೂರಿನಲ್ಲಿ ವಿದ್ಯಾರ್ಥಿ & ಶಿಕ್ಷಕರಲ್ಲಿ ಕೋವಿಡ್ +veಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಹೇಳಿಕೆ ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ನಾಲ್ಕು ಮಂದಿ ವಿದ್ಯಾರ್ಥಿಗಳು ಮತ್ತು ಇಬ್ಬರು ಶಿಕ್ಷಕರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಹೇಳಿದ್ದಾರೆ.ನಾಲ್ವರು ವಿದ್ಯಾರ್ಥಿಗಳಲ್ಲಿ ಇಬ್ಬರು ಕಡೂರು ಹಾಗೂ ಚಿಕ್ಕಮಗಳೂರಿನ ಇಬ್ಬರು ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ.ನಿನ್ನೆಯಷ್ಟೇ ಜಿಲ್ಲೆಯ ಮೂವರು ಶಿಕ್ಷಕರಲ್ಲಿ ಸೋಂಕು ದೃಢ ಪಟ್ಟಿತ್ತು, ಇಂದು ಮತ್ತೆ ಇಬ್ಬರು ಶಿಕ್ಷರಲ್ಲಿ ಸೋಂಕು ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ದೃಡೀಕರಿಸಿದ್ದಾರೆ.ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ೫ ಮಂದಿ ಶಿಕ್ಷಕರು ಹಾಗೂ ನಾಲ್ಕು ಮಂದಿ ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ.
-ಊಟವಾದ ತಕ್ಷಣ ಈ ಕೆಲಸಗಳನ್ನು ಮಾಡಬೇಡಿ. ಆಹಾರ ಸೇವನೆಯಿಂದ ಪೋಷಕಾಂಶ ನಮ್ಮ ದೇಹ ಸೇರುತ್ತದೆ. ಆಹಾರ ಶಕ್ತಿಯನ್ನು ನೀಡುತ್ತದೆ. ನಾವು ಸೇವಿಸಿದ ಆಹಾರದ ಸಂಪೂರ್ಣ ಪೋಷಕಾಂಶ ನಮ್ಮ ದೇಹ ಸೇರ ಬೇಕೆಂದರೆ ಊಟವಾದ ನಂತರ ನಾವು ಕೆಲವೊಂದು ತಪ್ಪುಗಳನ್ನು ಮಾಡಬಾರದು.ಸಾಮಾನ್ಯವಾಗಿ ಊಟವಾದ ತಕ್ಷಣ ಅನೇಕರು ನೀರನ್ನು ಕುಡಿಯುತ್ತಾರೆ. ಇದರಿಂದ ಜೀರ್ಣಕ್ರಿಯೆ ಸರಿಯಾಗಿ ಆಗದೇ ಕಿಣ್ವದ ಮೇಲೆ ಪರಿಣಾಮ ಬೀರುತ್ತದೆ. ಊಟವಾದ ಒಂದು ಗಂಟೆ ನಂತರ ನೀರು ಕುಡಿಯಬೇಕು ಅಗತ್ಯವೆನಿಸಿದರೆ ಮಾತ್ರಾ ಊಟದ ಮಧ್ಯೆ ಸ್ವಲ್ಪ ನೀರು ಸೇವನೆ ಮಾಡಿ. ಆಹಾರ ಸೇವನೆ ಮಾಡಿದ ತಕ್ಷಣ ಟೀ, ಕಾಫಿ, ಕೋಲ್ಡ್ ಡ್ರಿಂಕ್ಸ್ ಸೇವನೆ ಮಾಬೇಡಿ. ಇದರಿಂದ ದೇಹಕ್ಕೆ ಕಬ್ಬಿಣದಾಂಶದ ಕೊರತೆಯಾಗುತ್ತದೆ ಮತ್ತು ರಕ್ತ ಹೀನತೆ ಉಂಟಾಗಬಹುದು.. ಕೆಲವರು ಆಹಾರ ಸೇವನೆ ಮಾಡಿದ ತಕ್ಷಣ ಧೂಮಪಾನ ಮಾಡುತ್ತಾರೆ. ಇದು ಆರೋಗ್ಯಕ್ಕೆ ತುಂಬ ಹಾನಿಕಾರಕ. ಆಹಾರ ಸೇವನೆ ಮಾಡಿದ ತಕ್ಷಣ ಒಂದು ಸಿಗರೇಟ್ ತೆಗೆದುಕೊಳ್ಳುವುದು 10ಸಿಗರೇಟ್ ಸೇರಿದಂತೆ ಆಗುತ್ತದೆ. ಇನ್ನು ಕೆಲವರು ಆಹಾರ ಸೇವನೆ ಮಾಡಿದ…
-ಒಂದೇ ದಿನಕ್ಕೆ ಶಾಲೆ ಬಂದ್-ವಿದ್ಯಾರ್ಥಿಗಳ ಜೊತೆಗೆ ಪೋಷಕರಿಗೂ ಆತಂಕ ಚಿಕ್ಕಮಗಳೂರು, ಜನವರಿ 04: ಇಬ್ಬರು ಶಿಕ್ಷಕರಿಗೆ ಕೋವಿಡ್ ಸೋಂಕು ತಗುಲಿದ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲ್ಲೂಕಿನ ಶಾಲೆಗೆ ಬೀಗ ಹಾಕಲಾಗಿದೆ. ಶಾಲೆಯಲ್ಲಿ 15 ಶಿಕ್ಷಕರು ಕಾರ್ಯ ನಿರ್ವಹಣೆ ಮಾಡುತ್ತಿದ್ದರು. ಕಳಸ ತಾಲ್ಲೂಕಿನ ಜೆ. ಎಂ. ಇ. ಶಾಲೆಗೆ ಬೀಗ ಹಾಕಲಾಗಿದೆ. ಶಾಲೆಯಲ್ಲಿ 15 ಶಿಕ್ಷಕರಿದ್ದು, ಇಬ್ಬರಿಗೆ ಕೋವಿಡ್ ಸೋಂಕು ತಗುಲಿರುವುದು ಖಚಿತವಾಗಿದೆ. ಉಳಿದ 13 ಶಿಕ್ಷಕರ ಪರೀಕ್ಷೆಯನ್ನು ಮಾಡಲಾಗಿದ್ದು, ಅವರ ವರದಿ ನೆಗೆಟಿವ್ ಬಂದಿದೆ. ಶಾಲೆಗಳು ಆರಂಭವಾದ ಬಳಿಕ ಒಂದು ದಿನ ಮಾತ್ರಾ ಶಾಲೆ ನಡೆದಿತ್ತು. ಮಕ್ಕಳು ಸಹ ಶಾಲೆಗೆ ಬಂದಿದ್ದರು.ಕೋವಿಡ್ ಪಾಸಿಟಿವ್ ಬಂದಿರುವ ಶಿಕ್ಷಕರು ಸಹ ಶಾಲೆಗೆ ಬಂದಿದ್ದರು. ಇದರಿಂದಾಗಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು, ಪೋಷಕರಿಗೂ ಕೋವಿಡ್ ಸೋಂಕಿನ ಆತಂಕ ಉಂಟಾಗಿದೆ. ಶಾಲೆಗೆ ಆಗಮಿಸುವ ಶಿಕ್ಷಕರ ಕೋವಿಡ್ ಪರೀಕ್ಷೆಯನ್ನು ನಡೆಸುವುದು ಕಡ್ಡಾಯವಾಗಿದೆ. ಶಾಲೆಯ ಆಡಳಿತ ಮಂಡಳಿ ಶಿಕ್ಷಕರ ಕೋವಿಡ್ ವರದಿ ಕೈ ಸೇರುವ ಮುನ್ನವೇ ಅವರನ್ನು ಶಾಲೆಗೆ ಕರೆಸಿಕೊಂಡಿರುವುದು…
16 ಟೆಸ್ಟ್ ಪಂದ್ಯಗಳಲ್ಲಿ 76 ವಿಕೆಟ್ ಪಡೆದಿರುವ ಜಸ್‍ಪ್ರಿತ್ ಬುಮ್ರಾಜನವರಿ 7 ರಿಂದ ಭಾರತ & ಆಸ್ಟ್ರೇಲಿಯಾ ನಡುವೆ 3ನೇ ಟೆಸ್ಟ್ ಪಂದ್ಯ ಟೀಮ್ ಇಂಡಿಯಾ ವೇಗಿ ಜಸ್‍ಪ್ರಿತ್ ಬುಮ್ರಾ, ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಬಾರ್ಡರೆ ಗವಾಸ್ಕರ್ ಟ್ರೋಫಿ ಟಸ್ಟ್ ಸರಣಿಯಲ್ಲಿ ಎಲ್ಲರ ಮನ ಸೆಳೆದಿದ್ದಾರೆ.ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. 2018ರಲ್ಲಿ ಭಾರತದ ಪರ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದ ಜಸ್ಪ್ರಿತ್ ಬುಮ್ರಾ, ವೃತ್ತಿ ಜೀವನದ ಮೂರೇ ವರ್ಷಗಳಲ್ಲಿ ಆಡಿದ 16 ಪಂದ್ಯಗಳಿಂದ 76 ವಿಕೆಟ್ ಕಬಳಿಸಿದ್ದಾರೆ. ಆ ಮೂಲಕ ಭಾರತ ತಂಡದ ವೇಗದ ಬೌಲಿಂಗ್ ವಿಭಾಗದಲ್ಲಿ ಪ್ರಮುಖ ಅಸ್ತ್ರವಾಗಿ ಬೆಳೆದಿದ್ದಾರೆ. ಟೆಸ್ಟ್ ಕ್ರಿಕೆಟ್ ವೃತ್ತಿ ಜೀವನದಲ್ಲಿ ಒಂದು ಹ್ಯಾಟ್ರಿಕ್ ವಿಕೆಟ್ ಸಾಧನೆ ಮಾಡಿರುವ ಅಹಮದಾಬಾದ್ ಮೂಲದ ವೇಗಿ, ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಜತೆ ಕಾರ್ಯ ನಿರ್ವಹಿಸಿದ್ದಾರೆ.ಪಿಟಿಐಗೆ ಜತೆ ಮಾತನಾಡಿರುವ ಸಚಿನ್ ತೆಂಡೂಲ್ಕರ್, “ವೇಗದ ಬೌಲಿಂಗ್ ವಿಭಾಗದ…
-ಕಳೆದ ವರ್ಷ ಅಂತರಾಷ್ಟೀಯ ಕ್ರಿಕೆಟಿಗೆ ವಿದಾಯ ಹೇಳಿದ್ದ ಎಡಗೈ ಆಟಗಾರ-ಇಂಡಿಯನ್ ಪ್ರೀಮಿಯರ್ ಲೀಗ್‍ನಲ್ಲಿ ಮುಂದುವರಿಯಲಿರುವ ಅಲ್‍ರೌಂಡರ್ ಮಹೇಂದ್ರ ಸಿಂಗ್ ಧೋನಿ ಬೆನ್ನಲ್ಲೆ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಘೋಷಿಸಲು ಕಾರಣವೇನುಂಬುದನ್ನು ಸುರೇಶ್ ರೈನಾ ಬಹಿರಂಗಪಡಿಸಿದ್ದಾರೆ. ಕಳೆದ ವರ್ಷ(2020) ಆಗಸ್ಟ್ 15 ರಂದು ಎಂಎಸ್ ಧೋನಿ ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಘೋಷಿಸಿದ್ದರು. ಇದಾದ ಕೆಲವೇ ನಿಮಿಷಗಳಲ್ಲಿ ಸುರೇಶ್ ರೈನಾ ಕೂಡ ಅಂತಾಷ್ಟ್ರೀಯ ಕ್ರಿಕೆಟ್ನಿಂದ ಹೊರ ಬಂದರು. ಈ ನಿರ್ಧಾರ ತೆಗೆದುಕೊಳ್ಳಲು ಸರಿಯಾದ ಸಮಯ ಎಂದು ಆ ವೇಳೆ ನನಗನಿಸಿತ್ತು ಎಂದು ಎಡಗೈ ಆಟಗಾರ ಹೇಳಿದ್ದಾರೆ. ಭಾರತೀಯ ಕ್ರಿಕೆಟ್ಗೆ ಮಹತ್ವದ ಕೊಡುಗೆ ನೀಡಿರುವ ಎಂಎಸ್ ಧೋನಿ, ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದು ಎಲ್ಲರಿಗೂ ಆಘಾತ ತಂದಿತ್ತು. ಟೀಮ್ ಇಂಡಿಯಾ ಮಾಜಿ ನಾಯಕ ಹಠಾತ್ ನಿವೃತ್ತಿ ಘೋಷಿಸುತ್ತಾರೆಂದು ಯಾರೂ ನಿರೀಕ್ಷೆ ಮಾಡಿರಲಿಲ್ಲ. ಧೋನಿ ವಿದಾಯ ಹೇಳಿದ ಕೆಲವೇ ನಿಮಿಷಗಳಲ್ಲಿ ರೈನಾ ಕೂಡ ತಮ್ಮ ನಾಯಕನ ಹಾದಿಯನ್ನೇ ತುಳಿದಿದ್ದರು. ಆಗಸ್ಟ್ 15 ರಂದು ಅಂತಾರಾಷ್ಟ್ರೀಯ…