Author: Nammur Express Admin

ಚಿಕ್ಕಮಗಳೂರು ನಗರದಲ್ಲಿ ನಡೆದ ಘಟನೆಮದುವೆಗೆ ಹೋಗಿ ಬರುವಾಗ ಚಿನ್ನ ಇಲ್ಲ ಚಿಕ್ಕಮಗಳೂರು: ಮಲೆನಾಡಿನಲ್ಲಿ ಕಳ್ಳತನ, ದರೋಡೆ ದಿನೇ ದಿನೇ ಹೆಚ್ಚಾಗುತ್ತಿದೆ. ಈ ನಡುವೆ ಕಾಫಿ ಜಿಲ್ಲೆ ಚಿಕ್ಕಮಗಳೂರು ನಗರದಲ್ಲಿ ಮಗಳ ಮದುವೆ ಮುಗಿಸಿ ಬರುವಷ್ಟರಲ್ಲಿ ಮನೆಯಲ್ಲಿದ್ದ ಸುಮಾರು 2 ಕೆ.ಜಿ ಗೂ ಅಧಿಕ ಚಿನ್ನಾಭರಣ ಹಾಗೂ 10 ಕೆ.ಜಿಗೂ ಅಧಿಕ ಬೆಳ್ಳಿ ವಸ್ತುಗಳು ಕಳ್ಳತನವಾಗಿದೆ. ಇದರ ಮೌಲ್ಯ 2.5 ಕೋಟಿ ಮೌಲ್ಯದ ಚಿನ್ನಾಭರಣ ದರೋಡೆಯಾಗಿದೆ ಎಂದು ಹೇಳಲಾಗಿದೆ.ಚಿಕ್ಕಮಗಳೂರು ನಗರದ ಎಂ.ಜಿ.ರಸ್ತೆಯ ಸ್ವಣಾರ್ಂಜಲಿ ಜ್ಯುವೆಲರಿ ಶಾಪ್ ಮಾಲೀಕ ಸುರೇಶ್ ಮನೆಯಲ್ಲಿ ಕಳ್ಳವಾಗಿದೆ. ಇವರು ಕರೋನಾ ಕಾರಣದಿಂದ ವ್ಯಾಪಾರದಲ್ಲಿ ನಷ್ಟವಾಗಿ ಅಂಗಡಿಯಲ್ಲಿದ್ದ ಚಿನ್ನವನ್ನು ಮನೆಗೆ ತಂದಿಟ್ಟಿದ್ದರು. ಅಕ್ಟೋಬರ್ 27ರಂದು ಹಾಸನದಲ್ಲಿ ಮಗಳ ಮದುವೆ ಇತ್ತು. ಕುಟುಂಬಸ್ಥರೆಲ್ಲಾ ಮದುವೆಗೆ ಹೋಗಿ ಬರುವಷ್ಟರಲ್ಲಿ ಮನೆಯಲ್ಲಿದ್ದ ಚಿನ್ನ-ಬೆಳ್ಳಿಯನ್ನು ಕಳ್ಳತನ ಮಾಡಲಾಗಿದೆ ಎಂದು ದೂರು ನೀಡಿದ್ದಾರೆ. ಮನೆಯ ಹಿಂಭಾಗದ ರಾಜಕಾಲುವೆಯ ಕಡೆಯಿಂದ ಮನೆಯಿಂದ ಮನೆಗೆ ಹತ್ತಿ ರಮೇಶ್ ಅವರ ಬಾಲ್ಕನಿಗೆ ಕಳ್ಳರು ಮನೆಯ ಮೇಲಿನ ಬಾಗಿಲು ಮುರಿದು ಒಳ ಪ್ರವೇಶಿಸಿ…

Read More

ಬೆಳಕಿನ ಹಬ್ಬಕ್ಕಿಲ್ಲ “ಪಟಾಕಿ ರಂಗು” ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿಗೆ ಈ ಬಾರಿ ಪಟಾಕಿ ರಂಗು ಇಲ್ಲ. ಕರೋನಾ ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪಟಾಕಿ ನಿಷೇಧಕ್ಕೆ ಸರ್ಕಾರ ಚಿಂತಿಸಿದೆ.ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಯಡಿಯೂರಪ್ಪ ಅವರು, ದೀಪಾವಳಿಗೆ ಯಾವುದೇ ರೀತಿಯ ಪಟಾಕಿಗೆ ಅವಕಾಶ ಇಲ್ಲ. ಕರೋನಾ ಹೆಚ್ಚಾಗುತ್ತಿರುವುದರಿಂದ ಪಟಾಕಿ ನಿಷೇಧಕ್ಕೆ ನಿರ್ಧಾರ ಮಾಡಲಾಗಿದೆ. ಅಲ್ಲದೆ ಪಟಾಕಿ ನಿಷೇಧಿಸಿ ಸರ್ಕಾರದಿಂದ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಈ ಮೂಲಕ ಈ ಬಾರಿ ಪಟಾಕಿ ರಂಗು ಮರೆಯಾಗಲಿದೆ. ಜನರ ಹಣ ಉಳಿಯಲಿದೆ.

Read More

ಸಹಕಾರ ಭಾರತಿಗೆ 10, ಸಹಕಾರ ವೇದಿಕೆಗೆ 4 ಸ್ಥಾನ ತೀರ್ಥಹಳ್ಳಿ: ತೀರ್ಥಹಳ್ಳಿ ಟಿಎಪಿಸಿಎಂಎಸ್ ಕೊನೆಗೂ ನಾಗರಾಜ ಶೆಟ್ಟರ ನಾಯಕತ್ವದ ಸಹಕಾರಿ ಭಾರತಿ ಪಾಲಾಗಿದೆ.ನ.5ರಂದು ನಡೆದ ಚುನಾವಣೆ ಬೆಳೆಗ್ಗೆಯಿಂದಲೇ ಚುರುಕು ಪಡೆದಿತ್ತು. ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಶಾಸಕ ಆರಗ ಜ್ಞಾನೇಂದ್ರ, ಸಹಕಾರಿ ನಾಯಕ ಮಂಜುನಾಥ ಗೌಡ ಸೇರಿ ಎಲ್ಲಾ ತಾಲೂಕಿನ ನಾಯಕರ ನಡುವೆ ನಡೆದ ಚುನಾವಣೆಯಲ್ಲಿ ಸಹಕಾರಿ ಭಾರತಿ ಚುಕ್ಕಾಣಿ ಹಿಡಿದಿದೆ. ಸಹಕಾರ ಭಾರತಿ ತಂಡ ಒಟ್ಟು ಒಂಬತ್ತು ಸ್ಥಾನಗಳನ್ನು ತನ್ನದಾಗಿಸಿಕೊಂಡು ಅಧಿಕಾರದ ಚುಕ್ಕಾಣಿ ಹಿಡಿದಿದೆ ಗೆಲುವಿನ ಜಯಭೇರಿ ಬಾರಿಸಿದೆ.ಚುನಾವಣೆ ನಡೆದ ಎಂಟು ಸ್ಥಾನಗಳಲ್ಲಿ ಸ್ಥಾನದಲ್ಲಿ ಷೇರುದಾರರ ಮತದಾನದಿಂದ ಆರು ಮಂದಿ ಸಹಕಾರ ಭಾರತಿ ಸದಸ್ಯರು ಆಯ್ಕೆಯಾಗಿದ್ದಾರೆ. ಸೊಸೈಟಿ ಮೂಲಕ ಇಬ್ಬರು ಮತ್ತು ಒಬ್ಬರು ಅವಿರೋಧ ಆಯ್ಕೆಯಾಗಿದ್ದಾರೆ. ವಿಜಯದೇವ್ ನಾಯಕತ್ವದ ಸಹಕಾರ ವೇದಿಕೆ ಎರಡು ಸ್ಥಾನ ಷೇರುದಾರರಿಂದ ಮತ್ತು 2 ಸ್ಥಾನ ಸೊಸೈಟಿ ಕಡೆಯಿಂದ ಪಡೆದಿದೆ.ಸೊಸೈಟಿಯ ಮತದಾನದ ಮೂಲಕ ಎಂಟು ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರುಗಳು ಸಹಕಾರ ಭಾರತಿ…

Read More

ಆಂಧ್ರ ಬಳಿಕ ತಮಿಳುನಾಡು ಸರ್ಕಾರ ನಿಷೇಧದೇಶದ ತಾರೆಗಳೇ ಈ ಜೂಜಿನ ರಾಯಭಾರಿಗಳು! ಚೆನ್ನೈ: ಕರೋನಾ ಇಡೀ ದೇಶದ ಅರ್ಥಿಕ ವ್ಯವಸ್ಥೆಯನ್ನು ಬುಡಮೇಲು ಮಾಡಿದೆ. ಪ್ರತಿ ಊರಲ್ಲೂ ಯುವ ಜನತೆ ಉದ್ಯೋಗ ಕಳೆದುಕೊಂಡಿದ್ದಾರೆ. ಆದರೆ ಆನ್‍ಲೈನ್ ಗೇಮ್‍ಗಳು ಯುವ ಜನತೆಯ ಬದುಕು ಹಾಳು ಮಾಡುತ್ತಿದೆ. ಹೀಗಾಗಿ ಅನೇಕ ರಾಜ್ಯಗಳು ಆನ್‍ಲೈನ್ ಗೇಮ್ ನಿಷೇಧ ಮಾಡಿವೆ. ಈಗ ತಮಿಳುನಾಡು ಸರ್ಕಾರ ಈಗ ಎಲ್ಲಾ ರೀತಿಯ ಆನ್‍ಲೈನ್ ಗೇಮ್‍ಗಳನ್ನು ನಿಷೇಧ ಮಾಡಲು ನಿರ್ಧರಿಸಿದೆ. ದುಡ್ಡು ನೀಡಿ ಆನ್‍ಲೈನ್ ಗೇಮ್, ಫ್ಯಾಂಟಸಿ ಲೀಗ್, ಆಪ್ ಆಧಾರಿತ ಗೇಮಿಂಗ್ ನಿಷೇಧಕ್ಕೆ ತಮಿಳುನಾಡು ಸರ್ಕಾರ ಮುಂದಾಗಿದೆ. ಆನ್ಲೈನ್ ಜೂಜು ಪ್ರಚಾರ ಮಾಡುತ್ತಿರುವ ಈ ಸೆಲೆಬ್ರಿಟಿಗಳಿಂದ ಜನ ಸಾಮಾನ್ಯರಿಗೆ ತೊಂದರೆಯಾಗಿವೆ ಸಾವು ನೋವು ಸಂಭವಿಸಿದೆ ಎಂದು ನಟ ಸುದೀಪ್ ಸೇರಿ ಅನೇಕ ಸೆಲೆಬ್ರಿಟಿಗಳಿಗೆ ಮದ್ರಾಸ್ ಹೈಕೋರ್ಟ್ ನೋಟಿಸ್ ನೀಡಿದೆ. ಹೀಗಾಗಿ ದುಡ್ಡು ಕೊಟ್ಟು ಆಡುವಂಥ ಎಲ್ಲಾ ಬಗೆಯ ಆನ್ ಲೈನ್ ಗೇಮಿಂಗ್ ಮೇಲೆ ನಿಷೇಧ ಹೇರಲು ಸರ್ಕಾರ ಅಗತ್ಯ ಕ್ರಮ ತೆಗೆದುಕೊಳ್ಳಲಾಗುತ್ತದೆ…

Read More

ಮಕ್ಕಳು, ವಯಸ್ಸಾದವರಿಗೆ ತೊಂದರೆ ಹಿನ್ನೆಲೆಪೊಲೀಸ್ ಇಲಾಖೆ ಆದೇಶ ಬೆಂಗಳೂರು: ರಾಜ್ಯಾದ್ಯಂತ ಮಸೀದಿಗಳಲ್ಲಿ ಅಳವಡಿಸಿರುವ ಅನಧಿಕೃತ ಧ್ವನಿವರ್ಧಕಗಳನ್ನು ತೆರವು ಮಾಡುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಆದೇಶ ಮಾಡಿದ್ದಾರೆ. ಈ ಮೂಲಕ ಇನ್ಮುಂದೆ ಮಸೀದಿಗಳಲ್ಲಿ ಧ್ವನಿ ವರ್ಧಕ ಬಳಕೆಗೆ ನಿಷೇಧ ಹೇರಿದಂತಾಗಿದೆ. ಕಳೆದ ತಿಂಗಳು ವಕೀಲರಾದ ಹರ್ಷ ಮುತಾಲಿಕ್, ಮಸೀದಿಯಲ್ಲಿನ ಧ್ವನಿ ವರ್ಧಕಗಳಿಂದ ತೊಂದರೆ ಆಗುತ್ತಿದೆ. ದಿನಕ್ಕೆ ಐದಾರು ಬಾರಿ ಪ್ರಾರ್ಥನೆ ಮಾಡಲಾಗುತ್ತದೆ. ಇದ್ದರಿಂದ ಮಕ್ಕಳಿಗೆ, ವಯಸ್ಸಾದವರಿಗೆ, ಹೃದಯ ಸಂಬಂಧಿ ಖಾಯಿಲೆ ಇರುವವರಿಗೆ ಹೆಚ್ಚಿನ ತೊಂದರೆಯಾಗುತ್ತಿದೆ. ಹಾಗಾಗಿ ಮಸೀದಿಯಲ್ಲಿ ಧ್ವನಿವರ್ಧಕ ಬಳಕೆ ನಿಷೇಧ ಮಾಡಬೇಕು ಎಂದು ದೂರು ನೀಡಿದ್ದರು. ಈ ದೂರಿನ ಹಿನ್ನೆಲೆ ಮಹತ್ವದ ಆದೇಶ ಹೊರ ಬಿದ್ದಿದೆ.

Read More

ಒಂದು ದಿನ ನ್ಯಾಯಾಂಗ ಬಂಧನಹಿಂಡಲಗ ಜೈಲಿಗೆ ರವಾನೆ ಧಾರವಾಡ: ಮಾಜಿ ಸಚಿವ ವಿನಯ್ ಕುಲಕರ್ಣಿ ಕೊನೆಗೂ ಬಂಧನಕ್ಕೆ ಒಳಗಾಗಿದ್ದಾರೆ.ಜಿಲ್ಲಾ ಪಂಚಾಯತ್ ಸದಸ್ಯನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶೆ ಪಂಚಾಕ್ಷರಿ ಈ ಆದೇಶ ಹೊರಡಿಸಿದ್ದು, ಕುಲಕರ್ಣಿ ಹಿಂಡಲಗಾ ಜೈಲು ಸೇರಿದ್ದಾರೆ.ಧಾರವಾಡದ ಎರಡನೇ ಹೆಚ್ಚುವರಿ ಪ್ರಧಾನ ಮತ್ತು ಸತ್ರ‌ ನ್ಯಾಯಾಲಯ ಈ ಆದೇಶ ನೀಡಿದೆ. ಹೀಗಾಗಿ ಧಾರವಾಡದಿಂದ ಬೆಳಗಾವಿಗೆ ಹಿಂಡಲಗಾ ಜೈಲಿಗೆ ಸಿಬಿಐ ಅಧಿಕಾರಿಗಳು ಕರೆದುಕೊಂಡು ಹೋಗಿದ್ದಾರೆ. ಧಾರವಾಡ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಯೋಗೇಶಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ ಕುಲಕರ್ಣಿ, ಸಹೋದರ ವಿಜಯ ಕುಲಕರ್ಣಿ ಸೇರಿದಂತೆ ಮಾಜಿ ಸಚಿವರ ಆಪ್ತನ ಮನೆ ಮೇಲೆ ಸಿಬಿಐ ಅಧಿಕಾರಿಗಳು ಗುರುವಾರ ಬೆಳಗಿನ ಜಾವ ದಾಳಿ ನಡೆಸಿ, ಮೂವರನ್ನು ಸುದೀರ್ಘ ವಿಚಾರಣೆಗೊಳಪಡಿಸಿದ್ದಾರೆ.ಧಾರವಾಡದ ಕಲ್ಯಾಣನಗರದಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಮನೆ ಮೇಲೆ ದಾಳಿ ನಡೆಸಿದ ಸಿಬಿಐ ಅಧಿಕಾರಿಗಳ ತಂಡ, ಉಪನಗರ ಠಾಣೆಯಲ್ಲಿ ವಿಚಾರಣೆಗೊಳಪಡಿಸಿತು. ಏತನ್ಮಧ್ಯೆ, ಸಚಿವರ ಸಹೋದರ ಹುಬ್ಬಳ್ಳಿಯ ಪ್ರಗತಿ ಕಾಲನಿಯಲ್ಲಿರುವ…

Read More

ತರಕಾರಿ, ಹಣ್ಣು, ಅಗತ್ಯ ವಸ್ತು ಬೆಲೆ ಏರಿಕೆಕರೋನಾ ನಡುವೆ ಮತ್ತೆ ಜನತೆಗೆ ಶಾಕ್ ಬೆಂಗಳೂರು: ದೀಪಾವಳಿ ಹಬ್ಬ ಈ ಬಾರಿ ಸಾರ್ವಜನಿಕರಿಗೆ ದುಬಾರಿಯಾಗುವ ಸಾಧ್ಯತೆಗಳಿವೆ. ಕರೋನಾ ನಡುವೆ ಬೆಲೆ ಏರಿಕೆಯ ಬಿಸಿ ಜನ ಸಾಮಾನ್ಯರಿಗೆ ಜೋರಾಗಿಯೇ ತಟ್ಟಿದೆ. ಅಗತ್ಯ ವಸ್ತುಗಳ ಬೆಲೆ ಗಗನಮುಖಿಯಾಗಿದ್ದು ಜನರನ್ನು ಕಂಗಾಲಾಗಿಸಿದೆ.ತರಕಾರಿ, ಬೇಳೆ ಕಾಳುಗಳ ಬೆಲೆ ದುಬಾರಿಯಾಗಿದ್ದು, ದೀಪಾವಳಿ ಹೊಸ್ತಿಲಲ್ಲಿ ಎದುರಾದ ಬೆಲೆ ಏರಿಕೆ ಬಡ ಹಾಗೂ ಮಧ್ಯಮ ವರ್ಗದ ಜನರು ಅಕ್ಷರಶಃ ತತ್ತರಿಸುವಂತೆ ಮಾಡಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತರಕಾರಿ ಬೆಳೆಯಲಾಗುತ್ತದೆ. ಆದರೆ ಈ ಬಾರಿ ಪ್ರವಾಹದಿಂದ ಬೆಳೆ ನೀರು ಪಾಲಾಗಿದೆ. ಇತ್ತ ಕರೋನಾ ಕೂಡ ಜನರ ಹಣಕಾಸಿನ ವ್ಯವಹಾರವನ್ನು ಶೂನ್ಯಕ್ಕಿಳಿಸಿದೆ. ಆದ್ದರಿಂದ ಒಂದು ಕಡೆ ಹಣ ಇಲ್ಲ, ಇನ್ನೊಂದು ಕಡೆ ಬೆಳೆ ಇಲ್ಲ. ಹೀಗಾಗಿ ಈ ಬಾರಿಯ ದೀಪಾವಳಿ ಕೈ ಸುಡಲಿದೆ ಎಂದು ಹೇಳಲಾಗಿದೆ. ಪ್ರವಾಹದಿಂದ ತರಕಾರಿ ಸೇರಿದಂತೆ ಇನ್ನಿತರ ಬೆಳೆ ನೀರು ಪಾಲಾಗಿದೆ. ಪರಿಣಾಮ ತರಕಾರಿ, ಆಹಾರ ಧಾನ್ಯಗಳ ಕೊರತೆ…

Read More

ಖಾಸಗೀಕರಣದ ವಿರುದ್ಧ ಆಕ್ರೋಶ ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆಯನ್ನು ಖಾಸಗಿ ಸಹಭಾಗಿತ್ವದ ಹೆಸರಿನಲ್ಲಿ ಖಾಸಗೀಕರಣ ಮಾಡುವುದನ್ನು ನಿಲ್ಲಿಸಬೇಕು. ಕರೋನಾ ಸಂಕಷ್ಟದಲ್ಲಿ ಸಾರಿಗೆ ನೌಕರರಿಗೆ ಪೂರ್ಣ ವೇತನ ಒದಗಿಸಬೇಕು ಮುಂತಾದ ವಿವಿಧ ಬೇಡಿಕೆಗಳನ್ನ ಮುಂದಿಟ್ಟು ರಾಜ್ಯ ಸಾರಿಗೆ ನೌಕರರು ಗುರುವಾರ ಪ್ರತಿಭಟನೆ ಶುರು ಮಾಡಿದ್ದಾರೆ.ಸಿಐಟಿಯು ಕಾರ್ಮಿಕ ಸಂಘಟನೆಯ ವತಿಯಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಒಕ್ಕೂಟ ನೇತೃತ್ವದಲ್ಲಿ 4 ಸಾರಿಗೆ ನಿಗಮಗಳ ಕಾರ್ಮಿಕರು ಗುರುವಾರ ಫ್ರೀಡಂ ಪಾರ್ಕ್‍ನಲ್ಲಿ ಬೆಳಗ್ಗೆ 11:30 ಗಂಟೆಗೆ ಪ್ರತಿಭಟನೆ ಪ್ರಾರಂಭವಾಗಿದ್ದು, ಸರ್ಕಾರಕ್ಕೆ ಮತ್ತು ಆಡಳಿತ ವರ್ಗಕ್ಕೆ ಮನವಿ ಪತ್ರ ಸಲ್ಲಿಸಿದ್ದಾರೆ. ಸಾರಿಗೆ ನಿಗಮಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಸರಿಯಾದ ಸುರಕ್ಷತಾ ಸಾಮಗ್ರಿಗಳನ್ನ ಒದಗಿಸಿಲ್ಲ. 50ಕ್ಕೂ ಹೆಚ್ಚು ಕಾರ್ಮಿಕರು ಕೊರೋನಾಗೆ ಬಲಿಯಾಗಿದ್ದಾರೆ. ಮೃತರ ಕುಟುಂಬಗಳಿಗೆ ಸರ್ಕಾರವೇ 30 ಲಕ್ಷ ರೂ ಪರಿಹಾರ ಘೋಷಿಸಿದರೂ ನಿಗಮಗಳಿಂದ ಈ ಆದೇಶ ಜಾರಿ ಆಗಿಲ್ಲ. ಕೂಡಲೇ ಪರಿಹಾರ ಒದಗಿಸುವ ವ್ಯವಸ್ಥೆ ಮಾಡಬೇಕ. ನಿಗಮಗಳಲ್ಲಿ ವಾಹನಗಳ ಕಾರ್ಯಾಚರಣೆ ಯಥಾಸ್ಥಿತಿಗೆ ಬರುವವರೆಗೂ ಕಾರ್ಮಿಕರಿಗೆ ಪೂರ್ಣ…

Read More

ಜಿಪಂ ಸದಸ್ಯನ ಕೊಲೆ ಪ್ರಕರಣದ ತನಿಖೆಸಿಬಿಐ ಅಧಿಕಾರಿಗಳಿಂದ ನಾಯಕನ ವಿಚಾರಣೆ ಹುಬ್ಬಳ್ಳಿ: ರಾಜ್ಯದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತು ಅವರ ಸಹೋದರನ ಸಿಬಿಐ ವಿಚಾರಣೆ ಭಾರೀ ಕುತೂಹಲ ಮೂಡಿಸಿದೆ. ಜೊತೆಗೆ ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ಒಂದೆಡೆ ವಿಚಾರಣೆ ನಡೆಯುತ್ತಿದ್ದರೆ ಇನ್ನೊಂದೆಡೆ ಹೊರಗೆ ಪ್ರತಿಭಟನೆ ನಡೆಯುತ್ತಿದೆ. ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಮಾತನಾಡಿ, ಸಿಬಿಐ ರಾಜಕೀಯ ದಾಳವಾಗಬಾರದು ಎಂದು ಪ್ರತಿಕ್ರಿಯಿಸಿದ್ದಾರೆ. ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐ ಅಧಿಕಾರಿಗಳು ಗುರುವಾರ ಬೆಳಗ್ಗೆ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಧಾರವಾಡದ ಬರಾಕೂಟ್ರಿಯಲ್ಲಿರುವ ನಿವಾಸದಲ್ಲಿ ವಿನಯ್ ಕುಲಕರ್ಣಿ ಅವರನ್ನು ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿ ಅವರನ್ನು ಕೂಡ ವಶಕ್ಕೆ ಪಡೆದಿದ್ದಾರೆ. ಈ ವಿಷಯ ರಾಜ್ಯ ಮಟ್ಟದಲ್ಲಿ ಭಾರೀ ಸುದ್ದಿ ಮಾಡಿದೆ. ಸಿಬಿಐ ಅಧಿಕಾರಿ ರಾಕೇಶ್ ರಂಜನ್ ನೇತೃತ್ವದ ತಂಡ ವಶಕ್ಕೆ ಪಡೆದುಕೊಂಡಿದ್ದು,…

Read More

ಕಾಫಿ ಬೆಳೆಗಾರರಿಗೆ ಹಣ ಕೊಡದ ಆರೋಪಚಿಕ್ಕಮಗಳೂರು, ಹಾಸನ ರೈತರಿಂದ ದೂರು ಬೆಂಗಳೂರು: ಕಾಫಿ ಡೇ ಮಾಲಿಕ ಸಿದ್ಧಾರ್ಥ ಸಾವಿನ ಬಳಿಕ ಗೊಂದಲದ ಗೂಡಾಗಿರುವ ಕಾಫಿ ಡೇ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದೆ. ಕಾಫಿ ಡೇ ಕಂಪನಿಗೆ ಕಾಫಿ ಬೀಜಗಳನ್ನು ಮಾರಾಟ ಮಾಡಿದ ಕಾಫಿ ಬೆಳೆಗಾರರಿಗೆ ಕಂಪನಿ ಕೊಟ್ಟ ಚೆಕ್‍ಗಳು ಬೌನ್ಸ್ ಆಗಿದೆ. ಸುಮಾರು 300ಕ್ಕೂ ಅಧಿಕ ಕಾಫಿ ಬೆಳೆಗಾರರಿಗೆ 100 ಕೋಟಿಗೂ ಅಧಿಕ ಹಣ ಬಾಕಿ ಇದೆ. ಹೀಗಾಗಿ ಕಾಫಿ ಬೆಳೆಗಾರರು ಇದೀಗ ಕೋರ್ಟ್ ಕಟಕಟೆ ಏರಿದ್ದಾರೆ. ಸಾವಿರಾರು ಜನತೆಗೆ ಉದ್ಯೋಗ ಬದುಕು ಕೊಟ್ಟು ಕಾಫಿ ಕಿಂಗ್, ಬ್ಯುಸಿನೆಸ್ ಐಕಾನ್ ಆಗಿದ್ದ ಸಿದ್ಧಾರ್ಥ ಕನಸಿನ ಕಂಪನಿ ಇದೀಗ ಮತ್ತಷ್ಟು ಸಮಸ್ಯೆಗೆ ಬಂದು ನಿಂತಿದೆ.ಕಾಫಿ ಸಾಮ್ರಾಜ್ಯವನ್ನೇ ಕಟ್ಟಿದ ಉದ್ಯಮಿ ಸಿದ್ಧಾರ್ಥ್ ಕುಟುಂಬ ಈಗ ಸಂಕಷ್ಟದಲ್ಲಿ ಸಿಲುಕಿದೆ. ಪತ್ನಿ ಮಾಳವಿಕಾ ಮೇಲೆ ಚೆಕ್ ಬೌನ್ಸ್ ಕೇಸ್ ದಾಖಲಾಗಿದೆ. ಗ್ರಾಮೀಣ ಭಾಗದ ಸಾವಿರಾರು ಯುವಕ, ಯುವತಿಯರಿಗೆ ತರಬೇತಿ ನೀಡಿ ಉದ್ಯೋಗ ಕೊಟ್ಟ ಸಿದ್ಧಾರ್ಥ ಹೆಗ್ಡೆ ಕುಟುಂಬ ಈಗ…

Read More