Author: Nammur Express Admin

ಮಂಗಳೂರಲ್ಲಿ ಗೋಡೆ ಬರಹಮತ್ತೆ ಸುದ್ದಿಗೆ ಬಂದ ತೀರ್ಥಹಳ್ಳಿ! ಮಂಗಳೂರು: ಇತ್ತೀಚಿಗೆ ಭಾರೀ ಸುದ್ದಿ ಮಾಡಿದ್ದ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಕದ್ರಿ ಪೊಲೀಸರು ಯುವಕನೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈತ ಮಲೆನಾಡಿನ ತೀರ್ಥಹಳ್ಳಿ ಮೂಲದವನು ಎನ್ನಲಾಗಿದೆ. ಆದರೆ ನಿಖರ ಮಾಹಿತಿ ಲಭ್ಯವಾಗಿಲ್ಲ. ವಿಚಾರಣಾ ದೃಷ್ಟಿಯಿಂದ ಮಾಹಿತಿ ಗೌಪ್ಯತೆ ಕಾಪಾಡಲಾಗಿದೆ ಎಂದು ತಿಳಿದು ಬಂದಿದೆ.ಮಂಗಳೂರಿನ ಬಿಜೈ ಮತ್ತು ಕೋರ್ಟ್ ಸಮೀಪ ಕೆಲ ದಿನಗಳ ಹಿಂದೆ ಗೋಡೆಗಳ ಮೇಲೆ ಲಷ್ಕರ್ ಈ ತೊಯ್ಬಾ ಉಗ್ರರ ಪರ ಬರಹಗಳನ್ನು ಬರೆಯಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ತೀರ್ಥಹಳ್ಳಿ ಮೂಲದ ನಜೀರ್ ಮುಹಮ್ಮದ್‌ ಅಗಾ ಎಂಬಾತನನ್ನು ಬಂಧಿಸಿದ್ದಾರೆ.ಈತನ ಜೊತೆಗೆ ಬೈಕ್ ನಲ್ಲಿ ಬಂದು ಗೋಡೆ ಬರಹಕ್ಕೆ ಸಹಕರಿಸಿದ ಇನ್ನೊಬ್ಬ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಈ ಪ್ರಕರಣ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಉಗ್ರ ಚಟುವಟಿಕೆ ನಡೆಯುತ್ತಿದೆ ಎಂಬುದಕ್ಕೆ ಪುಷ್ಠಿ ನೀಡಿದಂತಿದೆ. ಇನ್ನಾದರೂ ಪೊಲೀಸರು ಎಚ್ಚರ ವಹಿಸಬೇಕಿದೆ.

Read More

ಮಾಜಿ ಸಚಿವರ ಅಪಹರಣ ಪುರಾಣಪೊಲೀಸರಿಗೆ ಮಂಡೆ ಬಿಸಿ! ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್ ಅವರ ಅಪಹರಣ ಪ್ರಕರಣ ಇದೀಗ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.ಕಿಡ್ನಾಪ್ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಹೊಸದೊಂದು ಆಯಾಮ ಸಿಕ್ಕಿದೆ. ಪ್ರಕಾಶ್ ಅವರ ಎರಡನೇ ಹೆಂಡತಿ ಮತ್ತು ಆಕೆಯ ಮೊದಲ ಪುತ್ರ ಸೇರಿ ವರ್ತೂರು ಪ್ರಕಾಶ್ ಅವರನ್ನು ಅಪಹರಣ ಮಾಡಿಸಿರಬಹುದು ಎನ್ನುವ ಅನುಮಾನ ಮೂಡಿದೆ. ಆದರೆ ಇದು ತನಿಖೆಯಿಂದ ಹೊರ ಬರಬೇಕಿದೆ.ತೋಟದ ಮನೆ ರಹಸ್ಯ!: 2017ರಲ್ಲಿ ವರ್ತೂರು ಪ್ರಕಾಶ್ ಅವರ ಮೊದಲ ಪತ್ನಿ ಡೆಂಗ್ಯೂನಿಂದ ತೀರಿಕೊಂಡರು. ಬಳಿಕ ತಮ್ಮ ತೋಟದ ಮನೆ ನೋಡಿಕೊಳ್ಳುತ್ತಿದ್ದ ಮಹಿಳೆಯನ್ನು ಪ್ರಕಾಶ್ ಮದುವೆಯಾಗಿದ್ದರು.ಮೊದಲೇ ಇಬ್ಬರು ಗಂಡುಮಕ್ಕಳಿದ್ದ ಕಾರಣ ಆಸ್ತಿ ವಿವಾದ ಉಂಟಾಗಿ ಫಾರ್ಮ್ ಹೌಸ್ ಬೇರೆಯವರಿಗೆ ಕೊಡುವ ನಿರ್ಧಾರಕ್ಕೆ ಬರಲಾಗಿತ್ತು. ಆ ಕಾರಣಕ್ಕಾಗಿ ಪತ್ನಿ ಹಾಗೂ ಆಕೆಯ ಮೊದಲ ಪತಿಯ ಮಗ ಸೇರಿ ಅಪಹರಣ ಮಾಡಿಸಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.ಈಗಾಗಲೇ ಭಾರಿ ಸುದ್ದಿಯಲ್ಲಿರುವ ಈ ಪ್ರಕರಣ ಮತ್ತಷ್ಟು ಕುತೂಹಲ ಮೂಡಿಸಿದೆ.

Read More

ದೇಶದ ರಾಜಕೀಯದಲ್ಲಿ ಭಾರಿ ಕುತೂಹಲಬಿಜೆಪಿ ಸೇರ್ತಾರಾ ಸ್ಟಾರ್ ನಟ? ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅವರು ಸಕ್ರಿಯ ರಾಜಕೀಯಕ್ಕೆ ಎಂಟ್ರಿ ಕೊಡಲು ನಿರ್ಧರಿಸಿದ್ದು, ಇದೀಗ ಈ ಸುದ್ದಿ ದೇಶದ ಗಮನ ಸೆಳೆದಿದೆ.ಗುರುವಾರ ರಜನೀಕಾಂತ್ ಈ ಬಗ್ಗೆ ಅಧಿಕೃತ ಟ್ವೀಟ್ ಮಾಡಿದ್ದು, ತಮ್ಮ ಸ್ವಂತ ಪಕ್ಷ ಘೋಷಣೆಯನ್ನು ಮಾಡಿದ್ದಾರೆ. ರಜನಿ ಬಿಜೆಪಿ ಸೇರ್ತಾರೆ ಎಂಬ ವದಂತಿ ಇದ್ದು ಇದೀಗ ಹೊಸ ಪಕ್ಷ ಸ್ಥಾಪನೆಗೆ ಮುಂದಾಗಿದ್ದಾರೆ. ಇತ್ತ ತಮಿಳು ನಾಡಿನಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದ್ದು, ಹೊಸ ರಾಜಕೀಯ ಬಿರುಗಾಳಿ ಏಳಲಿದೆ. ಜನವರಿ 21,2021ರಂದು ಹೊಸ ರಾಜಕೀಯ ಬದುಕು ಆರಂಭ ಮಾಡುವುದಾಗಿ ಹೇಳಿರುವ ಅವರು ಡಿಸೆಂಬರ್ 31ರಂದು ಹೊಸ ಪಕ್ಷದ ಬಗ್ಗೆ ಘೋಷಣೆ ಮಾಡುವುದಾಗಿ ಘೋಷಿಸಿದ್ದಾರೆ.ರಜನಿ ಅವರ ರಾಜಕೀಯ ಪ್ರವೇಶದೊಂದಿಗೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಟಾರ್ ನಟ ಕಮಲ್ ಹಾಸನ್ ಅವರ ನಂತರ ಮತ್ತೊಬ್ಬ ಸ್ಟಾರ್ ಎಂಟ್ರಿ ಅಧಿಕೃತವಾಗಲಿದೆ. ಇನ್ನು ತಮಿಳು ನಾಡಿನಲ್ಲಿ ಜಯಲಲಿತಾ ಹಾಗೂ ಕರುಣಾನಿಧಿ ಸಾವಿನ ಬಳಿಕ ನಾಯಕತ್ವ ಕೊರತೆ…

Read More

ಶನಿವಾರದವರೆಗೆ ಬೂದಿ ಮುಚ್ಚಿದ ಕೆಂಡ!ಭಾರಿ ಬಿಗಿ ಬಂದೋಬಸ್ತ್ ಶಿವಮೊಗ್ಗ: ಮಲೆನಾಡಿನ ಮಡಿಲು ಶಿವಮೊಗ್ಗ ಬೂದಿ ಮುಚ್ಚಿದ ಕೆಂಡವಾಗಿದೆ.ಬಜರಂಗ ದಳದ ಕಾರ್ಯಕರ್ತನೊಬ್ಬನ ಮೇಲಿನ ಹಲ್ಲೆ ಪ್ರಕರಣ ಇದೀಗ ಕೋಮು ಘರ್ಷಣೆಗೆ ಕಾರಣವಾಗಿದೆ. ಶನಿವಾರದವರೆಗೆ ನಿಷೇಧಾಜ್ಞೆ ಜಾರಿಯಾಗಿದ್ದು, ಪೊಲೀಸ್ ಕಣ್ಗಾವಲಿನಲ್ಲಿ ನಗರ ಇರಲಿದೆ. ಈಗಾಗಲೇ ಎಲ್ಲಾ ಕಡೆ ಬಿಗಿ ಬಂದೋಬಸ್ತ್ ಮಾಡಲಾಗಿದೆ.ಏನಿದು ಘಟನೆ?: ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ಬಜರಂಗದಳ ಕಾರ್ಯಕರ್ತ ನಾಗೇಶ್ ಮೇಲೆ ಹಲ್ಲೆ ಖಂಡಿಸಿ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯಿಂದ ಗಾಂಧಿ ಬಜಾರ್​​​​ನಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗಿದೆ.ಗುರುವಾರ ಮಧ್ಯಾಹ್ನದಿಂದ ಶನಿವಾರ ಬೆಳಗ್ಗೆ 10 ಗಂಟೆ ತನಕ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಅವರ ಆದೇಶದ ಮೇರೆಗೆ ಶಿವಮೊಗ್ಗ ತಾಲೂಕು ದಂಡಾಧಿಕಾರಿ ನಾಗರಾಜ್ ನಿಷೇಧಾಜ್ಞೆ ಘೋಷಿಸಿದ್ದಾರೆ. ದುಷ್ಕರ್ಮಿಗಳು ನಾಗೇಶ್ ಮೇಲೆ ಹಲ್ಲೆ ನಡೆಸಿದ ಹಿನ್ನೆಲೆ ವಾಣಿಜ್ಯ ಕೇಂದ್ರ ಗಾಂಧಿ ಬಜಾರ್ ಸುತ್ತಮುತ್ತ ದಿಢೀರ್ ಬಂದ್ ಮಾಡಲಾಯಿತು. ಕಸ್ತೂರ್ಬಾ ರಸ್ತೆಯಲ್ಲಿ ನಿಲ್ಲಿಸಿದ್ದ ಮಾರುತಿ 800 ಕಾರಿನ ಗಾಜನ್ನು ಕಿಡಿಗೇಡಿಗಳು ಪುಡಿ ಮಾಡಿದ್ದಾರೆ.…

Read More

ಹೋಟೆಲ್ ಮಯೂರ ಡಿಲಕ್ಸ್ ಲಾಡ್ಜಿಂಗ್ ಶುರುಡಿ.2ಕ್ಕೆ ಉದ್ಘಾಟನೆ: ಹೈಟೆಕ್ ಸೌಲಭ್ಯ ತೀರ್ಥಹಳ್ಳಿ: ಮಲೆನಾಡಿನ ಸುಂದರ ತಾಣ ತೀರ್ಥಹಳ್ಳಿಯಲ್ಲಿ ಕಳೆದ 25 ವರ್ಷದಿಂದ ಹೋಟೆಲ್ ಸೇವೆ ನೀಡುತ್ತಿರುವ ಮಯೂರ ಸಂಸ್ಥೆ ಇದೀಗ ಅತ್ಯಾಧುನಿಕ ಲಾಡ್ಜಿಂಗ್ ಸೇವೆ ಡಿ.2ರಿಂದ ಶುರು ಮಾಡಲಿದೆ. ತೀರ್ಥಹಳ್ಳಿಯ ಗಾಂಧಿ ಚೌಕದಲ್ಲಿರುವ ಮಯೂರ ಹೋಟೆಲ್ ಉನ್ನತೀಕರಣ ಮತ್ತು ಡಿಲಕ್ಸ್ ಲಾಡ್ಜಿಂಗ್ ಉದ್ಘಾಟನೆಯನ್ನು ಬೆಳಿಗ್ಗೆ 10-15 ಕ್ಕೆ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯದ ಧರ್ಮಕರ್ತ ಡಾ.ಭೀಮೇಶ್ವರ ಜೋಷಿ ನೆರವೇರಿಸಲಿದ್ದಾರೆ. ಅತ್ಯಾಧುನಿಕ, ಗ್ರಾಹಕ ಸ್ನೇಹಿ ಸೌಲಭ್ಯ ನೀಡಲು ಸಂಸ್ಥೆ ಸಿದ್ಧವಾಗಿದೆ. ಮಾಲೀಕರಾದ ರಾಘವೇಂದ್ರ ಕಾರಂತ್ ಮತ್ತು ಕುಟುಂಬ ಸರ್ವರನ್ನು ಆಹ್ವಾನಿಸಿದ್ದಾರೆ. ಎಸಿ, ಲಾಕರ್, ಡ್ರೈವರ್ ರೂಮ್ಸ್, 24/7 ಫುಡ್, ವೈಫೈ, ಲಾಂಡ್ರಿ ಸೇರಿ ಹತ್ತಾರು ಸೌಲಭ್ಯಗಳಿವೆ. ಈ ಮೂಲಕ ಮಲೆನಾಡಿನಲ್ಲೇ ಅತೀ ಹೆಚ್ಚು ಸೌಲಭ್ಯವುಳ್ಳ ಲಾಡ್ಜ್ ಇದಾಗಲಿದೆ. ಸಂಪರ್ಕ ಸಂಖ್ಯೆ : 9448724888, 8951062099, 08181-229095, 08181-295108.ಮಲೆನಾಡಿನ ಎಲ್ಲಾ ಸುದ್ದಿ, ಮಾಹಿತಿಯನ್ನು ರಾಜ್ಯದ ಪ್ರಮುಖ ನ್ಯೂಸ್ ವೆಬ್ಸೈಟ್ www.nammurexpress.com ಕ್ಲಿಕ್ ಮಾಡಿ ಪಡೆಯಿರಿ.

Read More

ಡಿ.22, 27ರಂದು ಚುನಾವಣೆನೀತಿ ಸಂಹಿತೆ ಜಾರಿ: ಎಲ್ಲಾ ಕಡೆ ಕುತೂಹಲ ಬೆಂಗಳೂರು: ರಾಜ್ಯಾದ್ಯಂತ ಇದೀಗ ಗ್ರಾಮ ಪಂಚಾಯತ್ ಚುನಾವಣೆಗೆ ವೇದಿಕೆ ಸಜ್ಜಾಗಿದೆ. ಡಿ.22 ಮತ್ತು ಡಿ.27 2 ಹಂತದಲ್ಲಿ ಚುನಾವಣೆ ನಡೆಯಲಿದೆ.ರಾಜ್ಯದ 6025 ಗ್ರಾಪಂಗಳ ಪೈಕಿ ಬಹುತೇಕ ಪಂಚಾಯತಿಗಳ ಅವಧಿ ಕಳೆದ ಜೂನ್-ಜುಲೈನಲ್ಲಿ ಅಂತ್ಯಗೊಂಡಿತ್ತು. ಕರೋನಾ ಉಲ್ಬಣ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಸಂವಿಧಾನದತ್ತವಾದ ಅಧಿಕಾರ ಬಳಸಿ ’ಅಸಾಧಾರಣ ಸಂದರ್ಭ’ ವೆಂದು ಪರಿಗಣಿಸಿ ಚುನಾವಣೆಯನ್ನು ಮುಂದೂಡಿತ್ತು. ಚುನಾವಣೆಗೆ ಈಗ ಕೊನೆಗೂ ಕಾಲ ಕೂಡಿ ಬಂದಿದೆ. ರಾಜ್ಯ ಚುನಾವಣಾ ಆಯೋಗ ಸೋಮವಾರ ಗ್ರಾಮ ಪಂಚಾಯತಿ ಚುನಾಣೆಯ ದಿನಾಂಕವನ್ನು ಘೋಷಿಸಿದೆ. ಇದೇ ಡಿಸೆಂಬರ್ 22 ಮತ್ತು 27ರಂದು ಕರ್ನಾಟಕದಲ್ಲಿ ಎರಡು ಹಂತದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ಎಂದು ಅಧಿಕೃತವಾಗಿ ಘೋಷಿಸಿದೆ. ಈಗಾಗಲೇ ಮೀಸಲಾತಿ ಪ್ರಕಟಗೊಂಡಿದೆ. ಎಲ್ಲಾ ಕಡೆ ರಾಜಕೀಯ ಜೋರಾಗಿದೆ. ಡಿಸೆಂಬರ್ 7ರಂದು ಗ್ರಾಮ ಪಂಚಾಯಿತಿ ಚುನಾವಣೆಗೆ ಅಧಿಸೂಚನೆಯನ್ನು ಹೊರಡಿಸುವುದಾಗಿ ಚುನಾವಣಾ ಆಯೋಗ ಹೇಳಿದೆ. ಮೊದಲ ಹಂತದಲ್ಲಿ ರಾಜ್ಯದ…

Read More

ಒಂದು ಕಡೆ ಚಳಿ, ಇತ್ತ ತಂಡಿ ತಂಡಿ ಬೆಂಗಳೂರು: ನಿವಾರ್ ಚಂಡ ಮಾರುತದ ಎಫೆಕ್ಟ್ ರಾಜ್ಯದಲ್ಲಿ ಮಳೆ ಆತಂಕ ತಂದಿಟ್ಟಿದೆ. ದಿನೇ ದಿನೇ ತಂಪು ವಾತಾವರಣ ಹೆಚ್ಚಾಗುತ್ತಿದೆ. ಡಿಸೆಂಬರ್ ಮೊದಲ ವಾರದಲ್ಲಿ ರಾಜ್ಯದಲ್ಲಿ ಮತ್ತೆ ಮಳೆಯಾಗುವ ಸಂಭವವಿದೆ.ಕಳೆದ ಮೂರ್ನಾಲ್ಕು ದಿನಗಳಿಂದಲೂ ಚಂಡ ಮಾರುತದ ಪರಿಣಾಮದಿಂದ ರಾಜ್ಯದಲ್ಲಿ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಹಗುರ ಮತ್ತು ಸಾಧಾರಣ ಪ್ರಮಾಣದ ಮಳೆಯಾಗಿದೆ. ಬಂಗಾಳಕೊಲ್ಲಿಯಲ್ಲಿ ದುರ್ಬಲಗೊಂಡಿದ್ದ ನಿವಾರ್ ಚಂಡಮಾರುತ ಮತ್ತೆ ಬಲಗೊಳ್ಳುತ್ತಿದ್ದು, ಡಿ.1ರಿಂದ ಮತ್ತೆ ಮೂರ್ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗಬಹುದು. ಅಡಿಕೆ, ರಾಗಿ, ಭತ್ತ, ಜೋಳ ಮತ್ತಿತರ ಬೆಳೆಗಳಿಗೆ ತೊಂದರೆಯಾಗಿದೆ. ಡಿಸೆಂಬರ್ ಮೊದಲೆರಡು ವಾರದಲ್ಲಿ ಚಳಿಯ ಪ್ರಮಾಣವೂ ಹೆಚ್ಚಾಗುವ ಸಾಧ್ಯತೆ ಇದೆ.

Read More

ಬಿಎಸ್ವೈ ಆಪ್ತ ಸಂತೋಷ್ ಆತ್ಮಹತ್ಯೆ ಯತ್ನ: ವೀಡಿಯೋ ಕಾರಣ ಎಂದ ಕಾಂಗ್ರೆಸ್ ಬೆಂಗಳೂರು: ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಆತ್ಮಹತ್ಯೆಗೆ ಯತ್ನಿಸಿರುವ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ಆತ್ಮಹತ್ಯೆ ಯತ್ನ ಏಕೆ? ಏನು ಎಂಬ ಕುತೂಹಲ ಮೂಡಿರುವ ನಡುವೆ ಬಿಜೆಪಿ ನಾಯಕರ ವೀಡಿಯೋ ಈ ಘಟನೆಗೆ ಕಾರಣ ಎಂದು ಕಾಂಗ್ರೆಸ್ ಬಾಂಬ್ ಹಾಕಿದೆ. ಸಂತೋಷ್ ಅವರು ತೀವ್ರ ರಾಜಕೀಯ ಒತ್ತಡದಲ್ಲಿದ್ದರು ಎಂದು ಕಾಂಗ್ರೆಸ್ ಆರೋಪ ಮಾಡಿದ್ದು ಈ ಬಗ್ಗೆ ವಿಸ್ತೃತ ತನಿಖೆಯಾಗಬೇಕೆಂದು ಒತ್ತಾಯಿಸಿದೆ. ಸಂತೋಷ್ ಅವರು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಈ ನಡುವೆ ಸಿಎಂ ಯಡಿಯೂರಪ್ಪ ಆಸ್ಪತ್ರೆಗೆ ಭೇಟಿ ನೀಡಿ ಸಂತೋಷ್ ಅವರ ಆರೋಗ್ಯ ವಿಚಾರಿಸಿದ್ದಾರೆ. ವೀಡಿಯೋವೊಂದಕ್ಕೆ ಸಂಬಂಧಪಟ್ಟಂತೆ ಸಂತೋಷ್ ವಿರುದ್ಧ ದೂರು ನೀಡಲಾಗಿತ್ತು, ಈ ಹಿನ್ನೆಲೆಯಲ್ಲಿ ತೀವ್ರ ಒತ್ತಡದಿಂದ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ, ಅವರ ಆತ್ಮಹತ್ಯೆ ಯತ್ನದ ಬಗ್ಗೆ ತನಿಖೆಯಾಗಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ. ಪತ್ನಿ ಹೇಳಿದ್ದೇನು?: ಸಂತೋಷ್ ಅವರು ಕಳೆದ ಒಂದು ವರ್ಷದಿಂದ ತೀವ್ರ ರಾಜಕೀಯ ಒತ್ತಡದಲ್ಲಿದ್ದರು. ಪೆÇಲೀಸರು ಕೇಸು…

Read More

ನಾಗಾರ್ಜುನ ಜತೆ ಸುದೀಪ್ ಜುಗಲ್‍ಬಂದಿ ಬೆಂಗಳೂರು: ಕನ್ನಡ ಬಿಗ್ ಬಾಸ್ ಸೂತ್ರದಾರ ಕಿಚ್ಚ ಸುದೀಪ್ ಇದೀಗ ತೆಲಗು ಬಿಗ್ ಬಾಸ್‍ನಲ್ಲೂ ಕಾಣಿಸಿಕೊಂಡಿದ್ದಾರೆ.ತೆಲುಗು ಬಿಸ್ ಬಾಸ್ ಕಾರ್ಯಕ್ರಮಕ್ಕೆ ಒಂದು ದಿನದ ಅತಿಥಿಯಾಗಿ ಹೋಗಿ ಬಂದಿದ್ದಾರೆ. ಈ ಮೂಲಕ ಬಿಗ್ ಬಾಸ್ ಸದ್ದು ಮಾಡಿದೆ. ತೆಲುಗು ಬಿಸ್ ಬಾಸ್ ಶೋ ಅನ್ನು ಹಿರಿಯ ನಟ ನಾಗಾರ್ಜುನ ನಡೆಸಿಕೊಡುತ್ತಾರೆ. ತೆಲುಗು ಬಿಗ್ ಬಾಸ್ ಸ್ಪರ್ಧಿಗಳ ಜೊತೆ ಕಳೆದ ಕ್ಷಣ ತಮಾಷೆಯಾಗಿತ್ತು. ಜೊತೆಗೆ ನಾಗಾರ್ಜುನ ಅವರ ನಿರೂಪಣಾ ಶೈಲಿ ಚೆನ್ನಾಗಿದೆ ಎಂದು ಸುದೀಪ್ ಟ್ವಿಟ್ಟರ್‍ನಲ್ಲಿ ಬರೆದುಕೊಂಡಿದ್ದಾರೆ. ಅಂದ ಹಾಗೆ ಸ್ಟಾರ್ ಮಾ ಚಾನೆಲ್‍ನಲ್ಲಿ ಈ ಕಾರ್ಯಕ್ರಮ ಪ್ರಸಾರವಾಗಿದೆ.

Read More

ರಾಜ್ಯ ರಾಜಕೀಯದಲ್ಲಿ ಸಂಚಲನ: ಸಚಿವ ಸ್ಥಾನಕ್ಕೆ ಪಟ್ಟು ಬೆಂಗಳೂರು: ಆಪರೇಷನ್ ಕಮಲದ ಮೂಲಕ ಬಿಜೆಪಿಗೆ ವಲಸೆ ಬಂದ ಮುಂಬೈ ಶಾಸಕರ ಟೀ ಮತ್ತೆ ಸಭೆ ಸೇರಿ ಎಲ್ಲರಿಗೂ ಸಚಿವ ಸ್ಥಾನ ನೀಡಬೇಕೆಂಬ ಒಗ್ಗಟ್ಟಿನ ಸಂದೇಶ ರವಾನಿಸಿದ್ದಾರೆ ಎಂದು ಹೇಳಲಾಗಿದೆ. ಖಾಸಗಿ ಹೋಟೆಲ್‍ವೊಂದರಲ್ಲಿ ಶುಕ್ರವಾರ ರಾತ್ರಿ ಈ ಸಭೆ ನಡೆದಿದ್ದು, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಊಟದ ಪಾರ್ಟಿ ಮಾಡಿದ್ದರು. ದೆಹಲಿ ಪ್ರವಾಸದಲ್ಲಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಬೆಳಗಾವಿಯಲ್ಲಿರುವ ಶ್ರೀಮಂತ ಪಾಟೀಲ್ ಹಾಗೂ ಮಹೇಶ್ ಕುಮಠಳ್ಳಿ ಹೊರತುಪಡಿಸಿ ಉಳಿದ 13 ಮಂದಿಗೆ ಬುಲಾವ್ ಇತ್ತು. ಸಚಿವರಾದ ಆನಂದ್ ಸಿಂಗ್, ಕೆ.ಗೋಪಾಲಯ್ಯ, ನಾರಾಯಣಗೌಡ, ಶಿವರಾಂ ಹೆಬ್ಬಾರ್, ಬೈರತಿ ಬಸವರಾಜ, ಹಾಗೂ ಶಾಸಕರಾದ ಎಂ.ಟಿ.ಬಿ.ನಾಗರಾಜ್, ಆರ್.ಶಂಕರ್ ಅವರು ಭಾಗವಹಿಸಿದ್ದರು. ಇದೇ ವೇಳೆ ಮಹತ್ವದ ಮಾತುಕತೆ ನಡೆದಿದೆ ಎನ್ನಲಾಗಿದೆ. ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರನ್ನು ಕರೆದು ಬುದ್ಧಿ ಮಾತು ಹೇಳದಿದ್ದರೆ ಉತ್ತರ ಕೊಡಬೇಕಾಗುತ್ತದೆ ಎಂದು ರೆಬೆಲ್ ಶಾಸಕರು ಗುಟುರು ಹಾಕಿದ್ದಾರೆ ಎನ್ನಲಾಗಿದೆ. ಬಿಜೆಪಿಗೆ ಬಂದ…

Read More