ಕಾರ್ಕಳ ಸಹಕಾರಿ ಕ್ಷೇತ್ರದಲ್ಲಿ ಶ್ರೀ ದುರ್ಗಾಪರಮೇಶ್ವರಿ ಸೊಸೈಟಿ ಸಾಧನೆ – ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ – 55.46ಲಕ್ಷ ನಿವ್ವಳ ಲಾಭ ಶೇ. 20 ಡಿವಿಡೆಂಡ್ ಘೋಷಣೆ – ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ, ಸಿಬ್ಬಂದಿಗೆ ಗೌರವ NAMMUR EXPRESS NEWS ಕಾರ್ಕಳ: ಕಾರ್ಕಳ ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರಿ ಸಂಘವು ಆರ್ಥಿಕ ವರ್ಷದಲ್ಲಿ ರೂ 147 ಕೋಟಿ ವ್ಯವಹಾರ ನಡೆಸಿ ರೂ. 55.46 ಲಕ್ಷ ನಿವ್ವಳ ಲಾಭಗಳಿಸಿದೆ. ವಾರ್ಷಿಕ ಸಾಲಿನ ಅಂತ್ಯಕ್ಕೆ ಸಂಘವು ರೂ.30.55 ಲಕ್ಷ ಪಾಲು ಬಂಡವಾಳ ಇದ್ದು ರೂ. 29.57ಕೋಟಿ ಠೇವಣಿ ಸಂಗ್ರಹವಾಗಿದ್ದು ರೂ. 25.57 ಕೋಟಿ ಸಾಲ ವಿತರಿಸಿದ್ದು ರೂ. 34.63 ಕೋಟಿ ದುಡಿಮೆ ಬಂಡವಾಳ ಹೊಂದಿರುತ್ತದೆ. ಸಂಘದ ಅಧ್ಯಕ್ಷರಾದ ಸಂತೋಷ್ ರಾವ್ ಅವರು ಮಾತನಾಡಿ, ಸಂಘದ 2023-2024ನೇ ಸಾಲಿನಲ್ಲಿ ಸಂಘದ ಪ್ರಗತಿಯನ್ನು ಹಾಗೂ ಸಂಘವು ಆರ್ಥಿಕ ಸಾಲಿನಲ್ಲಿ ನಡೆಸಿದ ಸಾಮಾಜಿಕ ಚಟುವಟಿಕೆಗಳ ಬಗ್ಗೆ ವಿವರಿಸಿದರು. ಸಹಕಾರ ಸಂಘಗಳ ಸಹಾಯಕ…
Author: Nammur Express Admin
ಮಾಣಿಕ್ಯ ಪ್ರಕಾಶನದ 2024 ದತ್ತಿ ಪ್ರಶಸ್ತಿ ಪ್ರಕಟ * ಕಾರ್ಕಳ ತಾಲ್ಲೂಕಿನ ಸಾವಿತ್ರಿ ಮನೋಹರ್ ಅವರ ನಮ್ಮ ಸಂಸಾರ ಆನೈನ್ ಅವಾಂತರ ಕೃತಿಗೆ ಪ್ರಶಸ್ತಿ * ಕುಂದಾಪುರ ತಾಲ್ಲೂಕಿನ ವೀಣಾ ರಾವ್ ಅವರು ಮಧುರ ಮುರುಳಿ ಕೃತಿ ಆಯ್ಕೆ * ಸೆ.28 ರಾಜ್ಯ ಮಟ್ಟದ ಎಂಟನೇ ಕವಿ-ಕಾವ್ಯ ಸಂಭ್ರಮದ ಉದ್ಘಾಟನಾ ಸಮಾರಂಭ NAMMUR EXPRESS NEWS ಹಾಸನ : ಹಾಸನದ ಮಾಣಿಕ್ಯ ಪ್ರಕಾಶನವು ಸಾಹಿತ್ಯ ಕ್ಷೇತ್ರದ ವಿವಿದ ಪ್ರಕಾರಗಳ ಕೃತಿಗಳಿಗೆ ದತ್ತಿ ಪ್ರಶಸ್ತಿಗಳನ್ನು ನೀಡುತ್ತಾ ಬಂದಿದೆ ಎಂದು ಪ್ರಕಾಶಕಿ ದೀಪಾ ಉಪ್ಪಾರ್ ತಿಳಿಸಿದ್ದಾರೆ. 2024 ರ ದತ್ತಿ ಪ್ರಶಸ್ತಿಗೆ 2023ರಲ್ಲಿ ಮೊದಲ ಮುದ್ರಣವಾದ ಸ್ವತಂತ್ರ ರಚನೆಯ ನಾಟಕ, ಕಾದಂಬರಿ, ಗಜಲ್ ಹಾಗೂ ಚುಟುಕು ಸಂಕಲನಗಳನ್ನು ಆಹ್ವಾನಿಸಲಾಗಿತ್ತು. ಲೇಖಕರು ನಿರೀಕ್ಷೆಗೂ ಮೀರಿ ಕೃತಿಗಳನ್ನು ಸ್ಪರ್ಧೆಗೆ ಕಳುಹಿಸಿದ್ದರು. ಸಾಹಿತಿಗಳಾದ ಕೊಟ್ರೇಶ್ ಎಸ್. ಉಪ್ಪಾರ್, ಡಾ. ಹಸೀನಾ ಎಚ್.ಕೆ, ನಾಗರಾಜ್ ದೊಡ್ಡಮನಿ, ಎಚ್.ಎಸ್. ಬಸವರಾಜ್, ವಾಸು ಸಮುದ್ರವಳ್ಳಿ, ಲತಾಮಣಿ ಎಂ.ಕೆ. ತುರುವೇಕೆರೆ ಅವರನ್ನೊಳಗೊಂಡ ಆಯ್ಕೆ ಸಮಿತಿಯು…
ಕಾರ್ಕಳ ಶಾಲಾ ಮಕ್ಕಳಿಗೆ ಪೌಷ್ಠಿಕ ಆಹಾರ ಭಾಗ್ಯ! – ಪೌಷ್ಠಿಕ ಆಹಾರ ವಿತರಣೆ ಯೋಜನೆ ಉದ್ಘಾಟನೆ – ಪಿ.ಎಂ. ಪೋಷಣ್-ಮಧ್ಯಾಹ್ನ ಉಪಹಾರ ಯೋಜನೆಯಡಿ ಅಜೀಂ ಪ್ರೇಮ್ ಜಿ ಫೌಂಡೇಶನ್ ಸಹಭಾಗಿತ್ವ NAMMUR EXPRESS NEWS ಕಾರ್ಕಳ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪಿ.ಎಂ. ಪೋಷಣ್-ಮಧ್ಯಾಹ್ನ ಉಪಹಾರ ಯೋಜನೆಯಡಿ ಅಜೀಂ ಪ್ರೇಮ್ ಜಿ ಫೌಂಡೇಶನ್ ಬೆಂಗಳೂರು ಇವರ ಸಹಭಾಗಿತ್ವದಲ್ಲಿ ಕಾರ್ಕಳ ತಾಲೂಕಿನಲ್ಲಿ ಶಾಲಾ ಮಕ್ಕಳಿಗೆ ಪೌಷ್ಟಿಕ ಆಹಾರ ವಿತರಣೆ ಮಾಡಲಾಯಿತು. ಶಾಲಾ ಮಕ್ಕಳ ಪೌಷ್ಠಿಕತೆ ವೃದ್ಧಿಸಲು 2024-25 ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಸರಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ ಆರು ದಿನಗಳು ಪೂರಕ ಪೌಷ್ಠಿಕ ಆಹಾರವನ್ನು ಉಚಿತವಾಗಿ ವಿತರಿಸುವ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ಸ. ಹಿ. ಪ್ರಾ. ಶಾಲೆ ಕಾರ್ಕಳ ಮೈನ್ ಇಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಾಣೂರು ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಜ್ಯೋತಿ , ಮುಖ್ಯ ಶಿಕ್ಷಕಿ ಶ್ರೀಮತಿ ಶಶಿಕಲಾ, ಸಹಶಿಕ್ಷಕರಾದ…
ಶಿರೂರು: ಗುಡ್ಡ ಕುಸಿದು, ಲಾರಿಯೊಳಗೆ ಅರ್ಜುನ್ ಮೃತದೇಹ ಪತ್ತೆ – ಮುಳುಗಿದ್ದ ಟ್ರಕ್ ಒಳಗಡೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ – ಬೆಂಗಳೂರು: ಮಹಾಲಕ್ಷ್ಮಿ ಕೊಲೆ ಪ್ರಕರಣ, ಆರೋಪಿ ಪತ್ತೆ! – ಕಿವಿಯಲ್ಲಿದ್ದಾಗಲೇ ಇಯರ್ ಬಡ್ ಸ್ಫೋಟ: ಕಿವಿ ಕೇಳೋದೇ ಇಲ್ಲ! NAMMUR EXPRESS NEWS ಶಿರೂರು: ಎರಡು ತಿಂಗಳುಗಳ ಮುಂಚೆ ಗುಡ್ಡ ಕುಸಿದು ಕಣ್ಮರೆಯಾಗಿದ್ದ ಕೇರಳ ಅರ್ಜುನ್ ರವರ ಮೃತದೇಹ ಪತ್ತೆಯಾಗಿದೆ. ಕಳೆದ ಎರಡು ತಿಂಗಳು ಮುಂಚೆ ಗುಡ್ಡ ಕುಸಿದು ಕಣ್ಮರೆಯಾಗಿದ್ದ ಅರ್ಜುನ್ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಉತ್ತರ ಕನ್ನಡದ ಅಂಕೋಲಾದ ಶಿರೂರುನಲ್ಲಿ ಗುಡ್ಡ ಕುಸಿದು ಅರ್ಜುನ್ ರವರ ಲಾರಿ ಸಹಿತ ಹಲವಾರು ಮಂದಿ ಮಣ್ಣಿನಡಿಗೆ ಬಿದ್ದಿದ್ದರು ಆದರೆ ಕೇರಳ ನಿವಾಸಿ ಅರ್ಜುನ್ ರವರ ಪತ್ತೆ ಇಲ್ಲಿಯವರೆಗೆ ಸಿಕ್ಕಿರಲಿಲ್ಲ. ಇಂದು ತೀವ್ರ ಅನ್ವೇಷಣೆ ಬಳಿಕ ಲಾರಿ ನೀರಿನಡಿಯಿಂದ ಸಿಕ್ಕಿದ್ದು ಲಾರಿಯೊಳಗಡೆ ಅರ್ಜುನ್ ರವರ ಮೃತದೇಹ ಸಿಕ್ಕಿದ್ದಾಗಿ ತಿಳಿದು ಬಂದಿದೆ. ಮಹಾಲಕ್ಷ್ಮಿ ಕೊಲೆ ಪ್ರಕರಣ, ಆರೋಪಿ ಪತ್ತೆ! ಬೆಂಗಳೂರು: ಕಳೆದ…
ಸಿಎಂ ವಿರುದ್ಧ ಲೋಕಾಯುಕ್ತ ತನಿಖೆ!? – ಮತ್ತಷ್ಟು ಸಂಕಷ್ಟ, ಬಂಧನವಾಗುವ ಸಾಧ್ಯತೆ – ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ: ಬಿಜೆಪಿ ಕಾರ್ಯಕರ್ತರು, ನಾಯಕರು ಪೊಲೀಸ್ ವಶಕ್ಕೆ NAMMUR EXPRESS NEWS ಬೆಂಗಳೂರು: ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಸುಮಾರು 56 ಕೋಟಿ ರು. ಮೌಲ್ಯದ 14 ಬದಲಿ ನಿವೇಶನಗಳನ್ನು ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ರಾಜ್ಯಪಾಲರು ನೀಡಿದ್ದ ಅನುಮೋದನೆಯನ್ನು ಹೈ ಕೋರ್ಟ್ ಎತ್ತಿಹಿಡಿದಿತ್ತು.ಇದರ ಬೆನ್ನಲ್ಲೇ ಇತ್ತ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಹ ಸಿಎಂ ವಿರುದ್ಧ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶಿಸಿದೆ. 3 ತಿಂಗಳಲ್ಲಿ ಅಂದರೆ ಡಿಸೆಂಬರ್ 24ರೊಳಗೆ ತನಿಖೆ ನಡೆಸಿ ವರದಿ ನೀಡುವಂತೆ ಮೈಸೂರು ಲೋಕಾಯುಕ್ತ ಪೊಲೀಸರಿಗೆ ಕೋರ್ಟ್ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮತ್ತಷ್ಟು ಸಂಕಷ್ಟ ಹೆಚ್ಚಾಗಿದ್ದು, ಬಂಧನವಾಗುವ ಸಾಧ್ಯತೆಗಳು ಸಹ ಇವೆ. CRPC ಸೆಕ್ಷನ್ 156(3) ಅಡಿ ಕೇಸ್ ರಿಜಿಸ್ಟರ್ ಮಾಡಲು ಆದೇಶ ನೀಡಲಾಗಿದ್ದು, ತನಿಖಾ ವರದಿ…
ಹಾಸನದ ಎಪಿಜೆ ಕಾಲೇಜಲ್ಲಿ ಕ್ರೀಡಾಕೂಟ ಸೂಪರ್! – ಜಿಲ್ಲಾಮಟ್ಟದ ಪಪೂ ಕಾಲೇಜು ಕ್ರೀಡಾಕೂಟ ಆಯೋಜನೆ – ಶಾಸಕ ಹೆಚ್.ಪಿ.ಸ್ವರೂಪ್, ಸಂಸದ ಶ್ರೇಯಸ್ ಸೇರಿ ಗಣ್ಯರು ಹಾಜರ್ NAMMUR EXPRESS NEWS ಹಾಸನ: ಹಾಸನ ನಗರದ ಅರಸೀಕೆರೆ ರಸ್ತೆಯ ಬಿ.ಕಾಟೀಹಳ್ಳಿಯಲ್ಲಿರುವ ಎಪಿಜೆ ಪದವಿ ಪೂರ್ವ ಕಾಲೇಜು ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಎರಡು ದಿನಗಳ ಪಪೂ ಕಾಲೇಜುಗಳ ಜಿಲ್ಲಾಮಟ್ಟದ ಕ್ರೀಡಾಕೂಟ ಯಶಸ್ವಿಯಾಗಿ ಜರುಗಿತು. ಅಚ್ಚುಕಟ್ಟಿನ ಆಯೋಜನೆ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಮೊದಲ ದಿನ ಸ್ಥಳೀಯ ಶಾಸಕ ಹೆಚ್.ಪಿ.ಸ್ವರೂಪ್ ಪ್ರಕಾಶ್, ಜಿಲ್ಲಾಧಿಕಾರಿ ಸಿ.ಸತ್ಯಭಾಮ, ಪಿಯು ಡಿಡಿ ಸಿ.ಎಂ.ಮಹಾಲಿಂಗಯ್ಯ, ನಗರಸಭೆ ಅಧ್ಯಕ್ಷ ಎಂ.ಚಂದ್ರೇಗೌಡ, ಸದಸ್ಯ ವಾಸುದೇವ್ ಮೊದಲಾದವರು ಕ್ರೀಡಾಕೂಟಕ್ಕೆ ಚಾಲನೆ ನೀಡಿದ್ದರು. ನಂತರ ನಡೆದ ಹಲವು ಕ್ರೀಡಾಸ್ಪರ್ಧೆಗಳಲ್ಲಿ ಜಿಲ್ಲೆಯ ನೂರಾರು ಕಾಲೇಜುಗಳ ಸಾವಿರಾರು ವಿದ್ಯಾರ್ಥಿಗಳು ಅತ್ಯುತ್ಸಾಹದಿಂದ ಭಾಗವಹಿಸಿ ಕ್ರೀಡಾಸ್ಫೂರ್ತಿ ಮೆರೆದರು. ಸಂಸದ ಶ್ರೇಯಸ್ ಪಟೇಲ್ ಸಂಜೆ ಕ್ರೀಡಾಕೂಟದಲ್ಲಿ ಭಾಗಿಯಾಗಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಅಭಿನಂದಿಸಿದರು. ನಂತರ ಮಾತನಾಡಿದ ಅವರು, ಎಪಿಜೆ ಕಾಲೇಜು…
ಅಯ್ಯೋ ದೇವ್ರೇ ಮಳೆ ಮಳೆ: ಅಡಿಕೆ ಬೆಳೆ ನಷ್ಟ! – ಮಲೆನಾಡು, ಕರಾವಳಿ, ಮಧ್ಯ ಕರ್ನಾಟಕ ರೈತರಿಗೆ ಎಫೆಕ್ಟ್ – ಕೊಳೆ ಜಾಸ್ತಿಯಾಗಿ ಉದುರುತ್ತಿರುವ ಅಡಿಕೆ NAMMUR EXPRESS NEWS ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ನಡುವೆ ಮಲೆನಾಡು ಮತ್ತು ಕರಾವಳಿ, ಚಿತ್ರದುರ್ಗ, ದಾವಣಗೆರೆ ಭಾಗದಲ್ಲಿ ಅಡಿಕೆ ಮೇಲೆ ಮಳೆ ಪರಿಣಾಮ ಬೀರಲಿದೆ. ಈಗಾಗಲೇ ಅಡಿಕೆ ಕೊಳೆ ಹೆಚ್ಚಾಗಿದ್ದು ರೋಗದಿಂದ ಉದುರುತ್ತಿದೆ. ಹಾಗಾಗಿ ರೈತ ಮಳೆ ಬೇಡಪ್ಪ ಅನ್ನುವ ಸ್ಥಿತಿಗೆ ಬಂದಿದ್ದಾನೆ. ಮಲೆನಾಡು ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯೊಂದಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ದಕ್ಷಿಣ ಒಳನಾಡಿನ ಸುತ್ತಮುತ್ತ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ಪ್ರತ್ಯೇಕವಾಗಿ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು ಭಾಗದ ಹಾಸನ,…
ಹಾಸನ-ಶಿರಾಡಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಜಾಮ್! – ಪ್ರಯಾಣಿಕರ ಪರದಾಟ: ರಸ್ತೆ ಸರಿಯಿಲ್ಲ… ಕೇಳೋರಿಲ್ಲ – ಕಾಮಗಾರಿ ಮುಗಿಯಲು ಇನ್ನೆಷ್ಟು ದಿನ ಬೇಕು? NAMMUR EXPRESS NEWS ಹಾಸನ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಹಾಸನ-ಶಿರಾಡಿ ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿ 2 ದಿನಗಳ ಕಾಲ ಭಾರೀ ತೊಂದರೆಯಾಗಿದೆ. ಇಲ್ಲಿನ ರಸ್ತೆ ಅವ್ಯವಸ್ಥೆ ಎರಡು ದಿನ ಸಾವಿರಾರು ಜನರ ಬದುಕಿಗೆ ಅಡ್ಡಿ ಆಗಿದೆ. ಇದರಿಂದಾಗಿ ರಾತ್ರಿ ಬೆಂಗಳೂರಿನಿಂದ ಹೊರಟಿದ್ದ ಬಸ್ ಸಹಿತ ಸಾರ್ವಜನಿಕ ವಾಹನಗಳು ಸಕಲೇಶಪುರ, ದೋಣಿಗಲ್ ಭಾಗದಲ್ಲಿಯೇ ನಿಲ್ಲುವಂತಾಗಿದೆ. ನಿಧಾನಗತಿಯಲ್ಲಿ ವಾಹನಗಳು ಸಾಗುತ್ತಿದ್ದು ಮುಂಜಾನೆ ತಲುಪಬೇಕಿದ್ದ ಬಸ್‌ಗಳು ಗಂಟೆ 9 ಆದರೂ ಶಿರಾಡಿ ದಾಟಲು ಸಾಧ್ಯವಾಗಿಲ್ಲ. ಆನೆ ಮಹಲ್ ಬಳಿ ರಸ್ತೆ ದುರಸ್ತಿ ಕಾರ್ಯವೂ ನಡೆಯುತ್ತಿದ್ದು, ಈಗಾಗಲೇ ಕಾಮಗಾರಿಯಲ್ಲಿರುವ ಹೊಸ ರಸ್ತೆಗೆ ಮಣ್ಣು, ಜಲ್ಲಿ ಹಾಕಲಾಗಿದೆ. ಇದರಿಂದ ವಾಹನಗಳು ಅಲ್ಲಲ್ಲಿ ಹೂತು ಹೋಗುತ್ತಿವೆ. ಈ ಕಾರಣಕ್ಕಾಗಿ ರಾತ್ರಿ 3 ಗಂಟೆಯಿಂದಲೇ ಸಂಚಾರ ದಟ್ಟಣೆ ಸಮಸ್ಯೆ ಎದುರಾಗಿದೆ. ಮುಂಜಾನೆ 6…
ರಾಷ್ಟ್ರಧ್ವಜ ಸುಟ್ಟ ಪ್ರಕರಣದಲ್ಲಿ ಇನ್ನಿಬ್ಬರ ವಿರುದ್ಧ ಚಾರ್ಜ್ ಶೀಟ್! – ಈವರೆಗೆ 10 ಮಂದಿ ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ – ಶಿವಮೊಗ್ಗ ತುಂಗಾ ನದಿ ತಟದಲ್ಲಿ ಐಇಡಿ ಪ್ರಾಯೋಗಿಕ ಸ್ಫೋಟ NAMMUR EXPRESS NEWS ಬೆಂಗಳೂರು: ಶಿವಮೊಗ್ಗದ ತುಂಗಾ ನದಿ ದಡದಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಪ್ರಾಯೋಗಿಕ ಸ್ಫೋಟ ಹಾಗೂ ರಾಷ್ಟ್ರಧ್ವಜ ಸುಟ್ಟ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳವು (ಎನ್‌ಐಎ) ಮತ್ತೆ ಇಬ್ಬರು ಆರೋಪಿಗಳ ವಿರುದ್ಧ ಬೆಂಗಳೂರಿನ ಎನ್ ಐಎ ವಿಶೇಷನ್ಯಾಯಾಲಯಕ್ಕೆಮಂಗಳವಾರ ಮೂರನೇ ಪೂರಕ ದೋಷಾರೋಪ ಪಟ್ಟಿ ಸಲ್ಲಿಸಿದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಅಬ್ದುಲ್ ಮತೀನ್ ತಾಹಾ ಮತ್ತು ಮುಸಾವೀರ್‌ಹುಸೇನ್ ಶಾಜೀಬ್ ವಿರುದ್ಧ ಎನ್‌ಐಎನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ. ಈ ಮೂಲಕ ಶಿವಮೊಗ್ಗ ಐಸಿಸ್ ಪಿತೂರಿ ಪ್ರಕರಣ ಸಂಬಂಧ ಈವರೆಗೆ 10 ಮಂದಿ ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ಕೆಫೆ ಬಾಂಬ್ ಸ್ಫೋಟದ ರೂವಾರಿಗಳೂ: ಈ ಇಬ್ಬರು ಆರೋಪಿಗಳು ಸೇರಿ ನಾಲ್ವರ ವಿರುದ್ಧ ಎನ್‌ಐಎ…
ಕರಾವಳಿ ಟಾಪ್ ನ್ಯೂಸ್ ಬೈಂದೂರು: ನೀರಿಗೆ ಇಬ್ಬರು ಬಲಿ! – ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು – ಉಡುಪಿ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ – ಕಾರ್ಕಳ: ಏಟಿಎಂ ಕಾರ್ಡ್ ಬದಲಾಯಿಸಿ ಹಣ ವಂಚನೆ – ಮಂಗಳೂರು: ಸರ್ಜರಿ ಮಾಡಿಸಿಕೊಂಡ ಯುವಕ ಸಾವು NAMMUR EXPRESS NEWS ಉಡುಪಿ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಸೆ.24ರಂದು ಉಡುಪಿಯ ಎಂಟಿಆರ್ ಹೊಟೇಲ್ ಎದುರು ನಡೆದಿದೆ. ಬ್ರಹ್ಮಗಿರಿಯ ಹಿರಿಯ ನಾಗರಿಕರೊಬ್ಬರು ತಮ್ಮ ಹಳೆಯ ಆಲ್ಟೋ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಏಕಾಏಕಿ ಶಾರ್ಟ್ ಸರ್ಕ್ಯೂಟ್ ಆಗಿದೆ. ಕೂಡಲೇ ಅವರು ಕಾರನ್ನು ನಿಲ್ಲಿಸಿ ಹೊರಗೆ ಬಂದಿದ್ದಾರೆ. ಈ ವೇಳೆ ಕಾರಿನ ಎದುರು ಭಾಗಕ್ಕೆ ಸಂಪೂರ್ಣ ಬೆಂಕಿ ಆವರಿಸಿ ಸ್ಥಳೀಯರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು ಉಡುಪಿ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಬೈಂದೂರು…