ಇನ್ನು ವಿವಾಹ ನೋಂದಣಿ ಆನ್‌ಲೈನ್ ಅಲ್ಲೂ ಆಗುತ್ತೆ! * ಉಪ ನೋಂದಣಾಧಿಕಾರಿಗಳ ಕಚೇರಿಗೆ ಅಲೆದಾಟ ತಪ್ಪಿಸಲು ಕ್ರಮ * ಬಾಪೂಜಿ ಸೇವಾ ಕೇಂದ್ರ ಹಾಗೂ ಗ್ರಾಮ-1 ಕೇಂದ್ರಗಳಲ್ಲಿ ಸೇವೆ NAMMUR EXPRESS NEWS ಬೆಂಗಳೂರು :ಈವರೆಗೆ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ಮಾತ್ರ ವಿವಾಹ ನೋಂದಣಿಯನ್ನು ಕೈಗೊಳ್ಳಲಾಗುತ್ತಿದ್ದ ವಿವಾಹ ನೋಂದಣಿಯನ್ನು ರಾಜ್ಯ ಸರ್ಕಾರ ಇನ್ನಷ್ಟು ಸುಗಮಗೊಳಿಸಿದೆ. ಉಪ ನೋಂದಣಾಧಿಕಾರಿಗಳ ಕಚೇರಿಗೆ ಅಲೆದಾಟ ತಪ್ಪಿಸಲು ಕ್ರಮ ಕೈಗೊಂಡಿದೆ. ವಿವಾಹ ನೋಂದಣಿಯನ್ನು ಜನ ಸ್ನೇಹಿಯಾಗಿಸಲು ಕಾವೇರಿ 2.0 ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ನೋಂದಣಿ ಮಾಡಲು ಮತ್ತು ಗ್ರಾಮ ಪಂಚಾಯಿತಿಗೆ ಬಾಪೂಜಿ ಸೇವಾ ಕೇಂದ್ರ ಹಾಗೂ ಗ್ರಾಮ-1 ಕೇಂದ್ರಗಳಲ್ಲಿಯೂ ಸಹ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ಕಲ್ಪಿಸಿದೆ. ಬಳಕೆದಾರರ ಖಾತೆ ಸೃಜಿಸಿ ಕಾವೇರಿ ಪೋರ್ಟಲ್‌ಗೆ ಲಾಗಿನ್ ಮಾಡಿ, ವಿವಾಹ ನೋಂದಣಿ ಸೇವೆಗೆ ಭೇಟಿ ನೀಡಿ ವಿವರ ನಮೂದಿಸಿ ಅರ್ಜಿ ಸಲ್ಲಿಸಬಹುದಾಗಿದೆ. * ಅರ್ಜಿ ಸಲ್ಲಿಸಿ ಅರ್ಜಿ ಸಲ್ಲಿಸುವ ಹಂತಗಳು ಯಾವುವು?? https://kaveri.karnataka.gov.in ಭೇಟಿ ನೀಡಿ ಬಳಕೆದಾರರ ಖಾತೆ ಸೃಜಿಸಬೇಕು,ಕಾವೇರಿ…
Author: Nammur Express Admin
ಈ ದಿನದ ರಾಶಿ ಭವಿಷ್ಯ ಹೇಗಿದೆ? – ಯಾವ ರಾಶಿಯವರಿಗೆ ಒಳಿತು ? ಯಾವ ರಾಶಿಯವರಿಗೆ ಕೆಡುಕು ? NAMMUR EXPRESS NEWS ಗ್ರಹಗಳ ಸ್ಥಾನ ಬದಲಾವಣೆಯಿಂದ ಮೇಷದಿಂದ ಮೀನ ರಾಶಿವರೆಗಿನ ಎಲ್ಲಾ ರಾಶಿಯವರಿಗೆ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಯಾವ ರಾಶಿಯವರಿಗೆ ಅದೃಷ್ಟ? ಯಾವ ರಾಶಿಯವರು ಎಚ್ಚರದಿಂದಿರಬೇಕು? ** ಮೇಷ ರಾಶಿ : ಇಂದು ನಿಮಗೆ ಕೆಲಸದಲ್ಲಿ ಅಡೆತಡೆಗಳು ಎದುರಾಗಲಿವೆ. ಆದರೆ ನಿಮ್ಮ ಬುದ್ಧಿವಂತಿಕೆಯಿಂದ ಆರ್ಥಿಕ ಪರಿಸ್ಥಿತಿ ಸುಧಾರಿಸುವಲ್ಲಿ ಯಶಸ್ವಿಯಾಗುತ್ತೀರಿ. ಕೆಲಸವು ದೀರ್ಘಕಾಲದವರೆಗೆ ಸ್ಥಗಿತಗೊಳ್ಳುವ ಸಾಧ್ಯತೆಯಿದೆ. ನಿಮ್ಮ ಸೋಮಾರಿತನವನ್ನು ದೂರ ಮಾಡಿ. ವ್ಯಾಪಾರಕ್ಕೆ ಸಂಬಂಧಿಸಿದ ಜನರು ಏರಿಳಿತಗಳನ್ನು ಎದುರಿಸಬೇಕಾಗುತ್ತದೆ ಹಾಗಾಗಿ ತಾಳ್ಮೆಯಿಂದಿರಿ. ನಿಮ್ಮ ಕೋಪವನ್ನು ನಿಯಂತ್ರಿಸಿ. ಆರೋಗ್ಯ ನೋಡಿಕೊಳ್ಳಿ. ** ವೃಷಭ ರಾಶಿ : ಈ ದಿನವು ನಿಮಗೆ ಅದೃಷ್ಟ-ಪ್ರಗತಿಯನ್ನು ತರುತ್ತದೆ. ಕೆಲಸದಲ್ಲಿ ಪ್ರಗತಿ ಸಾಧಿಸುವಲ್ಲಿ ನೀವು ಯಶಸ್ವಿಯಾಗುತ್ತೀರಿ. ಪ್ರಶಂಸೆ ಮತ್ತು ಗೌರವವನ್ನು ಪಡೆಯುತ್ತೀರಿ. ಕೆಲಸದ ಕಡೆ ಹೆಚ್ಚಿನ ಗಮನ ನೀಡುವ ಅವಶ್ಯಕತೆಯಿದೆ. ನಿಮ್ಮ ತಾಳ್ಮೆಯನ್ನು ಯಾವುದೇ ರೀತಿಯಲ್ಲಿ ಕುಗ್ಗಲು…
ಡಿಸಿಸಿ ಬ್ಯಾಂಕಲ್ಲಿ ಹೆಚ್.ಬಿ.ಮಂಜುನಾಥ್ ಹ್ಯಾಟ್ರಿಕ್! – ಡಿ.ಸಿ.ಸಿ. ಬ್ಯಾಂಕ್ ಉಪಾಧ್ಯಕ್ಷರಾಗಿ ಸತತ 3ನೇ ಬಾರಿಗೆ ಆಯ್ಕೆ – ಹೊಸದುರ್ಗದ ಶ್ರೀ ಜಗದ್ಗುರು ಕುಂಚಿಟಿಗ ಮಠಕ್ಕೆ ಭೇಟಿ – ಹೊಸದುರ್ಗ ವಸತಿ ಶಾಲೆಗಳ ಪ್ರಾಂಶುಪಾಲರ ವತಿಯಿಂದ ಶಿಕ್ಷಕರ ದಿನಾಚರಣೆ NAMMUR EXPRESS NEWS ಹೊಸದುರ್ಗ: ಚಿತ್ರದುರ್ಗ ಜಿಲ್ಲಾ ಡಿ.ಸಿ.ಸಿ. ಬ್ಯಾಂಕ್ ನೂತನ ಉಪಾಧ್ಯಕ್ಷರಾಗಿ ಸತತ ಮೂರನೇ ಬಾರಿಗೆ ಆಯ್ಕೆಯಾಗಿರುವ ಹೆಚ್ ಬಿ ಮಂಜುನಾಥ್ ರವರು ಹೊಸದುರ್ಗದ ಶ್ರೀ ಜಗದ್ಗುರು ಕುಂಚಿಟಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಶಾಂತವೀರ ಮಹಾಸ್ವಾಮೀಜಿ ಆಶೀರ್ವಾದ ಪಡೆದರು. ಹೊಸದುರ್ಗ ವಸತಿ ಶಾಲೆಗಳ ಪ್ರಾಂಶುಪಾಲರ ವತಿಯಿಂದ ಶಿಕ್ಷಕರ ದಿನಾಚರಣೆ ಹೊಸದುರ್ಗ ತಾಲ್ಲೂಕು ವಸತಿ ಶಾಲೆಗಳ ಪ್ರಾಂಶುಪಾಲರ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಪಟ್ಟಣದ ವಿಸ್ಮಯ ರಾಗಿ ತೋಟದಲ್ಲಿ ನಡೆಯಿತು. ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಧನಂಜಯ ಮೆಂಗಸಂದ್ರ, ಪ್ರಾಂಶುಪಾಲರ ಸಂಘದ ಜಿಲ್ಲಾಧ್ಯಕ್ಷ ಶ್ರೀ ಮಹೇಶ ಅಂಗಡಿ ಮಾತನಾಡಿದರು. ಸಾಹಿತಿ ಎಚ್ಎಸ್ ನವೀನ್ ಕುಮಾರ್ ರವರು ಉಪನ್ಯಾಸ ನೀಡಿದರು.…
ಇನ್ನು ಮುಂದೆ ಮರಳು ಮಾಫಿಯಾಕ್ಕೆ ಬ್ರೇಕ್?! – ಅಕ್ರಮ ಗಣಿಗಾರಿಕೆ, ಮರಳು ಸಾಗಾಣಿಕೆ, ತಡೆಗಟ್ಟುವ ಏಕ ರೀತಿಯ ನಿಯಮ ಜಾರಿ – ಇಲಾಖೆ ಭೂವಿಜ್ಞಾನಿಗಳು ಸ್ಥಳಕ್ಕೆ ಭೇಟಿ ನೀಡಿ ಸಕಾಲಿಕ ಕ್ರಮಕ್ಕೆ ಡಿಸಿ ಸೂಚನೆ NAMMUR EXPRESS NEWS ಶಿವಮೊಗ್ಗ: ಅಕ್ರಮ ಗಣಿಗಾರಿಕೆ ಹಾಗೂ ಮರಳು ಸಾಗಾಣಿಕೆ, ದಾಸ್ತಾನು ತಡೆಗಟ್ಟುವ ಕುರಿತು ಶಿವಮೊಗ್ಗ ಜಿಲ್ಲೆಯಾದ್ಯಂತ ಏಕ ರೀತಿಯ ನಿಯಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ ಹೆಗಡೆ ಹೇಳಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಈ ನಿಯಮವನ್ನು ಜಾರಿಗೊಳಿಸಲು ಆಯಾ ತಾಲೂಕುಗಳ ತಹಸೀಲ್ದಾರರು ಹಾಗೂ ಸಂಬಂಧಿತ ಇಲಾಖೆಗಳ ಅಧಿಕಾರಿಗಳ ಉಪಸ್ಥಿತಿಯಲ್ಲಿ ತಕ್ಷಣದ ಕ್ರಮ ಕೈಗೊಳ್ಳಲು ಸಮಿತಿ ರಚಿಸಿ, ವರದಿ ಪಡೆದು, ಸಕಾಲಿಕ ಕ್ರಮಗಳನ್ನು ಸೂಚಿಸಲಾಗಿದೆ ಎಂದು ತಿಳಿಸಿದರು. ಅಕ್ರಮ ಗಣಿಗಾರಿಕೆ ಹಾಗೂ ಸ್ಥಳೀಯ ವಿರೋಧಗಳ ನಡುವೆಯೂ ಕ್ವಾರಿಗಳನ್ನು ನಡೆಸುತ್ತಿರುವ, ನಿಯಮ ಮೀರಿ ಕ್ವಾರಿಗಳನ್ನು ನಿರ್ವಹಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವ ಪೂರ್ವದಲ್ಲಿ ಆಯಾ…
ಮಗಳ ಕೊಲೆಗೈದು ಅತ್ಯಾಚಾರದ ಕತೆ ಕಟ್ಟಿ ಸಿಕ್ಕಿಬಿದ್ದ ತಂದೆ! – ಕುಡಿದು ಅಮ್ಮನನ್ನು ಹೊಡೆಯುತ್ತಿದ್ದನ್ನು ಪ್ರಶ್ನಿಸಿದಕ್ಕೆ ಕೊಲೆ – ಅಜ್ಜಂಪುರ ತಾಲೂಕಿನ ಶಿವನಿ ಗ್ರಾಮದಲ್ಲಿ ಘಟನೆ NAMMUR EXPRESS NEWS ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ 5 ವರ್ಷದ ಮಗಳನ್ನು ಕೊಲೆಗೈದ ತಂದೆ ಅತ್ಯಾಚಾರದ ಕತೆ ಕಟ್ಟಿ ಜೈಲು ಸೇರಿರುವ ಘಟನೆ ನಡೆದಿದೆ. ಚಿಕ್ಕಮಗಳೂರಿನ ಅಜ್ಜಂಪುರ ತಾಲೂಕಿನ ಶಿವನಿ ಗ್ರಾಮದಲ್ಲಿ ಸೆ.19ರಂದು 5 ವರ್ಷದ ಬಾಲಕಿ ಶವ ಪತ್ತೆಯಾಗಿತ್ತು. ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ ಎಂದು ಬಂಧಿತ ಆರೋಪಿ ಮಂಜುನಾಥ್ (ತಂದೆ ) ಪೊಲೀಸರ ಬಳಿ ಹೇಳಿದ್ದ ಎಂದು ತಿಳಿದು ಬಂದಿದೆ. ತನಿಖೆ ನಡೆಸಿದ ಪೊಲೀಸರು ಸತ್ಯ ಬಯಲು ಮಾಡಿದ್ದಾರೆ. 5 ವರ್ಷದ ಮಗಳನ್ನು ಹತ್ಯೆಗೈದಿ ತಂದೆ ಮಂಜುನಾಥ್ ಇದೀಗ ಸಿಕ್ಕಿಬಿದ್ದಿದ್ದು, ಪೊಲಿಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಮಂಜುನಾಥ್ ತನ್ನ ಪತ್ನಿಯ ಮೇಲೆ ಅನೈತಿಕ ಸಂಬಂಧ ಅನುಮಾನದಲ್ಲಿ ಪ್ರತಿದಿನ ಕುಡಿದು ಬಂದು ಜಗಳವಾಡುತ್ತಿದ್ದ. ಸೆ.19ರಂದು ಮಧ್ಯಾಹ್ನವೇ ಕಂಠಪೂರ್ತಿ ಕುಡಿದು…
ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ ಶ್ರೇಯಸ್! – ಸಿದ್ದರಾಮಯ್ಯ ಅವರು ಹಾಲಿನಷ್ಟೇ ಪರಿಶುದ್ಧ – ಯಾವುದೇ ತನಿಖೆ ನಡೆದರೂ ಅವರು ಆರೋಪ ಮುಕ್ತ ಸತ್ಯ NAMMUR EXPRESS NEWS ಹಾಸನ: ಸಿಎಂ ಸಿದ್ದರಾಮಯ್ಯ ಅವರ ಮೇಲೆ ಬಂದಿರುವ ಆರೋಪ ಸತ್ಯಕ್ಕೆ ದೂರ ಅವರು ಹಾಲಿನಷ್ಟೇ ಪರಿಶುದ್ಧವಾಗಿದ್ದು ಆರೋಪದಿಂದ ವಿಮುಕ್ತರಾಗಿ ಅತಿಶೀಘ್ರವಾಗಿ ಹೊರಬರಲಿದ್ದಾರೆ ಎಂದು ಸಂಸದ ಶ್ರೇಯಸ್ ಪಟೇಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುಳ್ಳು ಯಾವತ್ತಿದ್ದರೂ ಸುಳ್ಳಾಗೇ ಉಳಿಯುತ್ತದೆ ಕೊನೆಗೆ ಉಳಿಯುವುದು ಸತ್ಯ ಮಾತ್ರ ಉಚ್ಚ ನ್ಯಾಯಾಲಯ ಕೊಟ್ಟಿರುವ ತೀರ್ಪಿಗೆ ನಾವೆಲ್ಲರೂ ಬದ್ಧರಾಗಿದ್ದೇವೆ ಆದರೆ ರಾಜ್ಯ ದೇಶದ ಜನರಿಗೆ ಸಿದ್ದರಾಮಯ್ಯ ಅವರು ಆರೋಪದಿಂದ ಮುಕ್ತರಾಗಿ ಹೊರಬರುತ್ತಾರೆ ಎಂಬ ಭರವಸೆ ಇದೆ ಎಂದರು ಅವರ ವಿರುದ್ಧ ಯಾವುದೇ ರೀತಿಯ ತನಿಖೆ ಮಾಡಿದರೂ ತಪ್ಪಿತಸ್ಥರಾಗಲು ಸಾಧ್ಯವಿಲ್ಲ ಎಂದ ಅವರು, ಸಿದ್ದರಾಮಯ್ಯ ಅವರು ಯಾವ ಕಾರಣಕ್ಕೆ ರಾಜೀನಾಮೆ ಕೊಡಬೇಕು. ವಿಪಕ್ಷದವರು ತಮ್ಮ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ ಅದನ್ನು ಸರಿ ಮಾಡಿಕೊಳ್ಳುವ ಬದಲಾಗಿ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುವ ನೈತಿಕತೆ…
ಮನೆ ಹಂಚಿಕೆ ವಿಷಯದಲ್ಲಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರರವರ ತಾರತಮ್ಯ * ಜ್ಞಾನೇಂದ್ರರವರ ಮಲತಾಯಿ ಧೋರಣೆ ಖಂಡಿಸಿ ಉಪವಾಸ ಸತ್ಯಾಗ್ರಹ * ಹೊದಲ ಅರಳಾಪುರ ಗ್ರಾಮಕ್ಕೆ ಅನ್ಯಾಯ: ಗ್ರಾಮ ಪಂಚಾಯತಿ ಸದಸ್ಯ ವಿನಾಯಕ ತುಪ್ಪದಮನೆ NAMMUR EXPRESS NEWS ತೀರ್ಥಹಳ್ಳಿ: ಹೊದಲ ಅರಳಾಪುರ ಗ್ರಾಮ ಪಂಚಾಯಿತಿಗೆ ಮನೆಗಳ ಹಂಚಿಕೆ ವಿಚಾರದಲ್ಲಿ ಶಾಸಕ ಆರಗ ಜ್ಞಾನೇಂದ್ರರವರ ಮಲತಾಯಿ ಧೋರಣೆಯನ್ನು ಖಂಡಿಸಿ, ನ್ಯಾಯಕ್ಕಾಗಿ ಗ್ರಾಮ ಪಂಚಾಯತಿ ಸದಸ್ಯ ವಿನಾಯಕ ತುಪ್ಪದಮನೆ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ತೀರ್ಥಹಳ್ಳಿ ತಾಲ್ಲೂಕಿನ ಸಾಮಾನ್ಯ ವರ್ಗದ ಬಡವರಿಗೆ, ಹಿಂದುಳಿದ ವರ್ಗಗಳಿಗೆ ಮತ್ತು ಅಲ್ಪಸಂಖ್ಯಾತರಿಗೆ ಕೇಂದ್ರ ಸರ್ಕಾರದಿಂದ ಮನೆಗಳು ಮಂಜೂರು ಆಗಿರುತ್ತದೆ. ಆದರೆ ಈ ಮನೆಗಳ ಹಂಚಿಕೆ ವಿಷಯದಲ್ಲಿ ಕ್ಷೇತ್ರದ ಶಾಸಕರಾದ ಆರಗ ಜ್ಞಾನೇಂದ್ರರವರು ತಾರತಮ್ಯ ಮಾಡಿ ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಎನ್ನುವ ರೀತಿಯಲ್ಲಿ ಅನ್ಯಾಯ ಮಾಡಿದ್ದಾರೆ. ತಾಲ್ಲೂಕಿನ ಕೆಲವು ಗ್ರಾಮ ಪಂಚಾಯತಿಗಳಿಗೆ 100 ಮನೆಗಳನ್ನು ಹಂಚಿಕೆ…
ಕ್ರೀಡೆಯಲ್ಲಿ ಕಾರ್ಕಳ ವಿದ್ಯಾರ್ಥಿಗಳು ವಿನ್ನರ್! – ಎಸ್ ವಿ ಟಿ ಕನ್ನಡ ಮಾಧ್ಯಮ ಪ್ರೌಢಶಾಲೆಯ ಭಾರತಿ, ಜ್ಯೋತಿ, ಭೂಮಿಕಾ ವಿಭಾಗ ಮಟ್ಟಕ್ಕೆ ಆಯ್ಕೆ – ಕಾರ್ಕಳದ ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ NAMMUR EXPRESS NEWS ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ ಹಾಗೂ ವಿದ್ಯೇಶ ವಿದ್ಯಾಮಾನ್ಯ ನ್ಯಾಷನಲ್ ಹೈಸ್ಕೂಲ್ ಹೆರಾಡಿ ಇಲ್ಲಿ ನಡೆದ ಜಿಲ್ಲಾಮಟ್ಟದ ಪ್ರೌಢಶಾಲಾ ಬಾಲಕ – ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಕಾರ್ಕಳದ ಎಸ್ ವಿ ಟಿ ವನಿತಾ ಪದವಿ ಪೂರ್ವ ಕಾಲೇಜಿನ ಕನ್ನಡ ಮಾಧ್ಯಮದ ಪ್ರೌಢಶಾಲೆಯ ಬಾಲಕಿಯರ ತಂಡ ದ್ವಿತೀಯ ಸ್ಥಾನವನ್ನು ಪಡೆದು ಕೊಂಡಿರುತ್ತಾರೆ. ಈ ತಂಡದ ಬೆಸ್ಟ್ ಪ್ಲೇಯರ್ ಹತ್ತನೇ ತರಗತಿಯ ಭಾರತಿ, ಜ್ಯೋತಿ ಭೂಮಿಕಾ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಕ್ರೀಡಾಪಟುಗಳಿಗೆ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಿಯಾ ಪ್ರಭು ಹಾಗೂ ಕೋಚ್ ಕೀರ್ತನ್, ಶ್ರವಣ್ ,ಕುಮಾರಿ ಶ್ವೇತಾ ತರಬೇತಿ ನೀಡಿರುತ್ತಾರೆ. ಸಾಧನೆಗೈದ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು…
ಕಾರ್ಕಳ ಸಹಕಾರಿ ಕ್ಷೇತ್ರದಲ್ಲಿ ಶ್ರೀ ದುರ್ಗಾಪರಮೇಶ್ವರಿ ಸೊಸೈಟಿ ಸಾಧನೆ – ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ – 55.46ಲಕ್ಷ ನಿವ್ವಳ ಲಾಭ ಶೇ. 20 ಡಿವಿಡೆಂಡ್ ಘೋಷಣೆ – ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ, ಸಿಬ್ಬಂದಿಗೆ ಗೌರವ NAMMUR EXPRESS NEWS ಕಾರ್ಕಳ: ಕಾರ್ಕಳ ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರಿ ಸಂಘವು ಆರ್ಥಿಕ ವರ್ಷದಲ್ಲಿ ರೂ 147 ಕೋಟಿ ವ್ಯವಹಾರ ನಡೆಸಿ ರೂ. 55.46 ಲಕ್ಷ ನಿವ್ವಳ ಲಾಭಗಳಿಸಿದೆ. ವಾರ್ಷಿಕ ಸಾಲಿನ ಅಂತ್ಯಕ್ಕೆ ಸಂಘವು ರೂ.30.55 ಲಕ್ಷ ಪಾಲು ಬಂಡವಾಳ ಇದ್ದು ರೂ. 29.57ಕೋಟಿ ಠೇವಣಿ ಸಂಗ್ರಹವಾಗಿದ್ದು ರೂ. 25.57 ಕೋಟಿ ಸಾಲ ವಿತರಿಸಿದ್ದು ರೂ. 34.63 ಕೋಟಿ ದುಡಿಮೆ ಬಂಡವಾಳ ಹೊಂದಿರುತ್ತದೆ. ಸಂಘದ ಅಧ್ಯಕ್ಷರಾದ ಸಂತೋಷ್ ರಾವ್ ಅವರು ಮಾತನಾಡಿ, ಸಂಘದ 2023-2024ನೇ ಸಾಲಿನಲ್ಲಿ ಸಂಘದ ಪ್ರಗತಿಯನ್ನು ಹಾಗೂ ಸಂಘವು ಆರ್ಥಿಕ ಸಾಲಿನಲ್ಲಿ ನಡೆಸಿದ ಸಾಮಾಜಿಕ ಚಟುವಟಿಕೆಗಳ ಬಗ್ಗೆ ವಿವರಿಸಿದರು. ಸಹಕಾರ ಸಂಘಗಳ ಸಹಾಯಕ…
ಮಾಣಿಕ್ಯ ಪ್ರಕಾಶನದ 2024 ದತ್ತಿ ಪ್ರಶಸ್ತಿ ಪ್ರಕಟ * ಕಾರ್ಕಳ ತಾಲ್ಲೂಕಿನ ಸಾವಿತ್ರಿ ಮನೋಹರ್ ಅವರ ನಮ್ಮ ಸಂಸಾರ ಆನೈನ್ ಅವಾಂತರ ಕೃತಿಗೆ ಪ್ರಶಸ್ತಿ * ಕುಂದಾಪುರ ತಾಲ್ಲೂಕಿನ ವೀಣಾ ರಾವ್ ಅವರು ಮಧುರ ಮುರುಳಿ ಕೃತಿ ಆಯ್ಕೆ * ಸೆ.28 ರಾಜ್ಯ ಮಟ್ಟದ ಎಂಟನೇ ಕವಿ-ಕಾವ್ಯ ಸಂಭ್ರಮದ ಉದ್ಘಾಟನಾ ಸಮಾರಂಭ NAMMUR EXPRESS NEWS ಹಾಸನ : ಹಾಸನದ ಮಾಣಿಕ್ಯ ಪ್ರಕಾಶನವು ಸಾಹಿತ್ಯ ಕ್ಷೇತ್ರದ ವಿವಿದ ಪ್ರಕಾರಗಳ ಕೃತಿಗಳಿಗೆ ದತ್ತಿ ಪ್ರಶಸ್ತಿಗಳನ್ನು ನೀಡುತ್ತಾ ಬಂದಿದೆ ಎಂದು ಪ್ರಕಾಶಕಿ ದೀಪಾ ಉಪ್ಪಾರ್ ತಿಳಿಸಿದ್ದಾರೆ. 2024 ರ ದತ್ತಿ ಪ್ರಶಸ್ತಿಗೆ 2023ರಲ್ಲಿ ಮೊದಲ ಮುದ್ರಣವಾದ ಸ್ವತಂತ್ರ ರಚನೆಯ ನಾಟಕ, ಕಾದಂಬರಿ, ಗಜಲ್ ಹಾಗೂ ಚುಟುಕು ಸಂಕಲನಗಳನ್ನು ಆಹ್ವಾನಿಸಲಾಗಿತ್ತು. ಲೇಖಕರು ನಿರೀಕ್ಷೆಗೂ ಮೀರಿ ಕೃತಿಗಳನ್ನು ಸ್ಪರ್ಧೆಗೆ ಕಳುಹಿಸಿದ್ದರು. ಸಾಹಿತಿಗಳಾದ ಕೊಟ್ರೇಶ್ ಎಸ್. ಉಪ್ಪಾರ್, ಡಾ. ಹಸೀನಾ ಎಚ್.ಕೆ, ನಾಗರಾಜ್ ದೊಡ್ಡಮನಿ, ಎಚ್.ಎಸ್. ಬಸವರಾಜ್, ವಾಸು ಸಮುದ್ರವಳ್ಳಿ, ಲತಾಮಣಿ ಎಂ.ಕೆ. ತುರುವೇಕೆರೆ ಅವರನ್ನೊಳಗೊಂಡ ಆಯ್ಕೆ ಸಮಿತಿಯು…